Author: Bosstv News Desk

ನವದೆಹಲಿ: ಮಾರುಕಟ್ಟೆಗಳಲ್ಲಿ 10 ರೂ. 20 ರೂ. ಮೌಲ್ಯದ ನಾಣ್ಯಗಳನ್ನು ನೀಡಿದರೆ ಹಲವರು ಇಂದಿಗೂ ತೆಗೆದುಕೊಳ್ಳುವುದಿಲ್ಲ. ಅದರಲ್ಲೂ 50 ಪೈಸೆಯ ನಾಣ್ಯ ಸಂಪೂರ್ಣವಾಗಿ ನಿಷೇಧವಾಗಿದೆ ಎಂದೇ ಎಲ್ಲರೂ ನಂಬಿದ್ದಾರೆ. ಈ ಗೊಂದಲಗಳ ಹಿನ್ನೆಲೆಯಲ್ಲಿ ಆರ್ ಬಿಐ ಸ್ಪಷ್ಟನೆಯೊಂದನ್ನು ನೀಡಿದೆ. 50 ಪೈಸೆಯಿಂದ ಹಿಡಿದು 20 ರೂ.ವರೆಗಿನ ನಾಣ್ಯಗಳು ಕಾನೂನು ಬದ್ಧವಾಗಿ ಚಲಾವಣೆಯಲ್ಲಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದೆ. ಹೀಗಾಗಿ ನಾಣ್ಯಗಳ ವಿಷಯದಲ್ಲಿ ಜಾಗೃತಿ ಮೂಡಿಸಲು ಮುಂದಾಗಿದೆ. “ಆರ್‌ಬಿಐ ಕೆಹ್ತಾ ಹೈ” ಎಂಬ ಬ್ಯಾನರ್ ಅಡಿಯಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿದೆ. ಅಲ್ಲದೇ, ಜನರಿಗೆ ಸಂದೇಶಗಳನ್ನು ಕಳುಹಿಸುವುದರ ಮೂಲಕವು ಜಾಗೃತಿ ಮೂಡಿಸುತ್ತಿದೆ. ಈಗಾಗಲೇ ನಾಣ್ಯಗಳ ಚಲಾವಣೆಯ ವಿಷಯದ ಕುರಿತು ಎರಡು ವಿಡಿಯೋಗಳನ್ನು ಆರ್ ಬಿಐ ಬಿಡುಗಡೆ ಮಾಡಿದೆ. ಬಿಡುಗಡೆ ಮಾಡಿರುವ ವಿಡಿಯೋಗಳಲ್ಲಿ ಅಂಗಡಿ ಮಾಲೀಕರು ನಾಣ್ಯ ಸ್ವೀಕರಿಸದೇ ಇರುವುದನ್ನು ತೋರಿಸಲಾಗಿದೆ. ಅದೇ ರೀತಿ ವಿಡಿಯೋ ಕೊನೆಯಲ್ಲಿ ಓರ್ವ ಅಂಗಡಿ ಮಾಲೀಕ ನಾಣ್ಯ ಸ್ವೀಕರಿಸುವುದನ್ನು ತೋರಿಸುವ ಮೂಲಕ ನಾಣ್ಯಗಳು ಇನ್ನೂ ಮಾನ್ಯವಾಗಿವೆ ಮತ್ತು ಚಾಲ್ತಿಯಲ್ಲಿವೆ.…

