Subscribe to Updates
Get the latest creative news from FooBar about art, design and business.
Author: Bosstv News Desk
ರಾಮನಗರ: ನನಗೆ ಮಾತಾಡೋ ಚಪಲ, ಅವನಿಗೆ ಲೂಟಿ ಚಪಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಡಿಕೆ ಬ್ರದರ್ಸ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಡಿಕೆಶಿ ತಮ್ಮ ಮೊನ್ನೆ ಏನೋ ಹೇಳವ್ನೆ, ನಮಗೆ ಮಾತನಾಡುವ ಚಪಲ ಅಂದವ್ನೆ’ ಹೌದು..ನನಗೆ ಮಾತಾಡುವ ಚಪಲ. ಅವನಿಗೆ ಲೂಟಿ ಚಪಲ. ಯಾರಿಗೂ ಅಧಿಕಾರ ಶಾಶ್ವತ ಅಲ್ಲ. ನನ್ನನ್ನು ರಾಮನಗರದಿಂದ ಯಾರೂ ಓಡಿಸಲು ಆಗಲ್ಲ. 2028ಕ್ಕೆ ಗೆದ್ದು ನಿಜವಾದ ರಾಮರಾಜ್ಯ ತರುತ್ತೇನೆ. ನಾನು ಕಲ್ಲುಬಂಡೆ ಒಡೆದು ಜೀವನ ಮಾಡಿಲ್ಲ. ಯಾರ ಜಮೀನನ್ನೂ ಕಬಳಿಸಿಲ್ಲ ಎಂದ ವಾಗ್ದಾಳಿ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, 2018ರಲ್ಲೂ ಸಿದ್ದರಾಮಯ್ಯ ಅವರಪ್ಪರಾಣೆ ಹೆಚ್‌ಡಿಕೆ ಸಿಎಂ ಆಗಲ್ಲ ಎಂದಿದ್ದರು. ಆಮೇಲೆ ನಮ್ಮ ಮನೆ ಬಾಗಿಲಿಗೆ ಬಂದಿದ್ದರು. ಈ ಸರ್ಕಾರದ ಆಯಸ್ಸು 2 ವರ್ಷ ಮಾತ್ರ, 2028ಕ್ಕೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದಿದ್ದಾರೆ.
ಬೆಂಗಳೂರು: ಜನವರಿ ತಿಂಗಳು ಮುಗಿಯಲು ಬಂದರೂ ರಾಜ್ಯದಲ್ಲಿ ಇನ್ನೂ ಕೊರೆಯುವ ಚಳಿ ಕಡಿಮೆಯಾಗುತ್ತಿಲ್ಲ. ಈ ಮಧ್ಯೆ ಮಳೆಯ ಮುನ್ಸೂಚನೆ ಕೂಡ ಸಿಕ್ಕಿದೆ. ದಕ್ಷಿಣ ಕರಾವಳಿಯ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಸೇರಿದಂತೆ ನಾಳೆಯವರೆಗೆ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಇನ್ನುಳಿದಂತೆ ಬಳ್ಳಾರಿ, ಬೆಂಗಳೂರು ನಗರ- ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಅಲ್ಲದೇ, ರಾಜ್ಯದ ಒಳನಾಡಿನಲ್ಲಿ ಕನಿಷ್ಠ ತಾಪಮಾನ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ. ಹೀಗಾಗಿ ಚಳಿಯ ಅನುಭವ ಮತ್ತಷ್ಟು ಹೆಚ್ಚಾಗಲಿದೆ. ದಕ್ಷಿಣ ಕರ್ನಾಟಕದಲ್ಲಿ 3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗುವ ಸಾಧ್ಯತೆ…
ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಸಂಘರ್ಷ ಇನ್ನೂ ತನ್ನಗಾಗಿಲ್ಲ. ಇದರ ಮಧ್ಯೆಯೇ ಈಗ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿದ್ದು, ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಇಬ್ಬರೂ ನಾಯಕರು ನಗರದ ಖಾಸಗಿ ಹೊಟೇಲ್‌ನಲ್ಲಿ ಪರಸ್ಪರ ಭೇಟಿ ಮಾಡಿ ಗೌಪ್ಯ ಚರ್ಚೆ ನಡೆಸಿದ್ದಾರೆ. ನಗರದಲ್ಲಿ ಆಶ್ರಯ ಮನೆಗಳ ಹಸ್ತಾಂತರ ಕಾರ್ಯಕ್ರಮದ ಸಲುವಾಗಿ ವಿಶೇಷ ವಿಮಾನದ ಮೂಲಕ ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದರು. ಆ ವೇಳೆ ಇಬ್ಬರೂ ಸಭೆ ನಡೆಸಿದ್ದಾರೆ. ಆ ವೇಳೆ ಆಪ್ತರಾಗಿರುವ ಸತೀಶ ಜಾರಕಿಹೊಳಿ, ಜಮೀರ್ ಅಹ್ಮದ್‌ಖಾನ್, ಕೆ.ಎಚ್. ಮುನಿಯಪ್ಪ, ಡಾ. ಎಚ್.ಸಿ. ಮಹದೇವಪ್ಪ ಕೂಡ ಇದ್ದರು. 45 ನಿಮಿಷಗಳ ಕಾಲ ಇಬ್ಬರೂ ಮಾತನಾಡಿದ್ದಾರೆ. ಈ ಭೇಟಿ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಚರ್ಚೆ ಹುಟ್ಟುಹಾಕಿದೆ. ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಬಣದ ನಾಯಕರು ಭಾಗವಹಿಸದಿರುವುದು ಕೂಡ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ
ಬೆಂಗಳೂರು: 2026ನೇ ಸಾಲಿನ ಪದ್ಮ ಪ್ರಶಸ್ತಿ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, 45 ಜನ ಸಾಧಕರಿಗೆ ಪ್ರಶಸ್ತಿ ಘೋಷಿಸಲಾಗಿದೆ. ಈ ಪೈಕಿ ರಾಜ್ಯದ ಮೂವರಿಗೆ ಅತ್ಯುನ್ನತ ನಾಗರಿಕ ಗೌರವ ಸಿಕ್ಕಿದೆ. ಮಂಡ್ಯ ಮೂಲದ ಅಕ್ಷರ ದಾಸೋಹಿ ಅಂಕೇಗೌಡ, ದಾವಣಗೆರೆಯ ವೈದ್ಯ ಡಾ. ಸುರೇಶ್ ಹನಗವಾಡಿ, ಬೆಂಗಳೂರಿನ ಸಮಾಜ ಸೇವಕಿ ಎಸ್.ಜಿ. ಸುಶೀಲಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭ್ಯಸಿದೆ. ಪದ್ಮಶ್ರೀ ಪ್ರಶಸ್ತಿ ಪಟ್ಟಿಯಲ್ಲಿ..