Author: Bosstv News Desk

ಧಾರವಾಡ: ಕುಡಿದ ನಶೆಯಲ್ಲಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ. ಬಸಪ್ಪನ ದೇವಸ್ಥಾನದ ಎದುರೇ ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಚಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪ ಗ್ರಾಮ ನಿವಾಸಿ ವಿಟ್ಠಲ್ ಕೂರಾಡಿ ಕೊಲೆಯಾಗಿರುವ ವ್ಯಕ್ತಿ. ಸಂಬಂಧಿಕರೇ ಕೊಲೆ ಆರೋಪಿಗಳು ಎಂದು ತಿಳಿದು ಬಂದಿದೆ. ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಕಸ್ತೂರಿ ಜೊತೆ ವಿವಾಹವಾಗಿದ್ದ ವಿಟ್ಠಲ್, ಪೆಂಡಾಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಆದರೆ, ಕುಡಿತದ ದಾಸನಾಗಿದ್ದ. ಪ್ರತಿ ದಿನ ಕುಡಿದು ಬಂದು ಮನೆಯಲ್ಲಿ ಜಗಳ ಮಾಡುತ್ತಿದ್ದ. ಹೀಗಾಗಿಪತ್ನಿ ಕಸ್ತೂರಿ ತವರು ಸೇರಿದ್ದಳು. ಕಸ್ತೂರಿ ಮತ್ತು ವಿಟ್ಠಲ್ ದಂಪತಿಗೆ ಮೂವರು ಮಕ್ಕಳೂ ಇದ್ದು, ಮಾವನ ಮನೆಗೆ ಆಗಾಗ ವಿಟ್ಠಲ್ ಬಂದು ಹೋಗುತ್ತಿದ್ದರು. ಅದರಂತೆ ನಿನ್ನೆ ರಾತ್ರಿಯೂ ಮಾವನ ಮನೆಗೆ ಬಂದಿದ್ದರು. ನಂತರ ದೇವಸ್ಥಾನದಲ್ಲಿ ಮಲಗಿದ್ದರು. ಆ ವೇಳೆಯೇ ವಿಠ್ಠಲ್ ಕೊಲೆಯಾಗಿದ್ದಾನೆ. ಕಲಘಟಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…

Read More

ನವದೆಹಲಿ: ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಮಧ್ಯೆ ಪವರ್ ಶೇರಿಂಗ್ ವಿಚಾರದಲ್ಲಿ ದೊಡ್ಡ ಸಂಘರ್ಷವೇ ನಡೆಯುತ್ತಿತ್ತು. ಆದರೆ, ಈಗ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಶಸ್ತ್ರಾಸ್ತ್ರ ತ್ಯಾಗ ಮಾಡಿದರೇ ಎಂಬ ಆನುಮಾನ ವ್ಯಕ್ತವಾಗುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಲ್ ಮಟ್ಟದಲ್ಲೇ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಹೇಳುತ್ತಿದ್ದಂತೆ ಡಿಕೆಶಿ ಹಾಗೂ ಆಪ್ತ ಬಳಕ್ಕೆ ನಿರಾಸೆ ಮೂಡಿತ್ತು. ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ (CM Siddaramaiah) ಹೈಕಮಾಂಡ್‌ ಅಂಗಳಕ್ಕೆ ಚೆಂಡು ಎಸೆದು ಬಿಟ್ಟಿದ್ದರು. ಇವುಗಳ ಮಧ್ಯೆ ಡಿಕೆಶಿ ನಾನು ಹೈಕಮಾಂಡ್‌ನವರಿಗೆ ತೊಂದರೆ ಕೊಡಲು ಹೋಗುವುದಿಲ್ಲ ಎಂದಿದ್ದಾರೆದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿ ಈಗಷ್ಟೇ ವಿದೇಶದಿಂದ ಬಂದಿದ್ದಾರೆ. ನಾನು ರಾಹುಲ್‌ಗಾಂಧಿ (Rahul Gandhi) ಅವರಿಗೆ ತೊಂದರೆ ಕೊಡಲು ಬಯಸುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ. ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡಿಲ್ಲ. ನಾನು ಪಕ್ಷದ ಕಾರ್ಯಕರ್ತನ್ನಾಗಿ ಇರಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.ಸಿಎಂ ಬದಲಾವಣೆ ಬಗ್ಗೆ ಯಾವುದೇ ಊಹಾಪೋಹಗಳಿಲ್ಲ. ಬ್ರೇಕ್…

