Subscribe to Updates
Get the latest creative news from FooBar about art, design and business.
Author: Bosstv News Desk
ಮಂಗಳೂರು: ಕರಾವಳಿ ಭಾಗದಲ್ಲಿ ಕಂಬಳಕ್ಕೆ ಹೆಚ್ಚಿನ ಮಾನ್ಯತೆ. ಇಲ್ಲಿನ ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ನಲ್ಲಿ ನಡೆದ ರಾಮ – ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳ ಕೂಟ ಮುಕ್ತಾಯವಾಯಿತು. ನೇಗಿಲು ಹಿರಿಯ ವಿಭಾಗದ ಫೈನಲ್ ಸ್ಪರ್ಧೆಯಲ್ಲಿ 80 ಬಡಗಬೆಟ್ಟು ಶ್ರೀಕ ಸಂದೀಪ್ ಶೆಟ್ಟಿ ಅವರ ಕೋಣಗಳು 125 ಮೀ. ಉದ್ದದ ಕಂಬಳ ಕರೆಯನ್ನು ಕೇವಲ 10.87 ಸೆಕೆಂಡ್‌ನಲ್ಲಿ ತಲುಪಿ ದಾಖಲೆ ನಿರ್ಮಿಸಿದವು. ಇದನ್ನು 100 ಮೀ.ಎಂದು ಗಣನೆಗೆ ತೆಗೆದುಕೊಂಡರೆ 8.69 ಸೆಕೆಂಡ್ ಗಳಿಗೆ ಗುರಿ ಮುಟ್ಟಿದಂತಾಗುತ್ತದೆ. ‘ಗಾಂಧಿ ಮೈದಾನ ಸಂತು’ ಹಾಗೂ ‘ಸುರತ್ಕಲ್ ಪಾಂಚ’ ಕೋಣಗಳು ದಾಖಲೆ ನಿರ್ಮಿಸಿದ್ದು, ಈ ಕೋಣಗಳನ್ನು ಓಡಿಸುವ ಮೂಲಕ ಮಾಸ್ತಿಕಟ್ಟೆ ಸ್ವರೂಪ್ ದಾಖಲೆ ಬರೆದಿದ್ದಾರೆ. ಇಲ್ಲಿಯವರೆಗೆ ದಾಖಲೆ ಶ್ರೀನಿವಾಸ ಗೌಡ 8.78 ಸೆಕೆಂಡ್‌ನಲ್ಲಿ ಇತ್ತು. ಶ್ರೀನಿವಾಸಗೌಡ 100 ಮೀ. ದೂರಕ್ಕೆ 8.78 ಸೆಕೆಂಡ್ ದಾಟಿ ಗುರಿ ಬರೆದಿದ್ದರು. ಈಗ ಮಂಗಳೂರು ಕಂಬಳದ ಫೈನಲ್‌ನಲ್ಲಿ 100 ಮೀ. ದೂರವನ್ನು 8.69 ಸೆಕೆಂಡ್‌ನಲ್ಲಿ ದಾಟುವ ಮೂಲಕ ಸಾರ್ವತ್ರಿಕ ದಾಖಲೆಯನ್ನು…
ಬೆಂಗಳೂರು: ಬ್ಯಾಂಕ್ ನಲ್ಲಿ ನಕಲಿ ಲೋನ್ ಸೃಷ್ಟಿಸಿ ಕೋಟಿ ಕೋಟಿ ವಂಚಿಸಿರುವ ಘಟನೆಯೊಂದು ನಡೆದಿದೆ. ಬೆಂಗಳೂರಿನ (Bengaluru) ಕೆನರಾ ಬ್ಯಾಂಕ್ ಶಾಖೆಯಲ್ಲಿ ಈ ವಂಚನೆ ಬೆಳಕಿಗೆ ಬಂದಿದೆ. ಬ್ಯಾಂಕ್ನ ಹಿರಿಯ ಮ್ಯಾನೇಜರ್ ವಿರುದ್ಧವೇ ನಕಲಿ ಗೋಲ್ಡ್ ಲೋನ್ ಸೃಷ್ಟಿಸಿ ಬ್ಯಾಂಕ್ ಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ. ಸದ್ಯ ಈ ಕುರಿತು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕ ಎನ್. ರಘು ವಿರುದ್ಧ ಆರೋಪ ಕೇಳಿ ಬಂದಿದೆ. 2025ರ ಅಕ್ಟೋಬರ್ 4ರಿಂದ ಡಿಸೆಂಬರ್ 9ರವರೆಗೆ 41 ಗ್ರಾಹಕರ ಖಾತೆಗಳಲ್ಲಿ ಚಿನ್ನವೇ ಇರದೆ ನಕಲಿ ಗೋಲ್ಡ್ ಲೋನ್‌ಗಳನ್ನು ಓಪನ್ ಮಾಡಿ, ಸುಮಾರು 3.11 ಕೋಟಿ ರೂ. ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎನ್ನಲಾಗಿದೆ. ವಯೋವೃದ್ಧರು, ಪಿಂಚಣಿದಾರರು, ಅರ್ಚಕರು ಹಾಗೂ ಹೋಲ್‌ಸೇಲ್ ವ್ಯಾಪಾರಿಗಳನ್ನು ಟಾರ್ಗೆಟ್ ಮಾಡಿರುವ ಆರೋಪ ಕೇಳಿ ಬಂದಿದೆ. ಸುಳ್ಳು ಹೇಳಿ ಅವರಿಂದ ಒಟಿಪಿ ಮತ್ತು ಚೆಕ್ ಪಡೆದು ನಂಬಿಕೆ ದ್ರೋಹ ಮಾಡಲಾಗಿದೆ. ಅವರ ಖಾತೆಗಳಲ್ಲಿ ಗೋಲ್ಡ್ ಲೋನ್ ತೆರೆದು…
ಢಾಕಾ: ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರೆದಿದೆ. ಷರೀಫ್ ಉಸ್ಮಾನ್ ಹಾದಿ ನಿಧನದ ನಂತರ ಬಾಂಗ್ಲಾದೇಶ ಹೊತ್ತಿ ಉರಿಯುತ್ತಿದೆ. ಅಶಾಂತಿಯ ಹಿನ್ನೆಲೆಯಲ್ಲಿ, ಗುಂಪು (Bangladesh Unrest) ಹಿಂಸಾಚಾರವು ಆತಂಕಕಾರಿಯಾಗುತ್ತಿದೆ. ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಹಿಂಸಿಸುವ ಕೃತ್ಯ ಬೆಳಕಿಗೆ ಬರುತ್ತಿವೆ. ಇಬ್ಬರು ಹಿಂದೂ ವ್ಯಕ್ತಿಗಳನ್ನು ಕೊಲೆ ಮಾಡಿದ ನಂತರ ಈಗ ಹಿಂದೂ ಒಡೆತನದ ಮನೆಯನ್ನು ಸುಟ್ಟುಹಾಕಲಾಗಿದೆ ಎಂದು ವರದಿಯಾಗಿದೆ. ಡಿ. 27 ರಂದು ಪಿರೋಜ್‌ಪುರದ ಡುಮ್ರಿಟೋಲಾ ಗ್ರಾಮದಲ್ಲಿರುವ ಸಹಾ ನಿವಾಸದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಬೆಂಕಿ ಹಚ್ಚಿದ್ದಾರೆ. ಕೋಣೆಯೊಳಗೆ ಬಟ್ಟೆ ಹಾಕಿ ಬೆಂಕಿ ಹಚ್ಚಿದ್ದಾರೆ. ಬೆಂಕಿ ಇಡೀ ಮನೆಯನ್ನು ಆವರಿಸಿ ಸುಟ್ಟು ಹಾಕಿದೆ. ಪಿರೋಜ್‌ಪುರದ ಡುಮ್ರಿಟೋಲಾ ಗ್ರಾಮದಲ್ಲಿ, ಸಹಾ ಕುಟುಂಬದ ಮನೆಯ ಐದು ಕೊಠಡಿಗಳನ್ನು ಹಿಂದೂ ದ್ವೇಷಿ ಜಿಹಾದಿಗಳು ಸುಟ್ಟುಹಾಕಿದರು. ಬೆಳಗಿನ ಜಾವ ಎಲ್ಲರೂ ಮಲಗಿದ್ದಾಗ ಮನೆಗೆ ಬೆಂಕಿ ಹಚ್ಚಿದರು ಎಂದು ಬಾಂಗ್ಲಾದೇಶದ ಪ್ರಸಿದ್ಧ ಲೇಖಕಿ ತಸ್ಲೀಮಾ ನಸ್ರೀನ್ ಹೇಳಿದ್ದಾರೆ. ಎಲ್ಲಾ ಹಿಂದೂ ಮನೆಗಳನ್ನು ಹೀಗೆಯೇ ಸುಡಲಾಗುತ್ತದೆಯೇ? ಅವರು ಹಿಂದೂಗಳನ್ನು ಜೀವಂತವಾಗಿ ಸುಡಲು ಬಯಸುತ್ತಾರೆ;…
ಮೈಸೂರು: ದರೋಡೆಕೋರರ ಗ್ಯಾಂಗ್ ವೊಂದು ಕೆಜಿಗಟ್ಟಲೇ ಚಿನ್ನ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. 7 ಗನ್ ಬಳಸಿ 4 ನಿಮಿಷದಲ್ಲಿ ಹುಣಸೂರು ಚಿನ್ನದ ಅಂಗಡಿಯಲ್ಲಿ (Hunsuru Jewellery Shop Robbery)ಕೆಜಿ ಗಟ್ಟಲೇ ಚಿನ್ನ ದೋಚಿ ಪರಾರಿಯಾಗಿದ್ದಾರೆ. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಕೇವಲ ನಾಲ್ಕೇ ನಿಮಿಷಗಳಲ್ಲಿ ಖದೀಮರು ದೋಚಿ ಪರಾರಿಯಾಗಿದ್ದಾರೆ. ಮಧ್ಯಾಹ್ನ 2 ಗಂಟೆ 4 ನಿಮಿಷಕ್ಕೆ ಹುಣಸೂರು ಬಸ್ ನಿಲ್ದಾಣದ (Hunsur Bus Stand) ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ʼ ಚಿನ್ನಂಗಡಿಯಲ್ಲೇ ಕಳ್ಳತನವಾಗಿದೆ. ಶೋಕೆಸ್‌ನಲ್ಲಿದ್ದ ದೊಡ್ಡ ದೊಡ್ಡ ಗಾತ್ರದ ಚಿನ್ನಾಭರಣವನ್ನ ಒಂದು ಕಡೆ ಗುಡ್ಡೆ ಹಾಕಿ ಚೀಲದಲ್ಲಿ ಹೊತ್ತುಕೊಂಡು ಹೋಗಿದ್ದಾರೆ. 5 ಜನ ದುಷ್ಕರ್ಮಿಗಳು ಚಿನ್ನ ದೋಚಿ ಪರಾರಿಯಾಗಿದ್ದಾರೆ. ಚಿನ್ನವನ್ನ ಒಬ್ಬ ಗುಡ್ಡೆ ಹಾಕುತ್ತಿದ್ದರೆ ಮತ್ತೊಬ್ಬ ಗನ್ ಹಿಡಿದು ಸಿಬ್ಬಂದಿ ಬೆದರಿಸುತ್ತಿದ್ದ. ಮತ್ತೊಬ್ಬ ಗನ್ ಹಿಡಿದು ಬಾಗಿಲ ಬಳಿ ನಿಂತಿದ್ದ. ಉಳಿದ ಇಬ್ಬರು ಹೊರಗಡೆ ದ್ವಿಚಕ್ರ ವಾಹನ ಸ್ಟಾರ್ಟ್ ಮಾಡಿಕೊಂಡು ನಿಂತಿದ್ದರು. ಗುಡ್ಡೆ ಹಾಕಿ…
ಬೀದರ್: ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲಗರ ವಿರುದ್ಧ ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಎಂಬುವರು ಶಾಸಕರ ವಿರುದ್ಧ ದೂರು ನೀಡಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶಾಸಕ ಶರಣು ಸಲಗರ ಅವರು ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಅವರಿಂದ 99 ಲಕ್ಷ ರೂ. ಹಣವನ್ನು ಪಡೆದಿದ್ದರು. ಹಣ ಪಡೆದ ಸಮಯದಲ್ಲಿ ಶಾಸಕರು ಭದ್ರತೆಗಾಗಿ ಖಾಲಿ ಚೆಕ್ ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಶಾಸಕರು ನಿಗದಿತ ಅವಧಿಯೊಳಗೆ ಹಣವನ್ನು ಮರುಪಾವತಿಸದ ಕಾರಣ, ಉದ್ಯಮಿ ನೀಡಿದ ಚೆಕ್ ಅನ್ನು ಬ್ಯಾಂಕಿಗೆ ಸಲ್ಲಿಸಿದ್ದೆ. ಆದರೆ, ಅದು ಬೌನ್ಸ್ ಆಗಿದೆ. ಈಗ ಸಂಜೀವ್ ಕುಮಾರ್ ಸುಗುರೆ ಅವರು ಶಾಸಕ ಶರಣು ಸಲಗರ ಅವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಂತರ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ವಿಜಯಪುರ: ಹೋಟೆಲ್(Hotel) ವೊಂದು ಬೆಂಕಿಗೆ(Fire Incident) ಹೊತ್ತಿ ಉರಿದಿರುವ ಘಟನೆ ನಡೆದಿದೆ. ಈ ಘಟನೆ ವಿಜಯಪುರ (Vijayapura) ನಗರದ ಸೋಲಾಪುರ ರಸ್ತೆ ಬಳಿ ನಡೆದಿದೆ. ತಡರಾತ್ರಿ ಸಂಭವಿಸಿದ ಅಗ್ನಿ ಅವಘಡಕ್ಕೆ ಹೋಟೆಲ್ ಕೃಷ್ಣ ಪ್ಯಾಲೆಸ್‌ನ ಮುಂಭಾಗ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಹೀಗಾಗಿ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಗ್ಯಾಸ್ ಲೀಕ್ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
ಚಾಮರಾಜನಗರ: ಹೃದಯಾಘಾತಕ್ಕೆ ಎಎಸ್ ಐ ಬಲಿಯಾಗಿರುವ ಘಟನೆಯೊಂದು ನಡೆದಿದೆ. ಈ ಘಟನೆ ಚಾಮರಾಜನಗರದಲ್ಲಿ(Chamarajanagar) ನಡೆದಿದೆ. ರಾತ್ರಿ ಕರ್ತವ್ಯ ಮುಗಿಸಿ ಬೆಳಗ್ಗೆ ಮನೆಗೆ ಮರಳಿದ್ದ ಎಎಸ್‌ಐ (ASI) ನಾಗನಾಯಕ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ನಾಗನಾಯಕ ಹೃದಯಾಘಾತಕ್ಕೆ ಬಲಿಯಾದವರು. ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತು. ಆದರೆ, ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ. ಅವರು ಪೊಲೀಸ್ ಗೃಹದಲ್ಲಿ ವಾಸವಿದ್ದರು ಎನ್ನಲಾಗಿದೆ.
ತಂಜಾವೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹಿಂಭಾಗದ ಪಾಳು ಬಿದ್ದ ಕಟ್ಟಡವೊಂದರಲ್ಲಿ ನಿಧಿ ಪತ್ತೆಯಾಗಿರುವ ಘಟನೆ ನಡೆದಿದೆ. ಒಂದು ಕೋಣೆಯಲ್ಲಿ ತಾಮ್ರ ಮತ್ತು ಹಿತ್ತಾಳೆ ಪಾತ್ರೆಗಳು ಪತ್ತೆಯಾಗಿವೆ. ಪ್ರಾಥಮಿಕ ಸಂಶೋಧನೆಗಳ ಪ್ರಕಾರ, ಈ ಪಾತ್ರೆಗಳ ಮೌಲ್ಯ 9 ಲಕ್ಷ ರೂ. ಆಗಿರಬಹುದು ಎಂದು ಅಂದಾಜಿಸಲಾಗಿದೆ. ಕಟ್ಟಡ ನಿರ್ವಹಣಾ ಕಾರ್ಯದ ವೇಳೆ ನಿಧಿ ಪತ್ತೆಯಾಗಿದೆ. ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹಿಂದೆ ಒಂದು ಬಳಕೆಯಾಗದ ಕಟ್ಟಡವಿತ್ತು. ಇದರ ನಂತರ, ವೈದ್ಯಕೀಯ ಕಾಲೇಜಿನ ಡೀನ್ ಅದನ್ನು ಸ್ವಚ್ಛಗೊಳಿಸಲು ಆದೇಶಿಸಿದ್ದರು. ಈ ವೇಳೆ ನಿರ್ವಹಣಾ ಕಾರ್ಯಕ್ಕಾಗಿ ಅದನ್ನು ತೆರೆದಾಗ ತಾಮ್ರದ ಜಗ್‌ಗಳು, ಹಿತ್ತಾಳೆ ಪಾತ್ರೆಗಳು, ಅಡುಗೆ ಪಾತ್ರೆಗಳು ಮತ್ತು ನೀರು ಸಂಗ್ರಹ ಟ್ಯಾಂಕ್ ಸೇರಿದಂತೆ ಹಲವು ಪ್ರಾಚೀನ ವಸ್ತುಗಳು ಪತ್ತೆಯಾಗಿವೆ. ಸ್ಥಳಕ್ಕೆ ಕಂದಾಯ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ವಶಪಡಿಸಿಕೊಂಡ ಎಲ್ಲಾ ಪಾತ್ರೆಗಳನ್ನು ಸುರಕ್ಷಿತವಾಗಿ ಆರ್ಕೈವ್‌ಗೆ ಸ್ಥಳಾಂತರಿಸಲಾಗಿದೆ.
