Subscribe to Updates
Get the latest creative news from FooBar about art, design and business.
Author: Bosstv News Desk
ಬೆಳಗಾವಿ: ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತಿದ್ದು, ಸರ್ಕಾರದ ವಿರುದ್ಧ ಬೀದಿಗಳಿದಿದ್ದ ಬಿಜೆಪಿ ನಾಯಕರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಸರ್ಕಾರವು ರೈತ ವಿರೋಧಿ ಕಾರ್ಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ರೈತ ಮುಖಂಡರು ಮತ್ತು ಬಿಜೆಪಿ ನಾಯಕರು, ಕಾರ್ಯಕರ್ತರು ಪಾದಯಾತ್ರೆ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಹಲಗಾ ಮಾರ್ಗವಾಗಿ ಸೌಧ ಬಳಿ ಹೊರಟ ಮೆರವಣಿಗೆಯನ್ನು ಪೊಲೀಸರು ತಡೆದರು. ಬಿಜೆಪಿ ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಅಲ್ಲದೇ, ಇದಕ್ಕೂ ಮುನ್ನ ಬಿಜೆಪಿ ನಾಯಕರು ಬೆಳಗಾವಿ ಮಾಲಿನಿ ಗ್ರೌಂಡ್‌ನಲ್ಲಿ ಬಿಜೆಪಿ ನೇತೃತ್ವದಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬಂದಿತು. ರೈತರ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸುವ ಕೆಲಸ ಮಾಡಬೇಕು, ಸರ್ಕಾರ…
ಬೆಳಗಾವಿ: ರಾಜ್ಯದಲ್ಲಿ ಬಿಯರ್ ಪ್ರಿಯರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಹೌದು. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತಿದ್ದು, ಈ ವೇಳೆ ಅಬಕಾರ ಸಚಿವ ಆರ್.ಬಿ. ತಿಮ್ಮಾಪುರ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ಮೊದಲ ದಿನದ ಕಲಾಪದಲ್ಲಿ ಎಂಎಲ್ ಸಿ ಎನ್. ರವಿಕುಮಾರ್ ಅವರು ಸರ್ಕಾರದ ಮುಂದೆ ಪ್ರಶ್ನಿಯೊಂದನ್ನು ಇತ್ತರು. ಸರ್ಕಾರಕ್ಕೆ ಮದ್ಯ ಮಾರಾಟದಿಂದ ಹೆಚ್ಚು ಆದಾಯ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಮದ್ಯ ಪ್ರಿಯರ ಆರೋದ್ಯದ ರಕ್ಷಣೆಗಾಗಿ ಶೇ. 20ರಷ್ಟು ಹಣ ಮೀಸಲಿಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಬಿಜೆಪಿ ಸದಸ್ಯರೂ ಜೊತೆಯಾಗಿ ಧ್ವನಿ ಗೂಡಿಸಿದರು. ಈ ವೇಳೆ ಸಚಿವರು ಅಂಕಿ-ಅಂಶ ಸಮೇತ ಮಾಹಿತಿ ನೀಡಿದರು. ಮದ್ಯಸೇವನೆ ಮಾಡುವವರಿಗೆ ಪ್ರತ್ಯೇಕವಾಗಿ ಅನುದಾನ ಇಡುವುದಕ್ಕೆ ಆಗುವುದಿಲ್ಲ. ಮದ್ಯ ಮಾರಾಟದಿಂದ ಸಂಗ್ರಹವಾಗುವ ಹಣ ಆರೋಗ್ಯ ಇಲಾಖೆಗೂ ಹೋಗುತ್ತದೆ. ಹಲವಾರು ಆರೋಗ್ಯ ಯೋಜನೆಗಳನ್ನು ಜಾರಿಯಲ್ಲಿರುವುದರಿಂದ ಎಲ್ಲರಿಗೂ ಆರೋಗ್ಯ ಸೇವೆ ಲಭಿಸುತ್ತದೆ. ಹೀಗಾಗಿ ಪ್ರತ್ಯೇಕವಾಗಿ ಹಣ ಮೀಸಲು ಇಡಲು ಆಗುವುದಿಲ್ಲ ಎಂದು ಲಿಖಿತವಾಗಿ ಉತ್ತರ…
ಬೆಂಗಳೂರು: ಸಾಲದ ಕಿರುಕುಳಕ್ಕೆ ಬೇಸತ್ತು ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡ ಅಜ್ಜಿಗೆ ಹೃದಯಾಘಾತವಾಗಿರುವ ಘಟನೆ ನಡೆದಿದೆ. ಈ ಘಟನೆ ಸಿಲಿಕಾನ್ ಸಿಟಿ (Bengaluru) ಕೋರಮಂಗಲ (Koramangala) ಬಳಿಯ ತಾವರೆಕೆರೆ (Tavarekere) ಹತ್ತಿರ ನಡೆದಿದೆ. ತಮಿಳುನಾಡಿನ (Tamilnadu) ಧರ್ಮಪುರಿ ಮೂಲದ ಸುಧಾ (38), ಮಗ ಮೋನಿಷ್ (14) ಸಾಲದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಕಣ್ಣಾರೆ ಕಂಡ ಅಜ್ಜಿ ಮುದ್ದಮ್ಮ(68) ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಸುಧಾ, ಬಿರಿಯಾನಿ ಸೆಂಟರ್, ಚಿಪ್ಸ್ ಶಾಪ್ ಹಾಗೂ ಮಿಲ್ಕ್ ಪಾರ್ಲರ್ ನಡೆಸುತ್ತಿದ್ದರು ಎನ್ನಲಾಗಿದೆ. ಮೋನಿಷ್ 7ನೇ ತರಗತಿಯಲ್ಲಿ ಓದುತ್ತಿದ್ದ. ವ್ಯಾಪಾರಕ್ಕೆ ಕೈ ಹಾಕಿದ್ದ ಸುಧಾ ನಷ್ಟ ಅನುಭವಿಸಿದ್ದರು ಎನ್ನಲಾಗಿದೆ. ಹೀಗಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದರಂತೆ. ವ್ಯಾಪಾರ ನಷ್ಟದ ಹಾದಿ ಹಿಡಿಯುತ್ತಿದ್ದಂತೆ ಇತ್ತೀಚೆಗೆ ಅಂಗಡಿಯನ್ನು ಬೇರೆಯವರಿಗೆ ನಡೆಸಲು ಕೊಟ್ಟಿದ್ದರು. ಆದರೆ, ಅಂಗಡಿ ನಡೆಸುತ್ತಿದ್ದ ವ್ಯಕ್ತಿ ಮೂರು ತಿಂಗಳಾದರೂ ಹಣ ನೀಡಿಲ್ಲ ಎನ್ನಲಾಗಿದೆ. ಇದರಿಂದಾಗಿ ಸುಧಾಗೆ ಮತ್ತಷ್ಟು ಸಾಲಗಾರರ ಕಿರುಕುಳವಾಗಿದೆ. ಆದರೆ, ಏಕಾಏಕಿ ಸೋಮವಾರ…
ರಾಮನಗರ: ವ್ಯಕ್ತಿಯೋರ್ವ ಪ್ರೀತಿಯ ಹೆಸರಿನಲ್ಲಿ ಯುವತಿಗೆ ಮೋಸ ಮಾಡಿದ ಪರಿಣಾಮ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ಜಿಲ್ಲೆಯ (Ramanagar) ವಿಭೂತಿಕೆರೆ ಎಂಬಲ್ಲಿ ನಡೆದಿದೆ. ವರ್ಷಿಣಿ(22) ಆತ್ಮಹತ್ಯೆ ಮಾಡಿಕೊಂಡ ಯುವತಿ ಎನ್ನಲಾಗಿದೆ. ಕಾಮುಕನೋರ್ವ ಪ್ರೀತಿ(Love)ಯ ಹೆಸರಿನಲ್ಲಿ ಯುವತಿಯನ್ನು ಲೈಂಗಿಕವಾಗಿ ಬಳಿಸಿಕೊಂಡು ನಂತರ ಮದುವೆಗೆ ನಿರಾಕರಿಸಿದ್ದಾನೆಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಯುವತಿ ಡೆತ್ ನೋಟ್ ಕೂಡ ಬರೆದಿಟ್ಟಿದ್ದಾಳೆ ಎನ್ನಲಾಗಿದೆ. ಕಳೆದ ಎರಡು ವರ್ಷಗಳಿಂದ ವರ್ಷಿಣಿ ಹಾಗೂ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯ ಹೆಸರಿನಲ್ಲಿ ಲೈಂಗಿಕವಾಗಿ ಬಳಸಿಕೊಂಡ ಯುವಕ, ಮದುವೆಗೆ ನಿರಾಕರಿಸಿದ್ದಾನೆ ಎನ್ನಲಾಗಿದೆ. ಹೀಗಾಗಿ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ದೇವರದೊಡ್ಡಿ ಗ್ರಾಮದ ಅಭಿ ಎಂಬ ಯುವಕ ಕಾರಣ ಎಂದು ಬರೆದಿದ್ದಾಳೆ. ಅಭಿ ಪ್ರೀತಿ ಹೆಸರಲ್ಲಿ ಮೋಸ ಮಾಡಿದ್ದಾನೆ. ನನ್ನನ್ನು ಬ್ಲಾಕ್‌ಮೇಲ್ ಮಾಡಿ ಪ್ರಗ್ನೆಂಟ್ ಮಾಡಿ ಬಳಿಕ ಗರ್ಭಪಾತ ಮಾಡಿಸಿದ್ದ. ಹಣ ಹಾಗೂ ಚಿನ್ನದ…
ಪಂಜಾಬ್ : ದೇಶದಲ್ಲಿ ಸಾಲು ಸಾಲು ಸೋಲು ಕಾಣುತ್ತ ತೀವ್ರ ಮುಖಭಂಗಕ್ಕೆ ಒಳಗಾಗುತ್ತಿರುವ ಕಾಂಗ್ರೆಸ್ ಗೆ ಮತ್ತೊಂದು ಮುಖಭಂಗ ಎದುರಾಗಿದೆ. ಈಗ ಭ್ರಷ್ಟಾಚಾರದ ಹೇಳಿಕೆಯಿಂದ ಕಾಂಗ್ರೆಸ್ ತೀವ್ರ ಮುಖಭಂಗ ಎದುರಿಸುತ್ತಿದೆ. ಪಕ್ಷದಲ್ಲಿ ಸಿಎಂ ಆಗಲು 500 ಕೋಟಿ ರೂ. ಸೂಟ್ ಕೇಸ್ ನೀಡಬೇಕೆಂದು ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಪತ್ನಿ ನವಜೋತ್ ಕೌರ್ ಸಿಧು ಹೇಳಿಕೆ ನೀಡಿದ್ದು, ಅದು ದೊಡ್ಡ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ದುಡ್ಡಿದ್ದವರು ಸಿಎಂ ಆಗುತ್ತಾರೆ. ದುಡ್ಡ ಕೊಟ್ಟರೆ ಮಾತ್ರ ಸಿಎಂ ಕುರ್ಚಿಯಲ್ಲಿ ಕೂರಲು ಸಾಧ್ಯ ಎಂಬ ಹೇಳಿಕೆ ನೀಡಿದ ನವಜೋತ್ ಕೌರ್ ಸಿಧು ವಿರುದ್ಧ ಪಂಜಾಬ್ ಕಾಂಗ್ರೆಸ್ ಶಿಸ್ತು ಕ್ರಮ ಕೈಗೊಂಡಿದೆ. ವಿವಾದಿತ ಹೇಳಿಕ ನೀಡಿ ಪಕ್ಷಕ್ಕೆ ತೀವ್ರ ಮುಜುಗರ ಉಂಟು ಮಾಡಿ, ಪಕ್ಷಕ್ಕೆ ಹಿನ್ನಡೆ ಉಂಟು ಮಾಡಲು ಯತ್ನಿಸಿದ್ದಾರೆಂಬ ಕಾರಣಕ್ಕೆ ವಜಾಗೊಳಿಸಲಾಗಿದೆ. ನವಜೋತ್ ಸಿಂಗ್ ಸಿಧುವನ್ನು ತಕ್ಷಣದಿಂದಲೇ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಪಂಜಾಬ್‌ನಲ್ಲಿ ಸದ್ಯ ಆಪ್ ಸರ್ಕಾರವಿದೆ. ಇದಕ್ಕೂ ಮೊದಲು…
