Author: Bosstv News Desk

ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದಾರೆ. ಹೀಗಾಗಿ ಭಾರತದಲ್ಲಿ ಸಂಭ್ರಮ ಮನೆ ಮಾಡಿದ್ದು, ಅವರನ್ನು ಪ್ರಧಾನಿ ನರೇಂದ್ರ ಮೋದಿ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಈ ಮಧ್ಯೆ ಪ್ರದಾನಿ ನರೇಂದ್ರ ಮೋದಿ ಅವರು ಭಾರತೀಯ ಧರ್ಮ ಗ್ರಂಥ ಭವದ್ಗೀತೆಯನ್ನು ಪುಟಿನ್ ಗೆ ಉಡುಗೊರೆಯಾಗಿ ನೀಡಿದ್ದಾರೆ. ಪುಟಿನ್ ಹಲವು ಒಪ್ಪಂದಗಳಿಗೆ ಸಹಿ ಹಾಕಲು ಹಾಗೂ ಚರ್ಚಿಸುವುದಕ್ಕಾಗಿ ಭಾರತಕ್ಕೆ ಆಗಮಿಸಿದ್ದಾರೆ. ಹೀಗಾಗಿ ದೆಹಲಿಯಲ್ಲಿ ಹೈ ಅಲರ್ಟ್ ಇದೆ. ಸಾಕಷ್ಟು ಭ್ರದ್ರತೆ ಕೈಗೊಳ್ಳಲಾಗಿದೆ. ಈಗಾಗಲೇ ಪುಟಿನ್ ಭಾರತದಲ್ಲಿ ರಾತ್ರಿಯನ್ನು ಕಳೆದಿದ್ದಾರೆ. ಐಷಾರಾಮಿ ಹೋಟೆಲ್ ನಲ್ಲಿ ತಂಗಿದ್ದ ಪುಟಿನ್ ಇರುವ ಸುತ್ತಮುತ್ತ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಉಡುಗೊರೆ ನೀಡಿರುವ ವಿಷಯ ತಿಳಿಯುತ್ತಿದ್ದಂತೆ ಇಡೀ ಭಾರತ ಸಂಭ್ರಮಿಸಿದೆ. ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿದಿರುವ ಮೋದಿ ಅವರ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.ಇಂದು ಭಾರತ ಹಾಗೂ ರಷ್ಯಾ ಮಧ್ಯೆ ಹಲವು ಪ್ರಮುಖ ಸಭೆಗಳು ನಡೆಯಲಿವೆ. ಹೀಗಾಗಿ ಇಡೀ ವಿಶ್ವವೇ…

Read More

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಒಂದಿಲ್ಲೊಂದು ಸಂದಿಗ್ಧತೆ ಕೆಲವು ನಾಯಕರಿಗೆ ಎದುರಾಗುತ್ತಲೇ ಇವೆ. ಇಲ್ಲಿಯವರೆಗೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಮಧ್ಯೆ ಸಿಎಂ ಕುರ್ಚಿ ಫೈಟ್ ನಡೆದಿದ್ದರೆ, ಈಗ ಬಿಜೆಪಿಯಲ್ಲಿ ರೆಬೆಲ್ ಆಟ ಶುರುವಾಗಿದೆ. ಇದು ವಿಜಯೇಂದ್ರಗೆ ಸಂಕಷ್ಟ ತಂದೊಡ್ಡುತ್ತಿದೆ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ. ಕಾಂಗ್ರೆಸ್ ನಲ್ಲಿ ಸಿಎಂ ಪಟ್ಟಕ್ಕಾಗಿ ಫೈಟ್ ನಡೆದರೆ, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ನಡೆಯುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಹೇಗಾದರೂ ಮಾಡಿ ಕೆಳಗೆ ಇಳಿಸಲೇಬೇಕೆಂದು ಬಿಜೆಪಿಯ ರೆಬೆಲ್ ಬಣ ಯತ್ನಿಸುತ್ತಿರುವಂತಿದೆ. ಇದರ ಮಧ್ಯೆ ಎಲ್ಲರ ವಿಶ್ವಾಸ ಗಳಿಸಿಕೊಂಡು ನಾಯಕತ್ವ ಉಳಿಸಿಕೊಳ್ಳಬೇಕೆಂದು ವಿಜಯೇಂದ್ರ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿಯೇ ಕಮಲದಲ್ಲೂ ಬಣ ರಾಜಕೀಯದ ಸದ್ದು ಜೋರಾಗಿದೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ವಿಜಯೇಂದ್ರ ವಿರೋಧಿ ಬಣ ಹೈಕಮಾಂಡ್ ನಾಯಕರ ಮಧ್ಯೆ ಹಲವು ಆರೋಪ ಮಾಡಿದೆ ಎನ್ನಲಾಗಿದೆ. ರಾಜ್ಯ ಕಾಂಗ್ರೆಸ್ ನಲ್ಲಿನ ಕುರ್ಚಿ ಗುದ್ದಾಟದ ಫೈಟ್ ಬಹಿರಂಗವಾಗಿಯೇ ನಡೆಯುತ್ತಿತ್ತು. ಆದರೆ, ಈ ಪರಿಸ್ಥಿತಿಯನ್ನು ಬಳಸಿಕೊಳ್ಳಲು ವಿಜಯೇಂದ್ರ ವಿಫಲರಾಗಿದೆ. ರಾಜ್ಯ ಕಾಂಗ್ರೆಸ್…

