Subscribe to Updates
Get the latest creative news from FooBar about art, design and business.
Author: Bosstv News Desk
ಬೆಂಗಳೂರು: ರಾಜ್ಯದ ಜನರಿಗೆ ತೀವ್ರ ಚಳಿಯ ಅನುಭವವಾಗುತ್ತಿದೆ. 5 ಜಿಲ್ಲೆಗಳಿಗಂತೂ ಹೆಚ್ಚಿನ ಚಳಿ ಇರಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಶೀತದ ಅಲೆಯ (Karnataka Weather Forecast) ಪ್ರಭಾವ ಹೆಚ್ಚಾಗಿದ್ದರಿಂದಾಗಿ ಜನಜೀವನ ಗಢಗಢ ನಡಗುತ್ತಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಇದೆ. ಇಂದು ಕಲಬುರಗಿ, ರಾಯಚೂರು ಸೇರಿದಂತೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange alert)ಘೋಷಿಸಿರುವ ಇಲಾಖೆ, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ…
ಗುವಾಹಟಿ: ಆನೆಗಳ ಹಿಂಡಿಗೆ ರೈಲು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಪರಿಣಾಮ 8 ಆನೆಗಳು ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. ಈ ಘಟನೆ ಆಸ್ಸಾಂನ ಹೊಜೈ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಸಾಯಿರಾಂಗ್ ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್ ಆನೆ(Elephant)ಗಳ ಹಿಂಡಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಲ್ಲದೇ, ಈ ಘಟನೆಯಿಂದಾಗಿ ಐದು ಬೋಗಿಗಳು ಕೂಡ ಹಳಿ ತಪ್ಪಿರುವ ಕುರಿತು ವರದಿಯಾಗಿದೆ. ಹೀಗಾಗಿ ರೈಲು ಸೇವೆ ಅಸ್ತವ್ಯಸ್ತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ ಎನ್ನಲಾಗಿದೆ. ಈ ಕುರಿತು ನಾಗಾಂವ್ ವಿಭಾಗೀಯ ಅರಣ್ಯ ಅಧಿಕಾರಿ ಸುಹಾಶ್ ಕದಮ್ ಪಿಟಿಐಗೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಕಾರ್ಯಾಚರಣೆ ನಡೆದಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ರೈಲು ಅಧಿಕಾರಿಗಳು, ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಸಾಯಿರಂಗ್ ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್ ಮಿಜೋರಾಂನ ಸಾಯಿರಾಂಗ್ ಅನ್ನು ಐಜ್ವಾಲ್ ಬಳಿ ದೆಹಲಿಯ ಆನಂದ್ ವಿಹಾರ್ ಟರ್ಮಿನಲ್‌ನೊಂದಿಗೆ ಸಂಪರ್ಕಿಸುತ್ತದೆ. ಅಪಘಾತ ಸ್ಥಳವು ಗುವಾಹಟಿಯಿಂದ ಸುಮಾರು 126 ಕಿ.ಮೀ ದೂರದಲ್ಲಿ ಇದೆ. ಹಳಿಗಳ ಮೇಲೆ ಹಿಂಡು ಇರುವುದನ್ನು ಗಮನಿಸಿದ್ದ…
