Subscribe to Updates
Get the latest creative news from FooBar about art, design and business.
Author: Bosstv News Desk
ಹಾಸನ: ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಸಾರಿಗೆ ಸಂಸ್ಥೆಯ ಚೆಕ್ಕಿಂಗ್ ಇನ್ಸ್ ಪೆಕ್ಟರ್ ಬಲಿಯಾಗಿರುವ ಘಟನೆ ನಡೆದಿದೆ. ಶಕುನಿಗೌಡ (57) ಸಾವನ್ನಪ್ಪಿದ ದುರ್ದೈವಿ ಎನ್ನಲಾಗಿದೆ. ಆಲೂರು (Aluru) ತಾಲೂಕಿನ ಪಾಳ್ಯ ಹತ್ತಿರ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಾರಿಗೆ ಬಸ್ ತಡೆದು ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವುದಕ್ಕಾಗಿ ಶಕುನಿಗೌಡ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕ್ಯಾಂಟರ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿ ವಾಹನ ನಿಲ್ಲಿಸದೆ ಚಾಲಕನು ವಾಹನ ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವನಹಳ್ಳಿ: ಸ್ವಾಮೀಜಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳದ ಆರೋಪವೊಂದು ಕೇಳಿ ಬಂದಿದೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ತಾಲ್ಲೂಕಿನ ಮೆಳೆಕೋಟೆಯಲ್ಲಿನ ಮಹರ್ಷಿ ವಾಲ್ಮೀಕಿ ಗುರುಕುಲ ಪೀಠದ ಬ್ರಹ್ಮಾನಂದ ಗುರೂಜಿ ವಿರುದ್ಧ ಇಂತಹ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಸೈಟ್ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂ. ಹಣ ಪಡೆದು, ಮರಳಿ ಕೇಳಿದರೆ ಕೊಡುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಮಹಿಳೆ ಆರೋಪ ಮಾಡಿದ್ದಾರೆ. ಸಂತ್ರಸ್ತ ಮಹಿಳೆ ತನ್ನ ಪತಿಯೊಂದಿಗೆ ಸ್ವಾಮೀಜಿಯ ನಿವಾಸದ ಹತ್ತಿರ ವಾಸಿಸುತ್ತಿದ್ದಾರೆ ಎನ್ನಲಾಗಿದೆ. 13 ಲಕ್ಷ ರೂ. ಮೌಲ್ಯದ ಸೈಟ್ ನ್ನು 12 ಲಕ್ಷಕ್ಕೆ ಕೊಡಿಸುವುದಾಗಿ ಸ್ವಾಮೀಜಿ ನಂಬಿಸಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ. ಆಗ ನನ್ನ ಬಳಿ ಕೇವಲ 8 ಲಕ್ಷ ರೂ. ಇದೆ ಎಂದು ಹೇಳಿದಾಗ, ನಾನು ಸಹಾಯ ಮಾಡುತ್ತೇನೆಂದು ಸ್ವಾಮೀಜಿ ಹೇಳಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ. ಆಗ ಸ್ವಾಮೀಜಿ ಮಹಿಳೆಯಿಂದ 5 ಲಕ್ಷ ರೂ.ವನ್ನು ಬೇರೊಬ್ಬರಿಗೆ ಕೊಡಿಸಿದ್ದಾರೆ. ವರ್ಷ ಕಳೆದರೂ ಸೈಟ್ ನೀಡಿದ್ದಕ್ಕೆ ಮಹಿಳೆ…