Read More

ಬೆಂಗಳೂರು: ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ್ದು, ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಈ ಕುರಿತು ಬಿಎಂಆರ್ ಸಿಎಲ್ ಅಧಿಕೃತವಾಗಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ ನೇರಳೆ ಮಾರ್ಗದಲ್ಲಿನ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಮೆಟ್ರೋ ರೈಲುಗಳು ಪ್ರಸ್ತುತ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಕೆಂಗೇರಿ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಮೈಸೂರು ರಸ್ತೆ ಮತ್ತು ಚಲ್ಲಘಟ್ಟ ನಡುವಿನ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ. ಹೀಗಾಗಿ ಪಂತರಪಾಳ್ಯ, ರಾಜರಾಜೇಶ್ವರಿನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್ ಟರ್ಮಿನಲ್, ಕೆಂಗೇರಿ, ಛಲ್ಲಘಟ್ಟ ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ. ಪರಿಸ್ಥಿತಿ ಸರಿಯಾದ ನಂತರ ಮೆಟ್ರೋ ಸಂಚಾರ ಮತ್ತೆ ಆರಂಭವಾಗಲಿದೆ ಎಂದು ಹೇಳಿದೆ.

Read More

ದೇಶದಲ್ಲಿ ಸದ್ಯ ದೇಶೀಯ ಕ್ರಿಕೆಟ್ ಪಂದ್ಯಗಳು ಕೂಡ ನಡೆಯುತ್ತಿದ್ದು, ಹಲವಾರು ಹಿರಿಯ ಆಟಗಾರರು ಕೂಡ ಭಾಗವಹಿಸಿದ್ದಾರೆ. ಹೀಗಾಗಿಯೇ ಸದ್ಯ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟಿ20 (Syed Mushtaq Ali T20) ಟ್ರೋಫಿಗೆ ಕ್ರೇಜ್ ಹೆಚ್ಚಿದೆ. ಆದರೆ, ಈಗ ಹಿರಿಯ ಆಟಗಾರನಿಗಾಗಿ ಮೈದಾನವೇ ಬದಲಾಗಿದ್ದು, ಎಲ್ಲರೂ ಹುಬ್ಬೇರಿಸುತ್ತಿದ್ದಾರೆ. ರಾಷ್ಟ್ರೀಯ ತಂಡದಿಂದ ಹೊರಗೆ ಇರುವ ಬಹುತೇಕ ಹಿರಿಯ ಆಟಗಾರರು ಮೈದಾನಕ್ಕೆ ಧುಮುಕಿದ್ದಾರೆ. ಹೀಗಾಗಿ ಅಭಿಮಾನಿಗಳು ಸಹ ಹೆಚ್ಚಿನ ಸಂಖ್ಯೆಯಲ್ಲಿ ಮೈದಾನಕ್ಕೆ ಬರುತ್ತಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಬರೋಡಾ ಹಾಗೂ ಗುಜರಾತ್ ನಡುವಿನ ಪಂದ್ಯ ಹೈದರಾಬಾದ್ನ ಜಿಮ್ಖಾನಾ ಮೈದಾನದಲ್ಲಿ ನಡೆಯಬೇಕಿತ್ತು. ಈ ಪಂದ್ಯದಲ್ಲಿ ಬರೋಡಾ ಪರ ಹಾರ್ದಿಕ್ ಪಾಂಡ್ಯ ಆಡುತ್ತಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿತ್ತು. ಈ ಪಂದ್ಯವನ್ನು ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಯಿತು. ಹಾರ್ದಿಕ್ ಮೈದಾನದಲ್ಲಿದ್ದಾಗ ಅಭಿಮಾನಿಗಳು ಒಳಗೆ ಬಂದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಹೀಗಾಗಿ ಆಯೋಜಕರು ಪಂದ್ಯವನ್ನು…

