Subscribe to Updates
Get the latest creative news from FooBar about art, design and business.
Author: Bosstv News Desk
ವಿಜಯಪುರ: ಮುಖ ಮುಚ್ಚಿಕೊಂಡು ಬಂದು ಮಹಿಳೆಯನ್ನು ಥಳಿಸಿ, ಅವರ ಕಿವಿಯೋಲೆ ಹಾಗೂ ಮಾಂಗಲ್ಯ ಸರ ಕದ್ದಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನಗರದ ಡಿವಟಗೇರಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಸರಗಳ್ಳತನ ಹಾಗೂ ಕಿವಿಯೋಲೆ ಕದ್ದು ಆರೋಪಿಗಳಿಬ್ಬರು ಪರಾರಿಯಾಗಿದ್ದರು. ಆಸೀಫ್ ಜಮಾದಾರ್ ಹಾಗೂ ರಿಹಾನ್ ಮಣಿಯಾರ್ ಬಂಧಿತ ಆರೋಪಿಗಳು. ಹಾಲು ತರುವುದಕ್ಕಾಗಿ ಮಹಿಳೆಯು ಅಂಗಡಿಗೆ ಹೋಗಿದ್ದ ಸಂದರ್ಭದಲ್ಲಿ ದಾಳಿ ಮಾಡಿರುವ ಖದೀಮರು, ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಕಲಾವತಿ ಗಾಯಗೊಂಡಿದ್ದರು. ಅಲ್ಲದೇ, ಕಲಾವತಿ ಮೇಲೆ ಹಲ್ಲೆ ಮಾಡಿ ಕಿವಿ ಕತ್ತರಿಸಿದ್ದರು. ಬಳಿಕ ಕಿವಿಯಲ್ಲಿದ್ದ ಓಲೆ ಹಾಗೂ ಕತ್ತಲ್ಲಿದ್ದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಸದ್ಯ ಪೊಲೀಸರು ರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಕರಿತು ಗೋಲಗುಂಬಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳ ಮಧ್ಯೆ ನಡೆಯುತ್ತಿರುವ 4ನೇ ಟಿ20 ಪಂದ್ಯದಲ್ಲಿ ಅರ್ಧ ಶತಕ ಸಿಡಿಸುವುದರ ಮೂಲಕ ಭಾರತೀಯ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಹೊಸ ಮೈಲುಗಲ್ಲು ಸೃಷ್ಟಿಸಿದ್ದಾರೆ. ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿದೆ. ಆರಂಭಿಕರಾದ ಸ್ಮೃತಿ ಮಂಧಾನ, ಶಫಾಲಿ ವರ್ಮಾ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಲಂಕಾ ವಿರುದ್ಧದ ಮೊದಲ 3 ಪಂದ್ಯಗಳಲ್ಲಿ ಸ್ಮೃತಿ ಉತ್ತಮ ಆಟ ಪ್ರದರ್ಶಿಸಲು ಆಗಿರಲಿಲ್ಲ. ಆದರೆ, ನಾಲ್ಕನೇ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿದ್ದಾರೆ. ತಿರುವನಂತಪುರದಲ್ಲಿ ನಡೆಯುತ್ತಿರುವ 4ನೇ ಟಿ20 ಪಂದ್ಯದಲ್ಲಿ ಸ್ಮೃತಿ ಮಂಧಾನ 27 ರನ್ಗಳ ಗಡಿ ದಾಟುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10 