Author: Bosstv News Desk

ತುಮಕೂರು: ಜೋಳದ ಚಿಗುರು ಸೇವಿಸಿದ ಪರಿಣಾಮ 50ಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಪೆನ್ನೋಬನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಂಪಕ್ಕ ಎಂಬುವವರಿಗೆ ಸೇರಿದ್ದ 50ಕ್ಕೂ ಅಧಿಕ ಕುರಿಗಳು ಜೋಳದ ಚಿಗುರು ಸಿಪ್ಪೆ ಸೇವಿಸಿದ ಪರಿಣಾಮ ಸಾವನ್ನಪ್ಪಿವೆ. ಎಂದಿನಂತೆ ಕುರಿಗಳನ್ನು ಮೇಯಲು ಹೋಗಲಾಗಿತ್ತು. ಹುಲ್ಲು ಮೇಯುತ್ತಿದ್ದ ಕುರಿಗಳು, ಏಕಾಏಕಿ ಕುಸಿದು ಬೀಳತೊಡಗಿದ್ದು, ಕೆಲವೇ ಕ್ಷಣಗಳಲ್ಲಿ 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಇದನ್ನು ಕಂಡ ಕುರಿಗಾಹಿ ಕಂಗಾಲಾಗಿದ್ದಾರೆ. ಲಕ್ಷಾಂತರ ರೂ. ನಷ್ಟವಾಗಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪಶುಪಾಲನಾ ಇಲಾಖೆಯ ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆಯ ವೇಳೆ ಕುರಿಗಳು ಜೋಳದ ಚಿಗುರು ಸಿಪ್ಪೆಯನ್ನು ಸೇವಿಸಿರುವುದು ಪತ್ತೆಯಾಗಿದೆ. ವೈದ್ಯಾಧಿಕಾರಿ ಅರ್ಕೆರಪ್ಪ ಅವರು, ಜೋಳದ ಚಿಗುರು ಸಿಪ್ಪೆಯಲ್ಲಿ ಸೈನೆಡ್ ಅಂಶ ಇರುವುದರಿಂದ ಅದು ವಿಷವಾಗಿ ಪರಿಣಮಿಸಿ ಕುರಿಗಳು ಸಾವನ್ನಪ್ಪಿವೆ ಎಂದು ಹೇಳಿದ್ದಾರೆ. ಮತ್ತೆ ಈ ರೀತಿ ತಪ್ಪು ಮಾಡದಂತೆ ಕುರಿಗಾಹಿಗಳಿಗೆ ಹಾಗೂ ರೈತರಿಗೆ ಪಶು ವೈದ್ಯಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

Read More

ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಭಾರೀ ಹೈಡ್ರಾಮಾನ ನಡೆದಿತ್ತು. ಆ ವೇಳೆ ಗುಂಡು ಹಾರಿ ಓರ್ವ ವ್ಯಕ್ತಿ ಕೂಡ ಸಾವನ್ನಪ್ಪಿದ್ದ. ಈಗ ಫೈರಿಂಗ್ ಪ್ರಕರಣದ ಬೆನ್ನಲ್ಲೇ ಸತೀಶ್ ರೆಡ್ಡಿ (Satish Reddy) ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ. ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಜನಾರ್ದನ ರೆಡ್ಡಿ ಹಾಗೂ ಸತೀಶ್ ರೆಡ್ಡಿಗೆ ಸಂಬಂಧಿಸಿದ ಗನ್‌ಮ್ಯಾನ್‌ಗಳಿಂದ ಪೊಲೀಸರು 5 ಗನ್‌ ಗಳನ್ನು ವಶಕ್ಕೆ ಪಡೆದಿದ್ದಾರೆ. ಗನ್‌ಗಳನ್ನ ವಶಕ್ಕೆ ಪಡೆದ ಬೆನ್ನಲ್ಲೇ ಸತೀಶ್ ರೆಡ್ಡಿ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ. ಸತೀಶ್ ರೆಡ್ಡಿಯ ನಾಲ್ವರು ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದು, ಅವರ ಸುಳಿವು ಮಾತ್ರ ಸಿಗುತ್ತಿಲ್ಲ. ಕಾಂಗ್ರೆಸ್ ಹಾಗೂ ಬಿಜೆಪಿಯವರ ಗುದ್ದಾಟದಲ್ಲಿ ಓರ್ವ ಕೈ ಕಾರ್ಯಕರ್ತ ಬಲಿಯಾಗಿದ್ದಾರೆ. ಈಗಾಗಲೇ ಸಾವನ್ನಪ್ಪಿದ ವ್ಯಕ್ತಿಗೆ ತಗುಲಿದ ಗುಂಡು ಪೊಲೀಸರದ್ದಲ್ಲ, ಖಾಸಗಿ ವ್ಯಕ್ತಿಗಳದ್ದು ಎಂದು ಎಸ್ಪಿ ಹೇಳಿದ್ದಾರೆ. ಗಲಾಟೆಯ ವಿಡಿಯೋಗಳು ಕೂಡ ಈಗ ವೈರಲ್ ಆಗಿದ್ದು, ಸತೀಶ್…