ಬೆಂಗಳೂರು: ಬಡವರ ಪಾಲಿಗೆ ಧಕ್ಕಬೇಕಾಗಿದ್ದ ಅನ್ನಭಾಗ್ಯ ಅಕ್ಕಿ (Anna Bhagya Rice) ದಂಧೆಕೋರರ ಖಜಾನೆ ಸೇರುತ್ತಿದ್ದು, ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಕಾಂಗ್ರೆಸ್ ಮುಖಂಡನ ವಿರುದ್ಧ ಕೇಸ್ ದಾಖಲಾಗಿದೆ. ಯಲಚೇನಹಳ್ಳಿ ಕಾಂಗ್ರೆಸ್ (Congress) ಮುಖಂಡ ಅಲೀಮ್ ಎಂಬಾತನ ವಿರುದ್ಧವೇ ಕೇಸ್ ದಾಖಲಾಗಿದೆ. ಅಲೀಮ್, ಬಿಪಿಎಲ್ ಕಾರ್ಡ್ ಇದ್ದವರಿಂದ ಕಡಿಮೆ ಬೆಲೆಗೆ ಅಕ್ಕಿ ಖರೀದಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಎಂದು ಕೆಆರ್ಎಸ್ ಪಾರ್ಟಿ ಆರೋಪ ಮಾಡಿದೆ. ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಸಂದರ್ಭದಲ್ಲೇ ದಾಳಿ ಮಾಡಿದ ಕೆಆರ್ ಎಸ್ ಮುಖಂಡರು ಅಕ್ಕಿ ಸಮೇತ ವಾಹನವನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೆಆರ್ಎಸ್ ಪಕ್ಷದ ಮುಖಂಡನ ಮನೆ ಸುತ್ತಮುತ್ತ ಅಲೀಮ್, ಹುಡುಗರನ್ನು ಬಿಟ್ಟು ಹಲ್ಲೆ ಮಾಡಲು ಯತ್ನಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ಸೀಜ್ ಮಾಡಲಾದ ಟೆಂಪೋದಲ್ಲಿ 45 ಚೀಲ ಅಕ್ಕಿ ಮೂಟೆಗಳು ಪತ್ತೆಯಾಗಿವೆ ಎನ್ನಲಾಗಿದೆ. ಬಿಡಿಎ ಕಚೇರಿಗಳಲ್ಲಿ ದಲ್ಲಾಳಿಯಾಗಿಯೂ ಅಲೀಮ್ ತನ್ನ ಕೈ ಚಳಕ ತೋರಿಸುತ್ತಿದ್ದ ಎನ್ನಲಾಗಿದೆ. ಈಗ ಅಲೀಮ್ ಸೇರಿ…
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಎಂಬಲ್ಲಿ ನಡೆದಿದೆ. ಬೊಲೆರೋ ಹಾಗೂ ಬಲ್ಕರ್ ವಾಹನಗಳ ಮಧ್ಯೆ ಈ ಅಪಘಾತ ಸಂಭವಿಸಿದೆ. ಬೊಲೆರೋ ಹಾಗೂ ಬಲ್ಕರ್ ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಜಕ್ಕೇನೆಹಳ್ಳಿ ಮೂಲದ 25 ವರ್ಷದ ಅಶೋಕ್ ಸಾವನ್ನಪ್ಪಿದ್ದಾರೆ. ಅಲ್ಲದೇ, ಆಂಧ್ರದ ಸಂಜೀವರಾಯನಪಲ್ಲಿ ನಿವಾಸಿ ನಾಗರಾಜಪ್ಪ ಸಾವನ್ನಪ್ಪಿದ್ದಾರೆ. ಬಲ್ಕರ್ ಲಾರಿಯು ಗೌರಿಬಿದನೂರು ಹಿಂದೂಪುರ ಕಡೆಯಿಂದ ಬೆಂಗಳೂರಿಗೆ ಬರುತಿತ್ತು ಎನ್ನಲಾಗಿದ್ದು, ಬೆಂಗಳೂರಿನಿಂದ ಗೌರಿಬಿದನೂರು ಕಡೆಗೆ ಬರುತಿದ್ದ ಬುಲೆರೊ ವಾಹನಕ್ಕೆ ಡಿಕ್ಕಿಯಾಗಿದೆ. ಸ್ಥಳಕ್ಕೆ ಮಂಚೆನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚರ್ಚೆಗಳು ನಡೆದಿದ್ದು, ಉತ್ತರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರವು ಒಟ್ಟು 3,450 ಕೋಟಿ ರೂ. ಬಿಡುಗಡೆಯಾಗಿದೆ. ಉತ್ತರ ಕರ್ನಾಟಕದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ಕೂಡ ನೀಡಿದೆ. ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುದಾನ ಹಂಚಿಕೆ ಮಾಡಲಾಗಿದೆ. ಏತ ನೀರಾವರಿ ಯೋಜನೆಗೆ 210 ಕೋಟಿ ರೂ. ಬಿಡುಗಡೆ (ಬೆಳಗಾವಿ ಜಿಲ್ಲೆಯ ರಾಯಬಾಗ ಹಾಗೂ ಚಿಕ್ಕೋಡಿ ತಾಲೂಕುಗಳಲ್ಲಿ ಬಾಧಿತ ಅಚ್ಚುಕಟ್ಟಿಗೆ ಕೃಷ್ಣಾ ನದಿಯಿಂದ ನೀರು ಎತ್ತಿ, ರಾಯಬಾಗ ಉನ್ನತಮಟ್ಟದ ವಿತರಣಾ ಕಾಲುವೆ (RHLD) ಮತ್ತು ರಾಯಬಾಗ ವಿತರಣಾ ಕಾಲುವೆಗಳಿಗೆ ನೀರು ಹರಿಸುವ ಯೋಜನೆ) ಯಾಗಿದೆ. ಕೆರೂರು ಏತ ನೀರಾವರಿ ಯೋಜನೆಗೆ 1,503 ಕೋಟಿ ರೂ. ಬಿಡುಗಡೆಯಾಗಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತ್ತು ಬೀಳಗಿ ಮತಕ್ಷೇತ್ರ ವ್ಯಾಪ್ತಿಯಲ್ಲಿನ ಕೆರೂರು ಏತ ನೀರಾವರಿ ಯೋಜನೆಗೆ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ.ಶ್ರೀ ಕರಸಿದ್ದೇಶ್ವರ ಏತ ನೀರಾವರಿ ಯೋಜನೆಗೆ…
ಬೆಂಗಳೂರು: ಇದೇ ತಿಂಗಳು ಕ್ರಿಸ್ ಮಸ್ ಸೇರಿದಂತೆ ವಿಶೇಷ ಹಬ್ಬಗಳು ಇರುವ ಹಿನ್ನೆಲೆಯಲ್ಲಿ ಸಾವಿರಕ್ಕೂ ಅಧಿಕ ವಿಶೇಷ ಬಸ್ ಗಳನ್ನು ರೋಡಿಗೆ ಇಳಿಸಲು ರಾಜ್ಯ ಸಾರಿಗೆ ಸಂಸ್ಥೆ ನಿರ್ಧರಿಸಿದೆ. ಇಂದಿನಿಂದ ಡಿ. 28ರ ವರೆಗೆ ಬಸ್ ಗಳು ಸಂಚಾರ ನಡೆಸಲಿವೆ. ಕ್ರಿಸ್‌ಮಸ್ (Christmas) ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ಬಸ್ ಗಳ ಬೇಡಿಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 1000ಕ್ಕೂ ಅಧಿಕ ವಿಶೇಷ ಬಸ್ ಗಳು ಸಂಚರಿಸಲಿವೆ. ಅಲ್ಲದೇ, ಡಿ.19, ಡಿ.20 ಹಾಗೂ ಡಿ.24ರಂದು ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಮಂಗಳೂರು, ಉಡುಪಿ, ಮಡಿಕೇರಿ, ಹಾಸನ, ಮೈಸೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಕಲಬುರಗಿ, ರಾಯಚೂರು, ಬೀದರ್ ಸೇರಿದಂತೆ ಹಲವು ನಗರಗಳಿಗೆ ವಿಶೇಷ ಬಸ್ ಸಂಚಾರ ನಡೆಯಲಿದೆ. ಡಿ.26 ಹಾಗೂ 28ರಂದು ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ವಿಶೇಷ ಬಸ್ ಸೌಲಭ್ಯ ದೊರೆಯಲಿದೆ. ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಯಾಣಿಕರು ಸಂಚರಿಸುವುದರಿಂದಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಆದರೆ, ದರಗಳಲ್ಲಿ ಯಾವುದೇ ಬದಲಾವಣೆ…