ಬೆಂಗಳೂರು: ಗಿಳಿ ರಕ್ಷಿಸಲು ಹೋಗಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿದ್ಯುತ್ ತಗುಲಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಬೆಂಗಳೂರಿನ (Bengaluru) ಗಿರಿನಗರದ (Girinagar) ಅಪಾರ್ಟ್ಮೆಂಟ್ ಬಳಿ ನಡೆದಿದೆ. ಅರುಣ್ ಕುಮಾರ್ (23) ಸಾವನ್ನಪ್ಪಿರುವ ದುರ್ದೈವಿ ಎನ್ನಲಾಗಿದೆ. ಅಪಾರ್ಟ್ಮೆಂಟ್ ಒಳಗಿನ ಹೈಟೆನ್ಸನ್ ವೈರ್ ಕಂಬದ ಮೇಲೆ ಕುಳಿತಿದ್ದ ಗಿಳಿ ರಕ್ಷಿಸಲು ಹೋಗಿದ್ದ ವೇಳೆ ಸಾವನ್ನಪ್ಪಿದ್ದಾನೆ. ಕಾಂಪೌಂಡ್ ಮೇಲೆ ನಿಂತು ಸ್ಟೀಲ್ ಪೈಪ್‌ಗೆ ಕಡ್ಡಿ ಕಟ್ಟಿಕೊಂಡು ಕಂಬದ ಮೇಲೆ ಕುಳಿತಿದ್ದ ಗಿಳಿ ಓಡಿಸಲು ಪ್ರಯತ್ನಿಸಿದ್ದಾರೆ. ಆಗ 66 ಸಾವಿರ ಕೆವಿ ವೈರ್‌ನಿಂದ ಶಾಕ್ ತಗುಲಿದ್ದು, ಅರುಣ್ ಕೆಳಗೆ ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಅರುಣ್‌ನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನ ನಡೆಸಿದ್ದಾರೆ. ಈ ಕುರಿತು ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ: ರಾಜ್ಯ ಸರ್ಕಾರವು ಅಧಿಕಾರಕ್ಕೂ ಮುನ್ನ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅಧಿಕಾರಕ್ಕೆ ಏರಿದ ನಂತರ ಅವುಗಳನ್ನು ಜಾರಿ ಮಾಡಿದೆ. ಈ ಪೈಕಿ ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ (gruhalakshmi scheme) ಕೂಡ ಒಂದಾಗಿದೆ. ಆದರೆ, ಕಳೆದ ಕೆಲವು ತಿಂಗಳುಗಳಿಂದ ಯಜಮಾನಿಗೆ ಹಣ ಸಂದಾಯವಾಗಿಲ್ಲ. ಈ ಕುರಿತು ಶಾಸಕರ ಸದನದಲ್ಲಿ ಗಮನ ಸೆಳೆದಿದ್ದಾರೆ. ಮಹಿಳೆಯರ ಖಾತೆಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ. ಈ ಕುರಿತು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳು ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ತಪ್ಪು ಲೆಕ್ಕಾ ಕೊಟ್ಟಿದ್ದಾರೆ ಎನ್ನುವ ಆರೋಪ ಕೂಡ ಮಾಡಲಾಗಿದೆ. ಗೃಹ ಲಕ್ಷ್ಮೀ ಹಣವನ್ನು ಆಗಸ್ಟ್ ತಿಂಗಳವರೆಗೂ ನೀಡಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ. ಆಗಸ್ಟ್ ವರೆಗೂ ಹಣ ಬಿಡುಗಡೆ ಮಾಡಿಲ್ಲ. ಈ ಕುರಿತು ಮಹೇಶ್ ಟೆಂಗಿನಕಾಯಿ ಸದನದಲ್ಲಿಂದು ಸರ್ಕಾರದ ಅಧಿಕೃತ ದಾಖಲೆ ಬಿಡುಗಡೆ ಮಾಡಿದ್ದು, ಫೆಬ್ರವರಿ,…
ನವದೆಹಲಿ: ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಈಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ (Paris Olympics) 150 ಗ್ರಾಂ ಹೆಚ್ಚುವರಿ ತೂಕದಿಂದಾಗಿ ಪದಕದಿಂದ ವಂಚಿತರಾಗಿ ಬೇಸರದಲ್ಲಿ ವೃತ್ತಿ ಜೀವನಕ್ಕೆ ವಿನೇಶ್ ಫೋಗಟ್ ನಿವೃತ್ತಿ ಹೇಳಿದ್ದರು. ಈಗ ಮತ್ತೆ ನಿವೃತ್ತಿ ಹಿಂಪಡೆದು ಮತ್ತೆ ಅಖಾಡಕ್ಕೆ ಧುಮಕಲು ಮುಂದಾಗಿದ್ದಾರೆ. 2028 ರ ಲಾಸ್‌ಏಂಜಲೀಸ್ ಒಲಿಂಪಿಕ್ಸ್ (2028 LA Olympics)ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್ ತಯಾರಿ ನಡೆಸಿದ್ದಾರೆ. ಈ ಕುರಿತು ಸ್ವತಃ ಅವರೇ ಮಾಹಿತಿ ನೀಡಿದ್ದಾರೆ. ಪ್ಯಾರಿಸ್ ಬಳಿಕ ಎಲ್ಲವೂ ಮುಗಿಯಿತೇ ಎಂದು ಜನರು ಕೇಳುತ್ತಲೇ ಇದ್ದರು. ಅಂತಹ ಪ್ರಶ್ನೆಗಳಿಗೆ ನನ್ನ ಬಳಿ ಉತ್ತರವಿರಲಿಲ್ಲ. ಒತ್ತಡ, ನಿರೀಕ್ಷೆ ಮತ್ತು ನನ್ನದೇ ಮಹತ್ವಾಕಾಂಕ್ಷೆಗಳಿಂದ ದೂರ ಸರಿದು ನಾನು ನನ್ನನ್ನೇ ಹುಡುಕಿಕೊಳ್ಳಬೇಕಾಯಿತು. ವರ್ಷದ ನಂತರ ನಾನು ಸುಧಾರಿಸಿಕೊಂಡಿದ್ದೇನೆ. ಮೌನದ ಮಧ್ಯೆ ನಾನು ಈ ಕ್ರೀಡೆಯನ್ನು ಇನ್ನೂ ಪ್ರೀತಿಸುತ್ತೇನೆ ಎಂದು ನನಗೆ ಸ್ಪಷ್ಟವಾಯಿತು ಎಂದು ವಿನೇಶ್ ತಿಳಿಸಿದ್ದಾರೆ. ʻಬೆಂಕಿ…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ವಿದೇಶ ಪ್ರವಾಸಕ್ಕೆ ಸಜ್ಜಾಗಿದ್ದಾರೆ. ಸೋಮವಾರದಿಂದ ನಾಲ್ಕು ದಿನಗಳ ಕಾಲ ವಿದೇಶಿ ಪ್ರವಾಸ ಮಾಡಲಿರುವ ಪ್ರಧಾನಿ ಮೋದಿ, ಜೋರ್ಡಾನ್, ಇಥಿಯೋಪಿಯಾ ಮತ್ತು ಓಮನ್ ದೇಶಗಳಿಗೆ ಭೇಟಿ ನೀಡಲಿದ್ದಾರೆ. ದ್ವಿಪಕ್ಷೀಯ ಸಂಬಂಧಗಳನ್ನು, ವಿಶೇಷವಾಗಿ ವ್ಯಾಪಾರ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಬಲಪಡಿಸುವುದು ಉದ್ಧೇಶವಾಗಿದೆ. ಡಿ. 