Read More

ಐಸಿಸಿ ಮೂರು ಮಾದರಿಗಳ ಶ್ರೇಯಾಂಕ ಬಿಡುಗಡೆಯಾಗಿದ್ದು, ಭಾರತೀಯ ಆಟಗಾರರು ಪಾರುಪತ್ಯ ಮೆರೆದಿದ್ದಾರೆ. ಬರೋಬ್ಬರಿ ಐವರು ಭಾರತೀಯರು ಮೊದಲ ಸ್ಥಾನದಲ್ಲಿದ್ದಾರೆಂದರೆ ನೀವು ನಂಬಲೇಬೇಕು. ಟೆಸ್ಟ್, ಏಕದಿನ, ಟಿ20 ಕ್ರಿಕೆಟ್ನಲ್ಲಿ ಟೀಂ ಇಂಡಿಯಾದ ಆಟಗಾರರು ಪ್ರಾಬಲ್ಯ ಸಾಧಿಸಿದ್ದಾರೆ. ಏಕದಿನ ಶ್ರೇಯಾಂಕದಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನ ಅಲಂಕರಿಸಿದ್ದಾರೆ. ಜಸ್ಪ್ರೀತ್ ಬುಮ್ರಾ ಟೆಸ್ಟ್ ಶ್ರೇಯಾಂಕದಲ್ಲಿ ನಂ. 1 ಬೌಲರ್ ಆಗಿದ್ದರೆ, ರವೀಂದ್ರ ಜಡೇಜಾ ಟೆಸ್ಟ್ ಆಲ್‌ರೌಂಡರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅಭಿಷೇಕ್ ಶರ್ಮಾ ಟಿ 20 ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ವರುಣ್ ಚಕ್ರವರ್ತಿ ನಂ. 1 ಟಿ20 ಬೌಲರ್ ಎನಿಸಿಕೊಂಡಿದ್ದಾರೆ. ಆದರೆ, ಈ ಭಾರತೀಯ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮಾತ್ರ ಹಿನ್ನಡೆ ಅನುಭವಿಸಿದ್ದಾರೆ. ಈ ಬಾರಿ ತಮ್ಮ ಕಳಪೆ ಪ್ರದರ್ಶನದಿಂದ ಸೂರ್ಯ ಟಿ20 ಶ್ರೇಯಾಂಕದಲ್ಲಿ ಅಗ್ರ 10 ರಿಂದ ಹೊರಬಿದ್ದಿದ್ದಾರೆ.

