Author: Bosstv News Desk

ಮುಂಬೈ: ವಸತಿ ಕಟ್ಟಡದ ಮೇಲೆ ಫೈರಿಂಗ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಅರೆಸ್ಟ್ ಆಗಿರುವ ಘಟನೆ ನಡೆದಿದೆ. ಬಾಲಿವುಡ್ ನಟ ಕಮಲ್ ಆರ್ ಖಾನ್ (Kamal R Khan) ಅರೆಸ್ಟ್ ಆಗಿದ್ದಾರೆ. ಜ.18ರಂದು ನಡೆದ ಗುಂಡಿನ ದಾಳಿಯಲ್ಲಿ ಪ್ರಮುಖ ಆರೋಪಿಯಾಗಿದ್ದ ನಟ ಕಮಲ್ ರಶೀದ್ ಖಾನ್ ರನ್ನು ಜ.23ರಂದು ಸಂಜೆ ಓಶಿವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅಂಧೇರಿಯ (Andheri) ಓಶಿವಾರದಲ್ಲಿರುವ (Oshiwara) ನಳಂದ ಸೊಸೈಟಿಯಿಂದ ಎರಡು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಟ್ಟಡದ ಎರಡನೇ ಮತ್ತು ನಾಲ್ಕನೇ ಮಹಡಿಯಲ್ಲಿ ತಲಾ ಒಂದೊಂದು ಗುಂಡು ಪತ್ತೆಯಾಗಿವೆ. ವಿಚಾರಣೆ ವೇಳೆ ಕಮಲ್ ಖಾನ್ ಗುಂಡಿನ ದಾಳಿ ನಡೆಸಿರುವುದಾಗಿ ಒಪ್ಪಿಕೊಂಡಿದ್ದು, ಪರವಾನಗಿ ಪಡೆದ ಬಂದೂಕಿನಿಂದ ಶೂಟ್ ಮಾಡಿರುವುದಾಗಿ ಹೇಳಿದ್ದಾರೆ. ಈ ಪ್ರಕರಣದ ಕುರಿತು ಓಶಿವಾರಾ ಪೊಲೀಸ್ ಠಾಣೆ ಪೊಲೀಸರ ತಂಡ ತನಿಖೆ ನಡೆಸಿದ್ದು, ಆರಂಭದಲ್ಲಿ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಸಿಸಿಟಿವಿ ದೃಶ್ಯಾವಳಿಗಳಲ್ಲಿಯೂ ಏನು ಪತ್ತೆಯಾಗಿರಲಿಲ್ಲ. ವಿಧಿವಿಜ್ಞಾನ ತಂಡದ ಸಹಾಯದಿಂದ ಕಮಲ್ ಆರ್ ಖಾನ್ ಅವರ ಬಂಗಲೆಯಿಂದ ಗುಂಡು ಹಾರಿಸಿರಬಹುದು…

Read More

ಬೆಂಗಳೂರು: ಶಾಸಕರು ಜನರ ಸಮಸ್ಯೆ ಹೊತ್ತು ಅಧಿಕಾರಿಗಳಿಗೆ ಕರೆ ಮಾಡಿದರೆ, ಅಧಿಕಾರಿಗಳು ಸ್ವೀಕರಿಸುವುದಿಲ್ಲ ಎಂಬ ಆರೋಪ ಕೇಳಿ ಬರುತ್ತಿದ್ದವು. ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ಸರ್ಕಾರ ಖಡಕ್ ಸೂಚನೆ ನೀಡಿದೆ. ಈ ಕುರಿತು ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ.ಇನ್ನು ಮುಂದೆ ಎಲ್ಲ ಸರ್ಕಾರಿ ಅಧಿಕಾರಿಗಳು ಎಂಎಲ್ಎಗಳ ಮತ್ತು ಎಂಎಲ್ಸಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಲೇಬೇಕು. ಒಂದು ವೇಳೆ ಕರೆ ಬಂದಾಗ ಇತರ ಕೆಲಸಗಳಲ್ಲಿ ವ್ಯಸ್ತರಾಗಿದ್ದಲ್ಲಿ, ಮರಳಿ ಕರೆ ಮಾಡಿ ಮಾತನಾಡಬೇಕು ಎಂದು ಸೂಚನೆ ನೀಡಿದ್ದಾರೆ. ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರುಗಳಿಗೆ ವಿನಂತಿಸಿಕೊಂಡಾಗ ಅನಿವಾರ್ಯವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಬೇಕಾಗಿರುತ್ತದೆ. ಅಂತಹ ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಕೆಲವು ಅಧಿಕಾರಿಗಳು ಸ್ವೀಕರಿಸದೇ ಇರುವುದು ಹಾಗೂ ಒಂದು ವೇಳೆ ಆ ಸಮಯದಲ್ಲಿ ಬೇರೆ ತುರ್ತು ಕಾರ್ಯದಲ್ಲಿ ನಿರತರಾಗಿದ್ದಲ್ಲಿ ತದನಂತರ ಸೌಜನ್ಯಕ್ಕಾದರೂ ಮರು ಕರೆ ಮಾಡದೆ ಇರುವುದು…