15 ಹಾಗೂ 16ರ ವರೆಗೆ ಜೋರ್ಡಾನ್‌ಗೆ ಭೇಟಿ ನೀಡಲಿದ್ದಾರೆ. ರಾಜ ಎರಡನೇ ಅಬ್ದುಲ್ಲಾ ಬಿನ್ ಅಲ್-ಹುಸೇನ್ ಅವರ ಆಹ್ವಾನದ ಮೇರೆಗೆ ದ್ವಿಪಕ್ಷೀಯ ಸಂಬಂಧಗಳ ಸಮಗ್ರ ಪರಿಶೀಲನೆ ನಡೆಸಲಿದ್ದಾರೆ. ಪ್ರಾದೇಶಿಕ ಸಮಸ್ಯೆಗಳ ಕುರಿತು ಕೂಡ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಭಾರತ-ಜೋರ್ಡಾನ್ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸಲು, ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಹೊಸ ಸಹಕಾರದ ಮಾರ್ಗಗಳನ್ನು ಅನ್ವೇಷಿಸಲು, ಮತ್ತು ಪ್ರಾದೇಶಿಕ ಶಾಂತಿ, ಭದ್ರತೆ ಹಾಗೂ ಸ್ಥಿರತೆಯನ್ನು ಉತ್ತೇಜಿಸುವ ನವದೆಹಲಿಯ ಬದ್ಧತೆಯನ್ನು ಪುನರುಚ್ಚರಿಸಲು ಈ ಭೇಟಿ ಒಂದು ಅವಕಾಶ ಎಂದು ವಿದೇಶಾಂಗ ಸಚಿವಾಲಯ (MEA) ಹೇಳಿದೆ. ಡಿ. 16 ರಿಂದ 17 ರವರೆಗೆ ಎರಡು ದಿನಗಳ…
ಬೆಳಗಾವಿ: ಚಳಿಗಾಲದ ಅಧಿವೇಶನ ನಡೆಯುತ್ತಿರುವ ಮಧ್ಯೆಯೂ ಆಡಳಿತ ಪಕ್ಷದಲ್ಲಿ ಕುರ್ಚಿ ಗುದ್ದಾಟ ಮಾತ್ರ ಒಳಒಳಗೆ ಬಹಿರಂಗವಾಗಿಯೇ ನಡೆಯುತ್ತಿದೆ. ಈಗ ಡಿಕೆಶಿಗೆ ಅಧಿವೇಶನ ಮುಗಿಯುತ್ತಿದ್ದಂತೆ ಬಂಪರ್ ಗಿಫ್ಟ್ ಸಿಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿಯೇ ನಾಯಕರು ಬೆಂಬಲಿಗರ ಸಂಖ್ಯಾಬಲ ತೋರಿಸುವ ಕಾರ್ಯ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಬುಧವಾರ ರಾತ್ರಿ ಸಿಎಂ ಸಿದ್ದರಾಮಯ್ಯ (CM Siddaramaiah) ಅಹಿಂದ ನಾಯಕರ ಜೊತೆ ಸಭೆ ನಡೆಸಿದ್ದರು. ಬುಧವಾರ ರಾತ್ರಿ ಮಾಜಿ ಶಾಸಕ ಫಿರೋಜ್ ಸೇಠ್ ನಿವಾಸದಲ್ಲಿ ನಡೆದ ಭೋಜನಕೂಟದಲ್ಲಿ ಸಿಎಂ ಭಾಗವಹಿಸಿದ್ದರು. ಇದರ ಬೆನ್ನಲ್ಲೇ ಗುರುವಾರ ರಾತ್ರಿ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಆಪ್ತರ ಸಭೆ ನಡೆಸಿದ್ದಾರೆ. ಆಪ್ತ ಗಣಿ ಉದ್ಯಮಿ ದೊಡ್ಡಣ್ಣವರ್ ಅವರ ಫಾರ್ಮ್ ಹೌಸ್‌ನಲ್ಲಿ ಆಪ್ತ ಸಚಿವರು, ಶಾಸಕರ ಜೊತೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಸಭೆ ನಡೆಸಿದ್ದಾರೆ. ಈ ಪಾರ್ಟಿಯನ್ನು ಡಿಕೆಶಿ ಸಹೋದರ ಡಿಕೆ ಸುರೇಶ್ ವ್ಯವಸ್ಥೆ ಮಾಡಿದ್ದರು ಎನ್ನಲಾಗಿದೆ. ಸಭೆಯಲ್ಲಿ 5ಕ್ಕೂ ಹೆಚ್ಚು ಸಚಿವರು, 40ಕ್ಕೂ ಅಧಿಕ…