Read More

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ (Social Media) ಕೆಟ್ಟ ಕಮೆಂಟ್‌ ಪೋಸ್ಟ್‌ ಮಾಡಿದ ಖಾತೆಗಳ ವಿರುದ್ದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಸೈಬರ್‌ ಕ್ರೈಂ (Cyber Crime) ಪೊಲೀಸ್‌ ಠಾಣೆ ಪ್ರಕರಣ ದಾಖಲಿಸಿದ್ದಾರೆ. ದೂರು ನೀಡಿದ ನಂತರ ಇನ್ ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ. ಇತ್ತೀಚೆಗೆಷ್ಟೇ ನಟ ಸುದೀಪ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಅವರು, ದರ್ಶನ್ ಇದ್ದಾಗ ಯಾರೂ ಮಾತನಾಡಲ್ಲ. ಅವರಿದ್ದಾಗ ಬೆಂಗಳೂರಿನಲ್ಲೇ ಇವರು ಇದ್ದಾರೋ ಇಲ್ಲೋ ಗೊತ್ತಾಗಲ್ಲ ಎಂದಿದ್ದರು. ಈಗ ಅದಕ್ಕೆ ಕೆಟ್ಟ ಕಮೆಂಟ್ ಗಳು ಬರುತ್ತಿವೆ ಎನ್ನಲಾಗುತ್ತಿದೆ. ಹೀಗಾಗಿ ಸಿಡಿದೆದ್ದ ವಿಜಯಲಕ್ಷ್ಮಿ 15 ಇನ್‌ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್‌ ವಿರುದ್ಧ ಫೋಟೋ ಸಮೇತ ದೂರು ಸಲ್ಲಿಸಿದ್ದಾರೆ. ಕೆಟ್ಟ ಕಾಮೆಂಟ್ಸ್ ಮಾಡಿದವರ ವಿರುದ್ಧ ವಿಜಯಲಕ್ಷ್ಮಿ (Vijayalakshmi Darshan) ಸಮರ ಸಾರಿದ್ದು, ಸೈಬರ್ ಕ್ರೈಂಗೆ (Cyber Crime) ದೂರಿನ ಬಳಿಕ ಸ್ಪಷ್ಟನೆ ನೀಡಿದ್ದಾರೆ. ಕ್ಲಾಸ್ ಫ್ಯಾನ್ಸ್ ಎಂದು ಕರೆಯಲ್ಪಡುವ ಎಲ್ಲರಿಗೂ ನಿಮ್ಮ ಮಟ್ಟವನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದಕ್ಕಾಗಿ ಧನ್ಯವಾದಗಳು. ಈ…

Read More

‘ಮಾರ್ಕ್’ ಚಿತ್ರದ (Mark Kannada Movie) ಪ್ರೀ-ರಿಲೀಸ್ ಇವೆಂಟ್ ನಲ್ಲಿ ಸುದೀಪ್ ಹೇಳಿದ ಯುದ್ಧಕ್ಕೆ ಸಿದ್ಧ ಮಾತು ಈಗ ದರ್ಶನ್ ಅಭಿಮಾನಿಗಳನ್ನು ರೊಚ್ಚಿಗೆಬಿಸಿದೆ. ಹೀಗಾಗಿ ಸ್ಟಾರ್ ವಾರ್ ಹಾಗೂ ಅಭಿಮಾನಿಗಳ ವಾರ್ ಜೋರು ಶುರುವಾಗಿದೆ. ಈ ಮಧ್ಯೆ ತಮ್ಮ ಮಾತಿಗೆ ಕಿಚ್ಚ ಉತ್ತರ ನೀಡಿದ್ದಾರೆ. ನಾನು ಮಾತನಾಡಿದ್ದು ಪೈರಸಿ ಬಗ್ಗೆ ಎಂದು ಸುದೀಪ್ (Kichcha Sudeep) ಹೇಳಿದ್ದಾರೆ. ‘ನಾನು ಆ ವೇದಿಕೆಯಲ್ಲಿ ಪೈರಸಿ ಎಂಬ ಪದ ಬಳಕೆ ಮಾಡಿಲ್ಲ. ಹೀಗಾಗಿ ಚಿತ್ರರಂಗ ರಿಯಾಕ್ಟ್ ಮಾಡಬೇಕಿತ್ತಲ್ಲ. ಮೊದಲು ‘45’ ಚಿತ್ರತಂಡದವರು ರಿಯಾಕ್ಟ್ ಮಾಡಬೇಕಿತ್ತು. ಉಪ್ಪಿ ಸರ್, ಧ್ರುವ ಸರ್ಜಾ, ರಕ್ಷಿತ್ ಶೆಟ್ಟಿ, ಗಣೇಶ್, ರಿಷಬ್ ಶೆಟ್ಟಿ, ಯಶ್ ಮುಂತಾದವರೆಲ್ಲ ರಿಯಾಕ್ಟ್ ಮಾಡಬೇಕಿತ್ತು. ಆದರೆ ನಾನು ಮಾತನಾಡಿದ್ದೇನೆ. ಚಿತ್ರರಂಗದಲ್ಲಿ ಒಂದು ಲಕ್ಷ ಜನರು ಇದ್ದಾರೆ. ಯಾರೂ ನಮ್ಮ ಮಾತಿಗೆ ಪ್ರತಿಕ್ರಿಯೆ ನೀಡಿಲ್ಲ. ಪ್ರತಿಕ್ರಿಯೆ ನೀಡಿದವರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಬಾರದು. ಅಲ್ಲಿ ಮಾತನಾಡಿದ ನನಗೆ ಘನತೆ ಇಲ್ಲವಾ? 30 ವರ್ಷದಿಂದ ಜನರು ನನ್ನನ್ನು ನೋಡಿಲ್ಲವೇ?…