Read More

ಹೈದರಾಬಾದ್: ಐಐಟಿ ಕೊನೆಯ ವರ್ಷದ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ 21 ವರ್ಷದ ಎಡ್ವರ್ಡ್ ನೇತನ್ ವರ್ಗೀಸ್ಗೆ (Edward Nathan Varghese) ಗೆ 2.5 ಕೋಟಿ ರೂ. ಸಂಬಳದ ಆಫರ್ ನೀಡಲಾಗಿದೆ ಎಂದು ವರದಿಯಾಗಿದೆ. ಐಐಟಿ ಹೈದರಾಬಾದ್ನ ಎಡ್ವರ್ಡ್ ಗೆ 2.5 ಕೋಟಿ ರೂ ಸ್ಯಾಲರಿ ಪ್ಯಾಕೇಜ್ ಕೊಡಲಾಗುತ್ತಿದೆ. ನೆದರ್ಲ್ಯಾಂಡ್ಸ್ ಮೂಲದ ಗ್ಲೋಬಲ್ ಟ್ರೇಡಿಂಗ್ ಸಂಸ್ಥೆಯಾದ ಆಪ್ಟಿವರ್ (Optiver) ಆಫರ್ ನೀಡಿದೆ ಎನ್ನಲಾಗಿದೆ. ಎಡ್ವರ್ಡ್ ನೇತನ್ ವರ್ಗೀಸ್ ಹಾಗೂ ಐಐಟಿ ಹೈದರಾಬಾದ್ನ ಮತ್ತೊಬ್ಬ ವಿದ್ಯಾರ್ಥಿ, ಈ ಇಬ್ಬರೂ ಆಪ್ಟೀವರ್ನ ಎರಡು ತಿಂಗಳ ಇಂಟರ್ನ್ಶಿಪ್ಗೆ ಸೇರಿಕೊಂಡಿದ್ದರು. ಎಡ್ವರ್ಡ್ ಅವರನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳಲು ಆಪ್ಟೀವರ್ ನಿರ್ಧರಿಸಿದೆ. 21 ವರ್ಷದ ಎಡ್ವರ್ಡ್ಗೆ ಆಪ್ಟೀವರ್ 2.5 ಕೋಟಿ ರೂ ಸಂಬಳ ಆಫರ್ ಮಾಡಿದೆ. 2008ರಲ್ಲಿ ಆರಂಭವಾದ ಐಐಟಿ ಹೈದರಾಬಾದ್ನಲ್ಲಿ ಇಲ್ಲಿಯವರೆಗೆ ಯಾವ ವಿದ್ಯಾರ್ಥಿ ಕೂಡ ಕ್ಯಾಂಪಸ್ ಪ್ಲೇಸ್ಮೆಂಟ್ನಲ್ಲಿ ಇಷ್ಟೊಂದು ಸ್ಯಾಲರಿ ಆಫರ್ ಪಡೆದಿದ್ದಿಲ್ಲ. ಎಡ್ವರ್ಡ್ ನೇತನ್ ವರ್ಗೀಸ್ ಮೂಲತಃ ಹೈದರಾಬಾದ್ನವರೇ. ಅಲ್ಲೇ ಹುಟ್ಟಿ ಬೆಳೆದಿದ್ದು.…