ಮೊಹಾಲಿ: ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ಆಡುತ್ತಿರುವ ಭಾರತೀಯ ಕ್ರಿಕೆಟ್ ತಂಡ ಮೊದಲ ಪಂದ್ಯವನ್ನು ಭರ್ಜರಿಯಾಗಿ ಗೆದ್ದು ಬೀಗಿತ್ತು. ಆದರೆ, ಎರಡನೇ ಪಂದ್ಯವನ್ನು ಕೈ ಚೆಲ್ಲಿತ್ತು. ಹೀಗಾಗಿ ಮೂರನೇ ಪಂದ್ಯ ಹೆಚ್ಚು ಒತ್ತಡದಿಂದ ಕೂಡಿದ್ದು, ಸ್ಥಿರ ಪ್ರದರ್ಶನ ನೀಡಲು ವಿಫಲವಾಗುತ್ತಿರುವ ಏಕದಿನ ತಂಡದ ನಾಯಕ ಶುಭ್ಮನ್ ಗಿಲ್ ರನ್ನು ಕೈ ಬಿಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ(India vs South Africa) ನಡುವಿನ ಐದು ಪಂದ್ಯಗಳ ಸರಣಿಯ ಮೂರನೇ ಟಿ20ಐ(IND vs SA 3rd T20I) ಭಾನುವಾರ ನಡೆಯಲಿದೆ. ಈ ಪಂದ್ಯದಿಂದ ಶುಭಮನ್ ಗಿಲ್(Shubman Gill) ಅವರನ್ನು ಆಡುವ ತಂಡದಿಂದ ಕೈ ಬಿಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತಂಡದ ಉಪನಾಯಕನಾಗಿರುವ ಗಿಲ್, ಮೊದಲ ಪಂದ್ಯದಲ್ಲಿ ಎರಡು ಎಸೆತಗಳಲ್ಲಿ ನಾಲ್ಕು ರನ್ ಗಳಿಸಿ ಔಟ್ ಆಗಿದ್ದರು. ಎರಡನೇ ಪಂದ್ಯದಲ್ಲಿ ಗೋಲ್ಡನ್ ಡಕ್ ಆಗಿದ್ದರು. ಹೀಗಾಗಿ ಗಿಲ್ ಬದಲಾಗಿ ಸಂಜು ಸ್ಯಾಮ್ಸನ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.…
ಚಾಮರಾಜನಗರ: ಮಲೆ ಮಹದೇಶ್ವರನ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, 28 ದಿನಗಳಲ್ಲಿ 2,53,98,859 ರೂ. ಕಾಣಿಕೆ ಹರಿದು ಬಂದಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಸಾಲೂರು ಬೃಹನ್ಮಠಾಧ್ಯಕ್ಷ ಶಾಂತಮಲ್ಲಿಕಾರ್ಜುನ ಸ್ವಾಮಿ ಸಾನಿಧ್ಯದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಕರ್ನಾಟಕ ಆರ್ಥಿಕ ಸೇವೆಯ ಹಿರಿಯ ಶ್ರೇಣಿ ಅಧಿಕಾರಿ (Senior Officer) ರಘು ನೇತೃತ್ವದಲ್ಲಿ ಎಣಿಕೆ ಕಾರ್ಯ (Counting) ನಡೆಯಿತು. 