Author: Bosstv News Desk

ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ಮಧ್ಯೆ ನಡೆಯುತ್ತಿರುವ ಆಶಸ್ ಸರಣಿಯನ್ನು ಈಗಾಗಲೇ ಆಸ್ಟ್ರೇಲಿಯಾ ಗೆದ್ದು ಬೀಗಿದೆ. ನಾಲ್ಕನೇ ಪಂದ್ಯವನ್ನು ಇಂಗ್ಲೆಂಡ್ ಗೆದ್ದಿದ್ದು, ಎರಡೇ ದಿನಕ್ಕೆ ಪಂದ್ಯ ಮುಗಿದಿದೆ. ಗೆದ್ದರೂ ಆಸ್ಟ್ರೇಲಿಯಾಗೆ ಕೋಟಿ ಕೋಟಿ ನಷ್ಟ ಉಂಟಾಗಿದೆ. ಈ ಗೆಲುವಿನ ಮೂಲಕ ಇಂಗ್ಲೆಂಡ್ ತಂಡ 15 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದ ಸಾಧನೆಯನ್ನು ಮಾಡಿದೆ. ಫಲಿತಾಂಶವು ಸರಣಿಯ ಮೇಲೆ ಪರಿಣಾಮ ಬೀರದಿದ್ದರೂ ಮೆಲ್ಬೋರ್ನ್ ಟೆಸ್ಟ್, ಆಸ್ಟ್ರೇಲಿಯಾ ಕ್ರಿಕೆಟ್‌ಗೆ (Cricket Australia) ಎರಡೆರಡು ಆಘಾತ ನೀಡಿದೆ. ನಾಲ್ಕನೇ ಪಂದ್ಯ ಸೋತ ಆಸ್ಟ್ರೇಲಿಯಾಗೆ ಕೋಟಿ ಕೋಟಿ ರೂ. ನಷ್ಟವಾಗಿದೆ. ಪಂದ್ಯದ ಎರಡನೇ ದಿನದಂದು ಇಂಗ್ಲೆಂಡ್ ಕೇವಲ ಆರು ವಿಕೆಟ್‌ಗಳನ್ನು ಕಳೆದುಕೊಂಡು 175 ರನ್‌ಗಳ ಗುರಿ ಮುಟ್ಟಿತು. ಸೋಲಿನ ಹೊರತಾಗಿಯೂ, ಆಸ್ಟ್ರೇಲಿಯಾ ಆಶಸ್ ಸರಣಿಯನ್ನು ಗೆದ್ದರೂ ಸುಮಾರು 60 ಕೋಟಿ ರೂ.ನಷ್ಟು ನಷ್ಟವಾಗಿದೆ ಎಂದು ತಿಳಿದು ಬಂದಿದೆ. ಬಾಕ್ಸಿಂಗ್ ಡೇ ಟೆಸ್ಟ್ ಕ್ರಿಕೆಟ್ ಆಸ್ಟ್ರೇಲಿಯಾಕ್ಕೆ ವರ್ಷದ ಅತ್ಯಂತ ಪ್ರಮುಖ ಪಂದ್ಯವಾಗಿದ್ದು, ಅತಿ ಹೆಚ್ಚು ಪ್ರೇಕ್ಷಕರನ್ನು ಆಕರ್ಷಿಸುತ್ತದೆ.…

