Subscribe to Updates
Get the latest creative news from FooBar about art, design and business.
Author: Bosstv News Desk
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟ ತೀವ್ರ ಚರ್ಚೆಗೆ ಕಾರಣವಾಗಿತ್ತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬಣದ ನಾಯಕರು ಹಲವು ಹೇಳಿಕೆಗಳನ್ನು ಕೂಡ ನೀಡಿದ್ದರು. ತಮ್ಮ ನಾಯಕರ ಬಗ್ಗೆ ಒಲವು ತೋರಿಸಿ ಮಾತನಾಡಿದ್ದರು. ಈ ಮಧ್ಯೆ ಸಿಎಂ ಬಣದಲ್ಲಿ ಗುರುತಿಸಿಕೊಂಡಿದ್ದ ಸತೀಶ್ ಜಾರಕಿಹೊಳಿ ಅವರನ್ನು ಇದೇ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಚರ್ಚೆ ಮಾಡಿದ್ದರು. ಈ ವಿಷಯ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಈಗ ಅದೇ ವಿಚಾರವಾಗಿ ಡಿಕೆಶಿ ಮಾತನಾಡಿದ್ದಾರೆ. ಹೌದು! ನಾನು ಸತೀಶ್ ಜಾರಕಿಹೊಳಿ (Satish Jarkiholi) ಭೇಟಿಯಾಗಿ ಮಾತಾಡಿದ್ದು ನಿಜ. ರಾಜಕಾರಣದಲ್ಲಿ ಬಾಂಧವ್ಯ, ನೆಂಟಸ್ತನ, ಸ್ನೇಹ ಸಂಬಂಧಗಳು ಇರುತ್ತವೆ. ನಾನು ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಆಗಿದ್ದು ನಿಜ. ನಾವಿಬ್ಬರು ಕೊಲೀಗ್‌ಗಳು. ಕ್ಯಾಬಿನೆಟ್‌ನಲ್ಲಿ ಇರುತೇವೆ. ಹಲವು ಬಾರಿ ರಾತ್ರಿ ಊಟ ಹಾಗೂ ಬೆಳಗಿನ ಉಪಹಾರವನ್ನು ಸೇರಿಯೇ ಸೇವಿಸಿದ್ದೇವೆ. ನಾನು ಎಂ.ಬಿ. ಪಾಟೀಲ್ ರಾಜ್ಯದ ಅಭಿವೃದ್ಧಿ ಕುರಿತು ಚರ್ಚೆ ಮಾಡಿದ್ದೇವೆ ಎಂದಿದ್ದಾರೆ. ಪಕ್ಕದ ರಾಜ್ಯಗಳಾದ ಆಂಧ್ರ,…
ಬೆಂಗಳೂರು: ಶಾಲಾ ಮಕ್ಕಳಿಗೆ (School Students) ಭಗವದ್ಗೀತೆ (Bhagavad Gita) ಬೋಧಿಸುವಂತೆ ಕೇಂದ್ರ ಸಚಿವ (Union Minister) ಎಚ್.ಡಿ. ಕುಮಾರಸ್ವಾಮಿ (HD Kumaraswamy) ಮನವಿ ಮಾಡಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಈ ಕುರಿತು ಕೇಂದ್ರ ಶಿಕ್ಷಣ ಸಚಿವ (Union Education Minister) ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಭಾರತೀಯ ಪರಂಪರೆಯ ಧರ್ಮಗ್ರಂಥವಾಗಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಪಠ್ಯದ ಮೂಲಕ ಕಲಿಸಬೇಕು. ಹೀಗಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇನೆ ಎಂದ ಟ್ವೀಟ್ ಮೂಲಕ ತಿಳಿಸಿದ್ದಾರೆ. ನಮ್ಮ ಯುವ ಜನರು ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಪ್ರಜೆಗಳಾಗಿ ರೂಪುಗೊಂಡು ಜಾಗತಿಕವಾಗಿ ಶ್ರೇಷ್ಠರಾಗಲು ಸ್ಫೂರ್ತಿ, ಪ್ರೇರಣೆ ನೀಡುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪಕ್ಕೆ ಅನುಗುಣವಾಗಿ ಭಗವದ್ಗೀತೆ ಬೋಧನೆ ಅಗತ್ಯವಿದೆ. ನಿಷ್ಕಾಮ ಕರ್ಮದ ಕಾಲಾತೀತ ಮೌಲ್ಯಗಳು, ಪ್ರಾಮಾಣಿಕತೆ ಮತ್ತು ನೈತಿಕ ಶಕ್ತಿಯು ರಾಷ್ಟ್ರೀಯ ಶಿಕ್ಷಣ ನೀತಿ (NEP) ಮಲಕನಮೌಲ್ಯಾಧಾರಿತ ಶಿಕ್ಷಣವನ್ನು ಹೆಚ್ಚು…