Read More

ಬೆಂಗಳೂರು: ವ್ಯಕ್ತಿಯೋರ್ವ ವಿಧಾನಸೌಧದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪೊಲೀಸರು ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದಾರೆ. ಬಾಂಗ್ಲಾ ಅಕ್ರಮ ವಲಸಿಗರನ್ನು ಬಯಲಿಗೆಳೆದಿದ್ದಕ್ಕೆ ಪೊಲೀಸರು ಕಿರುಕುಳ ನೀಡಿದ್ದಾರೆಂದು ವ್ಯಕ್ತಿ ಆರೋಪಿಸಿದ್ದಾರೆ. ಇಂದು ಬೆಳಗ್ಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವೈದ್ಯರ ಪ್ರಕಾರ ಡಾ. ನಾಗೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಬಯಲಿಗೆಳೆದಿದ್ದಕ್ಕೆ ಪೊಲೀಸರು ಕಿರುಕುಳ ನೀಡಿದ್ದರು ಎಂದು ಆರೋಪಿಸಿ ಡಾ. ನಾಗೇಂದ್ರಪ್ಪ ಅವರು ವಿಧಾನಸೌಧದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದು ಬಂದಿದೆ. ಡಾ. ನಾಗೇಂದ್ರಪ್ಪ ಮತ್ತು ಪುನೀತ್ ಕೆರೆಹಳ್ಳಿ ಇಬ್ಬರೂ ನಗರದಲ್ಲಿ ಅಕ್ರಮ ಬಾಂಗ್ಲಾ ನಿವಾಸಿಗಳನ್ನು ತೋರಿಸಿದ್ದರು. ಹೀಗಾಗಿ ದೂರು ನೀಡಿದವರ ವಿರುದ್ಧವೇ ಪ್ರಕರಣ ದಾಖಲಾಗಿತ್ತು. ನಂತರ ಸೂಲದೇವನಹಳ್ಳಿ ಪೊಲೀಸರಿಂದ ನಿರಂತರ ಕಿರುಕುಳ ಅನುಭವಿಸುತ್ತಿದ್ದ ಅವರು ಮನನೊಂದು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Read More

ವಾಷಿಂಗ್ಟನ್‌: ಇತ್ತೀಚೆಗಷ್ಟೇ ಅಮೆರಿಕ ಭಾರತ ಸೇರಿ ಹಲವು ರಾಷ್ಟ್ರಗಳ ವಿರುದ್ಧ ತೆರಿಗೆ ಸಮರ ಸಾರಿತ್ತು. ಇದಕ್ಕೆ ಭಾರತ ತಕ್ಕ ಉತ್ತರ ನೀಡಿತ್ತು. ಅಮೆರಿಕದಿಂದ (India – USA) ಆಮದಾಗುವ ದ್ವಿದಳ ಧಾನ್ಯಗಳ ಮೇಲೆ ಶೇ. 30ರಷ್ಟು ತೆರಿಗೆ ವಿಧಿಸಿತ್ತು. ಹೀಗಾಗಿ ಪೆಟ್ಟು ತಿಂದ ಅಮೆರಿಕ, ಭಾರತದ ಪ್ರತ್ಯುತ್ತರಕ್ಕೆ ಬೆದರಿದೆ. ಹೀಗಾಗಿ ಭಾರತದ ವಸ್ತುಗಳ ಮೇಲೆ ಇದ್ದ ಶೇ. 25ರಷ್ಟು ಹೆಚ್ಚುವರಿ ಸುಂಕ ತೆಗೆದು ಹಾಕಲು ನಿರ್ಧರಿಸಿದೆ ಎನ್ನಲಾಗಿದೆ. ಭಾರತದ ಮೇಲೆ ವಿಧಿಸಲಾದ ಶೇ.25ರಷ್ಟು ಹೆಚ್ಚುವರಿ ಸುಂಕವನ್ನು (Tarrifs) ತೆಗೆದುಹಾಕಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ತಯಾರಿ ನಡೆಸಿದ್ದಾರೆ ಎಂದು ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್‌ ಹೇಳಿದ್ದಾರೆ. ಭಾರತದ ಮೇಲೆ ಶೇ. 50ರಷ್ಟು ( ಶೇ.25 ಹೆಚ್ಚುವರಿ) ಸುಂಕ ವಿಧಿಸಿದಾಗಿನಿಂದ ರಷ್ಯಾದಿಂದ ತೈಲ ಖರೀದಿಸುವುದು ಗಮನಾರ್ಹವಾಗಿ ಕಡಿಮೆಯಾಗಿದೆ. ಶೇ. 50 ಸುಂಕ ಇದ್ದು, ಇದು ಶಾಶ್ವತವಾಗಿ ಇರುವುದಿಲ್ಲ ಎಂದು ಹೇಳಿದ್ದಾರೆ. ಭಾರತದ ಮೇಲೆ ವಿಧಿಸಲಾದ ಶೇ. 25 ಹೆಚ್ಚುವರಿ ಸುಂಕವನ್ನು…

