ಹಣಕ್ಕಾಗಿ ವ್ಯಕ್ತಿ ಯಾವ ಮಟ್ಟಕ್ಕೂ ಇಳಿತಾರೇ ಅನ್ನೋದಕ್ಕೆ ಮತ್ತೊಂದು ಘಟನೆ ಬೆಂಗಳೂರಲ್ಲಿ ನಡೆದಿದೆ. ಪ್ರಖ್ಯಾತ ಆನಂದ್ ಗುರೂಜಿಗೆ ಪ್ರತಿನಿತ್ಯ ಹಣಕ್ಕಾಗಿ ಆರೋಪಿಗಳು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಆನಂದ ಗುರೂಜಿ Car ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದಿಸಿ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್ ಹಾಗೂ ಜೀವಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಈ ಸಂಬಂಧ ಆನಂದ ಗುರೂಜಿ ಅವರು ಬೆಂಗಳೂರಿನ (Bengaluru) ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪೊಲೀಸರು ಕೃಷ್ಣಮೂರ್ತಿ(A1) ಹಾಗೂ ದಿವ್ಯಾ ವಸಂತ (A2) ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಆನಂದ ಗುರೂಜಿ ಅಶ್ಲೀಲ ವಿಡಿಯೋ ಹಾಗೂ ಜಮೀನು ಖರೀದಿ ಪ್ರಕರಣ ಸಂಬಂಧ ಕೋರ್ಟ್ನಿಂದ ತಡೆಯಾಜ್ಞೆ ತರಲಾಗಿದೆ. ಆದರೂ ಸಹ ಈ ಪ್ರಕರಣ ಸಂಬಂಧ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್, ಜೀವಬೆದರಿಕೆ ಹಾಕಿದ್ದಾರೆ ಅಲ್ಲದೇ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ ಎಂದು ಆನಂದ ಗುರೂಜಿ ದೂರಿನಲ್ಲಿ ಆರೋಪಿಸಿದ್ದಾರೆ.
Also Read: Gold rate today ; ಗೋಲ್ಡ್ ಪ್ರಿಯರಿಗೆ ಗುಡ್‌ನ್ಯೂಸ್; ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ..!
ವೀಡಿಯೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಹಲವಾರು ಯುಟ್ಯೂಬ್ ಚಾನೆಲ್ ಗಳ ಮೂಲಕ ಮಾನಹಾನಿ ಮಾಡಿದ್ದು, ನನ್ನ ಚಾರಿತ್ರ್ಯ ತೇಜೋವಧೆ ಮಾಡಿದ್ದಾರೆ ಎಂದು ಆನಂದ ಗುರೂಜಿ ಆರೋಪಿಸಿದ್ದಾರೆ. ಸದ್ಯ ಚಿಕ್ಕಜಾಲ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