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಎರಡು ದಿನಗಳ ಕಾಲ ಭಾರತ ಪ್ರವಾಸದಲ್ಲಿದ್ದು, ಇಂದು ಹಲವು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಅಮೇರಿಕಾದ ವಿಪರೀತ ತೆರಿಗೆ, ಚೀನಾದ ಉದ್ಧಟತನ, ಪಾಕಿಸ್ತಾನದ ನರಿ ಬುದ್ಧಿಯ ಮಧ್ಯೆ ರಷ್ಯಾ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡುತ್ತಿರುವುದು ಹಲವು ವಿಷಯಗಳಿಂದ ಪ್ರಾಮುಖ್ಯತೆ ಪಡೆದಿದೆ. ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ 2030ರವರೆಗೆ ಆರ್ಥಿಕ ಸಹಕಾರಕ್ಕೆ ಒಪ್ಪಂದ ಆಗಿದೆ. ಭಾರತ ರಷ್ಯಾ ಬ್ಯುಸಿನೆಸ್ ಫೋರಂ ಸಭೆ (India Russia Business Forum) ಆರಂಭಕ್ಕೆ ಮುನ್ನ ಈ ವಿಷನ್ 2030 ದಾಖಲೆಗೆ ಸಹಿ ಹಾಕಿದ್ದಾರೆ. 2030ರ ವಿಷನ್ ಡಾಕ್ಯುಮೆಂಟ್ನಲ್ಲಿ ಆರ್ಥಿಕ ಸಹಕಾರ ಮುಂದುವರಿಕೆಗೆ ಒಂದು ರೋಡ್ಮ್ಯಾಪ್ ಸಿದ್ಧವಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು, ರಷ್ಯಾ ಅಧ್ಯಕ್ಷರು ಹಾಗೂ ನಾನು ಇಂದು ಬ್ಯುಸಿನೆಸ್ ಫೋರಂನಲ್ಲಿ ಭಾಗಿಯಾಗಲಿದ್ದೇವೆ. ಜಂಟಿಯಾಗಿ ಯೂರಿಯಾ ಉತ್ಪಾದನೆ ಮಾಡಲು ಎರಡೂ ದೇಶಗಳು ಪ್ರಯತ್ನಿಸಲಿವೆ. ಈ ಪ್ಲಾಟ್ಫಾರ್ಮ್ನಿಂದ ನಮ್ಮ ಬ್ಯುಸಿನೆಸ್…
ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಪರಸ್ಪರ ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜಿಸಿ, ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನಿಸಿದರೂ ಒಳ ಬೇಗುದಿ ಮಾತ್ರ ಉರಿಯುತ್ತಿದೆ. ಸಿಎಂ ಹಾಗೂ ಡಿಸಿಎಂ ಬ್ರೇಕ್ ಫಾಸ್ಟ್ ಸಭೆಯ ನಂತರ ಪರಿಸ್ಥಿತಿ ಸರಿಯಾಗಬಹುದು. ಸಿಎಂ ಕುರ್ಚಿಯ ಫೈಟ್ ಇಲ್ಲಿಗೆ ಅಂತ್ಯವಾಗಬಹುದು ಎಂದೇ ಎಲ್ಲರೂ ವ್ಯಾಖ್ಯಾನಿಸಿದ್ದರು. ಆದರೆ, ಬಣಗಳ ಬಡಿದಾಟ ಮಾತ್ರ ಸೇಡು ತೀರಿಸಿಕೊಳ್ಳಲು ಯತ್ನಿಸುತ್ತಲೇ ಇವೆ ಎಂಬುವುದು ರಾಜಕೀಯ ವಲಯದಲ್ಲಿ ಜೋರಾಗಿ ಕೇಳಿ ಬರುತ್ತಿವೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಗಾಂಧಿ – ಗುರು ಸಂವಾದಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾವೇಶದ ಮೂಲಗ ಈ ಬಣಗಳ ಬಡಿದಾಟ ಬಹಿರಂಗವಾಗಿದೆ. ಮಂಗಳೂರಿನ ಉಳ್ಳಾಲದಲ್ಲಿ ನಡೆದಿದ್ದ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ಸಿಎಂ ಆಪ್ತ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಸಿಎಂ ಸತೀಶ್ ಜಾರಕಿಹೊಳಿ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೇರಿದಂತೆ ಆವರ ಆಪ್ತ ವಲಯ ಸಾಥ್…