ಸಾವಿರ ರನ್ ಗಳ ಗಡಿ ದಾಟಿದ್ದಾರೆ. ಈ ಮೂಲಕ ಭಾರತದ ಪರ ಈ ಸಾಧನೆ ಮಾಡಿದ ಎರಡನೇ ಮಹಿಳಾ ಕ್ರಿಕೆಟರ್ ಎನಿಸಿಕೊಂಡಿದ್ದಾರೆ. ಸ್ಮೃತಿಗೂ ಮೊದಲು ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಈ ಸಾಧನೆ ಮಾಡಿದ್ದರು. ಭಾರತದ ಪರ ಇದುವರೆಗೆ ಏಳು ಟೆಸ್ಟ್ ಪಂದ್ಯಗಳನ್ನಾಡಿರುವ…
ರಾಯಚೂರು: ರಾಯರ ಮಠದಲ್ಲಿ ಕನ್ನಡ ಬಳಕೆಗೆ ವಿರೋಧ ವ್ಯಕ್ತಪಡಿಸಿದ ತೆಲುಗು ಭಾಷಿಕರಿಗೆ ಭಕ್ತರು ಶ್ಲೋಕದ ಮೂಲಕ ಟಾಂಗ್ ಕೊಟ್ಟಿದ್ದಾರೆ. ಮಠದ ಮುಖ್ಯದ್ವಾರದಲ್ಲಿ ಕನ್ನಡ ಭಾಷೆಯಲ್ಲಿರುವ ರಾಯರ ಶ್ಲೋಕ ಬಳಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಭಕ್ತರು 1981ರಲ್ಲಿ ಇದೇ ಮಂತ್ರಾಲಯದಲ್ಲಿ ಚಿತ್ರೀಕರಣವಾದ ರಾಜ್ ಕುಮಾರ್ ಅಭಿನಯದ ಭಾಗ್ಯವಂತ ಸಿನೆಮಾದಲ್ಲೂ ಕನ್ನಡದಲ್ಲೇ ರಾಯರ ಶ್ಲೋಕ ಇರುವುದನ್ನ ತೋರಿಸಿ ಟಾಂಗ್ ಕೊಟ್ಟಿದ್ದಾರೆ. ಆಂಧ್ರಪ್ರದೇಶದಲ್ಲಿರುವ ಕರ್ನಾಟಕದ ಗಡಿಯ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭಾಷಾ ವಿವಾದ ಸೃಷ್ಟಿಸಿದವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗತ್ತಿದೆ. ಮಠದ ಮುಖ್ಯ ದ್ವಾರದಲ್ಲಿ ಕನ್ನಡ ಭಾಷೆಯಲ್ಲಿ ರಾಯರ ಶ್ಲೋಕವಿದೆ. ಇದೇ ಶ್ಲೋಕ ತೆಲುಗು ಭಾಷೆಯಲ್ಲಿ ಯಾಕಿಲ್ಲ ಅಂತ ತೆಲುಗು ಭಾಷಿಕರು ಸಾಮಾಜಿಕ ಜಾಲತಾಣಗಳ ಮೂಲಕ ಅಲ್ಲಿನ ಸಿಎಂ, ಡಿಸಿಎಂ ಅವರನ್ನು ಪ್ರಶ್ನಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಶ್ಲೋಕ ಇದೆ ಎನ್ನುವುದು ಎಲ್ಲರಿಗೂ ಗೊತ್ತು. ಇದೀಗ ಅದನ್ನೇ ಮುಂದಿಟ್ಟುಕೊಂಡು ವಿವಾದ ಸೃಷ್ಟಿಸುತ್ತಿರುವವರಿಗೆ ಕರ್ನಾಟಕದ ಭಕ್ತರ ಸಾಕ್ಷ ಸಮೇತ ತಿರುಗೇಟು ನೀಡಿದ್ದಾರೆ. 1981ರಲ್ಲಿ ಕನ್ನಡದ ಭಾಗ್ಯವಂತ ಸಿನೆಮಾದಲ್ಲಿ…
ಮೈಸೂರು: ಹಾಡಹಗಲೇ ಗನ್ ತೋರಿಸಿ ಚಿನ್ನದಂಗಡಿ ದೋಚಿರುವ ಘಟನೆ ನಡೆದಿದೆ. ಜಿಲ್ಲೆಯ ಹುಣಸೂರು (Hunsur) ಪಟ್ಟಣದ ಈ ಘಟನೆ ನಡೆದಿದೆ. 