28 ದಿನಗಳಿಂದ ಸಂಗ್ರಹವಾಗಿದ್ದ ಹುಂಡಿ ಹಾಗೂ ಇ ಹುಂಡಿ ಎಣಿಕೆ ಕಾರ್ಯ ಇಂದು ಬೆಳಗ್ಗೆ ಆರಂಭವಾಗಿತ್ತು. ಈ ವೇಳೆ 2.5 ಕೋಟಿ ರೂ.ಗೂ ಅಧಿಕ ಕಾಣಿಕೆ ಬಂದಿದೆ. ಇದರೊಂದಿಗೆ 25 ಗ್ರಾಂ ಚಿನ್ನ ಹಾಗೂ 1.253 ಕೆಜಿ ಬೆಳ್ಳಿ ಬಂದಿದೆ ಎಂದು ಪ್ರಾಧಿಕಾರ ಮಾಹಿತಿ ನೀಡಿದೆ. ಎಣಿಕೆ ಕಾರ್ಯದಲ್ಲಿ ಜಿಲ್ಲಾಡಳಿತ ಹಲವಾರು ಅಧಿಕಾರಿಗಳು, ಸಿಬ್ಬಂದಿ ಕೂಡ ಭಾಗವಹಿಸಿದ್ದರು. ಕಾರ್ತಿಕ ಮಾಸ ಇರುವ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರನ ದರ್ಶನಕ್ಕೆ ಹೆಚ್ಚಿನ ಭಕ್ತರು ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಣಿಕೆ ಹೆಚ್ಚು ಸಂಗ್ರಹವಾಗಿದೆ ಎನ್ನಲಾಗಿದೆ.
ಬೆಂಗಳೂರು: ಕಾಂಗ್ರೆಸ್ ನಾಯಕ ಎಚ್.ಎಂ. ರೇವಣ್ಣ ಅವರ ಪುತ್ರ ಇದ್ದ ಕಾರು ಅಪಘಾತವಾಗಿದ್ದು, ಓರ್ವ ಯುವಕ ಬಲಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಘಟನೆ ಬುಧವಾರ ರಾತ್ರಿ ನಡೆದಿದ್ದು, ಗುಡೆಮಾರೇನಹಳ್ಳಿ ಟೋಲ್ ಹತ್ತಿರ ಕಾರು ಅಪಘಾತವಾಗಿದೆ. ಬೈಕ್ ನಲ್ಲಿ ಹೋಗುತ್ತಿದ್ದ ಬೈಕ್ ಗೆ ಕಾರು ಡಿಕ್ಕಿಯಾದ ಪರಿಣಾಮ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ರಾಜೇಶ್ ಬಿ.ಜಿ. ಸಾವನ್ನಪ್ಪಿದ ದುರ್ದೈವಿ ಎಂದು ತಿಳಿದು ಬಂದಿದೆ. ರಾಜೇಶ್ ಮಾಗಡಿ ತಾಲೂಕಿನ ಬೆಳಗುಂಬ ಗ್ರಾಮದ ನಿವಾಸಿ ಎನ್ನಲಾಗಿದೆ. ಅವರು ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸಾವನ್ನಪ್ಪಿರುವ ರಾಜೇಶ್, ದಾಬಸ್ ಪೇಟೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಫಾರ್ಚುನರ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆಯುತ್ತಿದ್ದಂತೆ, ಕಾರಿನಲ್ಲಿದ್ದವರು ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾರೆ. ಆ ವೇಳೆ ಸ್ಥಳೀಯರು ಕಾರು ಬೆನ್ನಟ್ಟಿ ನಿಲ್ಲಿಸಿದ್ದಾರೆ. ಫಾರ್ಚೂನರ್ ಕಾರಿನಲ್ಲಿ ರೆವಣ್ಣ ಅವರ ಮಗ ಶಶಾಂಕ್, ಹೆಂಡತಿ, ಮಗು, ವಯಸ್ಸಾದ ವ್ಯಕ್ತಿಯಿದ್ದರು ಎನ್ನಲಾಗಿದೆ. ಬೈಕ್ ಗಳನ್ನು ಓವರ್ ಟೇಕ್ ಮಾಡಲು ಹೋಗಿ ಕಾರು ಡಿಕ್ಕಿಯಾಗಿದೆ ಎನ್ನಲಾಗಿದೆ. ಆ…