Read More

ಬಳ್ಳಾರಿ: ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಮಗನ ವಿರುದ್ಧವೂ ಭೂ ಕಬಳಿಕೆಯ ಆರೋಪ ಕೇಳಿ ಬಂದಿದ್ದು, ಮತ್ತೆ ರೆಡ್ಡಿ ಮನೆಯಲ್ಲಿ ಆತಂಕ ಶುರುವಾಗಿದೆ. ಕಿರೀಟಿ ರೆಡ್ಡಿ ವಿರುದ್ಧ ಭೂಕಬಳಿಕೆ ಆರೋಪ ಕೇಳಿ ಬಂದಿದೆ. ಗಂಗಾವತಿ (Gangavathi) ಶಾಸಕ ಜನಾರ್ದನ ರೆಡ್ಡಿ (Janardhan Reddy) ಪುತ್ರನ ಮೇಲೆ ಬಹುಕೋಟಿ ಮೌಲ್ಯದ ಭೂ ಕಬಳಿಕೆ (Land grabbing)ಯ ಆರೋಪ ಕೇಳಿ ಬಂದಿದೆ. 100 ಕೋಟಿ ರೂ. ಮೌಲ್ಯದ ಸುಮಾರು 9 ಎಕರೆ ಭೂಮಿ ಕಬಳಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿಯ ಗೋವರ್ಧನ ಎಂಬುವವರು ಧಾರವಾಡ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಸಿಐಡಿ ಅಥವಾ ಎಸ್ ಐಟಿ ತನಿಖೆಗೆ ವಹಿಸಿದ್ದಾರೆ. ಕಿರೀಟಿ ರೆಡ್ಡಿ ಹಾಗೂ ಕೆಲವರ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಈ ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. 2005ರಲ್ಲಿ ಕಿರಿಟಿ ಸೇರಿದಂತೆ ಮಂಜುನಾಥ್ ಹಾಗೂ ಬಿ. ಸೀನ ಎಂಬವರು ಭೂಮಿ ಪಡೆದಿದ್ದಾರೆ.…

Read More

ದಾವಣಗೆರೆ: ಯುವಕನೋರ್ವ ಸರ್ಕಾರಿ ಕೆಲಸ ಸಿಕ್ಕಿಲ್ಲ ಎಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಗುಡ್ಡದಲಿಂಗಣ್ಣನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಅಂಜಿನಪ್ಪ(26) ಆತ್ಮಹತ್ಯೆಗೆ ಶರಣಾಗಿರುವ ಯುವಕ ಎನ್ನಲಾಗಿದೆ. ಪದವಿ ಮುಗಿಸಿ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿದರೂ ಯಾವುದೇ ಸರ್ಕಾರಿ ಕೆಲಸ ಸಿಕ್ಕಿಲ್ಲ ಎಂದ ಮನನೊಂದು ಅಂಜಿನಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಗಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆ ಮನೆಯವರು ರೂಮ್ ಬಾಗಿಲು ಬಡಿದು ನೋಡಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಅಂಜಿನಪ್ಪ ಪದವಿ ಪೂರೈಸಿದ ನಂತರ ಸರ್ಕಾರಿ ನೌಕರಿ ಪಡೆಯುವುದಕ್ಕಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದ ಎನ್ನಲಾಗಿದೆ. ಹೀಗಾಗಿ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿದ್ದ. ಇದಕ್ಕಾಗಿ ಸಾಕಷ್ಟು ತಯಾರಿ ಕೂಡ ಮಾಡಿಕೊಂಡಿದ್ದ. ಮನೆಯಲ್ಲಿನ ತನ್ನ ರೂಮ್ ನಲ್ಲಿ ಯಾವಾಗಲೂ ಓದುತ್ತಿದ್ದ. ಆದರೆ, ಪ್ರಯತ್ನಕ್ಕೆ ಫಲ ಸಿಗಲಿಲ್ಲ ಎಂದು ನೊಂದು ಮಾತನಾಡುತ್ತಿದ್ದ. ಇದರಿಂದ ಬೇಸರಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳದಲ್ಲಿ…