Read More

ಬೆಂಗಳೂರು: ಹನಿಟ್ರ್ಯಾಪ್ ಬಲೆಗೆ ಸಾಫ್ಟ್‌ವೇರ್‌ ಇಂಜಿನಿಯರ್ ನನ್ನು ಬೀಳಿಸಿ ಹಣ ಲಪಟಾಯಿಸಿದ ಗ್ಯಾಂಗ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 20 ದಿನಗಳ ಅಂತರದಲ್ಲಿ ಎರಡು ಬಾರಿ ಲೂಟಿ ಮಾಡಿದ ಐವರು ಸದಸ್ಯರ ಗ್ಯಾಂಗ್ ನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಮಹಿಳಾ ಮೇಕಪ್ ಆರ್ಟಿಸ್ಟ್‌ಗಳು ಈ ಪ್ರಕರಣದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಟೆಲಿಗ್ರಾಂ ಮೂಲಕ ಪರಿಚಯವಾದ ಯುವತಿಯನ್ನು ಭೇಟಿಯಾದ ಟೆಕ್ಕಿಯನ್ನೇ ವಂಚಿಸಿ ಹಣ ವಸೂಲಿ ಮಾಡಿದ್ದಾರೆ. ಕೊನೆಗೆ ಒಂದು ಲಕ್ಷಕ್ಕೆ ಬೇಡಿಕೆಯಿಟ್ಟು ಮೇಲೆ ಹಲ್ಲೆ ಮಾಡುವಾಗ ಪೊಲೀಸರು ಸ್ಥಳಕ್ಕೆ ಹೋಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಲತಾ ಅಲಿಯಾಸ್ ಅಂಜಲಿ (28), ಹರ್ಷಿಣಿ ಅಲಿಯಾಸ್ ಸ್ವೀಟಿ (26) ಜಗದೀಶ್ (35), ಮಂಜುನಾಥ್ (30) ಹಾಗೂ ಲೋಕೇಶ್ (32) ನನ್ನು ಬಂಧಿಸಿದ್ದಾರೆ. ಸಂತ್ರಸ್ತನಿಗೆ ಡಿ. 1 ರಂದು ಅಪರಿಚಿತ ಟೆಲಿಗ್ರಾಂ ಐಡಿಯಿಂದ ಸಂದೇಶ ಬಂದಿದೆ ಡೇಟಿಂಗ್ ಪ್ಲಾಟ್‌ಫಾರ್ಮ್ ಮೂಲಕ ವೀಡಿಯೋ ಕಾಲ್ ಹಾಗೂ ಒಡನಾಟದ ಆಮಿಷ ಒಡ್ಡಿದ ಸುಮಲತಾ 20 ಸಾವಿರ ರೂ.ಗೆ ಬೇಟಿಕೆ…

