Subscribe to Updates
Get the latest creative news from FooBar about art, design and business.
Author: Bosstv News Desk
ಕಲಬುರಗಿ: ರಾಜ್ಯದಲ್ಲಿ ಕುರ್ಚಿ ಬದಲಾವಣೆ ಬಗ್ಗೆ ಹೈಕಮಾಂಡ್ (HighCommand) ಯಾವುದೇ ಗೊಂದಲ ಸೃಷ್ಟಿಸಿಲ್ಲ. ತಾವೇ ಸೃಷ್ಟಿ ಮಾಡಿಕೊಂಡಿದ್ದಾರೆ. ಎಲ್ಲದಕ್ಕೂ ಹೈಕಮಾಂಡ್ ಅಂದ್ರೆ ಹೇಗೆ ಎಂದು ಕಿಡಿಕಾರಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಲೋಕಲ್ ನವರೇ ತಮ್ಮ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಿಎಂ ಸ್ಥಾನದ ಅಧಿಕಾರ ಹಂಚಿಕೆ ಬಗ್ಗೆ ಸಿದ್ದರಾಮಯ್ಯ ಬಣ ಹಾಗೂ ಡಿಕೆಶಿ ಬಣಗಳ ಮಧ್ಯೆ ಗುದ್ದಾಟ ನಡೆಯುತ್ತಲೇ ಇದೆ. ಈ ಮಧ್ಯೆ ಎಲ್ಲರೂ ಹೈಕಮಾಂಡ್…ಹೈಕಮಾಂಡ್ ಎಂದು ಮಾತನಾಡುತ್ತಿದ್ದಾರೆ. ಡಿ. 23ಕ್ಕೆ ದೆಹಲಿಗೆ ಹೊರಟಿದ್ದೇನೆ. ನನಗೆ ಹಾಗೂ ಸಿದ್ದರಾಮಯ್ಯ ಅವರಿಗೆ ಇಬ್ಬರಿಗೂ ಹೈಕಮಾಂಡ್ ಬರಲು ಹೇಳಿದೆ ಎಂದು ಡಿಕೆಶಿ ಹೇಳಿದ್ದರು. ಈ ಹೇಳಿಕೆಯ ಬೆನ್ನಲ್ಲೇ ಈಗ ಮಲ್ಲಿಕಾರ್ಜುನ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲದಕ್ಕೂ ಹೈಕಮಾಂಡ್ ಅಂದರೆ ಹೇಗೆ? ಅವರಿಂದ ಪಕ್ಷ ಅಧಿಕಾರಕ್ಕೆ ಬಂತು..ಇವರಿಂದ ಪಕ್ಷ ಅಧಿಕಾರಕ್ಕೆ ಬಂತು ಅಂತಾ ಯಾರೂ ಹೇಳುವಂತಿಲ್ಲ. ಕಾರ್ಯಕರ್ತರ ಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ಅಧಿಕಾರ ಹಂಚಿಕೆ ವಿಷಯದಲ್ಲಿ ಹೈಕಮಾಂಡ್ ಯಾವುದೇ ಗೊಂದಲ ಮಾಡಿಲ್ಲ. ಇಲ್ಲಿನ…
ಹುಬ್ಬಳ್ಳಿ: ಚಂದನವನದ ಪೈಲ್ವಾನ್ ಹುಬ್ಬಳ್ಳಿ ನೆಲದಲ್ಲಿ ನಿಂತು ತಮ್ಮ ವಿರೋಧಿಗಳ ವಿರುದ್ಧ ತೊಡೆ ತಟ್ಟಿದ್ದಾರೆ. ಮಾರ್ಕ್ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ತಮ್ಮ ಅಭಿಮಾನಿಗಳಿಗೆ ದೊಡ್ಡ ಸಂದೇಶ ಸಾರಿದ್ದಾರೆ. ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಡಿ.25ರಂದು ಬಿಡುಗಡೆ ಆಗುತ್ತಿದೆ. ಹೀಗಾಗಿ ಪ್ರಚಾರ ಕಾರ್ಯ ನಡೆಯುತ್ತಿದೆ. ಪ್ರಚಾರದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಸುದೀಪ್, ಸಿನಿಮಾ ಬಿಡುಗಡೆ ಮಾಡುವುದರ ಜೊತೆಗೆ ಯುದ್ಧ ಮಾಡಬೇಕಿದೆ. ಹೊರಗೆ ಪಡೆ ಒಂದು ಯುದ್ಧಕ್ಕೆ ರೆಡಿ ಆಗುತ್ತಿದೆ. ನಾನು ಮಾತನಾಡಬಾರದು ಎಂದು ಸುಮ್ಮನಿದ್ದೆ, ಆದರೆ ಕೆರಳಿಸಿದರೆ ಸುಮ್ಮನಿರಲ್ಲ. ಇಲ್ಲಿಯವರೆಗೂ ಮೌನದಿಂದ ಇರಬೇಕೆಂದುಕೊಂಡಿದ್ದೆ. ಅವರು ಸುಮ್ಮನಿದ್ದರೆ ಸರಿ, ಇಲ್ಲವಾದರೆ ಅವರ ಭಾಷೆಯಲ್ಲೇ ಅವರಿಗೆ ಉತ್ತರ ನೀಡಿ ಎಂದು ತಮ್ಮ ಅಭಿಮಾನಿಗಳಿಗೆ ಹೇಳಿದ್ದಾರೆ. ಹೀಗೆ ಸುದೀಪ್ ಹೇಳಿದ್ದಾದರೂ ಯಾರಿಗೆ? ಯಾಕೆ ಈ ರೀತಿ ಹೇಳಿದ್ದಾರೆ ಎಂಬೆಲ್ಲ ಚರ್ಚೆಗಳು ಈಗ ಆರಂಭವಾಗಿವೆ. ‘ಮಾರ್ಕ್’ ಸಿನಿಮಾದ ಪ್ರಚಾರ ಆರಂಭವಾದಾಗಿನಿಂದಲೂ ದರ್ಶನ್ ಅಭಿಮಾನಿಗಳು ವಿರೋಧ ವ್ಯಕ್ತಪಡಿಸುತ್ತಿದ್ದರು. ‘ಮಾರ್ಕ್’ ಸಿನಿಮಾ ನಿರ್ದೇಶಕ ವಿಜಯ್ ಕಾರ್ತಿಕೇಯ, ‘ಕಾವೇರಿ ತಮಿಳಿಗೆ…
ಬೆಂಗಳೂರು: ರಾಜ್ಯದ ಗೃಹಲಕ್ಷ್ಮೀಯರಿಗೆ 2 ತಿಂಗಳ ಕಂತು ಹಾಕದೆ ಸರ್ಕಾರ ಯಾಮಾರಿಸುತ್ತಿದೆ ಎಂದು ಅಧಿವೇಶನದಲ್ಲಿ ಬಿಜೆಪಿ ಆರೋಪಿಸಿತ್ತು. ಇದು ದೊಡ್ಡ ಕೋಲಾಹಲಕ್ಕೆ ಕಾರಣವಾಗಿತ್ತು. ಈ ವಿಷಯವಾಗಿ ಕಾಂಗ್ರೆಸ್ ಸರ್ಕಾರ ತೀವ್ರ ಮುಜುಗುರ ಅನುಭವಿಸಿತ್ತು. ಎರಡು ತಿಂಗಳು ಬಾಕಿ ಸೇರಿದಂತೆ ಒಟ್ಟು 3 ತಿಂಗಳ ಕಂತು ಯಜಮಾನಿಯರಿಗೆ ಬರಬೇಕಿದ್ದು, ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, 2.6 ಕೋಟಿಗೂ ಅಧಿಕ ಯಜಮಾನಿಯರಿಗೆ ಮುಂದಿನ ವಾರದಲ್ಲಿ ಕಂತು ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ. ಮುಂದಿನ ವಾರ, ಸೋಮವಾರದಿಂದ- ಶನಿವಾರದ ಒಳಗೆ 24 ನೇ ಕಂತಿನ ಹಣ ಅಕೌಂಟ್ ಗೆ ಜಮೆ ಆಗಲಿದೆ ಎಂದಿದ್ದಾರೆ. ಗೃಹಲಕ್ಷ್ಮೀ ಯೋಜನೆಯ 24 ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಹೀಗಾಗಿ ಮುಂದಿನ ವಾರದ ಶನಿವಾರದ ಒಳಗೆ ಹಣ ಬಿಡುಗಡೆಯಾಗಲಿದೆ ಎಂದಿದ್ದಾರೆ. ಯೋಜನೆಯ ಹಣ ಸತ್ತವರ ಅಕೌಂಟ್ ಗಳಿಗೆ ಜಮೆಯಾಗುತ್ತಿರುವ ಕುರಿತು ಮಾತನಾಡಿರುವ ಅವರು,…