Read More

ಬಳ್ಳಾರಿ: ನಗರದಲ್ಲಿರುವ ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ವಿಚಾರವಾಗಿ ದೊಡ್ಡ ಗಲಾಟೆ ನಡೆದಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಸದ್ಯ ಈ ಘಟನೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ದೊಡ್ಡ ವಾಗ್ವಾದಕ್ಕೆ ಕಾರಣವಾಗಿದೆ. ಈ ಮಧ್ಯೆ ಸಾವನ್ನಪ್ಪಿರುವ ರಾಜಶೇಖರ್ ಯಾರ ಗುಂಡೇಟಿಗೆ ಬಲಿಯಾಗಿದ್ದಾನೆ ಎಂಬ ತನಿಖೆ ಶುರುವಾಗಿದೆ. ನನ್ನ ಕೊಲೆಗೆ ನಡೆದ ಸಂಚು ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದರೆ, ಅಕ್ರಮ ಗಣಿಗಾರಿಕೆ ವಿಷಯ ಡೈವರ್ಟ್ ಮಾಡಲು ಇಂತಹ ನೀಜ ಕೃತ್ಯಕ್ಕೆ ಜನಾರ್ದನ ರೆಡ್ಡಿ ಇಳಿದಿದ್ದಾನೆ ಎಂದು ಏಕವಚನದಲ್ಲೇ ಭರತ್ ರೆಡ್ಡಿ ಕಿಡಿಕಾರಿದ್ದಾರೆ. ಬ್ಯಾನರ್ ವಿಚಾರವಾಗಿ ಗಲಾಟೆ ವಿಕೋಪಕ್ಕೆ ಹೋಗುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಶಾಸಕ ಭರತ್ ರೆಡ್ಡಿ ಆಪ್ತನ ಬಾಡಿಗಾರ್ಡ್ಗಳು ಕೂಡ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣ ಸಂಬಂಧ ಖಾಸಗಿ ಗನ್ಮ್ಯಾನ್ಗಳ 3 ಗನ್ ಸೀಜ್ ಮಾಡಲಾಗಿದೆ.…

Read More

ಶಿವಮೊಗ್ಗ: ಬಳ್ಳಾರಿಯಲ್ಲಿ (Ballari) ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ನಿನ್ನೆ ಬ್ಯಾನರ್ ವಿಷಯಕ್ಕೆ ದೊಡ್ಡ ಗಲಾಟೆ ನಡೆದಿದ್ದು, ಕಾಂಗ್ರೆಸ್ ನ ಓರ್ವ ಕಾರ್ಯಕರ್ತ ಸಾವನ್ನಪ್ಪಿದ್ದ. ಇಂದು ಕೂಡ ಸ್ಥಳದಲ್ಲಿ ಬಿಗುವಿನ ವಾತಾವರಣ ಮುಂದುವರೆದಿದ್ದು, ಶಾಸಕ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಮಧ್ಯೆ ದೊಡ್ಡ ವಾಗ್ವಾದವೇ ನಡೆಯುತ್ತಿದೆ. ಈ ಮಧ್ಯೆ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಖಂಡಿಸಿದ್ದಾರೆ. ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ (Ballari Violence) ದುಷ್ಕೃತ್ಯವಾಗಿದೆ. ಈ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು ಬಿಜೆಪಿ (BJP) ವಿಜಯೇಂದ್ರ (B.Y Vijayendra) ಎಕ್ಸ್‌ ನಲ್ಲಿ ಬರೆದುಕೊಂಡು ಆಕ್ರೋಶ ಹೊರಹಾಕಿದ್ದಾರೆ. ಜನಾರ್ಧನ ರೆಡ್ಡಿ (Janardhana Reddy) ಮತ್ತವರ ಕುಟುಂಬವನ್ನು ಗುರಿಯನ್ನಾಗಿಸಿಕೊಂಡು ನಡೆದಿರುವ ಈ ಘಟನೆಗೆ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಉದ್ಘಾಟನೆಯ ಕಾರ್ಯಕ್ರಮದ ಬ್ಯಾನರ್‌ ಅಳವಡಿಸುವುದನ್ನು ನೆಪವಾಗಿಸಿಕೊಳ್ಳಲಾಗಿದೆ. ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿದಿಲ್ಲ. ನಾಗರಿಕ ಸಮಾಜ ನೆಮ್ಮದಿಯಾಗಿ ಬದುಕುವ ವಾತಾವರಣವನ್ನು ವಿಚಲಿತಗೊಳಿಸಿ, ಭಯಗ್ರಸ್ಥ ನಗರವನ್ನಾಗಿಸಲು ಸ್ಥಳೀಯ ಶಾಸಕರ…