Read More

ಕಿಚ್ಚ ಸುದೀಪ್ ಯುದ್ಧ ಸಾರಿದ ನಂತರ ಸ್ಟಾರ್ ವಾರ್ ನಡೆಯುತ್ತಿದ್ದು, ಇಂದು ಪರಪ್ಪನ ಅಗ್ರಹಾರಕ್ಕೆ ತೆರಳಿದ್ದ ವಿಜಯಲಕ್ಷ್ಮೀ(Vijayalakshmi Darshan) ದರ್ಶನ್ ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇಂದು ವಿಜಯಲಕ್ಷ್ಮೀ ಪರಪ್ಪನ ಅಗ್ರಹಾರಕ್ಕೆ ಹೋದ ವೇಳೆ ಸಹೋದರ ದಿನಕರ್ ತೂಗುದೀಪ ಕೂಡ ಜೊತೆಗಿದ್ದರು. ಜೈಲಿಗೆ ಭೇಟಿ ನೀಡಿದ ನಂತರ ಪೋಸ್ಟ್ ಮಾಡಿದ್ದಾರೆ. ಈ ವೇಳೆ ಅರ್ಧಗಂಟೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ದರ್ಶನ್ ಅವರು, ‘ಯಾವುದಕ್ಕೂ ಹೆಚ್ಚು ತಲೆ ಕೆಸಿಕೊಳ್ಳಬೇಡಿ. ನಮಗೂ ಒಳ್ಳೆಯ ಸಮಯ ಬರುತ್ತದೆ. ಅಲ್ಲಿಯವರೆಗೆ ಕಾಯಬೇಕು’ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ. ‘ದಿ ಡೆವಿಲ್’ ಸಿನಿಮಾದ ಬಗ್ಗೆ ದರ್ಶನ್ ಅವರು ಅಪ್ಡೇಟ್ ಕೇಳಿದ್ದಾರೆ. ಸಿನಿಮಾ ಕಲೆಕ್ಷನ್‌ ಸೇರಿದಂತೆ ಫ್ಯಾನ್ಸ್ ಸಪೋರ್ಟ್ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್ ತೂಗುದೀಪ ತಿಳಿಸಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರು: ಪತಿ ಹಾಗೂ ಪತ್ನಿ ಮಧೆ ಶುರುವಾದ ಜಗಳ ಕೊಲೆಯಾಗಿರುವ ಘಟನೆ ನಡೆದಿದೆ. ಹೆಂಡತಿ ಜೊತೆ ಜಗಳ ಮಾಡಿದ ವ್ಯಕ್ತಿ ಗನ್ ತೆಗೆದು ಶೂಟ್ ಮಾಡಿದ್ದಾನೆ. ಸಿಲಿಕಾನ್ ಸಿಟಿಯ ಬಸವೇಶ್ವರ ನಗರದ ಹೋಟೆಲ್‌ ಹತ್ತಿರ ಈ ಘಟನೆ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬಾಲಮುರುಗನ್‌ ತನ್ನ ಪತ್ನಿ ಮೇಲೆ ಗುಂಡು ಹಾರಿಸಿದ ವ್ಯಕ್ತಿ. ಭುವನೇಶ್ವರಿ ಸಾವನ್ನಪ್ಪಿರುವ ಮಹಿಳೆ. ಇಬ್ಬರೂ ತಮಿಳುನಾಡಿನ ಮೂಲದವರು ಎನ್ನಲಾಗಿದೆ. ಬಾಲಮುರುಗನ್ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ರಿಸೈನ್ ಮಾಡಿದ್ದ ಎನ್ನಲಾಗಿದೆ. ಭುವನೇಶ್ವರಿ ಬ್ಯಾಂಕ್ ಉದ್ಯೋಗಿ. ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.‌ ಪತಿ-ಪತ್ನಿ ನಡುವೆ ಕೋರ್ಟ್‌ನಲ್ಲಿ ಡಿವೋರ್ಸ್‌ ಕೇಸ್‌ ನಡೆಯುತ್ತಿತ್ತು. ಇಬ್ಬರೂ ಕೋರ್ಟ್‌ಗೆ ಹಾಜರಾಗಿದ್ದರು. ಕೋರ್ಟ್‌ ಕೇಸ್‌ ಮುಗಿಸಿ ಹೊರ ಬಂದಿದ್ದರು. ಆಗ ಇಬ್ಬರ ಮಧ್ಯೆ ಜಗಳ ನಡೆದಿದ್ದು, ಅದು ತಾರಕ್ಕೇರಿದೆ. ಆ ವೇಳೆ ಬಾಲ ಮುರುಗನ್‌ ಪತ್ನಿ ಮೇಲೆ ಗನ್‌ ತೆಗೆದು…