ಬೆಂಗಳೂರು: ಜಿಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಂಡಿದ್ದು, ಜೈಲೇ ಗತಿ ಎನ್ನುವಂತಾಗಿದೆ. ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ವಿನಯ್ ಕುಲಕರ್ಣಿ ಅವರ ಅರ್ಜಿ ವಜಾ ಮಾಡಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾ.ಸಂತೋಷ್ ಗಜಾನನ ಭಟ್ ಈ ಆದೇಶ ನೀಡಿದ್ದಾರೆ. ಈ ಮೂಲಕ ವಿನಯ್ ಕುಲಕರ್ಣಿ ಅವರ ಮತ್ತೊಂದು ಪ್ರಯತ್ನ ವಿಫಲವಾಗಿದೆ. 2016ರಲ್ಲಿ ಜಿಪಂ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಈ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ 15ನೇ ಆರೋಪಿಯಾಗಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಜೈಲಿನಲ್ಲಿದ್ದಾರೆ. ಜೈಲಿನಿಂದ ಹೊರ ಬರಲು ಯತ್ನಿಸುತ್ತಿರುವ ಅವರ ಪ್ರಯತ್ನ ಈಗ ಮತ್ತೆ ವಿಫಲವಾಗಿದೆ. ಆದರೆ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 16ನೇ ಆರೋಪಿ ಚಂದ್ರಶೇಖರ ಇಂಡಿ ಅಲಿಯಾಸ್ ಚಂದು ಮಾಮಗೆ ಜಾಮೀನು ಸಿಕ್ಕಿದೆ. ಸಾಕ್ಷಿಗಳ ಮೇಲೆ ಒತ್ತಡ ಹಾಕಿದ್ದ ಆರೋಪದ ಮೇಲೆ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ ಎನ್ನಲಾಗಿದೆ. ಪ್ರಕರಣಕ್ಕೆ…
ನವದೆಹಲಿ: ಚುನಾವಣಾ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. 2023ರ ಚುನಾವಣೆ ಸಂದರ್ಭದಲ್ಲಿ ಚಿತ್ತಾಪುರ (Chittapura) ಮತ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ನೋಟಿಸ್ ನೀಡಲಾಗಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಅಶ್ವತ್ಥರಾಮ್ ರಾಥೋಡ್ ಎಂಬುವವರು ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಹಾಗೂ ಸತೀಶ್ ಚಂತ್ರ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ (Supreme Court) ನೋಟಿಸ್ ಜಾರಿ ಮಾಡಿದೆ. ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ. ಪ್ರಿಯಾಂಕ್ ಖರ್ಗೆ, ಪರಿಶಿಷ್ಟ ಜಾತಿ ಪ್ರಮಾಣ ಪತ್ರದ ಬದಲು ಗ್ರಾಮ ಪಂಚಾಯಿತಿ ಚುನಾವಣೆಗೆ ಸಲ್ಲಿಸಲಾಗುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅಲ್ಲದೇ, 2021ರ ಪ್ರಮಾಣ ಪತ್ರವನ್ನು ಸಲ್ಲಿಸಲಾಗಿದೆ. ಇದರೊಂದಿಗೆ ಶೈಕ್ಷಣಿಕ ಅರ್ಹತೆಗೆ…
ಬೆಂಗಳೂರು: ಆಕಾಶದೆತ್ತರಕ್ಕೆ ಹಾರಾಟ ನಡೆಸುತ್ತಿರುವ ಚಿನ್ನದ ಬೆಲೆ ಕಳೆದ ಕೆಲವು ದಿನಗಳಿಂದ ಏರಿಳಿತ ಕಾಣುತ್ತಿದೆ. ಇಂದು ಮತ್ತೆ ಏರಿಕೆಯ ಹಾದಿ ಹಿಡಿದಿದೆ. 10 ಗ್ರಾಂ ಶುದ್ಧ ಚಿನ್ನದ ಬೆಲೆ 1 ಲಕ್ಷದ 30 ಸಾವಿರ ರೂ. ದಾಟಿದೆ. ಚಿನ್ನದ ಮೇಲಿನ ಹೂಡಿಕೆ ಹೆಚ್ಚಳದಿಂದ ಚಿನ್ನದ ಬೆಲೆ ಭಾರಿ ಏರುತ್ತಿದೆ. ಡಿ. 8ರಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13,042 ರೂ. ಆಗಿದೆ. ಇಂದು ಮತ್ತೆ ಗ್ರಾಂಗೆ 27 ರೂ. ಹೆಚ್ಚಳವಾಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,30,420 ರೂ. ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 270 ರೂ. ಏರಿಕೆ ಕಂಡಿದೆ.22 ಕ್ಯಾರೆಟ್ 1 ಗ್ರಾಂ ಬೆಲೆ 11,955 ರೂ. ಆಗಿದ್ದು, 25 ರೂ. ಏರಿಕೆ ಆಗಿದೆ. 10 ಗ್ರಾಂ ಬೆಲೆ 1,19,550 ರೂಪಾಯಿ ಇದೆ. ಇಂದು 10 ಗ್ರಾಂ ನಲ್ಲಿ 250 ರೂ ಹೆಚ್ಚಳಾಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಇಳಿಕೆ ಕಂಡಿದ್ದು, 1…
ಬೆಂಗಳೂರು: ಕಳೆದ ಐದಾರೂ ದಿನಗಳಿಂದ ದೇಶದಲ್ಲಿ ಇಂಡಿಗೋ (Indigo) ವಿಮಾನಯಾನ ಸಂಸ್ಥೆಯಲ್ಲಿ ಸಮಸ್ಯೆ ಉಂಟಾಗಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಹಲವು ವಿಮಾನಯಾನ ಸಂಸ್ಥೆಗಳು ಭಾರೀ ಲಾಭ ಮಾಡಿಕೊಳ್ಳಲು ಪ್ರಯಾಣಿಕರ ಸುಲಿಗೆಗೆ ಮುಂದಾಗಿವೆ. ಈ ಮಧ್ಯೆ ಕಾಶ್ಮೀರದ ಬಾರಾಮುಲ್ಲಾದಿಂದ ಬೆಂಗಳೂರಿಗೆ 5 ವರ್ಷದ ಬಾಲಕಿ ಥೆನ್ ನಲ್ ಅಶ್ವಿನ್ ಒಬ್ಬಳೇ ಪ್ರಯಾಣಿಸಿದ್ದಾಳೆ. ಈ ಸುದ್ದಿ ಕೇಳಿ ಜನ ಆಶ್ಚರ್ಯ ಪಡುತ್ತಿದ್ದಾರೆ. ಬಾರಾಮುಲ್ಲಾದಿಂದ ಬೆಂಗಳೂರಿಗೆ (Bengaluru) ತನ್ನ ಅಜ್ಜಿಯ ಮನೆಗೆ ಥೆನ್ ನಲ್ ಮಾವ ಆದರ್ಶ್ ಜೊತೆ ಬರಬೇಕಿತ್ತು. ಆದರೆ ಡಿ. 5 ರಂದು ಟಿಕೆಟ್ ಬುಕಿಂಗ್ ಕ್ಯಾನ್ಸಲ್ ಆಗಿತ್ತು. ನಂತರ ಡಿ.6 ರಂದು ಕೂಡ ಟಿಕೆಟ್ ಕ್ಯಾನ್ಸಲ್ ಆಗಿದೆ. ಹೀಗಾಗಿ ಕೇರ್‌ಟೇಕರ್ ಜೊತೆ ಥೆನ್ ನಲ್ ಬೆಂಗಳೂರಿಗೆ ಬಂದಿದ್ದಾಳೆ. ಬಾರಾಮುಲ್ಲಾನಲ್ಲಿ ಹೆಚ್ಚಿನ ಚಳಿಯಿದ್ದು ಮಗುವಿನ ಆರೋಗ್ಯ ಸ್ಥಿತಿ ಹಾಳಾಗಬಾರದೆಂಬ ಕಾರಣಕ್ಕೆ ಕುಟುಂಬಸ್ಥರು ಈ ನಿರ್ಧಾರ ಕೈಗೊಂಡಿದ್ದರು ಎನ್ನಲಾಗಿದೆ.. ಥೆನ್ ನಲ್ ಕರೆದುಕೊಂಡು…
ವಿಜಯಪುರ: ಗಂಡು ಮಗುವಿನ ಆಸೆಗೆ ಇಲ್ಲೊಬ್ಬ ವ್ಯಕ್ತಿ ಪತ್ನಿಯ ತಲೆಯನ್ನೇ ಬೋಳಿಸಿರುವ ಹೀನ ಕೃತ್ಯವೊಂದು ಬೆಳಕಿಗೆ ಬಂದಿದೆ. ಈ ಕೃತ್ಯ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನುಟಗಿ ಗ್ರಾಮದಲ್ಲಿ ನಡೆದಿದೆ. ಪಾಪಿ ಪತಿ ಹಾಗೂ ಆತನ ಕುಟುಂಬಸ್ಥರು ಸೇರಿಕೊಂಡು ಮಾಟಗಾತಿಯೊಬ್ಬರ ಮಾತು ನಂಬಿ ಚಿತ್ರಹಿಂಸೆ ನೀಡಿದ್ದಲ್ಲದೇ, ಮಹಿಳೆಯ ತಲೆಯಲ್ಲಿ ರಕ್ತ ಕಾಣುವಂತೆ ತಲೆ ಬೋಳಿಸಿದ್ದಾರೆ. ಗಂಡು ಮಕ್ಕಳು ಆಗಿಲ್ಲ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಹಲವು ದಿನಗಳ ಹಿಂದೆಯೇ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜ್ಯೋತಿ ದಳವಾಯಿ ಎಂಬ ಮಹಿಳೆಯೇ ಈ ರೀತಿ ಚಿತ್ರ ಹಿಂಸೆ ಅನುಭವಿಸಿದವರು. ಜ್ಯೋತಿ ಕಳೆದ 8 ವರ್ಷಗಳ ಹಿಂದೆ ದುಂಡೇಶ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದರು. ಈ ದಂಪತಿಗೆ ಮೂವರು ಹೆಣ್ಣ ಮಕ್ಕಳಿದ್ದರು. ಆದರೆ, ಪತಿಗೆ ಗಂಡು ಮಗು ಬೇಕಿತ್ತು. ಗಂಡು ಮಗು ಆಗದಿದ್ದ ಕಾರಣ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಚಿತ್ರ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಆತನೊಂದಿಗೆ ಆತನ ತಾಯಿ…