Read More

ಯಾದಗಿರಿ: 1 ಕೋಟಿ ರೂ.ಗೂ ಅಧಿಕ ಮೌಲ್ಯದ ಹತ್ತಿ ಸುಟ್ಟು ಭಸ್ಮವಾಗಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ (Yadagiri) ಜಿಲ್ಲೆಯ ಶಹಾಪುರ (Shahapura) ತಾಲೂಕಿನ ಸಾದ್ಯಪುರ ಹತ್ತಿರ ಈ ಘಟನೆ ನಡೆದಿದೆ. ಸಾದ್ಯಾಪುರ ಗ್ರಾಮದ ಹತ್ತಿರ ಇದ್ದ ಶ್ರೀಲಕ್ಷ್ಮೀ ಬಾಲಾಜಿ ಕಾಟನ್ ಮಿಲ್ ನಲ್ಲಿ ಈ ಘಟನೆ ನಡೆದಿದೆ. ಈ ಮಿಲ್ ಸಾಹೇಲ್ ಎಂಬುವವರಿಗೆ ಸೇರಿದ್ದು ಎನ್ನಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಬೆಂಕಿಯಿಂದಾಗಿ 60 ಟನ್ ಗೂ ಅಧಿಕ ಕಾಟನ್ ಬೆಂಕಿಗೆ ಆಹುತಿಯಾಗಿದೆ. ಕಾಟನ್ ಮಿಲ್‌ ನಲ್ಲಿ ಶಾರ್ಟ್ ಸರ್ಕ್ಯೂಟ್‌ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಗೆ ಹತ್ತಿ ಎಲ್ಲ ಸುಟ್ಟು ಭಸ್ಮವಾಗಿದೆ. ಅಲ್ಲದೇ, ಮಿಲ್‌ ನಲ್ಲಿದ್ದ ಹಲವು ಯಂತ್ರಗಳು ಸೇರಿದಂತೆ ಇನ್ನಿತರ ವಸ್ತುಗಳು ಕೂಡ ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ, ಭೇಟಿ ನೀಡಿ ನಂದಿಸಲು ಯತ್ನಿಸಿದ್ದಾರೆ.

Read More

ಬೆಳಗಾವಿ: ಈ ವರ್ಷ ರಾಜ್ಯದ 518 ಪ್ರದೇಶಗಳಲ್ಲಿ ಆರೆಸ್ಸೆಸ್ ಪಥ ಸಂಚಲನ ನಡೆದಿದ್ದು, ಎಲ್ಲಿಯೂ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಸರ್ಕಾರ ಹೇಳಿದೆ. ಈ ಬಗ್ಗೆ ಕಾಂಗ್ರೆಸ್ ಸರ್ಕಾರವೇ ಹೇಳಿಕೆ ಕೊಟ್ಟಿದೆ. ಆರೆಸ್ಸೆಸ್ ಪಥ ಸಂಚಲನದ ವೇಳೆ ಎಲ್ಲಿಯೂ ಗಲಾಟೆ, ದೊಂಬಿ ನಡೆದಿಲ್ಲ ಎಂದಿದೆ. ಇತ್ತೀಚೆಗಷ್ಟೇ ಸರ್ಕಾರ ಹಾಗೂ ಆರೆಸ್ಸೆಸ್ ಮಧ್ಯೆ ದೊಡ್ಡ ಸಂಘರ್ಷವೇ ನಡೆದಿತ್ತು. ಸರ್ಕಾರಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ಆರೆಸ್ಸೆಸ್ ಕಾರ್ಯಕ್ರಮ ಹಾಗೂ ಪಥಸಂಚಲನ ನಡೆಸಬಾರದು. ಆರೆಸ್ಸೆಸ್ ಸಂವಿಧಾನ ವಿರೋಧಿ ಚಟುವಟಿಕೆ ನಡೆಸುತ್ತಿದೆ ಎಂದು ಕಾಂಗ್ರೆಸ್ ನ ಕೆಲವು ನಾಯಕರು ಆರೋಪಿಸಿದ್ದರು. ಅದರಲ್ಲೂ ಸಚಿವ ಪ್ರಿಯಾಂಕ್ ಖರ್ಗೆಯಂತೂ ದೊಡ್ಡ ಆರೋಪಗಳನ್ನು ಮಾಡಿದ್ದರು. ನಂತರ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯ ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಅವಕಾಶ ನೀಡುವ ವಿಚಾರ ಕೋರ್ಟ್ ಮೆಟ್ಟಿಲೇರಿ, ನಂತರ ಐತಿಹಾಸಿಕ ಪಥಸಂಚಲನ ನಡೆಯಿತು. ಈ ಬಗ್ಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಶಾಸಕ ವಿ. ಸುನೀಲ್ ಕುಮಾರ್ ಪ್ರಶ್ನೆ ಕೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸರ್ಕಾರ, ರಾಜ್ಯದ…