Read More

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಭಾರತ ಪ್ರವಾಸದ ಹಿನ್ನೆಲೆಯಲ್ಲಿ ಇಂದು ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದು, ನನ್ನ ಸ್ನೇಹಿತ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರನ್ನು ಸ್ವಾಗತಿಸಲು ಸಂತೋಷವಾಗುತ್ತಿದೆ ಎಂದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ. ಅಲ್ಲದೇ, ಇಂದು ಸಂಜೆ ಮತ್ತು ನಾಳೆ ನಮ್ಮ ಸಂವಾದಗಳನ್ನು ಎದುರು ನೋಡುತ್ತಿದ್ದೇನೆ. ಭಾರತ-ರಷ್ಯಾ ಸ್ನೇಹವು ಕಾಲಾತೀತವಾಗಿದ್ದು, ಇದು ನಮ್ಮ ಜನರಿಗೆ ಹೆಚ್ಚಿನ ಪ್ರಯೋಜನವನ್ನು ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿರುವ ರಷ್ಯಾ ಅಧ್ಯಕ್ಷ ಪುಟಿನ್‌ ಗುರುವಾರ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ. ನಂತರ ಇಬ್ಬರೂ ನಾಯಕರು ಒಂದೇ ಕಾರಿನಲ್ಲಿ ಪ್ರಯಾಣ ಬೆಳೆಸಿದರು. ಪುಟಿನ್ ಆಗಮಿಸಿರುವ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ.…

Read More

ನವದೆಹಲಿ: ಕೇಂದ್ರದ ಮಾಜಿ ಸಚಿವೆ, ಬಿಜೆಪಿ ಹಿರಿಯ ನಾಯಕಿ ದಿ. ಸುಷ್ಮಾ ಸ್ವರಾಜ್(Sushma Swaraj) ಅವರ ಪತಿ ಇಹಲೋಕ ತ್ಯಜಿಸಿದ್ದಾರೆ. ಈ ಕುರಿತು ದೆಹಲಿ ಬಿಜೆಪಿಯು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದೆ. ಮಿಜೋರಾಂನ ಮಾಜಿ ರಾಜ್ಯಪಾಲ ಸ್ವರಾಜ್ ಕೌಶಲ್ (73) (Swaraj Kaushal) ಇಂದು ನಿಧನರಾಗಿದ್ದಾರೆ. ಕೌಶಲ್ ವಕೀಲ ವೃತ್ತಿಯಿಂದ ಹೆಸರು ಕೂಡ ಮಾಡಿದ್ದರು. ಅವರ ಪುತ್ರಿ ಬಾನ್ಸೂರಿ ಸ್ವರಾಜ್ ಸಂಸದೆಯಾಗಿದ್ದಾರೆ. ಎಕ್ಸ್ ನಲ್ಲಿ ಬಿಜೆಪಿಯು, ಮಿಜೋರಾಂನ ಮಾಜಿ ರಾಜ್ಯಪಾಲರು ಹಾಗೂ ಹಿರಿಯ ವಕೀಲರಾಗಿದ್ದ ಸ್ವರಾಜ್ ಕೌಶಲ್ ಅವರ ಹಠಾತ್ ನಿಧನದ ಸುದ್ದಿ ತಿಳಿಸಲು ವಿಷಾದಿಸುತ್ತೇವೆ. ಮಧ್ಯಾಹ್ನ ಎದೆನೋವು ಕಾಣಿಸಿಕೊಂಡ ನಂತರ ಅವರನ್ನು AIIMSಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರು ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ ಎಂದು ಹೇಳಿದೆ. ಬಿಜೆಪಿ ನಾಯಕರು, ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ.