Read More

ಕಿಚ್ಚ ಸುದೀಪ್ ಯುದ್ಧ ಸಾರಿದ ನಂತರ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಶುರುವಾಯಿತು. ಸುದೀಪ್ ಮಾತಿಗೆ ವಿಜಯಲಕ್ಷ್ಮಿ ತಿರುಗೇಟು ಕೊಟ್ಟಿದ್ದರು. ಆನಂತರ ಅವರ ವಿರುದ್ಧ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಮೆಂಟ್ಸ್ ಗಳನ್ನು ಮಾಡಿದ್ದಾರೆ. ಹೀಗಾಗಿ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಸೋಷಿಯಲ್ ಮೀಡಿಯಾ (Social Media)ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ್ದರು. ಸದ್ಯ ಮತ್ತೊಂದು ಸ್ಟೋರಿ ಹಾಕಿದ್ದಾರೆ. ಇತ್ತೀಚೆಗೆ ಮಹಿಳೆಯರನ್ನ ಮೀಮ್ಸ್‌ಗಳ ಮೂಲಕ ಟ್ರೋಲ್‌ (Trol) ಮಾಡೋದು ಸಾಮಾನ್ಯವಾಗಿದೆ. ಆದರೆ ಮಹಿಳೆ ತುಂಬಾ ಶಕ್ತಿಶಾಲಿʼ ಎಂದು ವಿಡಿಯೋದೊಂದಿಗೆ ಹಂಚಿಕೊಂಡಿದ್ದಾರೆ. ಈ ಸಾಲುಗಳೊಂದಿಗೆ ಮಹಿಳೆಯರು ವಿವಿಧ ಸಂದರ್ಭಗಳಲ್ಲಿ ಎದುರಿಸುವ ಕಠಿಣ ಸವಾಲುಗಳ ಭಾವುಕ ವಿಡಿಯೋ ತುಣುಕನ್ನು ಕೂಡ ಹಂಚಿಕೊಂಡಿದ್ದಾರೆ. ಫ್ಯಾನ್ಸ್ ಗಳು ಒಂದೆಡೆ ವಿಜಯಲಕ್ಷ್ಮಿ ಟ್ರೋಲ್ ಮಾಡುತ್ತಿದ್ದರೆ, ಇನ್ನೊಂದೆಡೆ ಸುದೀಪ್ ಪುತ್ರಿಯನ್ನೂ ಟ್ರೋಲ್ ಮಾಡುತ್ತಿದ್ದಾರೆ. ಈಗ ಮಹಿಳೆಯರನ್ನು ಟಾರ್ಗೆಟ್ ಮಾಡಿದವರ ವಿಜಯಲಕ್ಷ್ಮಿ ತಿರುಗೇಟು ನೀಡಿದ್ದಾರೆ.

Read More

ದಾವಣಗೆರೆ: ಶಾಮನೂರು ಶಿವಶಂಕರಪ್ಪ (Shamanuru Shivashankarappa) ಇತ್ತೀಚಿಗಷ್ಟೇ ಇಹಲೋಕ ತ್ಯಜಿಸಿದ್ದರು. ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ (Davangere South Constituency) ಉಪಚುನಾವಣೆಗೆ (ByElection) ಜಿಲ್ಲಾ ಚುನಾವಣಾಧಿಕಾರಿ ಸಿದ್ಧತೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿ ಅಧಿಕಾರಿಗಳ ಜೊತೆ ಸಭೆ ನಡೆಸಿ, ಈ ಕುರಿತು ತಿಳಿಸಿದ್ದಾರೆ. ಜನವರಿ 3 ರಂದು ಮತದಾರರ ಪಟ್ಟಿ ಪರಿಷ್ಕರಣೆ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಮತದಾರರ ಪಟ್ಟಿಗೆ ಆಕ್ಷೇಪ ಸಲ್ಲಿಸಲು ಜನವರಿ 24ರ ವರೆಗೆ ಕಾಲಾವಕಾಶ ಇರುತ್ತದೆ. ಫೆಬ್ರವರಿ 14 ರಂದು ಅಂತಿಮ ಮತದಾರರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 217 ಮತಗಟ್ಟೆಗಳಿವೆ. 2,31062 ಮತದಾರರಿದ್ದಾರೆ. ಹೀಗಾಗಿ ಚುನಾವಣೆ ಸಿದ್ಧತೆ ಆರಂಭವಾಗಿದೆ ಎಂದು ಹೇಳಿದ್ದಾರೆ.

