Subscribe to Updates
Get the latest creative news from FooBar about art, design and business.
Author: Bosstv News Desk
ಬೆಂಗಳೂರು: ಲೈಂಗಿಕ ಸಮಸ್ಯೆ ಪರಿಹರಿಸುವುದಾಗಿ ಹೇಳಿ ಬರೋಬ್ಬರಿ 48 ಲಕ್ಷ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಗುರೂಜಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ ವಿನಯ್ ಗುರೂಜಿ ಎಂದು ಗುರುತಿಸಲಾಗಿದೆ. ಲೈಂಗಿಕ ಸಮಸ್ಯೆಗೆ ಆಯುರ್ವೇದದ ಮೂಲಕ ಪರಿಹಾರ ನೀಡುವುದಾಗಿ ನಂಬಿಸಿ ಟೆಕ್ಕಿಯೋರ್ವರಿಗೆ ಬರೋಬ್ಬರಿ 48 ಲಕ್ಷ ರೂ. ವಂಚಿಸಿರುವ ಆರೋಪ ಕೇಳಿ ಬಂದಿದೆ. ಬಂಧಿತ ಆರೋಪಿಯು, ರಸ್ತೆ ಪಕ್ಕದಲ್ಲಿ ಟೆಂಟ್‌ನಲ್ಲಿ ಕುಳಿತು ಆಯುರ್ವೇದ ಚಿಕಿತ್ಸೆ ನೀಡುವುದಾಗಿ ಜಾಹೀರಾತು ಹಾಕಿ, ನಕಲಿ ಔಷಧಿಗಳನ್ನು ಮಾರಾಟ ಮಾಡಿ ವಂಚಿಸುತ್ತಿದ್ದ ಎನ್ನಲಾಗಿದೆ. ವಂಚನೆಗೆ ಒಳಗಾಗಿರುವ ಟೆಕ್ಕಿ ಕೆಂಗೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳುತ್ತಿದ್ದರು ಎನ್ನಲಾಗಿದೆ. ಆಗ ರಸ್ತೆ ಬದಿಯಲ್ಲಿ ಹಾಕಲಾಗಿದ್ದ ಟೆಂಟ್ ನಲ್ಲಿ ದೇವರಾಜ್ ಬೂಟಿ’ ಎಂಬ ಔಷಧಿ ಖರೀದಿಸಲು ಆರೋಪಿ ಹೇಳಿದ್ದಾನೆ. ಒಂದು ಗ್ರಾಂ ಔಷಧಿಗೆ 1.5 ಲಕ್ಷ ರೂ. ಎಂದು ಹೇಳಿ ಟೆಕ್ಕಿಯಿಂದ 1.60 ಲಕ್ಷ ರೂ. ಪಡೆದಿದ್ದಾನೆ. ಆದರೆ, ಆನ್ ಲೈನ್ ನಲ್ಲಿ ಹಣ ಪಾವತಿಸಬಾರದು ಎಂದಿದ್ದಾನೆ.…
ಇತ್ತೀಚೆಗಷ್ಟೇ ರೈಸಿಂಗ್ ಸ್ಟಾರ್ಸ್ಟ್ ಏಷ್ಯಾಕಪ್ ಟೂರ್ನಿಯಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದ ಆಟಗಾರ ವೈಭವ್ ಸೂರ್ಯವಂಶಿ(Vaibhav Suryavanshi) ಈಗ ಮತ್ತೊಮ್ಮೆ ಮಿಂಚಿದ್ದಾರೆ. ಟಿ20 ಕ್ರಿಕೆಟ್ ದೇಶೀಯ ಅಂಗಳದಲ್ಲಿ ಈಗ ವೈಭವ್ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದಾರೆ. ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಹಾರಾಷ್ಟ್ರ ವಿರುದ್ಧ ವೈಭವ್ ಸೂರ್ಯವಂಶಿ ಸ್ಫೋಟಕ ಶತಕ ಸಿಡಿಸಿದ್ದಾರೆ. ಮಹಾರಾಷ್ಟ್ರ ತಂಡದ ನಾಯಕ ಪೃಥ್ವಿ ಶಾ ಟಾಸ್ ಗೆದ್ದು ಬಿಹಾರ ವಿರುದ್ಧ ಮೊದಲು ಬೌಲಿಂಗ್ ಆಯ್ದುಕೊಂಡರು. ಅದರಂತೆ ಬಿಹಾರ ದಾಂಡಿಗ ವೈಭವ್ ಸೂರ್ಯವಂಶಿ ಆರಂಭದಲ್ಲಿ ಎಚ್ಚರಿಕೆಯ ಆಟ ಪ್ರದರ್ಶಿಸಿ, ನಂತರ ಬೌಲ್ ನ್ನು ಮೈದಾನದ ಮೂಲೆ ಮೂಲೆಗೆ ಅಟ್ಟಿದರು. ಅರ್ಧಶತಕ ಪೂರೈಸಲು 34 ಎಸೆತಗಳನ್ನು ತೆಗೆದುಕೊಂಡಿದ್ದ ವೈಭವ್, 58 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದರು. ಮಹಾರಾಷ್ಟ್ರದ ಅನುಭವಿ ಬೌಲರ್ ಗಳು ಕೂಡ ವೈಭವ್ ವಿರುದ್ಧ ಮಂಡಿಯೂರುವಂತಾಯಿತು. ಅಲ್ಲದೇ, 61 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್, 7 ಫೋರ್ಗಳೊಂದಿಗೆ ಅಜೇಯ 108 ರನ್ ಗಳಿಸಿದರು. ಹೀಗಾಗಿ ವೈಭವ್ ಶತಕದ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನದ ಫೈಟ್ ‘ತಿಂಡಿ’ ಕೂಟವಾಗುತ್ತಿದೆ. ಈ ಮೂಲಕ ಮುಸುಕಿನ ಗುದ್ದಾಟಕ್ಕೆ ಕಾರಣವಾಗುತ್ತಿದೆ. ಇತ್ತೀಚೆಗಷ್ಟೇ ಸಿಎಂ ನಿವಾಸದಲ್ಲಿ ಆಯೋಜಿಸಿದ್ದ ಬ್ರೇಕ್ ಫಾಸ್ಟ್ ಸಭೆಗೆ ಡಿಕೆಶಿ ಹಾಜರಾಗಿ ಸಿಎಂಗೆ ಆಹ್ವಾನ ನೀಡಿದ್ದರು. ಅದರಂತೆ ಸಿಎಂ ಸಿದ್ದರಾಮಯ್ಯ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಆಗಮಿಸಿ ತಿಂಡಿ ಸೇವಿಸಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಹೈಕಮಾಂಡ್ ಸೂಚಿಸಿದಾಗ ಡಿಕೆಶಿ ಸಿಎಂ ಆಗುತ್ತಾರೆಂದು ಈ ವೇಳೆ ಸಿದ್ದರಾಮಯ್ಯ ಹೇಳಿದ್ದಾರೆ. ನಾವಿಬ್ಬರೂ ಇಂದು ಹಲವು ವಿಚಾರಗಳ ಕುರಿತು ಮಾತನಾಡಿದ್ದೇವೆ. ಡಿ. 8ರಿಂದ ಅಧಿವೇಶನ ಆರಂಭವಾಗುತ್ತಿರುವುದರಿಂದಾಗಿ ವಿಪಕ್ಷಗಳನ್ನು ಕಟ್ಟಿ ಹಾಕುವ ರಣನೀತಿ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು ಹಿಂದೆಯೂ ಒಗ್ಗಟ್ಟಾಗಿದ್ದೇವು. ಈಗಲೂ ಒಗ್ಗಟ್ಟಾಗಿದ್ದೇವೆ. 2028ಕ್ಕೆ ಮತ್ತೆ ಕಾಂಗ್ರೆಸ್ ನ್ನು ಅಧಿಕಾರಕ್ಕೆ ತರುವುದೇ ನಮ್ಮಿಬ್ಬರ ಸಿದ್ಧಾಂತವಾಗಿದೆ. ಅದಕ್ಕಾಗಿಯೇ ನಾವಿಬ್ಬರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಆದರೆ, ವಿರೋಧ ಪಕ್ಷಗಳು ಸುಖಾಸುಮ್ಮನೆ ಜನರ ಹಾದಿ ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ಬಿಜೆಪಿ ನಾಯಕರು ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸುವುದಾಗಿ ಹೇಳಿದ್ದಾರೆ. ಅವರು…
ರಾಮನಗರ: ಅನುಮಾನಾಸ್ಪದ ರೀತಿಯಲ್ಲಿ ಹೆಡ್ ಕಾನ್ಸ್ ಟೇಬಲ್ (Head Constable) ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಲಕ್ಷ್ಮಣ್ (51) ಎಂಬುವವರ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಅವರು ಹೆಡ್ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಲಕ್ಷ್ಮಣ್ ಚನ್ನಪಟ್ಟಣ (Channapatna) ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ, ಲಕ್ಷ್ಮಣ್ ಸೋಮವಾರ ಕರ್ತವ್ಯಕ್ಕೆ ಗೈರಾಗಿದ್ದರು. ಮೊಬೈಲ್ ಕೂಡ ಸ್ವಿಚ್ ಆಫ್ ಆಗಿತ್ತು ಎನ್ನಲಾಗಿದೆ. ಹೆಲ್ಮೆಟ್ ಸಮೇತ ಕೆರೆಯಲ್ಲಿ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳ ವ್ಯಕ್ತವಾಗುತ್ತಿವೆ. ಇಂದು ಬೆಳಗ್ಗೆ ಶವ ಪತ್ತೆಯಾಗಿದ್ದು, ಕೆರೆಯ ಪಕ್ಕದಲ್ಲಿ ಬೈಕ್ ಕೂಡ ಪತ್ತೆಯಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಿದ್ದಾರೆ.
ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಯಡಿಯೂರಪ್ಪ (Yediyurappa) ಸೇರಿದಂತೆ ನಾಲ್ವರು ಆರೋಪಿಗಳು ಕೂಡ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪಗೆ ಕೆಳ ಹಂತದ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ (Highcourt) ಮೆಟ್ಟಿಲೇರಿದ್ದರು. ಆದರೆ, ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿ ವಜಾಗೊಳಿಸಿ, ಟ್ರಯಲ್‌ಗೆ ಅನುಮತಿ ನೀಡಿತ್ತು. 1ನೇ ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು. ಹೀಗಾಗಿ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಸಹಾಯ ಕೇಳಲು ಬಂದಿದ್ದ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಯಡಿಯೂರಪ್ಪ ಮೇಲಿದೆ. ಈ ಕುರಿತು ಆರೋಪಿಸಿ ಮಾರ್ಚ್ 2024ರಲ್ಲಿ ಬಾಲಕಿಯ ತಾಯಿ…
ಬೆಂಗಳೂರು: ಕಾಂತಾರ ಚಿತ್ರದ ನಟ ರಿಷಬ್ ಶೆಟ್ಟಿಯನ್ನು ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದ ನಟ ರಣವೀರ್ ಸಿಂಗ್ ಕನ್ನಡಿಗರ ಕ್ಷಮೆ ಕೋರಿದ್ದಾರೆ. ಈ ವಿವಾದವನ್ನು ನಟ ರಣವೀರ್ ಸಿಂಗ್ ತಮ್ಮ ಸಿನಿಮಾ ಬಿಡುಗಡೆಯಾಗುತ್ತಿರುವ ಸಂದರ್ಭದಲ್ಲಿ ಮಾಡಿಕೊಂಡಿದ್ದು, ವಿಪರ್ಯಾಸ. ತಮ್ಮ ಸಿನಿಮಾ ‘ಧುರಂಧರ್’ (Dhurandhar) ಬಿಡುಗಡೆಯ ಹೊತ್ತಿನಲ್ಲೇ ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ‘ಕಾಂತಾರ’ ಚಿತ್ರ ಹಾಗೂ ರಿಷಬ್ ಶೆಟ್ಟಿ ಅವರನ್ನು ಹೊಗಳಲು ಆರಂಭಿಸಿದ್ದರು. ಆ ವೇಳೆ ರಣವೀರ್ ಸಿಂಗ್, ‘ದೈವ’ ಎನ್ನುವ ಬದಲು ‘ದೆವ್ವ’ ಎಂದಿದ್ದರು. ಅಲ್ಲದೇ, ರಿಷಬ್ ಅವರು ದೈವವನ್ನು ಅನುಕರಿಸಿದಂತೆ ತಾವೂ ಅನುಕರಣೆ ಮಾಡಲು ಯತ್ನಿಸಿದ್ದಾರೆ. ಇದನ್ನು ಕನ್ನಡಿಗರು ತೀವ್ರವಾಗಿ ಖಂಡಿಸಿದ್ದಾರೆ. ಹೀಗಾಗಿ ನಮ್ಮ ಸಂಸ್ಕೃತಿಗೆ ಅವಮಾನ ಆಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ರಣವೀರ್ ಸಿಂಗ್ ಬೇಷರತ್ ಕ್ಷಮೆ ಕೇಳಿದ್ದಾರೆ. ಅಲ್ಲದೇ, ಕ್ಷಮೆ ಕೇಳಿರುವ ಪೋಸ್ಟ್ ನ್ನು ಕೂಡ ಹಂಚಿಕೊಂಡಿದ್ದಾರೆ. ರಿಷಬ್ ಮಾಡಿದ್ದ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಮುಖ್ಯ ಉದ್ದೇಶವಾಗಿತ್ತು.