ಬೆಂಗಳೂರು: ಬಿಕ್ಲು ಶಿವ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಗೆ ಸಂಕಷ್ಟ ಶುರುವಾಗಿದ್ದು, ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಬೈರತಿ ಬಸವರಾಜ್ (Byrati Basavaraj) ನಾಪತ್ತೆಯಾಗಿದ್ದಾರೆ. ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿದೆ. ಅವರ ಲೈವ್ ಲೊಕೆಷನ್ ಮಹಾರಾಷ್ಟ್ರದ ಪುಣೆಯಲ್ಲಿ ಕೊನೆಯದಾಗಿ ಪತ್ತೆಯಾಗಿದೆ ಎನ್ನಲಾಗಿದೆ. ಸದ್ಯ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ. ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ (Belagavi Winter Session) ಬೈರತಿ ಬಸವರಾಜ್, ಅಲ್ಲಿಂದಲೇ ನಾಪತ್ತೆಯಾಗಿದ್ದಾರೆ. ಸಿಐಡಿ ಅಧಿಕಾರಿಗಳ ತಂಡ ಬೈರತಿ ಬಸವರಾಜ್ ಉಳಿದುಕೊಂಡಿದ್ದ ಜಾಗಕ್ಕೆ ಹೋಗಿ ಅಲ್ಲಿನ ಸಿಸಿಟಿವಿ, ಯಾವ ರಸ್ತೆಯ ಮೂಲಕ ಯಾವ ಕಡೆಗೆ ಹೋಗಿದ್ದಾರೆ ಎಂಬ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಬೈರತಿ ಬಸವರಾಜ್ ಗೋವಾ ಅಥವಾ ಮಹಾರಾಷ್ಟ್ರಕ್ಕೆ ಹೋಗಿರುವ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಮಹಾರಾಷ್ಟ್ರದಲ್ಲಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಯಾವುದೇ ಕ್ಷಣದಲ್ಲಾದರೂ ಬೈರತಿ ಬಸವರಾಜ್ ಅರೆಸ್ಟ್…
T20 World Cup 2026: ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ಇಂದು ಭಾರತ ತಂಡ (India Squad) ಪ್ರಕಟಿಸಲಾಗಿದ್ದು, ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. 15ರ ತಂಡದಲ್ಲಿ ಗಿಲ್ ಸ್ಥಾನ ಪಡೆಯದೆ ನಿರಾಸೆ ಅನುಭವಿಸಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಉಪನಾಯಕರಾಗಿ ಕಾಣಿಸಿಕೊಂಡಿದ್ದ ಗಿಲ್ ಅವರನ್ನು ಟಿ20 ವಿಶ್ವಕಪ್ ತಂಡದಿಂದ ಆಯ್ಕೆ ಸಮಿತಿ ಕೈ ಬಿಟ್ಟಿದೆ. ಕಳೆದ ಕೆಲವು ಸರಣಿಗಳಿಂದ ಗಿಲ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಬದಲಾಗಿ ಹೆಚ್ಚುವರಿ ಆರಂಭಿಕನಾಗಿ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿದ್ದ ಜಿತೇಶ್ ಶರ್ಮಾ ಕೂಡ ತಂಡದಿಂದ ಹಿಂದೆ ಸರಿದಿದ್ದಾರೆ. ಅವರ ಬದಲಿಗೆ ಫಿನಿಶರ್ ಆಗಿ ರಿಂಕು ಸಿಂಗ್ ಅವರನ್ನು ಭಾರತ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಟಿ20 ವಿಶ್ವಕಪ್ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ),…
ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ (JCb) ಘರ್ಜನೆ ಮಾಡಿದ್ದು, ಸುಮಾರು 200 ಮನೆಗಳು ನೆಲಸಮವಾಗಿವೆ. ಪಾಲಿಕೆ ಜಾಗವನ್ನ ಒತ್ತುವರಿ (Encroachment) ಮಾಡಿಕೊಂಡು ನಿರ್ಮಿಸಿದ್ದ 200 ಮನೆಗಳನ್ನ ಜೆಸಿಬಿಗಳ ಮೂಲಕ ತೆರವುಗೊಳಿಸುವ ಕಾರ್ಯಕ್ಕೆ ಇಂದು ಜಿಲ್ಲಾಡಳಿತ ಮುಂದಾಗಿ, ಮನೆಗಳನ್ನು ನೆಲಸಮ ಮಾಡಿದೆ. ಈ ಕಾರ್ಯಾಚರಣೆಯಲ್ಲಿ 6 ಜೆಸಿಬಿ, 300 ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು. ಬಿಗಿ ಭದ್ರತೆಯಲ್ಲಿ ಜಿಲ್ಲಾಡಳಿತ ತೆರವು ಕಾರ್ಯಾಚರಣೆ ನಡೆಸುತ್ತಿದೆ. ಈ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಶ್ರೀನಿವಾಸಪುರದ ಕೋಗಿಲು ಲೇಔಟ್‌ನಲ್ಲಿರುವ ಈ ಗೋಮಾಳ ಜಾಗವನ್ನ ಜಿಲ್ಲಾಡಳಿತ ನಗರ ಪಾಲಿಕೆಗೆ ನೀಡಿತ್ತು. ಆ ಜಾಗವನ್ನು ಒತ್ತುವರಿ ಮಾಡಿಕೊಂಡು ಹಲವರು ಮನೆ ನಿರ್ಮಾಣ ಮಾಡಿಕೊಂಡಿದ್ದರು ಎನ್ನಲಾಗಿದೆ. ಹೀಗಾಗಿ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿದ್ದವರಿಗೆ ಇಂದು ಶಾಕ್ ಎದುರಾಗಿದೆ.
ಕಲಬುರಗಿ: ಬಿಜೆಪಿ ಮುಖಂಡನ ಮನೆಯಲ್ಲಿ ಕಾರ್ಯಕರ್ತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ಜಿಲ್ಲೆಯ (Kalaburagi) ಜಿಲ್ಲೆಯ ನಂದಿಕೂರ್ ಗ್ರಾಮದಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಬಿಜೆಪಿ (BJP) ಕಾರ್ಯಕರ್ತೆ ಜ್ಯೋತಿ ಪಾಟೀಲ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಹಲವಾರು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಸದ್ಯ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಲ್ಲಿನಾಥ್ ಬಿರಾದಾರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ನಂತರ ಕುಟುಂಬಸ್ಥರು ಮನೆ ಖಾಲಿ ಮಾಡಿಕೊಂಡು ತೆರಳಿದ್ದಾರೆ. ಮನೆಗೆ ಬೀಗ ಹಾಕಲಾಗಿದೆ. ಮಾಹಿತಿಯಂತೆ, ಜ್ಯೋತಿ ಪಾಟೀಲ್ ಶುಕ್ರವಾರ ತಡರಾತ್ರಿ ಮನೆ ಮುಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ ಎನ್ನಲಾಗಿದೆ. ಮಲ್ಲಿನಾಥ್ ಮನೆಯಲ್ಲಿ ಇಲ್ಲದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಜ್ಯೋತಿ ಪಾಟೀಲ್ ಕಲಬುರಗಿಯ ಬ್ರಹ್ಮಪುರ ಬಡಾವಣೆಯ ನಿವಾಸಿಯಾಗಿದ್ದಾರೆ. ಸದ್ಯ ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ನಗರದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ವಿದ್ಯಾರ್ಥಿನಿಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿರುವ ಘಟನೆಯೊಂದು ವರದಿಯಾಗಿದೆ. ಕೇರಳ ಮೂಲದ ಪಿಯುಸಿ ವಿದ್ಯಾರ್ಥಿನಿಯನ್ನು ಲಾಡ್ಜ್‌ಗೆ ಕರೆದೊಯ್ದು ಮದ್ಯ ಕುಡಿಸಿ ಅಪ್ರಾಪ್ತನೊಬ್ಬ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಸಂತ್ರಸ್ತೆ ದೂರು ನೀಡಿದ್ದು, ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೇರಳ ಮೂಲದ 16ರ ಬಾಲಕಿ, ನಗರದಲ್ಲಿ ಪೋಷಕರೊಂದಿಗೆ ವಾಸಿಸುತ್ತಿದ್ದ ಇಲ್ಲಿನ ಕಾಲೇಜೊಂದರಲ್ಲಿ ಪಿಯುಸಿ ಓದುತ್ತಿದ್ದಾಳೆ. ಈ ವಿದ್ಯಾರ್ಥಿನಿಗೆ ಇತ್ತೀಚೆಗೆ ಹದಿನೇಳೂವರೆ ವರ್ಷದ ವಿದ್ಯಾರ್ಥಿಯೋರ್ವ ಪರಿಚಯವಾಗಿದ್ದಾನೆ. ಆತ ಗುರುವಾರ ರಾತ್ರಿ ಯಲಹಂಕ ಹತ್ತಿರದ ದೇವನಹಳ್ಳಿ ಸಮೀಪದ ಲಾಡ್ಜ್‌ಗೆ ಕರೆದೊಯ್ದು ಮದ್ಯ ಕುಡಿಸಿ ಅತ್ಯಾಚಾರ ಮಾಡಿದ್ದಾನೆಂದು ಸಂತ್ರಸ್ತ ಬಾಲಕಿ ದೂರು ನೀಡಿದ್ದಾರೆ.. ಅಪ್ರಾಪ್ತ ಗೆಳೆಯನ ಇಬ್ಬರು ಸ್ನೇಹಿತರು ಕೂಡ ಸ್ಥಳದಲ್ಲಿ ಇದ್ದರು ಎಂದು ಕೂಡ ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಆಪ್ತ ಸಮಾಲೋಚನೆ ನಡೆಯುತ್ತಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯವಾಡ: ಮದ್ಯ ಸೇವಿಸಲು 10 ರೂ. ನೀಡಲಿಲ್ಲ ಎಂಬ ಕಾರಣಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಭಯಾನಕ ಘಟನೆ ಆಂಧ್ರ ಪ್ರದೇಶದಲ್ಲಿ ವರದಿಯಾಗಿದೆ. ಮದ್ಯದ ಅಂಗಡಿ ಮುಂದೆ ಸರಾಯಿ ಕೊಳ್ಳಲು 10 ರೂ. ಹಣ ನೀಡುವಂತೆ ಅಪರಿಚತ ವ್ಯಕ್ತಿಯನ್ನು ಯುವಕನೊಬ್ಬ ಕೇಳಿದ್ದಾನೆ. ಆದರೆ, ಹಣ ನೀಡಲು ಆ ವ್ಯಕ್ತಿ ನಿರಾಕರಿಸಿದ್ದಾನೆ. ಇದರಿಂದ ರೊಚ್ಚಿಗೆದ್ದ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ತಾತಾಜಿ ಘಟನೆಯಲ್ಲಿ ಕೊಲೆಯಾಗಿರುವ ವ್ಯಕ್ತಿ ಎನ್ನಲಾಗಿದೆ. ಕುಡಿದ ಮತ್ತಿನಲ್ಲಿದ್ದ 17 ವರ್ಷದ ಯುವಕನೊಬ್ಬ ಮದ್ಯದ ಅಂಗಡಿಯ ಬಳಿ ಇರುವ ತಾತಾಜಿ ಎಂಬ ಅಪರಿಚಿತ ವ್ಯಕ್ತಿ ಬಳಿ ಸರಾಯಿ ಖರೀದಿಸಲು 10 ರೂ. ಕೇಳಿದ್ದಾನೆ. ಈ ವೇಳೆ ಆ ವ್ಯಕ್ತಿ ಹಣ ಕೊಡಲು ನಿರಾಕರಿಸಿದ್ದಾನೆ. ಈ ವೇಳೆ ಇಬ್ಬರ ಮಧ್ಯೆ ಗಲಾಟೆ ನಡೆದಿದೆ. ತಾತಾಜಿ ಎಂಬ ವ್ಯಕ್ತಿ ಮೊದಲು ಯುವಕನಿಗೆ ಹೊಡೆದಿದ್ದಾನೆ. ಅದೇ ಸಿಟ್ಟಿನಿಂದ ಯುವಕ ಚಾಕುವಿನಿಂದ ಇರಿದಿದ್ದಾನೆ ಎಂದು ಅಲ್ಲಿನ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆಂದು ವರದಿಯಾಗಿದೆ.…
ನವದೆಹಲಿ: ಲೋಕಸಭೆ ಮೇಲ್ಮನೆಯಲ್ಲಿ ಮಧ್ಯರಾತ್ರಿ ವಿರೋಧಗಳ ಮಧ್ಯೆಯೇ ಜಿ ರಾಮ್ ಜಿ ಮಸೂದೆ ಅಂಗೀಕಾರವಾಗಿದೆ. ತೀವ್ರ ವಿರೋಧ ವ್ಯಕ್ತಪಡಿಸಿದ ವಿಪಕ್ಷಗಳು ಸಭಾತ್ಯಾಗ ಮಾಡಿವೆ. ಗುರುವಾರವಷ್ಟೇ ಅಂಗೀಕರಿಸಲಾಗಿದ್ದ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (Viksit Bharat G RAM G Bill 2025) ಮಸೂದೆ, 2025 ಅನ್ನು ಶುಕ್ರವಾರ ಮಧ್ಯರಾತ್ರಿ ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ. ತಡರಾತ್ರಿ 12:15ರ ಸುಮಾರಿಗೆ ಧ್ವನಿ ಮತದ ಮೂಲಕ ಮಸೂದೆ ಅಂಗೀಕಾರಗೊಂಡಿದೆ. ಮಧ್ಯರಾತ್ರಿವರೆಗೆ ನಡೆದ ಚರ್ಚೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ (MGNAREGA) ಹೆಸರು ಬದಲಿಸಿ ಪರಿಚಯಿಸಲಾದ ಮಸೂದೆಗೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ತೀವ್ರವಾಗಿ ವಿರೋಧಿಸಿದವು. ಹೀಗಾಗಿ ದೊಡ್ಡ ಕೋಲಾಹಲವೇ ಉಂಟಾಯಿತು. ಮಸೂದೆ ವಿರೋಧಿಸಿ ಸಭಾತ್ಯಾಗ ಮಾಡಿದರು. ಇದರ ಮಧ್ಯೆಯೇ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಮಸೂದೆಗೆ ಅಂಗೀಕಾರ ಪಡೆದುಕೊಂಡರು. ಇದನ್ನು ವಿರೋಧಿಸಿ ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿಪಕ್ಷ ಸದಸ್ಯರು ಸಂಸತ್ತಿನಲ್ಲೇ ರಾತ್ರಿ ಕಳೆದರು. ಸಂವಿಧಾನಸದನ ಗೇಟ್ ಹತ್ತಿರವೂ ಪ್ರತಿಭಟನೆ ನಡೆಸಿದವು.