ಬೆಂಗಳೂರು: ವೃದ್ಧ ವ್ಯಕ್ತಿ ತನ್ನ ಪತ್ನಿಯನ್ನು ಕೊಲೆ ಮಾಡಿ ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಸಿಲಿಕಾನ್ ಸಿಟಿಯ ಸುಬ್ರಹ್ಮಣ್ಯಪುರ(Subramanyapura) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪತ್ನಿ ಬೇಬಿ(60) ಪತಿಯಿಂದಲೇ ಹತ್ಯೆಯಾಗಿರುವ ಮಹಿಳೆ. ವೆಂಕಟೇಶನ್ (65) ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ವೃದ್ಧ. ವೆಂಕಟೇಶನ್ ಬಿಎಂಟಿಸಿ ಡ್ರೈವರ್ ಆಗಿ ಕೆಲಸ ನಿರ್ವಹಿಸಿ, ನಿವೃತ್ತಿ ಹೊಂದಿದ್ದರು.
ಆದರೆ, ಪತಿ – ಪತ್ನಿ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಈ ವೃದ್ಧ ದಂಪತಿಗೆ ಇಬ್ಬರು ಮಕ್ಕಳಿದ್ದರು. ಅವರು ಕೆಲಸಕ್ಕೆಂದು ಹೋದಾಗ ಇಬ್ಬರ ಮಧ್ಯೆ ಜಗಳ ನಡೆದಿದೆ. ಅದು ವಿಕೋಪಕ್ಕೆ ತೆರಳಿ ಬಟ್ಟೆ ಒಣ ಹಾಕುವ ದಾರದಿಂದ ಪತ್ನಿಯ ಕುತ್ತಿಗೆಗೆ ಸುತ್ತಿ ಕೊಲೆ ಮಾಡಿದ್ದಾನೆ. ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಪತ್ನಿಗೆ ಇತ್ತೀಚೆಗಷ್ಟೇ ಸ್ಟ್ರೋಕ್ ಆಗಿ ಹಾಸಿಗೆ ಹಿಡಿದಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