Read More

ಕಲಬುರಗಿ: ಪ್ರಿಯಕರನೋರ್ವ ತನ್ನ ಪ್ರೇಯಸಿಯನ್ನು ಖುಶಿ ಪಡಿಸುವುದಕ್ಕಾಗಿ ಖದೀಮನಾಗಿರುವ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕಲಬುರಗಿ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಆರೋಪಿ ಹಾಗೂ ಆತನೊಂದಿಗೆ ಮತ್ತೋರ್ವನನ್ನು ಬಂಧಿಸಿದ್ದಾರೆ. ಕಲ್ಲಪ್ಪ ಅಲಿಯಾಸ್ ಸಂಜು ಸೋಮಣ್ಣ (24) ಬಂಧಿತ ಖದೀಮ ಪ್ರಿಯಕರನಾಗಿದ್ದರೆ, ಆತನಿಗೆ ಸಹಾಯ ಮಾಡಿದ್ದ ಸಂತೋಷ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿಯಾಗಿರುವ ಕಲ್ಲಪ್ಪ ಅಲಿಯಾಸ್ ಸಂಜು ಸೋಮಣ್ಣ ತನ್ನೊಂದಿಗೆ ಲಿವ್ ಇನ್ (Live in Relationship) ಸಂಬಂಧ ಹೊಂದಿದ್ದ ಗೆಳತಿಯ ಆಸೆ ಪೂರೈಸುವುದಕ್ಕಾಗಿ ಅಡ್ಡ ಹಾದಿ ಹಿಡಿದಿದ್ದ ಎನ್ನಲಾಗಿದೆ. ಈ ಖದೀಮರಿಬ್ಬರು ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಹೆದರಿಸಿ, ಹಲ್ಲೆ ಮಾಡಿ ಚಿನ್ನಾಭರಣ ಸುಲಿಗೆ ಮಾಡಿದ್ದರು ಎನ್ನಲಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 7.62 ಲಕ್ಷ ರೂ. ಮೌಲ್ಯದ 61 ಗ್ರಾಂ ಚಿನ್ನಾಭರಣ, 600 ಗ್ರಾಂ ಬೆಳ್ಳಿ ವಶಕ್ಕೆ ಪಡೆಯಲಾಗಿದೆ. ಕಲ್ಲಪ್ಪ ಅಲಿಯಾಸ್ ಸಂಜು ಕೂಡ ಕೂಲಿ ಕೆಲಸ ಮಾಡುತ್ತಿದ್ದ ಎನ್ನಲಾಗದೆ. ಆದರೆ,…

Read More

ಬೆಂಗಳೂರು: ಚಿತ್ರೀಕರಣದ ವೇಳೆ ಏಕಾಏಕಿ ಕುಸಿದು ಬಿದ್ದು ನಿರ್ದೇಶಕರೊಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಶಿವಮೊಗ್ಗ ಜಿಲ್ಲೆಯ ಕೊಪ್ಪದಲ್ಲಿ ಚಿತ್ರದ ಶೂಟಿಂಗ್ ನಡೆದಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಸಂಗೀತ್ ಸಾಗರ್ ಸಾವನ್ನಪ್ಪಿರುವ ನಿರ್ದೇಶಕ. ‘ಪಾತ್ರಧಾರಿ’ ಎಂಬ ಸಿನಿಮಾದ ಶೂಟಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಸಂಗೀತ್ ಸಾಗರ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಯಾವುದೇ ಚಿಕಿತ್ಸೆ ಫಲಕಾರಿಯಾಗದೆ ಅವರನ್ನು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸಂಗೀತ್ ಸಾಗರ್ ಅವರು ಹಿಂದೆ ಓ ಪ್ರೀತಿಯಾ, ಸ್ನೇಹಿತ ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ಕೆಲವು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಕೂಡ ಮಾಡಿದ್ದಾರೆ. ಸಂಗೀತ್ ಅವರ ಮೃತದೇಹವನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಅವರ ಪತ್ನಿ ಸುಶ್ಮಿತಾ ಹಾಗೂ ಮಗಳು ವಂಧ್ಯಾ ಧಾವಿಸಿದ್ದಾರೆ. ಇಡೀ ಸಿನಿಮಾ ತಂಡ ಸ್ಥಳದಲ್ಲಿ ಇತ್ತು ಎನ್ನಲಾಗಿದೆ.