…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕುರ್ಚಿ ಗುದ್ದಾಟ ಜೋರಾಗಿದ್ದು, ಇದರ ಮಧ್ಯೆಯೇ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಮನೆಗೆ ಭೇಟಿ ನೀಡಿ ಉಪಹಾರ ಸೇವಿಸಿದ್ದಾರೆ. ಇದು ತೀವ್ರ ಚರ್ಚೆಗೆ ಕಾರಣವಾಗಿದ್ದರೆ, ಕುತೂಹಲಕ್ಕೂ ಕಾರಣವಾಗಿದೆ. ಕುರ್ಚಿ ಗುದ್ದಾಟದ ಡ್ಯಾಮೇಜ್ ಸರಿ ಮಾಡಲು, ಜನರಿಗೆ ಯಾವುದೇ ಕುರ್ಚಿ ಗುದ್ದಾಟ ಇಲ್ಲ ಎಂಬ ಸಂದೇಶ ನೀಡುವುದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆಂಬುವುದು ಕೂಡ ಈ ಮೂಲಕ ಬಹಿರಂಗವಾಗಿದೆ. ಆದರೆ, ಸಿಎಂ ಸಿದ್ದರಾಮಯ್ಯ ಅವರು ಒಬ್ಬರೇ ಡಿಸಿಎಂ ಮನೆಗೆ ಹೋಗಿದ್ದಾರೆ. ಯಾವುದೇ ನಾಯಕರು ಅವರೊಂದಿಗೆ ಹೋಗಿಲ್ಲ. ಸಿಎಂ ಆಗಮಿಸುತ್ತಿದ್ದಂತೆ ಡಿಕೆಶಿ ಹೂಗುಚ್ಚ ನೀಡಿ ಸ್ವಾಗತಿಸಿದ್ದಾರೆ. ಆ ವೇಳೆ ಸಿಎಂ ಕಾಲಿಗೆ ಬಿದ್ದು ಕುಣಿಗಲ್ ರಂಗನಾಥ್ ನಮಸ್ಕರಿಸಿದ್ದಾರೆ. ಕೆಲವು ಸಚಿವರು ಹಾಗೂ ಶಾಸಕರು ಕೂಡ ಸಿಎಂ ಜೊತೆ ತೆರಳಬಹುದು ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ, ಯಾವೊಬ್ಬ ನಾಯಕರೂ ತೆರಳಿಲ್ಲ. ಶನಿವಾರ ಸಿಎಂ ಕಾವೇರಿ ನಿವಾಸದಲ್ಲಿ ಡಿಸಿಎಂಗಾಗಿ ಬ್ರೇಕ್ ಫಾಸ್ಟ್ ಸಭೆ ಆಯೋಜಿಸಲಾಗಿತ್ತು.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈಗ ಭಾರತದ ಭರವಸೆ ಮಾತ್ರವಲ್ಲ, ಶ್ರೀಲಂಕಾದ ಭರವಸೆ ಕೂಡ ಆಗಿದ್ದಾರೆ. ಶ್ರೀಲಂಕಾ ರಾಷ್ಟ್ರವು ದಿತ್ವಾ ಚಂಡಮಾರುತದಿಂದಾಗಿ ತತ್ತರಿಸಿ ಹೋಗಿದೆ. ಸಾಕಷ್ಟು ಸಾವು- ನೋವುಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸಾನಾಯಕೆ ಅವರಿಗೆ ಕರೆ ಮಾಡಿ ಧೈರ್ಯ ತುಂಬುವ ಕಾರ್ಯ ಮಾಡಿದ್ದಾರೆ. ದಿತ್ವಾ ಚಂಡಮಾರುತದಿಂದಾಗಿ ಸಾಕಷ್ಟು ಸಾವು- ನೋವು ಸಂಭವಿಸಿದ್ದು,ಇದರಿಂದ ಉಂಟಾದ ಜೀವ ಹಾನಿಗೆ ಸಂತಾಪ ಸೂಚಿಸುವುದಾಗಿ ಹೇಳಿದ್ದಾರೆ. ಅಲ್ಲದೇ, ಭಾರತವು ನಿಮ್ಮೊಂದಿಗೆ ಯಾವಾಗಲೂ ಇರುತ್ತದೆ. ನಿಮ್ಮೊಂದಿಗೆ ಭಾರತ ದೃಢವಾಗಿ ನಿಲ್ಲುತ್ತದೆ. ಅಗತ್ಯವಿರುವ ಎಲ್ಲ ಸಹಾಯವನ್ನು ಮಾಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ. ದಿತ್ವಾ ಚಂಡಮಾರುತದಿಂದಾಗಿ ಈಗಾಗಲೇ ಶ್ರೀಲಂಕಾದಲ್ಲಿ 300ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಹಲವರು ಕಾಣೆಯಾಗಿದ್ದಾರೆ. ಹೀಗಾಗಿ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಸುಮಾರು 1.5 ಲಕ್ಷ ಜನರನ್ನು ತಾತ್ಕಾಲಿಕ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ…