Read More

ಬೆಂಗಳೂರು: ರಾಜ್ಯದಾದ್ಯಂತ ನಾಳೆ ಭೀಕರ ಚಳಿ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬೆಳಗಿನ ಜಾವ ತೀವ್ರ ಚಳಿ ಹಾಗೂ ಮಂಜು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಬೆಳಗ್ಗೆಯ ನಂತರ ಒಣಹವೆ ಇರಲಿದ್ದು, ತಾಪಮಾನ ಸ್ವಲ್ಪ ಕಡಿಮೆ ಇರಲಿದೆ. ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ ಸೇರಿದಂತೆ ಹಲವೆಡೆ ಶೀತಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಈ ಭಾಗದ ಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಾತಾವರಣ ಸಾಮಾನ್ಯವಾಗಿರಲಿದೆ. ಹಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ತಣ್ಣನೆಯ ವಾತಾವರಣ ಇರಲಿದೆ. ಮಂಜು ಹೆಚ್ಚಾಗಲಿದೆ. ಬಹುತೇಕ ಜಿಲ್ಲೆಗಳಲ್ಲಿ ಮಂಜು ಇರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

Read More

ಬೆಂಗಳೂರು: ಕೆಎಸ್‌ಆರ್‌ಟಿಸಿ (KSRTC) ಸೇರಿದಂತೆ ನಾಲ್ಕು ರಾಜ್ಯ ಸಾರಿಗೆ ನಿಗಮದಲ್ಲಿ ಕೆಲಸ ನಿರ್ವಹಿಸುವ ಮಹಿಳಾ ನೌಕರರಿಗೆ ಋತುಚಕ್ರದ ರಜೆ (Menstrual Leave) ನೀಡಲು ಸಾರಿಗೆ ನಿರ್ಧಿರಿಸಿ ಆದೇಶ ಹೊರಡಿಸಿದೆ. ಜನವರಿ 1ರಿಂದ ಮಹಿಳಾ ಡ್ರೈವರ್, ಕಂಡಕ್ಟರ್ ಸೇರಿ ಮಹಿಳಾ ಸಿಬ್ಬಂದಿ ಋತುಚಕ್ರದ ರಜೆ ಪಡೆಯಬಹುದಾಗಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲೂಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ಎಂಡಿ ಅಕ್ರಂ ಪಾಷ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಸರ್ಕಾರವು ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಿ ಷರತ್ತು ಮತ್ತು ನಿಬಂಧನೆಗೊಳಪಟ್ಟು ರಜೆ ಮಂಜೂರು ಮಾಡಲು ಆದೇಶ ಹೊರಡಿಸಿದೆ. ಈ ಮೂಲಕ ಮಹಿಳಾ ನೌಕರರು ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಋತುಚಕ್ರ ಹೊಂದಿರುವ 18 ರಿಂದ 52 ವಯಸ್ಸಿನ ನಿಗಮದ ಮಹಿಳಾ ನೌಕರರು ಈ ರಜೆ ಪಡೆಯಬಹುದು. ಸಾಂದರ್ಭಿಕ ರಜೆ ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ…

Read More