ಶ್ರೀಲಂಕಾ ವಿರುದ್ಧ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಭರ್ಜರಿ ಆರಂಭ ಸಿಕ್ಕಿತು. ಪರಿಣಾಮ ಭಾರತ ತಂಡವು ನಿಗದಿತ ಓವರ್ ಗಳಲ್ಲಿ 221 ರನ್ ಗಳಿಸಿತು. ಈ ರನ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಭಾರತ ತಂಡ ಕಲೆ ಹಾಕಿದ ಅತ್ಯಧಿಕ ರನ್ ಆಗಿದೆ. ಆರಂಭದಿಂದಲೂ ಅಬ್ಬರಿಸಿದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಮೊದಲ ವಿಕೆಟ್ಗೆ ದಾಖಲೆಯ 162 ರನ್ಗಳ ಜೊತೆಯಾಟ ನೀಡಿದ್ದಾರೆ. ಇದು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಭಾರತದ ಆರಂಭಿಕ ಜೋಡಿ ಮೊದಲ ವಿಕೆಟ್ಗೆ ಕಲೆಹಾಕಿದ ಅತ್ಯಧಿಕ ರನ್ಗಳ ಜೊತೆಯಾಟ ಕೂಡ ಆಗಿದೆ. ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಅತ್ಯದ್ಭುತ ಪ್ರದರ್ಶನ ನೀಡುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಶಫಾಲಿ 46 ಎಸೆತಗಳಲ್ಲಿ 12 ಬೌಂಡರಿ ಮತ್ತು ಒಂದು ಸಿಕ್ಸರ್ ಸಹಿತ 79 ರನ್ ಬಾರಿಸಿದರೆ, ಸ್ಮೃತಿ ಮಂಧಾನ 48 ಎಸೆತಗಳಲ್ಲಿ 11 ಬೌಂಡರಿ ಮತ್ತು ಮೂರು ಸಿಕ್ಸರ್‌ಗಳೊಂದಿಗೆ 80 ರನ್ ಗಳಿಸಿದ್ದಾರೆ. ಇದಕ್ಕೂ…
ಹಾವೇರಿ: ಡಿಸೆಂಬರ್ ನಂತರ ಸಾವು-ನೋವು ಹೆಚ್ಚಾಗಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Kodi Mutt Shree)ಭವಿಷ್ಯ (prediction) ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಡಿಸೆಂಬರ್ ತಿಂಗಳ ನಂತರ ಸಾವು-ನೋವು ಜಾಸ್ತಿ ಆಗುತ್ತವೆ. ಅಂಬಲಿಯು ಹಳಸೀತು, ಕಂಬಳಿಯು ಹಾಸೀತು ಅಂತ ಹೇಳಿದ್ದೆ. ಕೈಲಾಸದಲ್ಲಿ ಕೈ ಪೂಜೆ ಮಾಡುತ್ತೆ ಅಂತಲೂ ಹೇಳಿದ್ದೆ. ಹಕ್ಕ-ಬುಕ್ಕರು ವಿಜಯನಗರ ಸಾಮ್ರಾಜ್ಯ ಉಳಿಸಿದರು. ಸಂಗೊಳ್ಳಿ ರಾಯಣ್ಣ ಕಿತ್ತೂರು ಸಾಮ್ರಾಜ್ಯ ಉಳಿಸಿದರು, ಈ ಕುರುಬ ಸಮಾಜದವರು ಪ್ರಕೃತಿಯಲ್ಲಿ ಭವಿಷ್ಯ ಕಂಡವರು. ಹಾಲುಮತ ಸಮಾಜ ದೈವಿ ಬಲ ಉಳ್ಳ ಪುರಾತನ ಮತ. ಹಾಲುಮತದಿಂದ ಅಧಿಕಾರ ಬಿಡಿಸಿಕೊಳ್ಳುವುದು ಕಷ್ಟ ಎಂದು ಹೇಳಿರುವ ಅವರು ಮತ್ತೊಮ್ಮೆ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಬಜೆಟ್ ಆಗೋವರೆಗೆ ಸಿಎಂ ಖುರ್ಚಿಗೆ ಏನೂ ತೊಂದರೆ ಇಲ್ಲ. ಬಜೆಟ್ ಬಳಿಕ ಅವರಾಗೇ ಬಿಟ್ಟರೆ ಬೇರೆಯವರಿಗೆ ಸಿಎಂ ಆಗುವ ಯೋಗ ಇದೆ. ಶಿವನ ಮಲ್ಲಿಗೆಯ ಮುಡಿಯ ಹೂವು ಬಲಪಾದದಿಂದ ಬಿದ್ದಿದೆ,…