Read More

ಬೆಂಗಳೂರು: ಬಸ್ (Bus) ಹಾಗೂ ಬೈಕ್ (Bike) ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಬೆಂಗಳೂರು – ತುಮಕೂರು 48 ಹೆದ್ದಾರಿಯ ಮಾದನಾಯಕನಹಳ್ಳಿ (Madanayakanahalli) ಹತ್ತಿರ ನಡೆದಿದೆ. ನಾಗಸಂದ್ರದ ವಿದ್ಯಾನಗರ ನಿವಾಸಿ ಸುಮಂತ್ ಜೆ ಗೌಡ (21) ಸಾವನ್ನಪ್ಪಿರುವ ದುರ್ದೈವಿ. ಸುಮಂತ್ ತನ್ನ ಸ್ನೇಹಿತನನ್ನು ಕಾಣಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಚಲಿಸುತ್ತಿದ್ದ ಖಾಸಗಿ ಬಸ್ ನ್ನು ಚಾಲಕ ಏಕಾಏಕಿ ನಿಲ್ಲಿಸಿದ್ದಾನೆ. ಹೀಗಾಗಿ ಬಸ್ ನ ಹಿಂದೆ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ನ್ನು ಸುಮಂತ್ ಚಲಾಯಿಸುತ್ತಿದ್ದ ಎನ್ನಲಾಗಿದೆ. ಖಾಸಗಿ ಬಸ್ ನ್ನು ಏಕಾಏಕಿ ನಿಲ್ಲಿಸಿದ ಹಿನ್ನೆಲೆಯಲ್ಲಿ ನಿಯಂತ್ರಣ ಸಿಗದ ಕಾರಣ ಬೈಕ್, ಹಿಂದಿನಿಂದ ಬಸ್ ಗೆ ಡಿಕ್ಕಿಯಾಗಿದೆ. ವೇಗವಾಗಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗಳಾಗಿ ಸುಮಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ: ಬೆಂಗಳೂರು ಸೇರಿದಂತೆ ದೇಶದಲ್ಲಿ ಇಂಡಿಗೋ ಸಂಸ್ಥೆಯ 100ಕ್ಕೂ ಅಧಿಕ ವಿಮಾನಗಳ ಹಾರಾಟ ರದ್ದಾಗಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಯು ಇವತ್ತೂ ಕ್ಷಮೆ ಕೇಳಿದೆ. ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದಲ್ಲಿ (IndiGo) ಉಂಟಾಗಿರುವ ಈ ಅಡಚಣೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬುಧವಾರ ದೇಶದ ಪ್ರಮುಖ ವಿಮಾನ ನಿಲ್ದಾಣಗಳಿಂದ ಸುಮಾರು 200ಕ್ಕೂ ಅಧಿಕ ವಿಮಾನಗಳ ಹಾರಟ ರದ್ದಾಗಿತ್ತು. ಅಲ್ಲದೇ, ಕೆಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು. ಆದರೆ, ಇಂದು ಕೂಡ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಅಲ್ಲದೇ, 100ಕ್ಕೂ ಅಧಿಕ ವಿಮಾನಗಳ ಹಾರಾಟ ರದ್ದಾಗಿದೆ. ವಿಮಾನದಲ್ಲಿನ ತಾಂತ್ರಿಕ ದೋಷ ಹಾಗೂ ಸಿಬ್ಬಂದಿ ಕೊರತೆಯ ಹಿನ್ನೆಲೆಯಲ್ಲಿ ಹಾರಾಟ ರದ್ದಾಗುವ (Flight Cancellations) ಸಾಧ್ಯತೆ ಕಂಡು ಬರುತ್ತಿದೆ ಎಂದು ವರದಿ ಹೇಳುತ್ತಿವೆ. ಹೀಗಾಗಿ ಪ್ರಯಾಣಿಕರು ಕಂಗಾಲಾಗುವಂತಾಗಿದೆ. ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಬುಧವಾರ 43 ವಿಮಾನಗಳ ಹಾರಾಟ ರದ್ದುಗೊಳಿಸಿದ್ದ ಇಂಡಿಗೋ ಇಂದು 73 ವಿಮಾನಗಳ ಹಾರಾಟ ರದ್ದು ಮಾಡಿದೆ. 48 ಗಂಟೆಗಳಲ್ಲಿ ಪರಿಸ್ಥಿತಿ ಸುಧಾರಿಸುವ ಭರವಸೆ ನೀಡಿದೆ. ಜೊತೆಗೆ…

Read More