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ (Gold Smuggling) ಪ್ರಕರಣದಲ್ಲಿ ನಟಿ ರನ್ಯಾ ರಾವ್ (Ranya Rao) ಜೈಲು ಹಕ್ಕಿಯಾಗಿದ್ದಾರೆ. ಈ ಮಧ್ಯೆ ಅವರ ವಿರುದ್ಧ ದಾಖಲಾಗಿದ್ದ ಕಾಫಿಪೋಸಾ (Coffeeposa) ಆದೇಶ ಪ್ರಶ್ನಿಸಿದ್ದರು. ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈ ಕೋರ್ಟ್ ಅರ್ಜಿಯನ್ನು ವಜಾ ಗೊಳಿಸಿದೆ. ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಡಿಆರ್‌ಐ ಅಧಿಕಾರಿಗಳು (DRI Officers) ನಟಿ ರನ್ಯಾ ರಾವ್ ರನ್ನು ಬಂಧಿಸಿದ್ದರು. ಆನಂತರ ನಟಿ ಪರಪ್ಪನ ಅಗ್ರಹಾರ ಸೇರಿದ್ದರು. ಆನಂತರ ಡಿಆರ್ ಐ ಅಧಿಕಾರಿಗಳು, ರನ್ಯಾ ರಾವ್ ಜಾಮೀನು ಪಡೆಯದಂತೆ ಕಾಫಿಪೋಸಾ ಕಾಯ್ದೆಯನ್ನು ವಿಧಿಸಿತ್ತು. ಇದರಿಂದಾಗಿ ಒಂದು ವರ್ಷ ಜೈಲಿನಲ್ಲಿಯೇ ಇರಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿತ್ತು. ಹೀಗಾಗಿ ಈ ಆದೇಶವನ್ನು ಪ್ರಶ್ನಿಸಿ ರನ್ಯಾ ಕೋರ್ಟ್ ಮೆಟ್ಟಿಲೇರಿದ್ದರು. ಈಗ ಕೋರ್ಟ್ ಅರ್ಜಿ ವಜಾಗೊಳಿಸಿದ್ದರಿಂದಾಗಿ ರನ್ಯಾರಾವ್ ಜೊತೆಗೆ ನಾಲ್ವರು ಆರೋಪಿಗಳು ಇನ್ನೂ ಒಂದು ವರ್ಷ ಜೈಲಿನಲ್ಲಿಯೇ ಉಳಿಯಬೇಕಾಗಿದೆ. ಈಗಾಗಲೇ ಡಿಆರ್ ಐ ಅಧಿಕಾರಿಗಳು, ರನ್ಯಾ ರಾವ್‌ಗೆ ಸಂಬಂಧಿಸಿದ…
ಮುಷ್ತಾಕ್ ಅಲಿ ಟ್ರೋಫಿಗೆ ಜಾರ್ಖಂಡ್ ತಂಡ ಮೊದಲ ಬಾರಿಗೆ ಕಪ್ ಗೆ ಮುತ್ತಿಕ್ಕಿದೆ. ನಾಯಕ ಇಶಾನ್ ಕಿಶನ್ ತೋರಿಸಿದ ಭರ್ಜರಿ ಪ್ರದರ್ಶನದಿಂದಾಗಿ ಕಪ್ ಗೆಲ್ಲುವಂತಾಗಿದೆ. ಫೈನಲ್‌ನಲ್ಲಿ ಹರಿಯಾಣ ತಂಡವನ್ನು ಜಾರ್ಖಂಡ್ 69 ರನ್ ಗಳಿಂದ ಸೋಲಿಸಿದೆ. ಇಶಾನ್ ಕಿಶನ್ ಕೇವಲ 45 ಎಸೆತಗಳಲ್ಲಿ ಬರೋಬ್ಬರಿ 101 ರನ್ ಗಳಿಸಿ ತಂಡದ ಗೆಲುವಿನಲ್ಲಿ ಶ್ರಮ ವಹಿಸಿದರು. ಈಶಾನ್ ಕಿಶನ್ ಅವರ ಶತಕದ ನೆರವಿನಿಂದಾಗಿ ಜಾರ್ಖಂಡ್ ತಂಡ ಬರೋಬ್ಬರಿ 262 ರನ್ ಗಳಿಸುವಂತಾಯಿತು. ಗುರಿ ಬೆನ್ನಟ್ಟಲು ವಿಫಲವಾದ ಹರಿಯಾಣ ತಂಡ ಸೋಲೋಪ್ಪಿಕೊಂಡಿತು. ಅನುಕುಲ್ ರಾಯ್ ಅವರ ಆಲ್‌ರೌಂಡ್ ಪ್ರದರ್ಶನ ಕೂಡ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು. ಈ ಮೂಲಕ ಜಾರ್ಖಂಡ್ ತಂಡ ಐತಿಹಾಸಿಕ ಜಯ ಸಾಧಿಸಿತು. ಇನ್ನು ಶತಕ ಸಿಡಿಸಿದ ಇಶಾನ್ ಕಿಶನ್(Ishan Kishan) ಅವರ ತಂಡ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ (Syed Mushtaq Ali Trophy) ಹೊಸ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಜಾರ್ಖಂಡ್ ತಂಡವು 262…