ಅಂಕೇಗೌಡ – ಕರ್ನಾಟಕಅರ್ಮಿಡಾ ಫರ್ನಾಂಡಿಸ್ – ಮಹಾರಾಷ್ಟ್ರಭಗವಾನ್‌ದಾಸ್ ರೈಕ್ವಾರ್ – ಮಧ್ಯಪ್ರದೇಶಭಿಕ್ಲ್ಯಾ ಲಡಕ್ಯಾ ಧಿಂಡಾ – ಮಹಾರಾಷ್ಟ್ರಬ್ರಿಜ್ ಲಾಲ್ ಭಟ್ – ಜಮ್ಮು ಮತ್ತು ಕಾಶ್ಮೀರಬುಧ್ರಿ ಟಾಟಿ – ಛತ್ತೀಸ್‌ಗಢಚರಣ್ ಹೆಂಬ್ರಮ್ – ಪಶ್ಚಿಮ ಬಂಗಾಳಚಿರಂಜಿ ಲಾಲ್ ಯಾದವ್ – ಛತ್ತೀಸ್‌ಗಢಧಾರ್ಮಿಕ್ ಲಾಲ್ ಚುನಿಲಾಲ್ ಪಾಂಡ್ಯ – ಗುಜರಾತ್ಗಫ್ರುದ್ದೀನ್ ಮೇವಾಟಿ ಜೋಗಿ – ಹರಿಯಾಣಹ್ಯಾಲಿ ವಾರ್ – ಮೇಘಾಲಯಇಂದರ್‌ಜಿತ್ ಸಿಂಗ್ ಸಿಧು – ಪಂಜಾಬ್ಕೆ. ಪಜನಿವೇಲ್ – ಪುದುಚೇರಿಕೈಲಾಶ್ ಚಂದ್ರ ಪಂತ್ – ಉತ್ತರಾಖಂಡಖೇಮ್ ರಾಜ್ ಸುಂದ್ರಿಯಾಲ್ -…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಹಾಕಿರುವ ಧಮ್ಕಿ ರಾಜೀವ್ ಗೌಡ (Rajeev Gowda) ಬಂಧನ ಭೀತಿಯಿಂದ ಕಾಲಿಗೆ ಚಕ್ರ ಕಟ್ಟಿಕೊಂಡು ಅಲೆಯುತ್ತಿದ್ದಾರೆ. ಕಚೇರಿಗೆ ಬೆಂಕಿ ಹಾಕಿಸ್ತೀನಿ, ಚಪ್ಪಯಲ್ಲಿ ಹೊಡೆಸ್ತೀನಿ, ತಾಲೂಕು ಬಿಟ್ಟು ಒಡಿಸ್ತೀನಿ ಅಂತ ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿದ್ದ ರಾಜೀವ್ ಗೌಡನೇ ಈಗ ಊರು ಬಿಟ್ಟು ತಲೆ ಮರೆಸಿಕೊಂಡಿದ್ದಾನೆ. 12 ದಿನ ಕಳೆದ್ರೂ ಪುಡಾರಿ ವೀರನನ್ನ ಬಂಧಿಸೋಕೆ ಚಿಕ್ಕಬಳ್ಳಾಪುರ ಪೊಲೀಸರು (Chikkaballapura Police) ಫೇಲ್ ಆಗಿದ್ದು, ರಾಜೀವ್ ಗೌಡ ಬಂಧನ ಯಾವಾಗ ಅಂತ ಪೊಲೀಸರ ಕಾರ್ಯವೈಖರಿಗೆ ಜನ ಛೀಮಾರಿ ಹಾಕುವಂತಾಗಿದೆ. ಜಾಮೀನು ಪಡೆದು ಬಂದು ಅಬ್ಬರಿಸೋಣ ಅಂದುಕೊಂಡಿದ್ದ ರಾಜೀವ್ ಗೌಡನಿಗೆ ನ್ಯಾಯಾಲಯ ಜಾಮೀನು ಅರ್ಜಿ ವಜಾ ಮಾಡಿ, ತಕ್ಕ ಶಾಸ್ತಿ ಮಾಡಿದೆ. ಕೆಪಿಸಿಸಿ ಸಹ ಪಕ್ಷದಿಂದ ಅಮಾನತು ಮಾಡಿ ಶಾಕ್ ಕೊಟ್ಟಿದೆ. ಮತ್ತೊಂದೆಡೆ ಹೈಕೋರ್ಟ್‍ನಲ್ಲೂ ಎಫ್‌ಐಆರ್ ರದ್ದು ಕೋರಿ ಹಾಕಿದ್ದ ಅರ್ಜಿ ಸಹ ವಜಾಗೊಂಡಿದೆ. ಹೀಗಾಗಿ ರಾಜೀವ್‌ಗೌಡ ಈಗ ರಾಜ್ಯವನ್ನೇ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮೂರು ದಿನಗಳಿಂದಲೂ ಮಂಗಳೂರಿನಲ್ಲೇ…
ಢಾಕಾ: ಬಾಂಗ್ಲಾದಲ್ಲಿ ಹಿಂದೂಗಳ (Hindu) ಮೇಲಿನ ಸರಣಿ ಹತ್ಯೆ ಮುಂದುವರಿದಿದೆ. ನರಸಿಂಗ್ಡಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ವ್ಯಕ್ತಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆ ಮಾಡಿದ್ದಲ್ಲದೇ ಆಗುಂತಕರು, ಗ್ಯಾರೇಜ್ ಒಳಗೆ ಸುಟ್ಟು ಹಾಕಿದ್ದಾರೆ. ಇದು ಪೂರ್ವನಿಯೋಜಿತ ಕೃತ್ಯ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ ಚಂಚಲ್ ಚಂದ್ರ ಭೌಮಿಕ್ ಸಜೀವ ದಹನವಾದ ವ್ಯಕ್ತಿ. ನಭೌಮಿಕ್ ಮೂಲತಃ ಕುಮಿಲ್ಲಾ ಜಿಲ್ಲೆಯ ಲಕ್ಷ್ಮಿಪುರ ಗ್ರಾಮದವರು, ಕೆಲಸದ ನಿಮಿತ್ತ ನರಸಿಂಗ್ಡಿ ಜಿಲ್ಲೆಯಲ್ಲಿ ವಾಸವಿದ್ದ, ಕುಟುಂಬಕ್ಕೆ ಇವರೊಬ್ಬರೇ ಆಧಾರವಾಗಿದ್ದರು ಎನ್ನಲಾಗಿದೆ. ಶುಕ್ರವಾರ ತಡರಾತ್ರಿ ಚಂಚಲ್ ಗ್ಯಾರೇಜ್ ಒಳಗೆ ಮಲಗಿದ್ದಾಗ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಗ್ಯಾರೇಜ್ನ ಶಟರ್ಗೆ ಹೊರಗಿನಿಂದಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬೆಂಕಿ ಬಹುಬೇಗನೆ ವ್ಯಾಪಿಸಿದ್ದರಿಂದ ಚಂಚಲ್ ಅಂಗಡಿಯೊಳಗೇ ಸಜೀವ ದಹನವಾಗಿದ್ದಾರೆ ಎಂದು ಅಲ್ಲಿನ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ದಾಳಿಕೋರರು ಗ್ಯಾರೇಜ್ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದೃಶ್ಯ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದಾಳಿಕೋರರನ್ನ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.
ಟಿ20 ವಿಶ್ವಕಪ್‌ಗೆ ದಿನಗಣನೆ ಆರಂಭವಾಗಿದ್ದು, ಐಸಿಸಿಯು ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಿದೆ.ಟೂರ್ನಿನಿಂದ ಬಾಂಗ್ಲಾದೇಶ ತಂಡ ಹೊರ ಬಿದ್ದ ಬೆನ್ನಲ್ಲೇ ಈ ಪಟ್ಟಿ ಬಿಡುಗಡೆ ಮಾಡಲಾಗಿದೆ. ಬಾಂಗ್ಲಾ ತಂಡ ಹೊರಗುಳಿಯುತ್ತಿದ್ದಂತೆ ಸ್ಕಾಟ್ಲೆಂಡ್ ತಂಡವನ್ನು ಆಯ್ಕೆ ಮಾಡಲಾಗಿದೆ. ಭಾರತದಲ್ಲಿ ಟೂರ್ನಿ ಆಡಲು ನಿರಾಕರಿಸಿರುವ ಬಾಂಗ್ಲಾ ತಂಡವನ್ನು ಟಿ20 ವಿಶ್ವಕಪ್ನಿಂದ ಐಸಿಸಿ ಕೈ ಬಿಟ್ಟಿದೆ. ಬದಲಾಗಿ ಸ್ಕಾಟ್ಲೆಂಡ್ ತಂಡವನ್ನು ಆಯ್ಕೆ ಮಾಡಲಾಗಿದೆ. ಈಗ ಇದೇ ಹಾದಿಗೆ ಪಾಕಿಸ್ತಾನ್ ಕೂಡ ಬಂದು ನಿಂತಿದೆ. ಹೀಗಾಗಿ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ.ತಂಡಗಳ ಗ್ರೂಪ್:• ಗುಂಪು A: ಭಾರತ, ಪಾಕಿಸ್ತಾನ್, ನೆದರ್ಲೆಂಡ್ಸ್, ನಮೀಬಿಯಾ, ಯುಎಸ್ಎ.• ಗುಂಪು B: ಶ್ರೀಲಂಕಾ, ಆಸ್ಟ್ರೇಲಿಯಾ, ಝಿಂಬಾಬ್ವೆ, ಐರ್ಲೆಂಡ್, ಒಮಾನ್.• ಗುಂಪು C: ಇಂಗ್ಲೆಂಡ್, ವೆಸ್ಟ್ ಇಂಡೀಸ್, ಸ್ಕಾಟ್ಲೆಂಡ್ , ನೇಪಾಳ, ಇಟಲಿ.