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಇಂಡಿಗೋ ಸಂಸ್ಥೆಗಳ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಪ್ರಯಾಣಿಕರು ಹಿಡಿಶಾಪ ಹಾಕುವಂತಾಗಿದೆ. ಇದು ಹಲವು ಕ್ಷೇತ್ರಗಳ ಮೇಲೆಯೂ ಪರಿಣಾಮ ಬೀರುತ್ತಿದೆ. ತಾಂತ್ರಿಕ ದೋಷ ಹಾಗೂ ಉದ್ಯೋಗಿಗಳ ಕೊರತೆಯಿಂದಾಗಿ ಇಂದು ಕೂಡ 102 ವಿಮಾನಗಳ ಸಂಚಾರ ರದ್ದಾಗಿದೆ ಎಂದು ತಿಳಿದು ಬಂದಿದೆ. ಇಂದು ಒಟ್ಟು 50 ಡಿಪಾರ್ಚರ್ ಹಾಗೂ 52 ಅರೈವಲ್ ವಿಮಾನಗಳು ರದ್ದಾಗಿವೆ. ಅಲ್ಲದೇ, 30ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ. ಇದರಿಂದಾಗಿ ಪ್ರಯಾಣಿಕರು ಇಂಡಿಗೋ ಸಂಸ್ಥೆಯ ಮೇಲೆ ಹಿಡಿಶಾಪ ಹಾಕುತ್ತಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದಾಗಿ ಟ್ಯಾಕ್ಸಿ ಚಾಲಕರು ಕೂಡ ಪ್ರಯಾಣಿಕರಿಲ್ಲದೆ ಸಂಕಷ್ಟ ಅನುಭವಿಸುವಂತಾಗಿದೆ.ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಗಳ ಬಳಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಎಲ್ಲೆಡೆ ಪೊಲೀಸರು ಸರ್ಪಗಾವಲು ಹಾಕಿದ್ದಾರೆ.
ಬೆಳಗಾವಿ: ಅರ್ಹತೆ ಇದ್ದರೂ ಪಿಎಚ್ ಡಿ ಪದವಿ ನೀಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯವು ವಿದ್ಯಾರ್ಥಿನಿಗೆ ಗುಡ್ ನ್ಯೂಸ್ ನೀಡಿದೆ. ಇತ್ತೀಚೆಗಷ್ಟೇ ಈ ಘಟನೆ ನಡೆದಿತ್ತು. ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಅರ್ಹತೆಯಿದ್ದರೂ ಪಿಎಚ್ ಡಿ ಪದವಿ ನೀಡಿಲ್ಲ ಎಂದು ವಿದ್ಯಾರ್ಥಿನಿ ಆರೋಪಿಸಿದ್ದರು. ಅಲ್ಲದೇ, ಗೈಡ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೂಡ ಮಾಡಿದ್ದರು ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಯ ಕುಲಪತಿ ಡಾ. ಸಿ.ಎಂ. ತ್ಯಾಗರಾಜ್ ಪ್ರಕಟಣೆ ಹೊರಡಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ವಿದ್ಯಾರ್ಥಿನಿಯ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಗುರುವಾರ ವಿಶ್ವವಿದ್ಯಾಲಯದಲ್ಲಿ ಸಿಂಡಿಕೇಟ್ ಸಭೆ ನಡೆದಿತ್ತು. ಆ ವೇಳೆ ವಿದ್ಯಾರ್ಥಿನಿಯ ದಾಖಲೆಗಳನ್ನು ಪರಿಶೀಲಿಸಲಾಗಿ ಅವರು ಪಿಎಚ್ ಡಿ ಪದವಿ ಪಡೆಯಲು ಅರ್ಹರಾಗಿದ್ದಾರೆ. ಹೀಗಾಗಿ ಅವರು ಅರ್ಜಿ ಸಲ್ಲಿಸಿದರೆ ಪ್ರದಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಅಲ್ಲದೇ, ವಿದ್ಯಾರ್ಥಿನಿಯ ಗೈಡ್ ಆಗಿರುವ ಪ್ರೊ. ಕೆ.ಎಲ್. ಎನ್ ಮೂರ್ತಿ ವಿರುದ್ಧ ಲೈಂಗಿಕ ಕಿರುಕುಳದ ವಿರುದ್ಧ…