Read More

‘ಪುಷ್ಪ 2’ ವಿಶೇಷ ಪ್ರದರ್ಶನದ ಸಂದರ್ಭದಲ್ಲಿ ದೊಡ್ಡ ಅವಾಂತರ ನಡೆದಿತ್ತು. ಆ ವೇಳೆ ಓರ್ವ ಮಹಿಳೆ ಸಾವನ್ನಪ್ಪಿದ್ದರೆ, ಅವರ ಮಗ ಗಂಭೀರವಾಗಿ ಗಾಯಗೊಂಡಿದ್ದ. ಈಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಗೆ ಸಂಕಷ್ಟ ಶುರುವಾಗಿದೆ. ವರ್ಷದ ಹಿಂದೆ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ (Allu Arjun) ಅವರನ್ನು ಎ11 ಆರೋಪಿ ಆಗಿ ಹೆಸರಿಸಲಾಗಿದೆ. ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರಕ್ಕೆ ‘ಪುಷ್ಪ 2’ ಸಿನಿಮಾ ವೀಕ್ಷಿಸಲು ಆಗಮಿಸಿದ್ದರು. ಆ ವೇಳೆ ಜನಜಂಗುಳಿಯೇ ಇತ್ತು. ಹೀಗಾಗಿ ಕಾಲ್ತುಳಿತ ಉಂಟಾಗಿತ್ತು. ಅಲ್ಲು ಅರ್ಜುನ್ ಬಂದಿದ್ದರಿಂದಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರೆಂದು ಪೊಲೀಸರು ಹೇಳಿದ್ದರು. ಅಲ್ಲದೇ, ಅಲ್ಲು ಕೂಡ ಅರೆಸ್ಟ್ ಆಗಿದ್ದರು. ಈಗ ಇದೇ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಚಿಕ್ಕಡಪಲ್ಲಿ ಪೊಲೀಸರು ಸಂಪೂರ್ಣವಾಗಿ ತನಿಖೆ ಮಾಡಿ ಚಾರ್ಜ್ಶೀಟ್ನಲ್ಲಿ ಸಲ್ಲಿಕೆ ಮಾಡಿದ್ದಾರೆ. ಸಂಧ್ಯಾ ಥಿಯೇಟರ್ ಮ್ಯಾನೇಜ್ಮೆಂಟ್ ನ್ನು ಎ1 ಆಗಿ…

Read More

ರಾಯಚೂರು: ವಿಷಪೂರಿತ ನೀರು ಕುಡಿದ ಪರಿಣಾಮ 60ಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕೇರಾ ತಾಲೂಕಿನ ಹೆಗ್ಗಡದಿನ್ನಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕೃಷಿ ಹೊಂಡವೊಂದರಲ್ಲಿ ನೀರು ಕುಡಿದಿದ್ದ ಕುರಿಗಳು ಅಸ್ವಸ್ಥವಾಗಿದ್ದವು. ಹೊಂಡದ ನೀರೇ ಕುರಿಗಳ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ. ಕುರಿಗಾಯಿ ಭೀಮಪ್ಪ ಮಲ್ಲಿನಾಯಕನದೊಡ್ಡಿ ಎಂಬುವವರಿಗೆ ಸೇರಿದ್ದ ಸುಮಾರು 100 ಕುರಿಗಳ ಪೈಕಿ 60 ಕುರಿಗಳು ಸಾವನ್ನಪ್ಪಿವೆ. ಈ ಘಟನೆಯಿಂದಾಗಿ ಸುಮಾರು 5 ಲಕ್ಷ ರೂ.ಗೂ ಅಧಿಕ ನಷ್ಟವಾಗಿದೆ. ಸ್ಥಳಕ್ಕೆ ಗಬ್ಬೂರು ಪೊಲೀಸರು, ಪಶು ವೈದ್ಯಾಧಿಕಾರಿಗಳು, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸರ್ಕಾರದಿಂದ ಸೂಕ್ತ ಪರಿಹಾರ ನೀಡಲು ಕುರಿಗಾಯಿ ಭೀಮಪ್ಪ ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.

Read More

ಬೆಂಗಳೂರು: ವೈದ್ಯ ಸಿಬ್ಬಂದಿಯ ಎಡವಟ್ಟಿನಿಂದಾಗಿ ರೋಗಿಯೊಬ್ಬರು ಸಾವು-ಬದುಕಿನ ಮಧ್ಯೆ ಒದ್ದಾಡುತ್ತಿರುವ ಘಟನೆಯೊಂದು ನಡೆದಿದೆ. ಸಿಲಿಕಾನ್ ಸಿಟಿಯ (Bengaluru news) ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲೇ ಈ ಘಟನೆ ನಡೆದಿದೆ. ರಕ್ತಹೀನತೆ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದರು. ಪುನೀತ್ ಸೂರ್ಯ ಎಂಬ ರೋಗಿ ರಕ್ತಹೀನತೆ ಚಿಕಿತ್ಸೆ ಪಡೆಯಲು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ್ದರು. ಬಂದಿದ್ದರು.. ಸಿಬ್ಬಂದಿ ತಪ್ಪು ರಕ್ತ (wrong blood transfusion) ನೀಡಿದ್ದರಿಂದಾಗಿ ರೋಗಿಯ ಆರೋಗ್ಯ ತೀವ್ರ ಹದಗೆಟ್ಟಿದೆ. ತಕ್ಷಣ ಅವರನ್ನು ಐಸಿಯುವಿಗೆ ಸ್ಥಳಾಂತರಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ಅದೃಷ್ಟವಶಾತ್ ವ್ಯಕ್ತಿಯ ಆರೋಗ್ಯ ಸುಧಾರಿಸುತ್ತಿದೆ ಎನ್ನಲಾಗಿದೆ. ಈ ಕುರಿತು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುನೀತ್ ಸೂರ್ಯ ಓ ಪಾಸಿಟಿವ್ (O+) ರಕ್ತದ ಗುಂಪಿನವರು. ಆದರೆ, ಲ್ಯಾಬ್ ಟೆಕ್ನಿಷಿಯನ್ ನಿರ್ಲಕ್ಷ್ಯದಿಂದಾಗಿ ತಪ್ಪಾಗಿ ಎ ಪಾಸಿಟಿವ್ (A+) ರಕ್ತ ನೀಡಲಾಗಿದ್ದು, ಪುನೀತ್ ಸ್ಥಿತಿ ಗಂಭೀರವಾಗಿದೆ. ಎಡವಟ್ಟಿಗೆ ಕಾರಣವಾದ ಲ್ಯಾಬ್ ಟೆಕ್ನಿಷಿಯನ್ ಉಮೇಶ್ ವಿರುದ್ಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು…