• ಗುಂಪು D: ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಯುಎಇ, ಕೆನಡಾ. ಟಿ20 ವಿಶ್ವಕಪ್ ವೇಳಾಪಟ್ಟಿ:ದಿನಾಂಕ ಪಂದ್ಯ ಸ್ಥಳಫೆಬ್ರವರಿ 7 ಪಾಕಿಸ್ತಾನ vs ನೆದರ್ಲೆಂಡ್ಸ್ಎಸ್ಎಸ್ಸಿ, ಕೊಲಂಬೊಫೆಬ್ರವರಿ 7 ವೆಸ್ಟ್ ಇಂಡೀಸ್ vs ಸ್ಕಾಟ್ಲೆಂಡ್ ಕೋಲ್ಕತ್ತಾಫೆಬ್ರವರಿ 7…
ಬೆಂಗಳೂರು: ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ 2022ರ ಅಕ್ಟೋಬರ್ ನಲ್ಲಿ ನಡೆದಿದೆ ಎನ್ನಲಾದ ರೂ. 400 ಕೋಟಿ (Belagavi Rs.400 Cr Robbery) ಮೌಲ್ಯದ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಈ ಹಣವು ಮಹಾರಾಷ್ಟ್ರದ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಎಂಬುವವರಿಗೆ ಸೇರಿದ್ದು, ನಾಸಿಕ್ ಮೂಲದ ಸಂದೀಪ್ ಪಾಟೀಲ್ ಎಂಬುವರ ಅಪಹರಣದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವೀಸ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆಗೆ ವಿಶೇಷ ತನಿಖಾ ದಳ (SIT) ರಚಿಸುವಂತೆ ಆದೇಶಿಸಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ಪೊಲೀಸರು ಕಂಟೇನರ್‌ಗಳ ಹುಡುಕಾಟ ನಡೆಸುತ್ತಿದ್ದಾರೆ. ಮಹಾರಾಷ್ಟ್ರ ಪೊಲೀಸರು ಕರ್ನಾಟಕ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ನಮಗೆ ಸರಿಯಾದ ಮಾಹಿತಿಗಳು ದೊರೆತ ನಂತರ ನಮ್ಮ ರಾಜ್ಯ…
ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಸತತ 5 ಪಂದ್ಯಗಳಲ್ಲಿ ಗೆದ್ದಿದ್ದ ಆರ್‌ಸಿಬಿ ಮಹಿಳಾ ತಂಡವು ಡೆಲ್ಲಿ ವಿರುದ್ಧ ಹೀನಾಯ ಸೋಲು ಕಂಡಿದೆ. ಹೀಗಾಗಿ ಫೈನಲ್ ಲೆಕ್ಕಾಚಾರ ಶುರುವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್‌ಸಿಬಿ ತಂಡವು ಗೆಲುವು ದಾಖಲಿಸಿದ್ದರೆ ನೇರವಾಗಿ ಫೈನಲ್ ತಲುಪಲಿತ್ತು. ಈಗ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮುಂದಿನ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಅನಿವಾರ್ಯವಾಗಿದೆ.ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ತಂಡವು ನೇರವಾಗಿ ಫೈನಲ್ಗೆ ಪ್ರವೇಶಿಸುತ್ತದೆ. 2ನೇ ಮತ್ತು 3ನೇ ಸ್ಥಾನಗಳನ್ನು ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈಗಾಗಲೇ 5 ಪಂದ್ಯಗಳನ್ನು ಗೆದ್ದು 10 ಅಂಕ ಗಳಿಸಿರುವ ಆರ್‌ಸಿಬಿ ಪ್ಲೇ ಆಫ್‌ಗೆ ಅರ್ಹತೆ ಪಡೆದಿದೆ. ಮೊದಲ ಸ್ಥಾನದಲ್ಲಿರುವ ಆರ್‌ಸಿಬಿ ತಂಡವು ಮುಂದಿನ ಎರಡು ಮ್ಯಾಚ್ಗಳಲ್ಲಿ ಒಂದು ಪಂದ್ಯದಲ್ಲಿ ಗೆದ್ದರೆ ಫೈನಲ್ಗೆ ಪ್ರವೇಶಿಸಲಿದೆ. ಆರ್‌ಸಿಬಿ ತಂಡವನ್ನು ಹೊರತುಪಡಿಸಿ ಬೇರೆ ಯಾವುದೇ ತಂಡಕ್ಕೆ 12 ಅಂಕಗಳನ್ನು ಪಡೆಯಲು ಅವಕಾಶವಿಲ್ಲ. ಉಳಿದ ನಾಲ್ಕು ತಂಡಗಳು…
ಬೆಳಗಾವಿ: ಬಿಯರ್ (Beer) ಕುಡಿಸಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರಗೈದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ (Life Imprisonment) ವಿಧಿಸಲಾಗಿದೆ. ಜೀವಾವಧಿ ಶಿಕ್ಷೆ ವಿಧಿಸಿ ಬೆಳಗಾವಿ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. 8 ತಿಂಗಳ ಅವಧಿಯಲ್ಲಿ ಪ್ರಕರಣ ಇತ್ಯರ್ಥಗೊಳಿಸಿ ನಾಲ್ವರಿಗೆ ಕಠಿಣ ಶಿಕ್ಷೆ ಪ್ರಕಟಿಸಲಾಗಿದೆ. ಸಾಕೀಬ್ ನಿಜಾಮಿ (22), ರವಿ ನಾಯ್ಯೋಡಿ ವಿರುದ್ಧ ಆರೋಪ ಸಾಬೀತಾಗಿದ್ದು, ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಲ್ಲದೇ, 8.76 ಲಕ್ಷ ರೂ. ದಂಡ ವಿಧಿಸಲಾಗಿದೆ. ಕೃತ್ಯಕ್ಕೆ ಸಹಕರಿಸಿದ ರೋಹನ್ ಪಾಟೀಲ್, ಅಶುತೋಷ್ ಪಾಟೀಲ್‌ಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಇಬ್ಬರಿಗೂ 6 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ಸಿ.ಎಂ ಪುಷ್ಪಲತಾ ಆದೇಶ ಹೊರಡಿಸಿದ್ದಾರೆ. ಸಂತ್ರಸ್ತೆಗೆ 10 ಲಕ್ಷ ಪರಿಹಾರ ನೀಡುವಂತೆ ಕಾನೂನು ಪ್ರಾಧಿಕಾರಕ್ಕೂ ಸೂಚನೆ ನೀಡಿದ್ದಾರೆ. ಈ ಘಟನೆ ಬೆಳಗಾವಿಯ ಸಾವಗಾಂವ ಫಾರ್ಮ್ ಹೌಸ್ ನಲ್ಲಿ 2025ರ ಮೇ 10ರಂದು ನಡೆದಿತ್ತು. ಅಪ್ರಾಪ್ತೆ ಎಂದು ಗೊತ್ತಿದ್ದರೂ ಬಿಯರ್ ಕುಡಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೇ ಅಪ್ರಾಪ್ತೆಯ…