Subscribe to Updates
Get the latest creative news from FooBar about art, design and business.
Author: Bosstv News Desk
ಬೆಂಗಳೂರು: ವೃದ್ಧ ವ್ಯಕ್ತಿ ತನ್ನ ಪತ್ನಿಯನ್ನು ಕೊಲೆ ಮಾಡಿ ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಸಿಲಿಕಾನ್ ಸಿಟಿಯ ಸುಬ್ರಹ್ಮಣ್ಯಪುರ(Subramanyapura) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪತ್ನಿ ಬೇಬಿ(60) ಪತಿಯಿಂದಲೇ ಹತ್ಯೆಯಾಗಿರುವ ಮಹಿಳೆ. ವೆಂಕಟೇಶನ್ (65) ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ವೃದ್ಧ. ವೆಂಕಟೇಶನ್ ಬಿಎಂಟಿಸಿ ಡ್ರೈವರ್ ಆಗಿ ಕೆಲಸ ನಿರ್ವಹಿಸಿ, ನಿವೃತ್ತಿ ಹೊಂದಿದ್ದರು. ಆದರೆ, ಪತಿ – ಪತ್ನಿ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಈ ವೃದ್ಧ ದಂಪತಿಗೆ ಇಬ್ಬರು ಮಕ್ಕಳಿದ್ದರು. ಅವರು ಕೆಲಸಕ್ಕೆಂದು ಹೋದಾಗ ಇಬ್ಬರ ಮಧ್ಯೆ ಜಗಳ ನಡೆದಿದೆ. ಅದು ವಿಕೋಪಕ್ಕೆ ತೆರಳಿ ಬಟ್ಟೆ ಒಣ ಹಾಕುವ ದಾರದಿಂದ ಪತ್ನಿಯ ಕುತ್ತಿಗೆಗೆ ಸುತ್ತಿ ಕೊಲೆ ಮಾಡಿದ್ದಾನೆ. ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಪತ್ನಿಗೆ ಇತ್ತೀಚೆಗಷ್ಟೇ ಸ್ಟ್ರೋಕ್ ಆಗಿ ಹಾಸಿಗೆ ಹಿಡಿದಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಸಿಎಂ ನಿವಾಸದ ಬಂದೋಬಸ್ತ್ ಗೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿ ಗೈರಾಗಿ ಕರ್ತವ್ಯ ಲೋಪ ಎಸಗಿರುವ ಸಂಗತಿ ಬಯಲಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅಮಾನತು ಮಾಡಲಾಗಿದೆ. ಸಿಎಂ ಕಾವೇರಿ ನಿವಾಸದ ಬಂದೋಬಸ್ತ್‌ಗೆ ನಿಯೋಜಿಸಿದ್ದರೂ ಕರ್ತವ್ಯಕ್ಕೆ ಗೈರಾದ ಹಿನ್ನೆಲೆಯಲ್ಲಿ ಕಾನ್ ಸ್ಟೇಬಲ್ ಅಮಾನತು ಆಗಿದ್ದಾರೆ. ಅದಲ್ಲದೇ, ಬೆಂಗಳೂರು ನಗರ ಪೊಲೀಸರು(Bengaluru City Police) ಕರ್ತವ್ಯ ಲೋಪ ಎಸಗುತ್ತಿರುವ ಸಂಗತಿಗಳು ಬಯಲಿಗೆ ಬರುತ್ತಿದ್ದು, ಹಿರಿಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಕಳೆದ 15 ದಿನಗಳಿಂದ 33ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಇತ್ತೀಚೆಗಷ್ಟೇ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿತ್ತು. ವಿವೇಕನಗರ ಪೊಲೀಸರ (Vivek Nagar) ವಿರುದ್ಧ ಕೇಳಿ ಬಂದ ಹಿನ್ನೆಲೆಯಲ್ಲಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಸಿಬ್ಬಂದಿಯನ್ನ ಅಮಾನತು ಮಾಡಲಾಗಿತ್ತು. ಅಲ್ಲದೇ, ಇದೀಗ ಮತ್ತೆ ನಾಲ್ವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ASI ಶ್ರೀನಿವಾಸ್ ಮೂರ್ತಿ(ನಂದಿನಿ ಲೇಔಟ್ ಠಾಣೆ), ASI ಜಯರಾಮೇಗೌಡ,…
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾರತ ಪ್ರವಾಸ ಕೈಗೊಂಡಿದ್ದು, ರಕ್ಷಣಾ ವ್ಯವಸ್ಥೆಗೆ ಸಂಬಂಧಿಸಿದಂತೆ ಕಲವು ಒಪ್ಪಂದಗಳನ್ನು ಭಾರತದೊಂದಿಗೆ ಮಾಡಿಕೊಳ್ಳಲಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ 2 ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದಾರೆ. ಈ ಭೇಟಿಯನ್ನು ಇಡೀ ವಿಶ್ವವೇ ತಿರುಗಿ ನೋಡುತ್ತಿದೆ. ಭಾರತದೊಂದಿಗೆ ಮಿಲಿಟರಿ ಒಪ್ಪಂದಗಳನ್ನು ಮಾಡಿಕೊಳ್ಳಲು ಹಾಗೂ ಜಾರಿಗೆ ತರಲು ರಷ್ಯಾ ಸಂಸತ್ತು ಒಪ್ಪಿಗೆ ನೀಡಿದೆ. ಹೀಗಾಗಿ ಅದು ರಷ್ಯಾ ಹಾಗೂ ಭಾರತದ ಹಲವು ವಿರೋಧಿ ರಾಷ್ಟ್ರಗಳ ಹೊಟ್ಟೆ ಉರಿಗೆ ಕಾರಣವಾಗುತ್ತಿದೆ. ರಷ್ಯಾ ಮತ್ತು ಭಾರತದ ಸಂಬಂಧ ಹಾಳು ಮಾಡುವುದಕ್ಕಾಗಿ ಹಲವಾರು ರಾಷ್ಟ್ರಗಳು ಯತ್ನ ಮಾಡಿದವು. ಆದರೆ, ಅದು ವಿಫಲವಾಯಿತು. ಈ ಸಮಯದಲ್ಲೇ ಪುಟಿನ್, ಭಾರತದ ಪ್ರವಾಸ ಕೈಗೊಂಡಿದ್ದು, ಹಲವರ ಕಣ್ಣು ಕೆಂಪಾಗಿಸಿದೆ.ವ್ಲಾಡಿಮಿರ್ ಪುಟಿನ್ (Vladimir Putin) ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರ ವಿಮಾನ ದೆಹಲಿಯಲ್ಲಿ ಲ್ಯಾಂಡ್ ಆಗಲಿದೆ. ಹೀಗಾಗಿ 5 ಸ್ತರದ ರಕ್ಷಣಾ ವ್ಯವಸ್ಥೆ ಕಲ್ಪಿಸಲಾಗಿದೆ. 50ಕ್ಕೂ ಹೆಚ್ಚು ರಷ್ಯಾದ ಭದ್ರತಾ ಸಿಬ್ಬಂದಿ ಕೂಡ…
ಬೆಳಗಾವಿ: ಖದೀಮರು ರಾತ್ರೋರಾತ್ರಿ ಎಟಿಎಂ ದೋಚಿ ಯಂತ್ರ (ATM Machine)ವನ್ನು ತಳ್ಳುಗಾಡಿಗೆ ಹಾಕಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ (Belagavi) ಹೊಸ ವಂಟಮೂರಿ ಗ್ರಾಮದಲ್ಲಿ ತಡರಾತ್ರಿ 3 ಗಂಟೆ ವೇಳೆಗೆ ನಡೆದಿದೆ. ಗ್ರಾಮದ ಹತ್ತಿರ ಇರುವ ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದಲ್ಲಿರುವ ಇಂಡಿಯಾ ಒನ್ ಎಟಿಎಂಗೆ ಕನ್ನ ಹಾಕಿರುವ ಖದೀಮರು, ಗ್ಯಾಸ್ ಕಟ್ಟರ್ ನಿಂದ ಯಂತ್ರ ತೆಗೆದುಕೊಂಡು ತಳ್ಳುವ ಗಾಡಿಯಲ್ಲಿ ಹಾಕಿಕೊಂಡು