Read More

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಒಂದು ವಾರ ಭಾರೀ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಕೂಡ ಇಂದು ಬೆಳಗ್ಗೆಯಿಂದಲೇ ಹೆಚ್ಚು ಚಳಿ ಇದೆ. ನಗರದಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ, ಹೀಗಾಗಿ ಬೆಂಗಳೂರಿಗೆ ಹವಾಮಾನ ಇಲಾಖೆ ಕೂಡ ಶೀತದ ಅಲೆಯ ಮುನ್ನೆಚ್ಚರಿಕೆ ನೀಡಿತ್ತು. ಮುಂದಿನ ಒಂದು ವಾರ ಬೆಂಗಳೂರು ಅಕ್ಷರಶಃ ನಡುಗಲಿದೆ ಎಂದು ಹವಾಮಾನ ತಜ್ಞರು ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಮಂಜು ಕವಿದಿತ್ತು. ಬೆಳಗ್ಗೆ ದಟ್ಟ ಮಂಜು, ಚಳಿ ಆವರಿಸಿತ್ತು. ನಗರದ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ ಹೆಚ್ಚಲಿದೆ. ಹಗಲು ಹೊತ್ತು ಹೆಚ್ಚಿನ ಉಷ್ಣ ಕಂಡು ಬರಲಿದ್ದು, ಎಲ್ಲೆಡೆ ಒಣಹವೆ ಕಂಡು ಬರಲಿದೆ. ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಇನ್ನುಳಿದಂತೆ ರಾಜ್ಯದ ಇನ್ನಿತರ ಜಿಲ್ಲೆಗಳಲ್ಲಿ ಕೂಡ ಶೀತಗಾಳಿ ಹೆಚ್ಚಾಗಿ ಬೀಸಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ತಜ್ಞರು ಸೂಚಿಸಿದ್ದಾರೆ.