5ಕ್ಕೂ ಅಧಿಕ ಜನರ ಗ್ಯಾಂಗ್ ಹಾಡಹಗಲೇ ಚಿನ್ನದಂಗಡಿ ದರೋಡೆ (Robbery) ಮಾಡಿ ಪರಾರಿಯಾಗಿದೆ. ಏಕಾಏಕಿ ಚಿನ್ನದಂಗಡಿಗೆ ನುಗ್ಗಿ ಬರೋಬ್ಬರಿ 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಹುಣಸೂರು ಬಸ್ ನಿಲ್ದಾಣದ (Hunsur Bus Stand) ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ʼ ಚಿನ್ನದಂಗಡಿಯಲ್ಲಿ ದರೋಡೆ ನಡೆದಿದೆ. ದರೋಡೆಕೋರರು ಗನ್ ತೋರಿಸಿ ಸುಮಾರು 4 ರಿಂದ 5 ಕೋಟಿ ರೂ. ಮೌಲ್ಯದಷ್ಟು ಚಿನ್ನ-ವಜ್ರಾಭರಣ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಬೆಂಗಳೂರು: ತಾಪಂ, ಜಿಪಂ ಚುನಾವಣೆಗಾಗಿ ಕಾಯುತ್ತಿದ್ದ ಜನರಿಗೆ ಈಗ ಖುಷಿಯ ಸುದ್ದಿಯೊಂದು ಹೊರ ಬಿದ್ದಿದೆ. ಎರಡ್ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಸಚಿವ ಪ್ರಿಯಾಂಕ್ ಖರ್ಗೆಗೆ ಸೂಚನೆ ನೀಡಿರುವುದಾಗಿ ಡಿಕೆ ಶಿವಕುಮಾರ್ ಸೂಚಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಪಂ, ಜಿಪಂ ಚುನಾವಣೆಗಳನ್ನು ಎರಡ್ಮೂರು ತಿಂಗಳಲ್ಲಿ ನಡೆಸಬೇಕಿದೆ. ಹೀಗಾಗಿ ಈಗಿನಿಂದಲೇ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದ್ದೇನೆ. ಮೀಸಲಾತಿ ವಿಚಾರವಾಗಿ ನ್ಯಾಯಾಲಯಗಳಲ್ಲಿ ಇರುವ ಕಂಟಕಗಳನ್ನು ಬಗೆಹರಿಸಿ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಬೂತ್ ಮಟ್ಟದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಲಾಗುವುದು. ಸಿದ್ದರಾಮಯ್ಯ, ಶಿವಕುಮಾರ್ ಹಿಂದೆ ತಿರುಗಿದರೆ ಅವಕಾಶವಿಲ್ಲ. ಕೆಲಸ ಮಾಡಿದವರಿಗೆ ಮಾತ್ರ ಅವಕಾಶ ಎಂದು ಖಡಕ್ ಹೇಳಿಕೆ ನೀಡಿದ್ದಾರೆ. ಗ್ಯಾರಂಟಿ ಸಮಿತಿ ಸದಸ್ಯರು, ಬೆಸ್ಕಾಂ, ಆರೋಗ್ಯ ಸಮಿತಿ ಸೇರಿದಂತೆ ಇತರೇ ಇಲಾಖೆಗಳಿಂದ ನಾಮನಿರ್ದೇಶನ ಮಾಡಿರುವ ಸದಸ್ಯರ ಸಂಖ್ಯೆಯೇ 150- 200 ಇದೆ. ಅವರು ಜವಾಬ್ದಾರಿ ವಹಿಸಬೇಕು. ರಾಜ್ಯದಲ್ಲಿ 100 ಕಾಂಗ್ರೆಸ್ ಕಚೇರಿಗಳನ್ನು ನಿರ್ಮಾಣ ಮಾಡಬೇಕು ಎಂದು ಹೊರಟಿದ್ದೇವೆ.…
ಬೆಂಗಳೂರು: ಬಿಎಂಟಿಸಿ ಬಸ್ (BMTC Bus) ಟೈರ್ ಸ್ಫೋಟಗೊಂಡ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ನಗರದ ಸಿಂಗಸಂದ್ರದಲ್ಲಿ ನಡೆದಿದೆ. ಬಿಎಂಟಿಸಿ ಬಸ್ ಇಂದು ಬೆಳಗ್ಗೆ ಅತ್ತಿಬೆಲೆಯಿಂದ ಮೆಜೆಸ್ಟಿಕ್ ಕಡೆ ಹೋಗುತ್ತಿತ್ತು. ಆ ಸಂದರ್ಭದಲ್ಲಿ ಬಸ್ ನ ಟೈರ್ ಸ್ಫೋಟಗೊಂಡಿದೆ. ಇದರಿಂದ ಬಸ್‌ನ ಟೈರ್ ಬಳಿಯ ಸೀಟ್‌ಗೂ ಹಾನಿಯಾಗಿದೆ. ಅಲ್ಲದೇ ಕೆಳಭಾಗದಲ್ಲಿ ಬಸ್ ಸಂಪೂರ್ಣವಾಗಿ ಛಿದ್ರಗೊಂಡಿದೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದಂತಾಗಿದೆ. ಸ್ಫೋಟದಿಂದ ಉಂಟಾದ ಶಬ್ದದಿಂದಾಗಿ ಜನರು ಬೆಚ್ಚಿಬಿದ್ದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಬೆಂಗಳೂರು: ಡೆಲಿವರಿ ಬಾಯ್ ಒಬ್ಬಾತ ಮಾಲ್‌ನಲ್ಲಿ ಕ್ರಿಸ್ಮಸ್ ಆಚರಿಸುತ್ತಿದ್ದ ಸಂದರ್ಭದಲ್ಲಿ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಗುವಾಹಟಿ ಮೂಲದ ಮನೂಜ್ ಚಾಂದ್(27) ಬಂಧಿತ ಆರೋಪಿ. ಈತ ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಡಿ. 25ರಂದು ರಾತ್ರಿ 9:30ರ ವೇಳೆಗೆ ಮಾಲ್‌ನಲ್ಲಿ ಕ್ರಿಸ್‌ಮಸ್ ಆಚರಣೆ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಯುವತಿ ಬಳಿ ಮುಂದೆ ಹೋಗಿ ಖಾಸಗಿ ಅಂಗ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ. ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ಬಂಧಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನನ್ನ ದೇಹ ಚರ್ಚಿತ ವಿಷಯವಲ್ಲ ಎಂದು ಟ್ರೋಲಿಗರಿಗೆ ಸಾನ್ವಿ ಸುದೀಪ್ ಉತ್ತರ ಕೊಟ್ಟಿದ್ದಾರೆ. ನೆಗೆಟಿವ್ ಟ್ರೋಲ್ (Negative Troll) ಮಾಡುವವರಿಗೆ ಕಿಚ್ಚ ಸುದೀಪ್ (Kichcha Sudeep) ಪುತ್ರಿ ಸಾನ್ವಿ (Sanvi Sudeep) ಕಟುವಾಗಿ ಈ ಮೂಲಕ ಟೀಕಿಸಿದ್ದಾರೆ. ಈ ಕುರಿತು ಇನ್ ಸ್ಟಾಗ್ರಾಮ್ ನಲ್ಲಿ ಸ್ಟೋರಿ ಹಾಕಿದ್ದಾರೆ. ನನ್ನ ದೇಹವು ಚರ್ಚೆಯ ವಿಷಯವಲ್ಲ. ನಿಮ್ಮ ಅಭಿಪ್ರಾಯ ಬೇಕಾದರೇ ನಾನು ಕೇಳುತ್ತೇನೆ ಎಂದಿದ್ದಾರೆ. ಇತ್ತ ಸುದೀಪ್ ಕೂಡ ಮಾರ್ಕ್ ಕೃತಜ್ಞತಾ ಸುದ್ದಿಗೋಷ್ಠಿಯಲ್ಲಿ ಮಗಳನ್ನು ಟ್ರೋಲ್ ಮಾಡುತ್ತಿದ್ದವರಿಗೆ ಕೌಂಟರ್ ಕೊಟ್ಟಿದ್ದಾರೆ. ನಮಗೆ ಪ್ರೋತ್ಸಾಹ ಕೊಡುವವರ ಬಗ್ಗೆ ಮಾತಾಡೋಣ, ನನ್ನ ಬಗ್ಗೆ, ನನ್ನ ಮಗಳ ಬಗ್ಗೆ ನೆಗೆಟಿವ್ ಮಾತನಾಡುವ ಯಾವನೋ ಬಗ್ಗೆ ನಾನು ಯಾಕೆ ಮಾತಾಡಲಿ. ನನ್ನ ಮಗಳು, ಅವಳು ಏನು ಅಂತಾ ನನಗೆ ಗೊತ್ತು. ನನ್ನ ಮಗಳು ನನಗಿಂತ ತುಂಬಾ ಎತ್ತರಕ್ಕೆ ಬೆಳಿತಾಳೆ ಎಂದು ಬಾದ್ ಷಾ ತಮ್ಮ ಮಗಳ ಬಗ್ಗೆ ಹೆಮ್ಮೆ ಪಟ್ಟಿದ್ದರು. ಈಗ ಮಗಳು ಕಟುವಾಗಿ ಟೀಕಿಸಿದ್ದಾರೆ.