ಆಕಾಶದೆತ್ತರಕ್ಕೆ ಬೆಳೆದು ನಿಂತಿದ್ದ ಚಿನ್ನದ ಬೆಲೆ ಗುರುವಾರವಷ್ಟೇ ಸ್ವಲ್ಪ ಕುಗ್ಗಿ, ಬಂಗಾರ ಪ್ರಿಯರು ಸಂತಸ ಪಡುವಂತಾಗಿತ್ತು. ಆದರೆ, ಇಂದು ಮತ್ತೆ ಏರಿಕೆಯ ಹಾದಿ ಹಿಡಿದಿದ್ದು ಶುಭ ಸಮಾರಂಭ ಹೆಚ್ಚು ನಡೆಯುವ ಇಂದಿನ ದಿನಗಳಲ್ಲಿ ಚಿನ್ನ ಏರಿಕೆಯತ್ತ ಮತ್ತೆ ಮುಖ ಮಾಡಿದ್ದು ನೋವು ತರುತ್ತಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆಯ ಮಧ್ಯೆ ಸ್ವಲ್ಪ ಇಳಿಕೆಯಾಗುತ್ತಿತ್ತು. ಮದುವೆ ಸಮಾರಂಭ ಹೆಚ್ಚು ನಡೆಯುವ ಈ ಅವಧಿಯಲ್ಲೇ ಚಿನ್ನದ ಬೆಲೆ ಇಳಿಯುತ್ತಿರುವುದಂತೂ ಹಲವರಿಗೆ ಸಂತಸ ತಂದಿತ್ತು. ಆದರೆ ಇಂದು ಮತ್ತೆ ಏರಿಕೆಯಾಗಿದ್ದು, ಮತ್ತೆ ಬೇಸರ ವ್ಯಕ್ತವಾಗುತ್ತಿದೆ. ದಾಖಲೆ ಏರಿಕೆಯ ಹಾದಿ ಹಿಡಿದಿದ್ದ ಚಿನ್ನ ಡಿ. 2ರ ನಂತರ ಏರಿಳಿತ ಕಂಡು ಬರುತ್ತಿರುವುದು ಕೂಡ ಸ್ವಲ್ಪ ಖುಷಿ ತರುತ್ತಿದೆ. ಗುರುವಾರ 850 ರೂ.ನಷ್ಟು ಕಡಿಮೆಯಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ 270 ರೂ.ನಷ್ಟು ಏರಿಕೆಯಾಗಿದೆ. ಶುಕ್ರವಾರ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂಗೆ 12,993 ರೂ. ಇದೆ. 10 ಗ್ರಾಂ ಶುದ್ಧ ಚಿನ್ನದ ಬೆಲೆ…
ಬೆಂಗಳೂರು: ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಬೆಂಗಳೂರಿನ (Bengaluru) ನೇರಳೆ ಮಾರ್ಗದ (Purple Line) ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ (Kengeri Metro Station) ಈ ದುರ್ಘಟನೆ ನಡೆದಿದೆ. ಹೀಗಾಗಿ ಬೆಳಗ್ಗೆ ಬೆಂಗಳೂರಿನಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಕುರಿತು ಬಿಎಂಆರ್ ಸಿಲ್ ಬಹಿರಂಗವಾಗಿ ಹೇಳಿಕೊಂಡಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ವಿಜಯಪುರ (Vijayapura) ಮೂಲದ ಶಾಂತಗೌಡ ಪಾಟೀಲ್ (38) ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ನಗರದ ರಾಜಾಜಿನಗರದಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸಿಸುತ್ತಿದ್ದ. ಇತ್ತೀಚೆಗೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ನಿಂತಿದ್ದ ಈ ವ್ಯಕ್ತಿ ರೈಲು ಬರುತ್ತಿದ್ದಂತೆ ಟ್ರ್ಯಾಕ್ ಗೆ ಹಾರಿದ್ದಾನೆ. ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಕೆಂಗೇರಿ ಪೊಲೀಸರು ಹಾಗೂ ಮೆಟ್ರೋ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಕೆಲ ಹೊತ್ತು ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಈಗ ಮೆಟ್ರೋ…