Read More

ಟಿ20 ಕ್ರಿಕೆಟ್​ನಲ್ಲಿ ಭಾರತೀಯ ಆಟಗಾರರು ಭರ್ಜರಿ ದಾಖಲೆಯೊಂದನ್ನು ಬರೆದಿದ್ದಾರೆ. ಶತ್ರು ತಂಡ ಪಾಕಿಸ್ತಾನ್‌ದ ದಾಖಲೆ ಮುರಿಯುವುದರ ಮೂಲಕ ಭಾರತೀಯ ತಂಡ (Team India) ಹೊಸ ದಾಖಲೆ ಬರೆದಿದೆ. ರಾಯ್​ಪುರ್​ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 20 ಓವರ್‌ಗಳಲ್ಲಿ 208 ರನ್ ಗಳಿಸಿತ್ತು. ಕಠಿಣ ಗುರಿ ಬೆನ್ನತ್ತಿದ ಭಾರತ ತಂಡ, ಉತ್ತಮ ಆರಂಭ ಪಡೆದಿರಲಿಲ್ಲ. ಮೊದಲ ಎರಡು ಓವರ್ ಗಳಲ್ಲೇ ಎರಡು ವಿಕೆಟ್ ಗಳನ್ನು ಭಾರತ ತಂಡ ಕಳೆದುಕೊಂಡು ಹೀನಾಯ ಸ್ಥಿತಿಯಲ್ಲಿತ್ತು. ಆ ವೇಳೆ ಮೈದಾನಕ್ಕೆ ಬಂದ ಇಶಾನ್ ಕಿಶನ್ 32 ಎಸೆತಗಳಲ್ಲಿ 11 ಫೋರ್ ಹಾಗೂ 4 ಸಿಕ್ಸರ್​ಗಳೊಂದಿಗೆ 76 ರನ್ ಗಳಿಸಿ ಪಂದ್ಯದ ಚಿತ್ರಣವನ್ನೇ ಬದಲಿಸಿದರು. ಇಶಾನ್ ಕಿಶಾನ್ ಔಟ್ ಆಗುತ್ತಿದ್ದಂತೆ ಆರ್ಭಟ ಆರಂಭಿಸಿದ ನಾಯಕ ಸೂರ್ಯಕುಮಾರ್ ಯಾದವ್ 37 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 82 ರನ್ ಗಳಿಸಿ, ಗೆಲುವಿನ ಗುರಿ ಮುಟ್ಟಿದ್ದರು. ಇಬ್ಬರ ಈ ಸ್ಫೋಟಕ…

Read More

ಹುಬ್ಬಳ್ಳಿ: ನಗರದ ಮಂಟೂರು ರಸ್ತೆಯಲ್ಲಿ ಇಂದು ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದಲ್ಲಿ ಅವಘಡವೊಂದು ನಡೆದಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿಬಿದ್ದು (Cutout Broken) ಮೂವರು ಗಾಯಗೊಂಡಿದ್ದಾರೆ. ಕಾಂಗ್ರೆಸ್‌ನಿಂದ (Congress) ಕಾರ್ಯಕ್ರಮ ನಡೆಯುವ ಜಾಗದ ಸುತ್ತಮುತ್ತ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ನಾಯಕರ ಕಟೌಟ್ ಅಳವಡಿಸಲಾಗಿತ್ತು. ಸಿಎಂ ಮತ್ತು ಸಚಿವ ಜಮೀರ್ ಅವರ ಕಟೌಟ್‌ಗಳು ಮುರಿದು ಬಿದ್ದು ಅದರ ಕೆಳಗಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ಮಹಿಳೆ ಕೂಡ ಘಟನೆಯಲ್ಲಿ ಗಾಯಗೊಂಡಿದ್ದು, ಅವರನ್ನು ಶಾರದಾ ಕ್ಯಾರಕಟ್ಟಿ ಎಂದು ಗುರುತಿಸಲಾಗಿದೆ. ಮನೆ ಕೇಳಲೆಂದು ಮಗ ಶಶಿಕಾಂತ ಕ್ಯಾರಕಟ್ಟಿ ಜೊತೆಗೆ ಬಂದಿದ್ದರು. ಮಗನಿಗೆ ಯಾವುದೇ ಗಾಯಗಳಾಗಿಲ್ಲ ಎನ್ನಲಾಗಿದೆ. ಸಿಎಂ ಕುರ್ಚಿ ಫೈಟ್ ಮಧ್ಯೆ ಈ ಘಟನೆ ನಡೆದಿದ್ದು, ಹಲವರು ಹಲವು ರೀತಿ ಮಾತನಾಡಿಕೊಳ್ಳುತ್ತಿದ್ದಾರೆ.

Read More

ರಾಯಚೂರು: ಸ್ನೇಹಿತನನ್ನು ಬೈದಿದ್ದನ್ನು ಪ್ರಶ್ನಿಸಿದ ವ್ಯಕ್ತಿಯನ್ನೇ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.ಈ ಘಟನೆ ರಾಯಚೂರಿನ (Raichuru) ಜಹೀರಾಬಾದ್‌ ನ ಮಾವಿನ ಕೆರೆ ಹತ್ತಿರ ನಡೆದಿದೆ. 22 ವರ್ಷದ ವಿಶಾಲ್ ಕೊಲೆಯಾಗಿರುವ ಯುವಕ. ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ರಾಜು ಹಾಗೂ ಬಸವರಾಜ್ ಕೊಲೆ ಮಾಡಿದ್ದಾರೆಂದು ತಿಳಿದು ಬಂದಿದೆ. ಶುಕ್ರವಾರ (ಜ.23) ತಡರಾತ್ರಿ 1 ಗಂಟೆ ವೇಳೆಗೆ ಹತ್ಯೆಗೊಳಗಾದ ಯುವಕ ತನ್ನ ಸ್ನೇಹಿತನನ್ನು ಬೈದಿದ್ದಕ್ಕೆ ಆರೋಪಿಗಳಿಗೆ ಪ್ರಶ್ನೆ ಮಾಡಿದ್ದಾನೆ. ಆಗ ಆರೋಪಿಗಳು ಹಾಗೂ ವ್ಯಕ್ತಿಯ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತೆರಳಿ, ಆರೋಪಿಗಳಿಬ್ಬರು ವಿಶಾಲ್ ನನ್ನು ಮನಬಂದಂತೆ ಥಳಿಸಿ, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಕುರಿತು ಸದರ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಳ್ಳಾರಿ: ಜಿಲ್ಲೆಯಲ್ಲಿ (Ballari) ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ (Janardhan Reddy) ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣ ದೊಡ್ಡ ಆತಂಕ ಮತ್ತು ಅನುಮಾನಗಳಿಗೆ ಕಾರಣವಾಗಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆಲವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 6 ಅಪ್ರಾಪ್ತರು ಸೇರಿದಂತೆ ಒಟ್ಟು 8 ಜನರನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಳ್ಳಾರಿಯ ಕೌಲ್‌ಬಜಾರ್ ಪ್ರದೇಶದ ನಿವಾಸಿಗಳಾದ 8 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮಾಡುತ್ತಿರುವ ವೇಳೆ ಅಜಾಗರೂಕತೆಯಿಂದ ಅಥವಾ ದುರುದ್ದೇಶದಿಂದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ರುಕ್ಮಿಣಿ ಅವೆನ್ಯೂ ಲೇಔಟ್‌ನಲ್ಲಿರುವ ಸೈಟ್ ಇಂಜಿನಿಯರ್ ರಿಜ್ವಾನ್, ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶುಕ್ರವಾರ 20 ರಿಂದ 25 ವರ್ಷ ವಯಸ್ಸಿನ 8 ರಿಂದ 10 ಜನ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು ಎಂದು ತಿಳಿದು ಬಂದಿದೆ. ಇದು…