Read More

ಕಲಬುರಗಿ: ಮನೆಯಲ್ಲಿ ತಲೆ ಸುತ್ತು ಬಂದು ಬಿದ್ದ ಮಹಿಳೆಗೆ ದೆವ್ವ ಹಿಡಿದಿದೆ ಅಂತ ಕಟ್ಟಿಗೆಯಿಂದ ಮನಬಂದಂತೆ ಥಳಿಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆ ಕಲಬುರಗಿಯ (Kalaburagi) ಆಳಂದದಲ್ಲಿ ನಡೆದಿದೆ. ಆಳಂದ ಮೂಲದ ಮುಕ್ತಾಬಾಯಿ (26) ಹಲ್ಲೆಗೊಳಗಾಗಿ ಸಾವನ್ನಪ್ಪಿದ ದುರ್ದೈವಿ. ದೆವ್ವ ಬಂದಿದೆ ಎಂದು ಬಾಮೈದ ಹಾಗೂ ಕುಟುಂಬಸ್ಥರು ಥಳಿಸಿದ್ದರಿಂದಾಗಿ ಮುಕ್ತಾಬಾಯಿ ಗಂಭೀರವಾಗಿ ಗಾಯಗೊಂಡಿದ್ದರು. ಮುಕ್ತಾಬಾಯಿ, ಮಹಾರಾಷ್ಟ್ರದ ಮುರುಮ್ ಎಂಬ ಊರಿನ ಗಿಡ್ಡೆಪ್ಪ ಎಂಬಾತನೊಂದಿಗೆ ವಿವಾಹವಾಗಿದ್ದರು. ಅಲ್ಲಿಯೇ ವಾಸಿಸುತ್ತಿದ್ದರು. ಈ ದಂಪತಿಗೆ ಐದು ವರ್ಷದ ಮಗ ಇದ್ದಾನೆ. ಮುಕ್ತಾಬಾಯಿ ಗಂಭೀರವಾಗಿ ಗಾಯಗೊಂಡಿದ್ದರಿಂದ ಅವರನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೇವಿನ ಕಟ್ಟಿಗೆಯಿಂದ ಹೊಡೆದರೆ ದೆವ್ವ ಬಿಡುತ್ತದೆ ಎಂದು ನಂಬಿದ್ದ ಆರೋಪಿಗಳು, ರಾತ್ರಿ ಹಾಗೂ ಬೆಳಗ್ಗೆ ಎನ್ನದೇ ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ. ಮೃತಳ ತಾಯಿಗೆ ಕರೆ ಮಾಡಿ, ನಿಮ್ಮ ಮಗಳಿಗೆ ದೆವ್ವ ಹಿಡಿದಿದೆ. ನಾವು ಹೊಡೆದು ದೆವ್ವ ಬಿಡಿಸುತ್ತಿದ್ದೇವೆ ಎಂದು ಹೇಳಿದ್ದರು. ಮಗಳಿಗೆ…

Read More

ಚಿಕ್ಕಬಳ್ಳಾಪುರ: ಟಿಪ್ಪರ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ (Chikkaballpura) ತಾಲೂಕಿನ ಅಜ್ಜವಾರ ಗ್ರಾಮದ ಗೇಟ್ ಹತ್ತಿರ ಈ ಘಟನೆ ನಡೆದಿದೆ. ಒಂದೇ ಬೈಕ್ ನಲ್ಲಿದ್ದ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ (Siddaramaiah) ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಹೊರವಲಯದ ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ (Tipper Bike Accident) ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಕ್ರಿಸ್ಮಸ್ ಸಂಭ್ರಮದಲ್ಲಿದ್ದ ಕುಟುಂಬಗಳು ಹೀಗೆ ಸೂತಕದ ಮನೆಯಾಗಿ ಬದಲಾದುದ್ದು ದುರದೃಷ್ಟಕರ. ಮನೆಗೆ ಆಧಾರವಾಗಿದ್ದ ಈ ಹುಡುಗರ ನಿಧನದಿಂದ ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ನೆರವಾಗಲು ತಲಾ ರೂ.5 ಲಕ್ಷ ಪರಿಹಾರ ನೀಡುತ್ತಿದ್ದೇವೆ. ತಮ್ಮವರನ್ನ ಕಳೆದುಕೊಂಡು ನೋವಿನಲ್ಲಿರುವ ಜೀವಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ…

Read More

ಹೈದರಾಬಾದ್: ಪಾಪಿಯೊಬ್ಬ ಮಕ್ಕಳ ಮುಂದೆಯೇ ಪತ್ನಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಈ ಘಟನೆ ಹೈದರಾಬಾದ್‌ನ (Hyderabad) ನಲ್ಲಕುಂಟಾ ಪ್ರದೇಶದಲ್ಲಿ ನಡೆದಿದೆ. ಅದೇ ಬೆಂಕಿಗೆ ಮಗಳನ್ನು ಸಹ ತಳ್ಳಿ ಪಾಪಿ ಕ್ರೂರತ್ವ ಮೆರೆದಿದ್ದಾನೆ. ಪತ್ನಿ ತ್ರಿವೇಣಿ ಮೇಲೆ ಸಂಶಯ ವ್ಯಕ್ತಪಡಿಸಿ ವೆಂಕಟೇಶ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಮಕ್ಕಳ ಮುಂದೆಯೇ ತ್ರಿವೇಣಿ ಮೇಲೆ ಹಲ್ಲೆ ನಡೆಸಿ, ನಂತರ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಮಗಳು ತನ್ನ ತಾಯಿಯನ್ನು ಉಳಿಸಲು ಪ್ರಯತ್ನಿಸಿದಾಗ, ಆಕೆಯನ್ನೂ ಬೆಂಕಿಗೆ ತಳ್ಳಿ ಮನೆಯಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.ಕಿರುಚಾಟ ಕೇಳಿ ನೆರೆಹೊರೆಯವರು ಅವರ ಮನೆಗೆ ಧಾವಿಸಿದರು. ಆ ಹೊತ್ತಿಗೆ, ತೀವ್ರವಾದ ಸುಟ್ಟ ಗಾಯಗಳಿಂದ ತ್ರಿವೇಣಿ ಸಾವನ್ನಪ್ಪಿದ್ದರು. ಸಣ್ಣಪುಟ್ಟ ಗಾಯಗಳೊಂದಿಗೆ ಕೂದಲೆಳೆಯ ಅಂತರದಲ್ಲಿ ಪಾರಾದ ಮಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೆಂಕಟೇಶ್ ಮತ್ತು ತ್ರಿವೇಣಿ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. ವೆಂಕಟೇಶ್ ತನ್ನ ಹೆಂಡತಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ಆಗಾಗ ಕಿರುಕುಳ ನೀಡುತ್ತಿದ್ದ…

Read More

ಮೈಸೂರು: ನಗರದಲ್ಲಿನ ಅರಮನೆ (Mysuru Palace) ಮುಂಭಾಗ ನೈಟ್ರೋಜನ್ ಗ್ಯಾಸ್ ಬ್ಲಾಸ್ಟ್ (Nitrogen Gas Blast) ಆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.ಅರಮನೆಯ ಜಯ ಮಾರ್ತಾಂಡ ಗೇಟ್ ಹತ್ತಿರ ಈ ಘಟನೆ ನಡೆದಿದೆ. ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್ ತೀವ್ರತೆಗೆ ವ್ಯಕ್ತಿಯ ದೇಹ ಛಿದ್ರ ಛಿದ್ರಗೊಂಡಿದೆ. ಅಲ್ಲದೇ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Read More