ಹುಬ್ಬಳ್ಳಿ: ಪಾಲಕರು ಬುದ್ಧಿವಾದ ಹೇಳಿದ್ದಕ್ಕೆ ಅಪ್ರಾಪ್ತ ಬಾಲಕ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಈ ಘಟನೆ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದ 16 ವರ್ಷದ ಅರುಣಗೌಡ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಅರುಣಗೌಡ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಪಾಲಕರು, ಮೊಬೈಲ್ (mobile) ಬಿಟ್ಟು ಓದಿನ ಕಡೆ ಗಮನಹರಿಸು ಎಂದು ಬುದ್ಧಿವಾದ ಹೇಳಿದ್ದಾರೆ. ಇದಕ್ಕೆ ಮನನೊಂದ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಆತ ಡಿಸೆಂಬರ್ 16ರಂದು ಕ್ರಿಮಿನಾಶಕ ಸೇವಿಸಿದ್ದ ಎನ್ನಲಾಗಿದೆ. ಕೂಡಲೇ ಪಾಲಕರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಾವನ್ನಪ್ಪಿದ್ದಾನೆ. ಈ ಕುರಿತು ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಅಯ್ಯಪ್ಪ ಮಾಲೆ ಧರಿಸುವುದು ಧಾರ್ಮಿಕ ಆಚರಣೆಯ ಒಂದು ಭಾಗ. ಇತ್ತೀಚೆಗೆ ಮಾಲೆ ಧರಿಸುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಆದರೆ, ಇದರ ಮಧ್ಯೆ ಧಾರ್ಮಿಕ ಭಾವನೆಗಳಿಗೆ ಭಂಗ ತರುತ್ತಿರುವ ಘಟನೆಗಳು ಕೂಡ ವರದಿಯಾಗುತ್ತಿವೆ. ಚಿಕ್ಕಮಗಳೂರಿನ (Chikkamgaluru) MES ಪಿಯು ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ತರಗತಿಗೆ ಬಂದಿದ್ದಕ್ಕೆ ಪ್ರಿನ್ಸಿಪಾಲ್ ವಿರೋಧ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಅಲ್ಲದೇ, ಮಾಲಾಧಾರಿ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ನಗರದ ಸಂತ ಜೋಸೆಫ್ ಶಾಲೆಯಲ್ಲಿ ಅಯ್ಯಪ್ಪ ಮಾಲೆ ಧರಿಸಿ ಶಾಲೆಗೆ ಬಂದಿದ್ದ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿಯನ್ನು ಶಿಕ್ಷಕರು ಹೊಡೆದು ಶಾಲೆಯಿಂದ ಹೊರ ಕಳಿಸಿದ್ದಾರೆ ಎಂದು ಮಕ್ಕಳು ಮತ್ತು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ಭಜರಂಗದಳ ಕಾರ್ಯಕರ್ತರು ಹಾಗೂ ನೂರಾರು ಅಯ್ಯಪ್ಪ ಮಾಲಾಧಾರಿಗಳು ಈ ಘಟನೆ ಖಂಡಿಸಿದ್ದಾರೆ. ಅಲ್ಲದೇ, ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ. ಪ್ರತಿಭಟನೆ ನಂತರ ಶಾಲಾ ಆಡಳಿತ ಮಂಡಳಿ ಅಯ್ಯಪ್ಪ ಮಾಲಾಧಾರಿಗಳ ಬಳಿ ಕ್ಷಮೆ ಯಾಚಿಸಿದೆ.…