ಏಷ್ಯಾಕಪ್ಗಾಗಿ ಈಗಾಗಲೇ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ತಮ್ಮ ತಂಡಗಳನ್ನು ಪ್ರಕಟಿಸಿದೆ. ಇತ್ತ ಭಾರತ ತಂಡವನ್ನು ಇದೇ ವಾರ ಘೋಷಿಸುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ಟೀಮ್ ಇಂಡಿಯಾ ಕುರಿತಾದ ಬಿಗ್ ಅಪ್ಡೇಟ್ವೊಂದು ಹೊರಬಿದ್ದಿದೆ. ಈ ಅಪ್ಡೇಟ್ ಪ್ರಕಾರ ಮುಂಬರುವ ಏಷ್ಯಾಕಪ್ನಿಂದ ಭಾರತ ತಂಡದ ಪ್ರಮುಖ ಇಬ್ಬರು ಆಟಗಾರರು ಹೊರಗುಳಿಯಲಿದ್ದಾರೆ ಎನ್ನಲಾಗ್ತಿದೆ.
ಸ್ಟಾರ್ ಪ್ಲೇಯರ್ಸ್‌ಗಳನ್ನ ಕೈ ಬಿಡುತ್ತಾ ಆಯ್ಕೆ ಸಮಿತಿ?
ಏಷ್ಯಾಕಪ್ 2025ರ ತಂಡದಲ್ಲಿ ಶುಭ್ಮನ್ ಗಿಲ್ ಹಾಗೂ ಮೊಹಮ್ಮದ್ ಸಿರಾಜ್ ಕಾಣಿಸಿಕೊಳ್ಳುವುದಿಲ್ಲ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಇಬ್ಬರನ್ನು ಆಯ್ಕೆ ಮಾಡದಿರಲು ಬಿಸಿಸಿಐ ನಿರ್ಧರಿಸಿದೆ ಎನ್ನಲಾಗಿದೆ. ಇನ್ನು ಏಷ್ಯಾಕಪ್ನಲ್ಲಿ ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸುವುದು ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ. ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಈ ಇಬ್ಬರು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದು, ಹೀಗಾಗಿ ಇವರಿಬ್ಬರನ್ನೇ ಆರಂಭಿಕರಾಗಿ ಮುಂದುವರೆಸಲು ನಿರ್ಧರಿಸಲಾಗಿದೆ.
ಹಾಗೆಯೇ ಹೆಚ್ಚುವರಿ ಆರಂಭಿಕನಾಗಿ ಯಶಸ್ವಿ ಜೈಸ್ವಾಲ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಅಂದರೆ ಜೈಸ್ವಾಲ್ ತಂಡದಲ್ಲಿ ಕಾಣಿಸಿಕೊಂಡರೂ ಆರಂಭಿಕ ಪಂದ್ಯಗಳ ವೇಳೆ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯುವುದು ಅನುಮಾನ. ಇತ್ತ ಮೊಹಮ್ಮದ್ ಸಿರಾಜ್ ತಂಡದಲ್ಲಿ ಸ್ಥಾನ ಪಡೆಯದಿರುವ ಕಾರಣ ಹರ್ಷಿತ್ ರಾಣಾ ಅಥವಾ ಪ್ರಸಿದ್ಧ್ ಕೃಷ್ಣಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಲಭಿಸಲಿದೆ ಎನ್ನಲಾಗ್ತಿದೆ.
ಮತ್ತೊಂದೆಡೆ ಟೀಮ್ ಇಂಡಿಯಾದ 2ನೇ ವಿಕೆಟ್ ಕೀಪರ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಜಿತೇಶ್ ಶರ್ಮಾ ಆಯ್ಕೆಯಾಗಲಿದ್ದಾರೆ. ಅಂದರೆ ಇಲ್ಲಿ ಮೊದಲ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಕಾಣಿಸಿಕೊಂಡರೆ ಜಿತೇಶ್ ಶರ್ಮಾ ದ್ವಿತೀಯ ಕೀಪರ್ ಆಗಿ ಭಾರತ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂಬ ಮಾಹಿತಿ ಹರಿದಾಡ್ತಿದೆ.
ಒಟ್ಟಿನಲ್ಲಿ ಈ ಬಾರಿಯ ಏಷ್ಯಾಕಪ್ಗೆ ಟೀಮ್ ಇಂಡಿಯಾ ಆಯ್ಕೆಯು ಬಿಸಿಸಿಐ ಆಯ್ಕೆ ಸಮಿತಿಗೆ ಕಗ್ಗಂಟಾಗಿ ಪರಿಣಮಿಸಿದ್ದು, ಅಂತಿಮವಾಗಿ ಭಾರತ ತಂಡದಲ್ಲಿ ಕಾಣಿಸಿಕೊಳ್ಳಲಿರುವ 15 ಸದಸ್ಯರು ಯಾರೆಲ್ಲಾ ಎಂಬುದು ಇದೇ ವಾರದೊಳಗೆ ಗೊತ್ತಾಗಲಿದೆ.
Read Also : 2025ರ ಮಹಿಳಾ ಚೆಸ್ ವಿಶ್ವಕಪ್ ಪಟ್ಟ ಮುಡಿಗೇರಿಸಿಕೊಂಡ ದಿವ್ಯಾ ದೇಶಮುಖ್