Read More

ಬಳ್ಳಾರಿ ಬ್ಯಾನರ್ ಕಿಚ್ಚು ದೊಡ್ಡ ಮಟ್ಟದ ಹಿಂಸಾಚಾರಕ್ಕೆ ಕಾರಣವಾಗಿದೆ. ಇಂದು ನಾಯಕರ ಆರೋಪ- ಪ್ರತ್ಯಾರೋಪಗಳು ಜೋರಾಗಿವೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ನಾರಾ ಭರತ್ ರೆಡ್ಡಿ, ಜನಾರ್ದನ ರೆಡ್ಡಿ ಓರ್ವ ನೀಚ. ರಾಕ್ಷಸ. ಅವನೇ ರೋಡಿಗೆ ಬಂದು ಈ ರೀತಿ ಗಲಾಟೆ ಮಾಡಿದ್ದಾನೆ. ನಾವು ಅವನ ಮನೆ ಮುಂದೆ ಬ್ಯಾನರ್ ಹಾಕಿಲ್ಲ. ಕಾರ್ಯಕ್ರಮ ಹಾಳು ಮಾಡುವುದಕ್ಕಾಗಿ ಆತ ಈ ರೀತಿ ಮಾಡುತ್ತಿದ್ದಾನೆ ಎಂದು ವಾಗ್ದಾಳಿ ನಡೆಸಿದ್ದಾರೆ. ಆತ ತನ್ನ ಬೆಂಬಲಿಗರೊಂದಿಗೆ ಸೇರಿ ರಾಕ್ಷಸತನ ಪ್ರದರ್ಶಿಸುತ್ತಿದ್ದಾನೆ. ನಾನು ವಿಷಯವನ್ನು ಡೈವರ್ಟ್ ಮಾಡಲ್ಲ. ಹಿಂದಿನಿಂದಲೂ ಬಳ್ಳಾರಿಯಲ್ಲಿ ಆತನ ರಾಕ್ಷಸತನ, ನೀಚತನ ನಡೆದುಕೊಂಡೇ ಬರುತ್ತಿದೆ. ಇದು ಇಡೀ ರಾಜ್ಯದ ಜನತೆಗೆ ಗೊತ್ತಿದೆ. ವಾಲ್ಮೀಕಿ ಅಜ್ಜನ ಕಾರ್ಯಕ್ರಮ ಮಾಡಬಾರದು ಎಂಬ ನಿಟ್ಟಿನಲ್ಲಿ ಆತ ಈ ರೀತಿ ಮಾಡುತ್ತಿದ್ದಾನೆ. ಯಾರೇ ಏನೇ ವಿರೋಧಿಸಿದರೂ ನಾನು ವಾಲ್ಮೀಕಿ ಅಜ್ಜನ ಜಯಂತಿ ಮಾಡುತ್ತೇನೆ. ನನ್ನ ಕಾರ್ಯಕರ್ತನ ಸಾವಾಗಿದೆ. ನಾನು ಕಾರ್ಯಕ್ರಮ ಮಾಡದಿದ್ದರೆ ಆತನ ಆತ್ಮಕ್ಕೆ ಶಾಂತಿ ಸಿಗುವುದಿಲ್ಲ. ಎಷ್ಟೇ ರಾಕ್ಷಸರು ಅಡ್ಡ…