Read More

ಕಾರವಾರ: ಇಲ್ಲಿನ ಜೈಲಿನಲ್ಲಿ ಇತ್ತೀಚೆಗಷ್ಟೇ ಕೈದಿಗಳು ತಂಬಾಕು ಸೇರಿದಂತೆ ಇತರ ಮಾದಕ ವಸ್ತುಗಳ ಬಳಕೆ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಕ್ಕೆ ಜೈಲರ್ ಸೇರಿದಂತೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು. ಇದರ ಬೆನ್ನಲ್ಲೇ ಈಗ ಮತ್ತೆ ಉದ್ಧಟತನ ಮೆರೆದಿದ್ದಾರೆ. ಇಂದು ಕೂಡ ಕೈದಿಗಳು ದಾಂಧಲೆ ಮಾಡಿದ್ದು, ಹಲವು ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಮಂಗಳೂರಿನ ಆರು ಆರೋಪಿಗಳು ಜೈಲಿನಲ್ಲಿ ಗಲಾಟೆ ನಡೆಸಿದ್ದಾರೆ. ಅಲ್ಲದೇ, ಟಿವಿ ಸೇರಿದಂತೆ ಹಲವು ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಆರೋಪಿಗಳ ಪುಂಡಾಟದ ಹಿನ್ನೆಲೆಯಲ್ಲಿ ಕಾರವಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್ ಫಯಾನ್, ಕೌಶಿಕ ನಿಹಾಲ್ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು. ಡಕಾಯಿತಿ ಸೇರಿದಂತೆ 12ಕ್ಕೂ ಅಧಿಕ ಪ್ರಕರಣಗಳಲ್ಲಿ ಹೆಚ್ಚು ಪ್ರಕರಣಗಳಲ್ಲಿ ಈ ರೌಡಿಗಳು ಆರೋಪಿಗಳಾಗಿದ್ದಾರೆ.ಮಂಗಳೂರು ಜೈಲಿನಲ್ಲಿ ಹೆಚ್ಚುವರಿಯಾಗಿದ್ದ ಆರು ಆರೋಪಿಗಳನ್ನು ಕಾರವಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಕಾರವಾರ ಡಿವೈಎಸ್‌ಪಿ ಗಿರೀಶ್ ಜೈಲಿನಲ್ಲಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು: ಬಂಗಾರ ಪ್ರಿಯರಿಗೆ ಕಳೆದ ಕೆಲವು ದಿನಗಳಿಂದಲೂ ಸಂಕಷ್ಟ ಎದುರಾಗುತ್ತಿದೆ. ಚಿನ್ನದ ಬೆಲೆ ಆಕಾಶದೆತ್ತರಕ್ಕೆ ಹಾರಿ ನಿಂತಿದ್ದು, ಯಾವಾಗ ಇಳಿಯುತ್ತದೆ ಎಂದು ಕಾಯ್ದು ನೋಡುತ್ತಿದ್ದಾರೆ. ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ ಗರಿಷ್ಠ 1.30 ಲಕ್ಷ ರೂ.ಗೆ ಬಂದು ನಿಂತಿದೆ. ಇದನ್ನು ಗಮನಿಸಿದರೆ ಸದ್ಯದಲ್ಲೇ 2 ಲಕ್ಷ ರೂ. ಗಡಿಗೆ ಬಂದು ತಲುಪಲಿದೆ ಎನ್ನಲಾಗುತ್ತಿದೆ. ಇಂದು ಕೂಡ ಚಿನ್ನದ ಬೆಲೆಯಲ್ಲಿ 10 ಗ್ರಾಂಗೆ 870 ರೂ. ಏರಿಕೆ ಕಂಡಿದೆ. ಬುಧವಾರ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂಗೆ 13,031 ರೂ. ಆಗಿದೆ. ಇಂದು 24 ಕ್ಯಾರೆಟ್ ನ ಚಿನ್ನದ ಬೆಲೆಯಲ್ಲಿ 87 ರೂ. ಹೆಚ್ಚಳವಾಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,30,310 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 870 ರೂ. ಏರಿಕೆಯಾಗಿದೆ. 22 ಕ್ಯಾರೆಟ್ ನ 1 ಗ್ರಾಂ ಬೆಲೆ 11,945 ರೂ. ಇದ್ದು, 80 ರೂ ಏರಿಕೆ ಆಗಿದೆ. 10 ಗ್ರಾಂ…

Read More

ನಟ ದರ್ಶನ್ ಅಭಿಮಾನಿಗಳಿಗೆ ಪತ್ರ ಬರೆದಿದ್ದು, ಅದನ್ನು ಪತ್ನಿ ವಿಜಯಲಕ್ಷ್ಮೀ ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ಡಿ. 11ರಂದು ಬಿಡುಗಡೆಯಾಗಲಿದೆ. ಹೀಗಾಗಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದ್ದರಿಂದಾಗಿ ಯಾವುದೇ ಅಚಾತುರ್ಯ ನಡೆಯಬಾರದು ಎಂಬ ಕಾರಣಕ್ಕೆ ಅಭಿಮಾನಿಗಳಲ್ಲಿ ಮನವಿ ಮಾಡಿ ಪತ್ರ ಬರೆದಿದ್ದಾರೆ. ನನ್ನ ಹೃದಯದಿಂದ ಈ ಸಂದೇಶ ನಿಮಗೆ ಕಳುಹಿಸುತ್ತಿದ್ದೇನೆ. ವಿಜಿ ನಿಮ್ಮೆಲ್ಲರಿಗೂ ಇದನ್ನು ತಲುಪಿಸುತ್ತಾಳೆ. ನಿಮ್ಮೆಲ್ಲರ ಪ್ರೀತಿ, ಕಾಳಜಿ, ಬೆಂಬಲ, ನನ್ನ ಸಿನಿಮಾ ಪ್ರಚಾರ ಬಗ್ಗೆ ಪ್ರತಿ ಬಾರಿಯೂ ವಿಜಿ ನನಗೆ ತಿಳಿಸುತ್ತಿದ್ದಾಳೆ. ದೂರ ಇದ್ದರೂ ಪ್ರತಿ ಕ್ಷಣವೂ ನಿಮ್ಮ ಉಪಸ್ಥಿತಿಯನ್ನು ನಾನು ಅನುಭವಿಸುತ್ತೇನೆ. ನಾನು ನಿಮಗೆ ಹೇಳಲು ಬಯಸುವುದೇನೆಂದರೆ ದಯವಿಟ್ಟು ಯಾರು ಏನು ಹೇಳಿದರೂ ಚಿಂತಿಸಬೇಡಿ. ಯಾವುದೇ ವದಂತಿ, ನೆಗೆಟಿವಿಟಿ ನಿಮ್ಮ ಹೃದಯವನ್ನು ಅಲುಗಾಡಿಸಲು ಬಿಡಬೇಡಿ’.ನೀವು ನನ್ನ ಶಕ್ತಿ, ನೀವು ನನ್ನ ಕುಟುಂಬ. ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿ ನಾನು ನಿಂತಿದ್ದೇನೆ. ನನ್ನ ಜೀವನದ ಈ…

Read More

ಬೆಳಗಾವಿ: ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತಿದ್ದು, ಇಂದು ಮಹತ್ವದ ವಿಧೇಯಕವೊಂದು ಅಂಗೀಕಾರವಾಗುವ ಸಾಧ್ಯತೆ ಇದೆ. ವಿಧಾನಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಅವರು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮತ್ತು ನಿಯಂತ್ರಣ ವಿಧೇಯಕ-2025ವನ್ನು ಮಂಡಿಸಲಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ಒಪ್ಪಿಗೆ ಪಡೆಯಲಾಗಿತ್ತು. ಅಲ್ಲದೇ, ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿದಂತೆ ಒಟ್ಟು 8 ಮಹತ್ವದ ವಿಧೇಯಕಕ್ಕೆ ಒಪ್ಪಿಗೆ ಸಿಗುವ ಸಾಧ್ಯತೆ ಇದೆ. ಇತ್ತೀಚೆಗೆ ಸುಪ್ರೀಂಕೋರ್ಟ್ ಕೂಡ ದ್ವೇಷ ಭಾಷಣವು ಗಂಭೀರ ಅಪರಾಧ ಎಂದು ಹೇಳಿತ್ತು. ಇದರ ಬೆನ್ನಲ್ಲೇ ಸರ್ಕಾರ ಇಂತಹ ವಿಧೇಯಕ ಅಂಗೀಕಾರಕ್ಕೆ ಮುಂದಾಗಿದೆ. ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ರೆಸಿಡೆನ್ಸ್, ಅಂಗವೈಕಲ್ಯ ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿಯಾಗುವಂತಹ ದ್ವೇಷ ಭಾಷಣವನ್ನು ಯಾರೂ ಮಾಡಿದರೂ ಅದು ಅಪರಾಧ. ಒಂದು ವೇಳೆ ದ್ವೇಷ ಭಾಷಣ…

Read More