ಪರಾರಿಯಾಗಿದ್ದಾರೆ. ಖದೀಮರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಒಳ ನುಗ್ಗಿದ್ದಾರೆ. ಎಟಿಎಂನಲ್ಲಿನ ಸೈರನ್ ಗೆ ಬ್ಲ್ಯಾಕ್ ಸ್ಪ್ರೇ ಮಾಡಿ ಅದನ್ನು ಬಂದ್ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಟಿಎಂ ಯಂತ್ರದಲ್ಲಿ ಸುಮಾರು 1.9 ಲಕ್ಷ ರೂ. ಹಣ ಇತ್ತು ಎನ್ನಲಾಗಿದೆ. ತನಿಖೆ ಕೈಗೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿರುವ ಆರೋಪ ಕೇಳಿ ಬಂದಿದ್ದು, ಪೊಲೀಸ್ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ವರನ್ನು ಅಮಾನತು ಮಾಡಿರುವ ಘಟನೆ ನಡೆದಿದೆ. ಸಿಲಿಕಾನ್ ಸಿಟಿಯ ವಿವೇಕನಗರ ಪೊಲೀಸ್ (Vivek Nagar) ಠಾಣೆಯ ಸಿಬ್ಬಂದಿ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ವರು ಸಿಬ್ಬಂದಿಯನ್ನು ಅಮಾನತು ಮಾಡಿ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಲಾಕಪ್ ಡೆತ್ ಆರೋಪ ಕೇಳಿ ಬರುತ್ತಿದ್ದಂತೆ ತನಿಖೆಗೆ ಸೂಚಿಸಲಾಗಿತ್ತು. ತನಿಖೆಯ ನಂತರ ನಾಲ್ವರನ್ನು ಅಮಾನತು ಮಾಡಲಾಗಿದೆ. ದರ್ಶನ್ ಎಂಬ ಯುವಕ ಲಾಕಪ್ ಡೆತ್ ಆಗಿದ್ದಾನೆಂಬ ಆರೋಪ ಕೇಳಿ ಬಂದಿದೆ. ಸಾವನ್ನಪ್ಪಿರುವ ದರ್ಶನ್ ಕಳೆದ ಕೆಲವು ದಿನಗಳ ಹಿಂದೆ ಕುಡಿದು ಬಂದು ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದೆ. ಹೀಗಾಗಿ ಪೊಲೀಸರು ಆತನನ್ನು ಠಾಣೆಗೆ ಕರೆತಂದು ಠಾಣೆಯಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದರಿಂದಾಗಿ ದರ್ಶನ್ ತೀವ್ರವಾಗಿ ಅಸ್ವಸ್ಥನಾಗಿದ್ದ.…
ಬೆಳಗಾವಿ: ಚಳಿಗಾಲದ ಅಧಿವೇಶನಕ್ಕೆ ದಿನಗಣನೆ ಆರಂಭವಾಗಿದ್ದು, ಗುಪ್ತಚರ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿ. 8ರಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸೂಕ್ತ ಭದ್ರತೆ ಕೈಗೊಳ್ಳಬೇಕು. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಗುಪ್ತಚರ ಇಲಾಖೆ (Intelligence Department) ಸೂಚಿಸಿದೆ.