ಬೆಂಗಳೂರು: ರಾಜಕೀಯ ಅಂದ ಮೇಲೆ ಅಲ್ಲಿ ಭಾಷಣ ಇರಲೇಬೇಕು. ಆದರೆ, ಇತ್ತೀಚೆಗೆ ಶಿಷ್ಟಾಚಾರ ಮೀರಿ ಮಾತುಗಳು ಕೇಳಿ ಬರುತ್ತಿದ್ದವು. ಹಲವರಂತೂ ದ್ವೇಷಕ್ಕೆ ಹೆಚ್ಚು ಒತ್ತು ಕೊಟ್ಟು ನಾಲಿಗೆ ಹರಿ ಬಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸರ್ಕಾರ, ದ್ವೇಷ ಭಾಷಣಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ದ್ವೇಷ ಭಾಷಣಕ್ಕೆ ಮೂಗುದಾರ ಹಾಕುವ ಹಿನ್ನೆಲೆಯಲ್ಲಿ ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ- 2025ಕ್ಕೆ ಅನುಮೋದನೆ ನೀಡಲಾಗಿದೆ. ಕೆಲವೆಡೆ ಮತೀಯ ಕಲಹಗಳಿಗೆ ರಾಜ್ಯವು ಸಾಕ್ಷಿಯಾಗುತ್ತಿದೆ. ಹೀಗಾಗಿ ಮತೀಯ ದ್ವೇಷ ಭಾಷಣಗಳು ಎಗ್ಗಿಲ್ಲದೆ ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಇವುಗಳಿಗೆ ಕಡಿವಾಣ ಹಾಕಲು ಈ ವಿಧೇಯಕ ಅಂಗೀಕಾರಕ್ಕೆ ಮುಂದಾಗಿದೆ. ಈಗಾಗಲೇ ಈ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಹೀಗಾಗಿ ಡಿ. 8 ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ವಿಧೇಯಕ ಮಂಡನೆಗೆ ನಿರ್ಧರಿಸಲಾಗಿದೆ. ದ್ವೇಷ ಭಾಷಣ ಅಥವಾ…
ಮಂಗಳೂರು: ರಿಷಬ್ ಶೆಟ್ಟಿ(Rishab Shetty) ನಟಿಸಿ, ನಿರ್ದೇಶಿಸಿರುವ ಕಾಂತಾರ ಚಾಪ್ಟರ್ 1 (Kantara: A Legend Chapter-1) ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ಈ ಮಧ್ಯೆ ರಿಷಬ್ ಗೆ ದೈವ ಮತ್ತೊಮ್ಮೆ ಆಶೀರ್ವದಿಸಿದೆ. ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ ಎಂದು ಪಂಜುರ್ಲಿ (Panjurli) ದೈವ ಅಭಯ ನೀಡಿದ್ದು, ರಿಷಬ್ ಸಂತಸ ಇಮ್ಮಡಿಯಾಗಿದೆ. ಕಾಂತಾರಾರ ಚಾಪ್ಟರ್ 1 ಯಶಸ್ಸು ಕಂಡ ಹಿನ್ನೆಲೆಯಲ್ಲಿ ಚಿತ್ರ ತಂಡ(Hombale Films)ದಿಂದ ಮಂಗಳೂರಿನ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮ ನಡೆಯಿತು. ವತಿಯಿಂದ ಹರಕೆ ನೇಮೋತ್ಸವ ಆಯೋಜನೆಗೊಂಡಿತ್ತು. ಈ ವೇಳೆ ರಿಷಬ್ ಶೆಟ್ಟಿ ಕಣ್ಣೀರು ಸುರಿಸಿದರು. ಆಗ ಅವರನ್ನು ಅಪ್ಪಿ ಅಲಂಗಿಸಿದ ಪಂಜುರ್ಲಿ ದೈವ ನಿನ್ನ ಹಿಂದೆ ನಾನಿದ್ದೇನೆ ಎಂದು ಕೈ ಭಾಷೆಯಲ್ಲಿ ಸನ್ನೆ ಮಾಡುವ ಮೂಲಕ ಅಭಯ ನೀಡಿತು. ವೀಳ್ಯ ಶಕುನದ ಮೂಲಕ ನಾನು ಸಂತುಷ್ಟನಾಗಿದ್ದೇನೆ ಎಂದು ದೈವ ಹೇಳಿತು. ಆಗ ಚಿತ್ರ ತಂಡ ಹರ್ಷೋದ್ಘಾರ ವ್ಯಕ್ತಪಡಿಸಿತು. ಸೇವೆಯಲ್ಲಿ ನಿರ್ಮಾಪಕ…