ಬೆಳಗಾವಿ: ಅರ್ಹತೆ ಇದ್ದರೂ ಪಿಎಚ್ ಡಿ ಪದವಿ ನೀಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯವು ವಿದ್ಯಾರ್ಥಿನಿಗೆ ಗುಡ್ ನ್ಯೂಸ್ ನೀಡಿದೆ.

ಇತ್ತೀಚೆಗಷ್ಟೇ ಈ ಘಟನೆ ನಡೆದಿತ್ತು. ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಅರ್ಹತೆಯಿದ್ದರೂ ಪಿಎಚ್ ಡಿ ಪದವಿ ನೀಡಿಲ್ಲ ಎಂದು ವಿದ್ಯಾರ್ಥಿನಿ ಆರೋಪಿಸಿದ್ದರು. ಅಲ್ಲದೇ, ಗೈಡ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೂಡ ಮಾಡಿದ್ದರು ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಯ ಕುಲಪತಿ ಡಾ. ಸಿ.ಎಂ. ತ್ಯಾಗರಾಜ್ ಪ್ರಕಟಣೆ ಹೊರಡಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ವಿದ್ಯಾರ್ಥಿನಿಯ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಗುರುವಾರ ವಿಶ್ವವಿದ್ಯಾಲಯದಲ್ಲಿ ಸಿಂಡಿಕೇಟ್ ಸಭೆ ನಡೆದಿತ್ತು. ಆ ವೇಳೆ ವಿದ್ಯಾರ್ಥಿನಿಯ ದಾಖಲೆಗಳನ್ನು ಪರಿಶೀಲಿಸಲಾಗಿ ಅವರು ಪಿಎಚ್ ಡಿ ಪದವಿ ಪಡೆಯಲು ಅರ್ಹರಾಗಿದ್ದಾರೆ. ಹೀಗಾಗಿ ಅವರು ಅರ್ಜಿ ಸಲ್ಲಿಸಿದರೆ ಪ್ರದಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಅಲ್ಲದೇ, ವಿದ್ಯಾರ್ಥಿನಿಯ ಗೈಡ್ ಆಗಿರುವ ಪ್ರೊ. ಕೆ.ಎಲ್. ಎನ್ ಮೂರ್ತಿ ವಿರುದ್ಧ ಲೈಂಗಿಕ ಕಿರುಕುಳದ ವಿರುದ್ಧ ಮಾಡಿರುವ ಆರೋಪಕ್ಕೆ ವಿದ್ಯಾರ್ಥಿನಿಗೆ ಜಯ ಸಿಕ್ಕಿದೆ ಎಂದು ವರದಿ ಹೇಳಿವೆ.
ವಿಚಾರಣೆಯಲ್ಲಿ ಗೈಡ್ ಪ್ರಮಾದ ಎಸಗಿರುವುದು ಸಾಬೀತಾಗಿದೆ. ಹೀಗಾಗಿ ಪ್ರೊ. ಮೂರ್ತಿಗೆ ಕಡ್ಡಾಯ ನಿವೃತ್ತಿ ನೀಡುವ ನಿರ್ಧಾರವನ್ನು ವಿಶ್ವವಿದ್ಯಾಲಯದ ಸಿಂಡಿಕೇಟ್ ನಿರ್ಧರಿಸಿದೆ ಎಂದು ವರದಿಗಳು ಹೇಳುತ್ತಿವೆ. ಎಂದು ಕುಲಪತಿ ತಿಳಿಸಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

ಇತ್ತೀಚೆಗೆ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವ ಸಂದರ್ಭದಲ್ಲಿ ಅರ್ಹತೆ ಇದ್ದರೂ ಪಿಎಚ್ ಡಿ ನೀಡಿಲ್ಲ ಎಂದು ವಿದ್ಯಾರ್ಥಿನಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ, ಸಾವಿನಿಂದ ಬಚಾವ್ ಆಗಿದ್ದರು. ಇತ್ತೀಚೆಗೆ ನಡೆದಿದ್ದ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ತಮಗೆ ಪಿಎಚ್ ಡಿ ನೀಡಿಲ್ಲ ಎಂದು ಮನನೊಂದಿದ್ದ ಸಂಶೋಧನಾ ವಿದ್ಯಾರ್ಥಿನಿಯು ತಮ್ಮ ಮನೆಯಲ್ಲೇ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅವರನ್ನು ಆಕೆಯ ಮನೆಯವರು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದರಿಂದ ಆಕೆಯ ಸಾವಿನ ದವಡೆಯಿಂದ ಪಾರಾಗಿದ್ದರು.

Share.
Leave A Reply