ಹೀಗಾಗಿ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಿದ್ದು, ಹೈ ಅಲರ್ಟ್ ಆಗಿದೆ. ಹೀಗಾಗಿ ಅಧಿವೇಶನದ ಸಮಯದಲ್ಲಿ 8 ಸಾವಿರದಷ್ಟು ಪೊಲೀಸರನ್ನು ನಿಯೋಜಿಸಲು ಇಲಾಖೆ ನಿರ್ಧರಿಸಿದೆ. ಅಧಿವೇಶನದಲ್ಲಿ ಸಚಿವಾಲಯ ಸಿಬ್ಬಂದಿ ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಅಧಿವೇಶನದ ಸಂದರ್ಭದಲ್ಲಿ ಸಾಕಷ್ಟು ಪ್ರತಿಭಟನೆಗಳು ಕೂಡ ನಡೆಯುತ್ತವೆ. ಹೀಗಾಗಿ ಹೆಚ್ಚಿನ ಭದ್ರತೆಯನ್ನು ಕಲ್ಪಿಸಲಾಗುತ್ತಿದೆ. ಈಗಾಗಲೇ ಸುವರ್ಣ ಸೌಧದಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಜಿಲ್ಲಾಡಳಿತ ಸಕಲ ವ್ಯವಸ್ಥೆ ಮಾಡುತ್ತಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೆಯುವ ಚಳಿಯಿದ್ದು, ಜನರು ಒದ್ದಾಡುತ್ತಿದ್ದಾರೆ. ಇದರ ಮಧ್ಯೆಯೇ ಹವಾಮಾನ ವೈಪರೀತ್ಯದಿಂದಾಗಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಜನರು ಹಾಗೂ ರೈತರು ಆತಂಕ ವ್ಯಕ್ತಪಡಿಸುವಂತಾಗುತ್ತಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ‘ಡಿತ್ವಾ’ ಚಂಡಮಾರುತದ ಪ್ರಭಾವ ತಗ್ಗಿ, ವಾಯುಭಾರ ಕುಸಿತವಾಗಿದ್ದು, ಪರಿಣಾಮವಾಗಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗದೆ. ಈ ಪ್ರದೇಶಗಳ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಅಲ್ಲದೇ, ಹಲವೆಡೆ ಶೀತ ಗಾಳಿಯೊಂದಿಗೆ ಚಳಿ ಮುಂದುವರೆಯಲಿದೆ. ಸಿಲಿಕಾನ್ ಸಿಟಿ ಹಾಗೂ ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ…
ಬೆಳಗಾವಿ: ಅಪ್ರಾಪ್ತ ಬಾಲಕಿ ಮೇಲೆ ಕಿರಾತಕರು ಅಟ್ಟಹಾಸ ಮೆರೆದಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಣಿಕಂಠ ದಿನ್ನಿಮನಿ ಮತ್ತು ಈರಣ್ಣ ಸಂಕಮ್ಮನವರ ಕೃತ್ಯ ಎಸಗಿದ ದುಷ್ಕರ್ಮಿಗಳು ಎನ್ನಲಾಗಿದೆ. 7ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕಾಮುಕರು ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆ ನ. 23ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಿರಾತಕರು ಬಾಲಕಿ ಹಾಗೂ ಕುಟುಂಬಸ್ಥರಿಗೆ ಜೀವ ಬೆದರಿಕೆ ಹಾಕಿದ್ದರಿಂದಾಗಿ ಅದು ತಡವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಹಿಟ್ಟುಬೀಸಲು ತೆರಳಿದ್ದ ಬಾಲಕಿ ಮೇಲೆ ಆರೋಪಿಗಳು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಬೆಂಗಳೂರು: ಸಚಿವ ಕೆ.ಜೆ. ಜಾರ್ಜ್ ವಿರುದ್ಧ ದಾಖಲಾಗಿದ್ದ ದೂರುಗಳನ್ನು ಹೈಕೋರ್ಟ್ (High Court) ರದ್ದು ಮಾಡಿದೆ. ಹೀಗಾಗಿ ಜಾರ್ಜ್ ನಿಟ್ಟುಸಿರು ಬಿಡುವಂತಾಗಿದೆ. ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ (Smart Meter Tender Scam) ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ (KJ George) ಸೇರಿದಂತೆ ಹಲವರ ವಿರುದ್ಧ ಖಾಸಗಿ ದೂರುಗಳು ದಾಖಲಾಗಿದ್ದವು. ಸಚಿವ ಕೆ.ಜೆ. ಜಾರ್ಜ್ ಅವರೊಂದಿಗೆ ಇಂಧನ ಇಲಾಖೆಯ ಗೌರವ್ ಗುಪ್ತ, ಬೆಸ್ಕಾಂನ ಮಹಾಂತೇಶ ಬೀಳಗಿ,ಎಚ್.ಜೆ. ರಮೇಶ್ ವಿರುದ್ಧ ಪ್ರಕರಣಗಳನ್ನೂ ರದ್ದು ಪಡಿಸಿ ಆದೇಶ ಹೊರಡಿಸಲಾಗಿದೆ. ಈ ದೂರನ್ನು ಬಿಜೆಪಿ ನಾಯಕರು ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಹೈಕೋರ್ಟ್ ಪೀಠವು ಸಚಿವ ಕೆ.ಜೆ.ಜಾರ್ಜ್ ವಿರುದ್ಧದ ಖಾಸಗಿ ದೂರು ರದ್ದು ಪಡಿಸಿ ಆದೇಶ ಹೊರಡಿಸಿದೆ. ಸ್ಮಾರ್ಟ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಗಂಭೀರ ಆರೋಪ ಮಾಡಿತ್ತು. ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ ಗೆ ಗುತ್ತಿಗೆ ನೀಡಿ ಗೋಲ್ಮಾಲ್ ಮಾಡಲಾಗಿದೆ ಎಂದು ಬಿಜೆಪಿ…
ನವದೆಹಲಿ: ದೇಶಕ್ಕೆ ನಿರುದ್ಯೋಗ ಸಮಸ್ಯೆ ಒಂದು ಪಿಡುಗಾಗಿದ್ದು, ವಿದ್ಯಾವಂತರು ಉದ್ಯೋಗ ಇಲ್ಲದೆ ಅಲೆದಾಡುವುದು ಸಾಮಾನ್ಯವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ನಿರುದ್ಯೋಗ ಸಮಸ್ಯೆ ಕಡಿಮೆಯಾಗುತ್ತಿದೆ ಎಂದು ಅಂಕಿ-ಅಂಶಗಳು ಹೇಳುತ್ತಿದ್ದು, ನಿಟ್ಟುಸಿರು ಬಿಡುವಂತಾಗುತ್ತಿದೆ. ಇತ್ತೀಚೆಗೆ ಸರ್ಕಾರ ಬಿಡುಗಡೆ ಮಾಡಿರುವ ವಾರ್ಷಿಕ ಕಾರ್ಮಿಕ ಸಮೀಕ್ಷಾ ವರದಿ (PLFS- Periodic Labour Force Survey)ಯಂತೆ ದೇಶದಲ್ಲಿ ನಿರುದ್ಯೋಗ ದರ (Unemployment rate) ಕಳೆದ 6 ವರ್ಷಗಳಲ್ಲಿ ಗಣನೀಯ ಇಳಿಕೆ ಕಂಡಿದೆ.2017-18ರಲ್ಲಿ 15 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಜನರ ನಿರುದ್ಯೋಗ ದರ ಶೇ. 6ರಷ್ಟಿತ್ತು. ಅದು 2023-24ಕ್ಕೆ ಶೇ. 3.2ಕ್ಕೆ ಇಳಿದಿದೆ. ಹೀಗಾಗಿ ಕಳೆದ 6 ವರ್ಷಗಳಲ್ಲಿ ನಿರುದ್ಯೋಗ ದರ ಶೇ. 6ರಿಂದ ಶೇ. 3.2ಕ್ಕೆ ಇಳಿದಿರುವುದು ಸಂತಸ ತಂದಿದೆ. 2025ರ ಆಗಸ್ಟ್ ತಿಂಗಳಲ್ಲಿ ಶೇ. 5.1 ನಿರುದ್ಯೋಗ ದರ ಇತ್ತು. ಸೆಪ್ಟೆಂಬರ್ ತಿಂಗಳಲ್ಲಿ ಶೇ. 5.2 ಇದೆ. ಈ ಎರಡು ತಿಂಗಳಲ್ಲಿ ಗ್ರಾಮೀಣ ನಿರುದ್ಯೋಗ ಕ್ರಮವಾಗಿ ಶೇ. 4.3 ಮತ್ತು ಶೇ. 4.6 ರಷ್ಟಿದೆ ಎಂದು ದತ್ತಾಂಶ…