ಹಾಸನ: ಲಾರಿಗೆ (Lorry) ಹಿಂಬದಿಯಿಂದ ಖಾಸಗಿ ಬಸ್ (Private Bus) ಡಿಕ್ಕಿ ಹೊಡೆದ ಪರಿಣಾಮ ಸುಮಾರು 20ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ (Hassan) ಚನ್ನರಾಯಪಟ್ಟಣ (Channarayapatna) ತಾಲೂಕಿನ ಬೈಪಾಸ್ ನಲ್ಲಿ ನಡೆದಿದೆ. ಘಟನೆಯಲ್ಲಿ ಬಸ್ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಖಾಸಗಿ ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಗಾಯಾಳುಗಳ ಪೈಕಿ 13 ಮಂದಿ ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನುಳಿದವರು ಚನ್ನರಾಯಪಟ್ಟಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಬಸ್ ಹಾಗೂ ಲಾರಿ ಬೆಂಗಳೂರಿನಿಂದ ಹಾಸನದ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಕಾರು ಅಡ್ಡಾದಿಡ್ಡಿ ಓಡಿಸಿದ ವಿದ್ಯಾರ್ಥಿಯೋರ್ವ ಡೆಲಿವರಿ ಬಾಯ್ ಪ್ರಾಣ ತೆಗೆದಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಐಷಾರಾಮಿ ಕಾರನ್ನ ಅಡ್ಡಾದಿಡ್ಡಿಯಾಗಿ ಚಲಾಯಿಸಿ ಪಾದಚಾರಿಗೆ ಡಿಕ್ಕಿ ಹೊಡೆಸಿದ್ದಾನೆ. ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಸಿಲಿಕಾನ್ ಸಿಟಿಯ ಹೆಚ್ಎಸ್ಆರ್ ಲೇಔಟ್ನ 27ನೇ ಕ್ರಾಸ್ ನಡೆದಿದೆ. ಪಾದಚಾರಿ ಸಂತೋಷ್ ದೊಡ್ಡಗೌಡರ್ (26) ಸಾವನ್ನಪ್ಪಿರುವ ದುರ್ದೈವಿ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪಾದಚಾರಿ ಸಂತೋಷ್ ದೊಡ್ಡಗೌಡರ್ ಬೆಳಗಾವಿಯ ಬೈಲಹೊಂಗಲ ಮೂಲದವರು. ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ರಾತ್ರಿ ಫುಟ್ ಪಾತ್ನಲ್ಲಿ ಊಟ ಮಾಡಿ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಕಾರು ಚಾಲನೆ ಮಾಡುತ್ತಿದ್ದ ಅಬ್ದುಲ್ ರೆಹಮಾನ್ ನಿಂದ ಈ ಕೃತ್ಯ ನಡೆದಿದೆ. ಸಂತೋಷ್‌ಗೆ ಡಿಕ್ಕಿ ಹೊಡೆದ ನಂತರ ಅಲ್ಲಿ ಹೊರಟಿದ್ದ ಇನ್ನಿತರ ವಾಹನಗಳಿಗೂ ಡಿಕ್ಕಿ ಹೊಡೆದಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಚ್ಎಸ್ಆರ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ…