Author: Bosstv News Desk

ಬೆಂಗಳೂರು: ನಾನು ಬರೀ ಭಾಷಣ ಮಾಡುತ್ತ ಸುತ್ತಾಡಿಲ್ಲ. ಕಾರ್ಯಕರ್ತನಾಗಿ ನೆಲ ಗೂಡಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್(DK Shivakumar) ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಭೇಟಿ ಮಾಡಿದ ನಂತರ ಮಾತನಾಡಿದ ಅವರು, ನಾನು ಮುಂದೆಯೂ ಪಕ್ಷದ ಕಾರ್ಯಕರ್ತನಾಗಿಯೇ ಉಳಿಯಲು ಇಷ್ಟ ಪಡುತ್ತೇನೆ. ನಾನು ಲೈಫ್ ಟೈಮ್ ಕಾರ್ಯಕರ್ತ. ನಾನು ಒಬ್ಬ ವರ್ಕರ್. ಅಧ್ಯಕ್ಷನಾದಾಗಲೂ ಪಕ್ಷದ ಬಾವುಟ ಕಟ್ಟಿದ್ದೇ‌ನೆ. ಕಾರ್ಯಕರ್ತನಾದಾಗಲೂ ಬಾವುಟ ಕಟ್ಟಿದ್ದೇನೆ, ಪೋಸ್ಟರ್ ಅಂಟಿಸಿದ್ದೇನೆ, ಕಸ ಗುಡಿಸಿದ್ದೇನೆ ಎಂದಿದ್ದಾರೆ. ಖರ್ಗೆ ಅವರ ಜತೆ ನಾಯಕತ್ವದ ಬಗ್ಗೆ ಚರ್ಚೆ ನಡೆಸಿಲ್ಲ. ನಾನು ಚರ್ಚೆ ಮಾಡುವುದೂ ಇಲ್ಲ. ಮಾಡುವ ಅವಶ್ಯಕತೆಯೂ ಇಲ್ಲ.‌ ನಾನು ಮತ್ತು ಸಿದ್ದರಾಮಯ್ಯ ಅವರು ಈಗಾಗಲೇ ಇದರ ಬಗ್ಗೆ ಹೇಳಿದ್ದೇವೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದಿದ್ದಾರೆ. ಮನರೇಗಾ ಯೋಜನೆಯಿಂದ ಪಂಚಾಯತಿಗಳಿಗೆ ಅನುಕೂಲವಾಗುತ್ತಿತ್ತು. ಪಂಚಾಯತಿ ಸದಸ್ಯರುಗಳಿಗೆ ಶಕ್ತಿಯಿತ್ತು‌. ಪ್ರತಿ ಕೂಲಿ ಕಾರ್ಮಿಕರ ಖಾತೆಗೆ ಹಣ ಸಂದಾಯವಾಗಿತ್ತಿತ್ತು. ಪ್ರತಿಯೊಬ್ಬರು ಚರ್ಚೆ…

Read More

ತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಹತ್ತಿರ ಮಧ್ಯರಾತ್ರಿ ನಡೆದ ಭೀಕರ ಬಸ್ ಅಪಘಾತದಲ್ಲಿ 6 ಜನ ಸಜೀವವಾಗಿ ದಹನವಾಗಿದ್ದಾರೆ. ಈ ಪೈಕಿ ಫೆಬ್ರವರಿಯಲ್ಲಿ ಮದುವೆಯಾಗ ಬೇಕಿದ್ದ ಯುವತಿ ಕೂಡ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಖಾಸಗಿ ಬಸ್ ಮತ್ತು ಲಾರಿ ಮಧ್ಯೆ ಭೀಕರ ಅಪಘಾತ ನಡೆದಿದೆ. ಲಾರಿ ಚಾಲಕ ಸೇರಿ ಬಸ್ನಲ್ಲಿದ್ದ 5 ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಬಸ್ನಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳು ಚಿತ್ರದುರ್ಗ, ಹಿರಿಯೂರು, ಹುಬ್ಬಳ್ಳಿ, ಬೆಂಗಳೂರು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಬದುಕುಳಿದ ಒಬ್ಬೊಬ್ಬ ಪ್ರಯಾಣಿಕರ ಕತೆಯೂ ರೋಚಕವಾಗಿದೆ. ಒಂದೇ ಐಟಿ ಕಂಪನಿಯ 7 ಜನ ಸಹೋದ್ಯೋಗಿಗಳು ಬೆಂಕಿಯ ಕೆನ್ನಾಲೆಗೆ ಸಿಲುಕಿದ್ದಾರೆ. ಇವರೆಲ್ಲ ಕವಿತಾ ಮದುವೆ ನಿಗದಿಯಾಗಿದ್ದರಿಂದ ಹಿನ್ನೆಲೆ ಬ್ಯಾಚುಲರ್ ಪಾರ್ಟಿಗೆಂದು ಗೋಕರ್ಣಕ್ಕೆ ತೆರಳುತ್ತಿದ್ದರು. ಅಲ್ಲಿನ ಖಾಸಗಿ ರೆಸಾರ್ಟ್ನಲ್ಲಿ ಪಾರ್ಟಿಯೂ ನಿಗದಿಯಾಗಿತ್ತು. ಕ್ರಿಸ್ಮಸ್ ರಜೆ ಹಿನ್ನೆಲೆ ತಂಡವೇ…

Read More

ಬೆಂಗಳೂರು: ಹನಿಮೂನ್ ಗೆಂದು ಶ್ರೀಲಂಕಾಕ್ಕೆ ಹೋದವರು ಅರ್ಧಕ್ಕೆ ವಾಪಾಸಾಗಿ, ನವವಧು ಆತ್ಮಹತ್ಯೆ ಯತ್ನಿಸಿರುವ ಘಟನೆ ನಡೆದಿದೆ. ಪ್ಯಾಲೆಸ್‌ ಗ್ರೌಂಡ್‌ ನಲ್ಲಿ (Palace Ground) ರಿಸೆಪ್ಷನ್ ಮಾಡಿಕೊಂಡು ಶ್ರೀಲಂಕಾಕ್ಕೆ (Srilanka) ಹನಿಮೂನ್ ಹೋಗಿದ್ದರು. ಆದರೆ, ಹನಿಮೂನ್ ನಿಂದ ಅರ್ಧಕ್ಕೆ ಮರಳಿ ಬಂದಿದ್ದಾರೆ. ಈಗ ಮದುವೆಯಾದ ಎರಡೇ ತಿಂಗಳಿಗೆ ನನವಧು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ (Bengaluru) ರಾಮಮೂರ್ತಿ ನಗರದಲ್ಲಿ (Ramamurthy Nagar) ಈ ಘಟನೆ ನಡೆದಿದೆ. 26 ವರ್ಷದ ವಧು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ದಂಪತಿ ಕಳೆದ ಹತ್ತು ದಿನಗಳ ಹಿಂದೆ ಶ್ರೀಲಂಕಾಗೆ ಹನಿಮೂನ್‌ಗೆಂದು ಹೋಗಿದ್ದರು. ಪತಿ ಮನೆಯಲ್ಲೇ ವಧು ಆತ್ಮಹತ್ಯೆಗೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಧುವಿನ ಕುಟುಂಬಸ್ಥರು ವರನ ಕುಟುಂಬಸ್ಥರ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಿರುಕುಳದ ಪ್ರಕರಣ ದಾಖಲಾಗಿದೆ.

Read More

ರಾಮನಗರ: ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಬಸ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 6 ಜನ ಸಜೀವವಾಗಿ ದಹನವಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಸ್ಥಳದಲ್ಲಿ ಮುಗಿಲು ಮುಟ್ಟಿದೆ. ಈ ಮಧ್ಯೆ ಪೊಲೀಸರು ಮೃತದೇಹ ಗುರುತಿಸುವ ಕೆಲಸ ಮಾಡುತ್ತಿದ್ದಾರೆ. ಸದ್ಯ ಘಟನೆಗೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಸಚಿವರು ಹೇಳಿದ್ದಾರೆ. ಲಾರಿ ಚಾಲಕನ ರ‍್ಯಾಷ್ ಡ್ರೈವ್ ಹಾಗೂ ಅಜಾಗರೂಕತೆಯಿಂದ ಬಸ್ ಅಪಘಾತ (Chitradurga Bus Accident)ವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದ್ದಾರೆ. ದುರಂತದ ಬಗ್ಗೆ ಮಾಗಡಿಯಲ್ಲಿ ಮಾತನಾಡಿದ ಅವರು, ಗೋಕರ್ಣಕ್ಕೆ ಹೋಗುತ್ತಿದ್ದ ಸೀಬರ್ಡ್ ಬಸ್‌ಗೆ ಲಾರಿ ಡಿಕ್ಕಿಯಾಗಿದೆ. ಡಿವೈಡರ್ ದಾಟಿ ಬಂದು ಬಸ್‌ನ ಡೀಸೆಲ್ ಟ್ಯಾಂಕ್‌ಗೆ ಲಾರಿ ಗುದ್ದಿದೆ. ಈಗಾಗಲೇ ಸಾರಿಗೆ ಇಲಾಖೆ ಕಮಿಷನರ್ ಸ್ಥಳಕ್ಕೆ ಹೋಗಿದ್ದಾರೆ. ಯಾವ ಕಾರಣಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ ಎಂದಿದ್ದಾರೆ. ಇತ್ತೀಚೆಗೆ ಬಸ್ ದುರಂತದ ಘಟನೆ ನಡೆದಾಗಿನಿಂದ ಸಾರಿಗೆ ಇಲಾಖೆ ಸಾಕಷ್ಟು ಕ್ರಮ…

Read More

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಎಡಗೈ ವೇಗದ ಬೌಲರ್ ಯಶ್ ದಯಾಳ್ಗೆ (Yash Dayal) ಪೋಕ್ಸೋ ಕಾಯ್ದೆಯಡಿ ಬಂಧನ ಭೀತಿ ಎದುರಾಗಿದೆ. ಜೈಪುರದ ಪೋಕ್ಸೋ ನ್ಯಾಯಾಲಯವು ಯಶ್ ದಯಾಳ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದೆ. ವಾಸ್ತವವಾಗಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದ ಮೇಲೆ ಪೊಲೀಸರು ಯಶ್ ದಯಾಳ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ನ್ಯಾಯಾಲಯದ ನ್ಯಾಯಾಧೀಶೆ ಅಲ್ಕಾ ಬನ್ಸಾಲ್ ಅವರ ತೀರ್ಪಿನ ಪ್ರಕಾರ, ಲಭ್ಯವಿರುವ ಪುರಾವೆಗಳು ಮತ್ತು ತನಿಖೆಯ ವರದಿಯನ್ನು ನೋಡಿದರೆ, ಆರೋಪಿ ವಿರುದ್ಧ ಷಡ್ಯಾಂತ್ರ ಮಾಡಲಾಗಿದೆ ಎಂಬುವುದನ್ನು ಒಪ್ಪಲಾಗದು. ಇದರಲ್ಲಿ ಆರೋಪಿಯ ಪಾತ್ರವಿದೆ ಎಂಬುದನ್ನು ಅರಿಯಬಹುದು ಎಂಬ ತೀರ್ಪು ನೀಡಿದ್ದು, ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಜುಲೈ 23, 2025 ರಂದು, ಜೈಪುರದ ಸಂಗನೇರ್ ಸದರ್ ಪೊಲೀಸ್ ಠಾಣೆಯಲ್ಲಿ 19 ವರ್ಷದ ಯುವತಿಯೊಬ್ಬಳು ಯಶ್ ದಯಾಳ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ದೂರಿನಂತೆ, ‘ಎರಡು ವರ್ಷಗಳ ಹಿಂದೆ ಐಪಿಎಲ್ ಪಂದ್ಯವನ್ನಾಡಲು ಯಶ್…

Read More

ಬೆಂಗಳೂರು: ಇತ್ತೀಚೆಗಷ್ಟೇ ಸಾರಿಗೆ ಇಲಾಖೆ ಮಹಿಳಾ ಉದ್ಯೋಗಿಗಳಿಗೆ ಋುತುಚಕ್ರದ ಒಂದು ದಿನ ರಜೆ ಘೋಷಿಸಿ ಆದೇಶ ಹೊರಡಿಸಿತ್ತು.ಇದರ ಬೆನ್ನಲ್ಲೇ ಈಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಶಿಕ್ಷಣ ಇಲಾಖೆ) ಮಹತ್ವದ ಆದೇಶ ಹೊರಡಿಸಿದೆ. ಹೀಗಾಗಿ ಇನ್ನು ಮುಂದೆ ಶಾಲಾ ಶಿಕ್ಷಕರಿಗೆ ಒಂದು ದಿನ ವೇತನ ಸಹಿತ ರಜೆ ಸಿಗಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಇನ್ನು ಮುಂದೆ ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತುಚಕ್ರ ರಜೆ ಮಂಜೂರು ಮಾಡಲಾಗಿದೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಿಕ್ಷಕಿಯರಿಗೆ ವೇತನ ಸಹಿತ ಋುತುಚಕ್ರ ರಜೆ ನೀಡುವಂತೆ ಸರಕಾರಕ್ಕೆ ಮನವಿ ಮಾಡಿತ್ತು. ಶಾಲಾ ಶಿಕ್ಷಕರ ಸಂಘದ ಮನವಿ ಉಲ್ಲೇಖಿಸಿರುವ ಇಲಾಖೆ, ಸೂಚನೆಯಂತೆ ವೇತನ ಸಹಿತ ರಜೆ ಮಂಜೂರು ಮಾಡಲಾಗಿದೆ. ಸಾಂದರ್ಭಿಕ ರಜೆ ನೀಡಲು ಸಕ್ಷಮದ ಪ್ರಾಧಿಕಾರಿಯೂ ಋುತುಚಕ್ರ ರಜೆ ಮಂಜೂರು ಮಾಡಬಹುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ರಜೆ…

Read More

ಸುದೀಪ್ (Sudeep) ಹಾಗೂ ದರ್ಶನ್ (Darshan) ಸ್ಟಾರ್‌ ವಾರ್ ಸದ್ಯಕ್ಕೆ ಬ್ರೇಕ್ ಬಿದ್ದಂತೆ ಕಾಣುತ್ತದೆ. ಅಭಿಮಾನಿಯ ಪ್ರಶ್ನೆಗೆ ಉತ್ತರಿಸಿರುವ ಕಿಚ್ಚ ಸುದೀಪ್, ಯಾವಾಗಲೂ ಒಳ್ಳೆಯದನ್ನೇ ಬಯಸುತ್ತೇನೆ ಎಂದಿದ್ದಾರೆ. ಅಭಿಮಾನಿಗಳಿಗಾಗಿ ಕ್ಯೂ & ಎ ಏರ್ಪಡಿಸಿದ್ದರು ಕಿಚ್ಚ. ಈ ವೇಳೆ ಅಭಿಮಾನಿಯೊಬ್ಬರು ದರ್ಶನ್ ಹಾಗೂ ಸುದೀಪ್ ಒಟ್ಟಿಗೆ ಇರುವ ಫೋಟೋ ಹಾಕಿ, ಈ ಫೋಟೋ ಬಗ್ಗೆ ಒನ್ ಲೈನ್ ಆನ್ಸರ್ ಕೊಡುವಂತೆ ಹೇಳಿದರು. ಇದಕ್ಕೆ ಉತ್ತರಿಸಿದ ಸುದೀಪ್, ‘ಅವರಿಗೆ ಸದಾ ಒಳ್ಳೆಯದನ್ನೇ ಬಯಸುತ್ತೇನೆ’ ಎಂದಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದ ಸಂದರ್ಭದಲ್ಲಿ ಕಿಚ್ಚ ಸುದೀಪ್ ಯುದ್ಧಕ್ಕೆ ಸಿದ್ಧ ಎಂದು ಹೇಳಿದ್ದರು. ಇದಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಅಭಿಮಾನಿಗಳು ಕೆಂಡಕಾರಿದ್ದರು. ಹೀಗಾಗಿ ಅಭಿಮಾನಿಗಳ ಮಧ್ಯೆ ದೊಡ್ಡ ವಾರ್ ನಡೆದಿತ್ತು. ಅಲ್ಲದೇ, ವಿಜಯಲಕ್ಷ್ಮೀ ದರ್ಶನ್ ಅವರ ವಿರುದ್ಧ ಹಲವು ಕಿಡಿಗೇಡಿಗಳು ಕೆಟ್ಟ ಕಮೆಂಟ್ ಮಾಡಿದ್ದರು. ಹೀಗಾಗಿ ಹಲವು ಕಮೆಂಟ್ ಗಳನ್ನು ಮುಂದಿಟ್ಟುಕೊಂಡು ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಈ ಮಧ್ಯೆ ಸುದೀಪ್ ಅವರು…

Read More

ತುಮಕೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಫೈಟ್ ದೊಡ್ಡ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಇಲ್ಲಿಯವರೆಗೂ ಸಿಎಂ ಹಾಗೂ ಡಿಸಿಎಂ ಆಪ್ತ ಬಣಗಳು ಹಲವಾರು ಹೇಳಿಕೆ ನೀಡಿದ್ದವು. ಎಲ್ಲ ಸಂದರ್ಭದಲ್ಲೂ ಸಿದ್ದರಾಮಯ್ಯ ಮಾತ್ರ ನಾನೇ ಐದು ವರ್ಷ ಸಿಎಂ ಅಂತಾ ಹೇಳಿದ್ದರು. ಡಿಸಿಎಂ ಮಾತ್ರ ಶತಪ್ರಯತ್ನ ಮಾಡಿದ್ದರು. ಆದರೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖಾರ್ಗೆ ಅದು ಲೋಕಲ್ ಫೈಟ್, ನಿಮ್ಮಲ್ಲೇ ಬಗೆಹರಿಸಿಕೊಳ್ಳಿ ಅಂತಾ ಹೇಳಿದ್ದರು. ಆದರೂ ಸಿಎಂ ಸಿದ್ದರಾಮಯ್ಯ ಮಾತ್ರ ಹೈಕಮಾಂಡ್ ಎಲ್ಲವನ್ನೂ ಬಗೆಹರಿಸುತ್ತೆ ಆಂತಾ ಹೇಳಿದ್ದರು. ಆನಂತರ ದೆಹಲಿಗೆ ಹೋದ ಡಿಕೆಶಿ ಮೌನವಾಗಿದ್ದಾರೆ. ಈಗ ಕೆ.ಎನ್. ರಾಜಣ್ಣ(KN Rajanna) ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಡಿಚ್ಚಿ ಕೊಟ್ಟಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ (Congress) ತಲೆದೋರಿರುವ ಅಧಿಕಾರ ಹಂಚಿಕೆ ವಿವಾದದಲ್ಲಿ ಹೈಕಮಾಂಡ್ ಮಧ್ಯಪ್ರವೇಶಿಸುವುದಿಲ್ಲ ಎಂದಿದ್ದಾರೆ. ತುಮಕೂರಿನಲ್ಲಿ (Tumakuru) ಮಾತನಾಡಿದ ಅವರು, ಸಿಎಂ ಬದಲಾವಣೆ ಗೊಂದಲ ನಾವು ಸೃಷ್ಟಿಸಿಲ್ಲ. ನೀವೇ ಸೃಷ್ಟಿ ಮಾಡಿರೋದು. ಹೀಗಾಗಿ ನೀವೇ ಬಗೆಹರಿಸಿಕೊಳ್ಳಿ ಎಂದು ಹೈಕಮಾಂಡ್ ಹೇಳಿದೆ. ಸಿಎಂ ಬದಲಾವಣೆ ವಿಚಾರದಲ್ಲಿ…

Read More

ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಕರ್ನಾಟಕ ಪರ ದೇವದತ್ತ ಪಡಿಕ್ಕಲ್ ಶತಕ ಸಿಡಿಸುವುದರ ಮೂಲಕ ಜಾರ್ಖಂಡ್ (Karnataka vs Jharkhand) ವಿರುದ್ಧ ಜಯ ಗಳಿಸುವಂತೆ ಮಾಡಿದ್ದಾರೆ. ಈ ಮೂಲಕ ಕರ್ನಾಟಕ ತಂಡ 5 ವಿಕೆಟ್ಗಳಿಂದ ಗೆದ್ದುಕೊಂಡು ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆದ್ದು ಬೀಗಿದ್ದ ಜಾರ್ಖಂಡ್ ತಂಡವನ್ನು ಕರ್ನಾಟಕ ಎದುರಿಸಿತ್ತು. ಮೊದಲು ಬ್ಯಾಟಿಂಗ್‌ ಮಾಡಿದ ಜಾರ್ಖಂಡ್ ತಂಡ ದಾಖಲೆಯ 412 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಗುರಿ ಬೆನ್ನಟ್ಟಿದ ಕರ್ನಾಟಕ ಕೂಡ ಕೆಚ್ಚೆದೆಯ ಪ್ರದರ್ಶನ ನೀಡಿ ಇನ್ನು 15 ಎಸೆತಗಳು ಬಾಕಿ ಇರುವಂತೆಯೇ ಜಯ ಗಳಿಸಿದೆ. ಟಾಸ್ ಗೆದ್ದ ಕರ್ನಾಟಕ ನಾಯಕ ಮಯಾಂಕ್ ಅಗರ್ವಾಲ್ ಮೊದಲು ಬೌಲಿಂಗ್‌ ಆಯ್ದುಕೊಂಡಿದ್ದರು. ಜಾರ್ಖಂಡ್ ಪರ ಆರಂಭಿಕ ಶಿಖರ್ ಮೋಹನ್ 44 ರನ್ ಬಾರಿಸಿ ತಂಡಕ್ಕೆ ಉತ್ತಮ ಆರಂಭ ನೀಡಿದರು. 4ನೇ ಕ್ರಮಾಂಕದಲ್ಲಿ ಬಂದ ವಿರಾಟ್ ಸಿಂಗ್ ಕೂಡ 88 ರನ್ ಗಳಿಸಿದರು. ಐದನೇ ಕ್ರಮಾಂಕದಲ್ಲಿ ಬಂದ ಕುಶಾಗ್ರ…

Read More

ಚಿತ್ರದುರ್ಗ: ಅಕ್ರಮ ಸಂಬಂಧಕ್ಕೆ ಇಲ್ಲೊಬ್ಬಳು ಪಾಪಿ ಹೆತ್ತ ಮಗುವನ್ನೇ ಮಾರಾಟ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪಾಪಿ ತಾಯಿ ಅಕ್ರಮ ಸಂಬಂಧಕ್ಕೆ (Illicit Relationship) ಅಡ್ಡಿಯಾಯಿತೆಂದು ತನ್ನ ಎರಡು ವರ್ಷದ ಮಗುವನ್ನೇ (Child) ಮಾರಾಟ ಮಾಡಿದ್ದಾಳೆ. ಈ ಘಟನೆ ಜಿಲ್ಲೆಯ (Chitradurga) ಹಿರಿಯೂರು (Hiriyur) ದಲ್ಲಿ ನಡೆದಿದೆ. ಹುಳಿಯಾರು ರಸ್ತೆ ನಿವಾಸಿ ಐಶ್ವರ್ಯ ಈ ಕೃತ್ಯ ಎಸಗಿರುವ ಪಾಪಿ. ಐಶ್ವರ್ಯಾಳ ಕೃತ್ಯ ಕಂಡು ಸ್ಥಳೀಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದರು. ಹೀಗಾಗಿ ಚಿತ್ರದುರ್ಗ ಜಿಲ್ಲಾ ಬಾಲಭವನ ಅಧಿಕಾರಿ ಮಂಜುನಾಥ್ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ ವೇಳೆ ಪ್ರಕರಣ ಬಯಲಾಗಿದೆ. ಈ ಕುರಿತು ಪಾಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಹೂವಿನಹೊಳೆ ಗ್ರಾಮದ ಚಂದ್ರಪ್ಪ ಜೊತೆ ಐಶ್ವರ್ಯ ಅಕ್ರಮ ಸಂಬಂಧ ಹೊಂದಿದ್ದಳು. ತಮ್ಮ ಆಟಕ್ಕಾಗಿ ಪಾಪಿಗಳು ಸೇರಿಕೊಂಡು ಕೊಪ್ಪಳ ಮೂಲದವರಿಗೆ ಮಗು ಮಾರಾಟ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಐಶ್ವರ್ಯಾಳನ್ನು ಬಂಧಿಸಿದ್ದಾರೆ. ಪ್ರಿಯಕರ ಚಂದ್ರಪ್ಪ ತಲೆ ಮರೆಸಿಕೊಂಡಿದ್ದು, ಬಲೆ…

Read More