ಕಲಬುರಗಿ : ಭೀಕರ ಅಪಘಾತ ಸಂಭವಿಸಿದ ಪರಿಣಾಮ ಹಿರಿಯ ಐಎಎಸ್ ಅಧಿಕಾರಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಹತ್ತಿರ ಈ ಘಟನೆ ನಡೆದಿದೆ. ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಪಲ್ಟಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (IAS Officer Mahantesh Bilagi) ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರನ್ನು ಮಹಾಂತೇಶ್ ಅವರ ಸಹೋದರ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಎಂದು ಗುರುತಿಸಲಾಗಿದೆ. ಮೂವರೂ ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದರು ಎನ್ನಲಾಗಿದೆ.ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಜಿಲ್ಲೆಯಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್ನ IAS ಅಧಿಕಾರಿಯಾಗಿದ್ದು, ಸದ್ಯ ರಾಜ್ಯ…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ(PM Narendra Modi) ರಾಜ್ಯಕ್ಕೆ ಆಗಮಿಸುತ್ತಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ನ. 28ರಂದು ಉಡುಪಿಯ ಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಆಗಮಿಸುತ್ತಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಕಚೇರಿಯು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ನ. 28ರಂದು ಬೆಳಿಗ್ಗೆ 11.05ಕ್ಕೆ ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 11.10ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ. ಬೆಳಿಗ್ಗೆ 11.35ಕ್ಕೆ ಉಡುಪಿಯ ಹೆಲಿಪ್ಯಾಡ್ ತಲುಪಲಿದ್ದು, ಮಧ್ಯಾಹ್ನ 12ಕ್ಕೆ ನೇರವಾಗಿ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಸುವರ್ಣತೀರ್ಥ ಮಂಟಪ ಮತ್ತು ಕನಕನ ಕಿಂಡಿಗೆ ಸ್ವರ್ಣ ಕವಚ ಲೋಕಾರ್ಪಣೆ ಮಾಡಲಿದ್ದಾರೆ. ಶ್ರೀಕೃಷ್ಣನ ದರ್ಶನ ಪಡೆದು ಲಕ್ಷಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಅವರು ಭಗವದ್ಗೀತೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ. ಈ…