Read More

ಬೆಂಗಳೂರು: ರಾಜ್ಯ ಸರ್ಕಾರವು ಇಲ್ಲಿಯವರೆಗೆ ಎಸ್ಸೆಸ್ಸೆಲ್ಸಿ ಟಾಪರ್ ಗಳಿಗೆ ಲ್ಯಾಪ್ ಟಾಪ್ ನೀಡುತ್ತಿತ್ತು. ಆದರೆ, ಇನ್ನು ಮುಂದೆ ಟಾಪರ್‌ಗಳಿಗೆ ಲ್ಯಾಪ್‌ಟಾಪ್‌ ಬದಲಿಗೆ ನಗದು ಬಹುಮಾನ (Cash Prize) ನೀಡಲು ನಿರ್ಧರಿಸಿದೆ. ಈ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಪ್ರತಿ ಜಿಲ್ಲೆಯಲ್ಲಿ ಅಗ್ರ ಸ್ಥಾನ ಪಡೆದ ಟಾಪ್-3 ವಿದ್ಯಾರ್ಥಿಗಳ ಆಧಾರ್ ಲಿಂಕ್ಡ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಪ್ರತಿ ವಿದ್ಯಾರ್ಥಿಗೆ 50 ಸಾವಿರ ರೂ. ನಗದು ನೀಡಲಾಗುವುದು. 2024-25ನೇ ಶೈಕ್ಷಣಿಕ ವರ್ಷದಲ್ಲಿ 758 ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (SSP) ಮೂಲಕ ನಗದು ಬಹುಮಾನಕ್ಕೆ ಅರ್ಹರಾಗಿದ್ದಾರೆ. ‘ಗುಣಮಟ್ಟದ ಭರವಸೆ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಉಪಕ್ರಮ’ ಯೋಜನೆಯಡಿ ಸುಮಾರು 325 ಲಕ್ಷ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಇಲಾಖೆ ಹೇಳಿದೆ. ಮಕ್ಕಳ ದಿನಾಚರಣೆಯಂದು ಸಿಎಂ ಸಿದ್ದರಾಮಯ್ಯ ಈ ವಿಚಾರ ಘೋಷಿಸಿದ್ದರು. ಈಗ ಈ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಬಹುಮಾನವನ್ನು ಹೇಗೆ ಬಳಸಿಕೊಳ್ಳಬೇಕೆಂಬ ಸ್ವಾತಂತ್ರ್ಯ ವಿದ್ಯಾರ್ಥಿಗಳಿಗೆ ನೀಡಬೇಕು ಎಂಬ ಕಾರಣಕ್ಕೆ ಈ…

Read More

ಬೆಂಗಳೂರು: ಇತ್ತೀಚೆಗೆ ರಾಜ್ಯದಲ್ಲಿ ಭ್ರೂಣ ಹತ್ಯೆಯಂತಹ ಅಮಾನವೀಯ ಘಟನೆಗಳು ಹೆಚ್ಚಾಗಿ ಕೇಳಿ ಬರುತ್ತಿದ್ದವು. ಹೀಗಾಗಿ ಪ್ರಜ್ಞಾವಂತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ದಿಟ್ಟ ನಿರ್ಧಾರವೊಂದನ್ನು ತೆಗೆದುಕೊಂಡಿದೆ.ಭ್ರೂಣ ಹತ್ಯೆ (Female Foeticide) ತಡೆಗಟ್ಟುವುದಕ್ಕಾಗಿ ಸರ್ಕಾರವು, ಭ್ರೂಣ ಹತ್ಯೆ ಬಗ್ಗೆ ಮಾಹಿತಿ ಕೊಡುವ ಸಾರ್ವಜನಿಕರಿಗೆ ನಗದು ಬಹುಮಾನ ನೀಡುವುದಕ್ಕೆ ಮುಂದಾಗಿದೆ. ಮಾಹಿತಿ ನೀಡಿದವರಿಗೆ 50 ಸಾವಿರ ರೂ.ನಿಂದ 1 ಲಕ್ಷ ರೂ. ವರೆಗೆ ಹೆಚ್ಚಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಕುರಿತು ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಅಂಗವಾಗಿ ಆರೋಗ್ಯ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು. ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಜಾರಿಗೆ ತಂದಿದೆ. ಹೆಣ್ಣು ಮಗು ತನ್ನ ಕುಟುಂಬ ಅಥವಾ ಸಮಾಜಕ್ಕೆ ಹೊರೆಯಲ್ಲ, ಅವಳು ಶಕ್ತಿ ಮತ್ತು ಚೈತನ್ಯದ ಮೂಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸುಮಾರು ಶೇ. 60ರಷ್ಟು ಮಹಿಳಾ…

Read More