Read More

ಬರ್ಲಿನ್: ಜರ್ಮನಿಯಲ್ಲಿ (Germany) ಭಾರತೀಯ ವಿದ್ಯಾರ್ಥಿ (Indian Student) ಬೆಂಕಿಗೆ ಆಹುತಿಯಾಗಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ತೆಲಂಗಾಣದ ಹೃತಿಕ್ ರೆಡ್ಡಿ(25) ಸಾವನ್ನಪ್ಪಿರುವ ವಿದ್ಯಾರ್ಥಿ. ಜರ್ಮನಿಯಲ್ಲಿರುವ ನಿವಾಸದಲ್ಲಿ ತೀವ್ರ ಬೆಂಕಿ ಕಾಣಿಸಿಕೊಂಡಿತ್ತು. ತಡರಾತ್ರಿ ಸಂಭವಿಸಿದ ಬೆಂಕಿ ದುರಂತದಲ್ಲಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ವೇಗವಾಗಿ ಹರಡುತ್ತಿದ್ದ ಬೆಂಕಿ ಮತ್ತು ದಟ್ಟ ಹೊಗೆಯಿಂದ ತಪ್ಪಿಸಿಕೊಳ್ಳಲು ಹೃತಿಕ್ ಬರ್ಲಿನ್‌ನ ಅಪಾರ್ಟ್‌ಮೆಂಟ್‌ನ ಮೇಲಿನ ಮಹಡಿಯಿಂದ ಹಾರಿದ್ದಾನೆ. ಪರಿಣಾಮ ಹೃತಿಕ್ ತಲೆಗೆ ಪೆಟ್ಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹೊಸ ವರ್ಷದ ದಿನದಂದೇ ಈ ಅವಘಡ ಸಂಭವಿಸಿದ್ದು, ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಶೋಕ ಆವರಿಸಿದೆ. ತೆಲಂಗಾಣದ ಜನಗಾಂವ್ ಜಿಲ್ಲೆಯ ಮಲ್ಕಾಪುರ್ ಗ್ರಾಮದಲ್ಲಿರುವ ಕುಟುಂಬಸ್ಥರ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಹೃತಿಕ್ ರೆಡ್ಡಿ ಯುರೋಪ್ ವಿಶ್ವವಿದ್ಯಾಲಯದಲ್ಲಿ ಎಂಎಸ್ ಪದವಿ ಪಡೆಯಲು 2023 ರ ಜೂನ್‌ನಲ್ಲಿ ಜರ್ಮನಿಯ ಮ್ಯಾಗ್ಡೆಬರ್ಗ್‌ಗೆ ತೆರಳಿದ್ದರು. 2022 ರಲ್ಲಿ ವಾಗ್ದೇವಿ ಕಾಲೇಜ್ ಆಫ್ ಎಂಜಿನಿಯರಿಂಗ್‌ನಿಂದ ಪದವಿ ಪಡೆದಿದ್ದರು. ಕುಟುಂಬಸ್ಥರು ಮತ್ತು ಸ್ನೇಹಿತರು…

Read More

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಇದೇ ತಿಂಗಳು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಪ್ರಧಾನಿ ಮೋದಿ ಫೆ.23ಕ್ಕೆ ಆದಿಚುಂಚನಗಿರಿಗೆ (Adichunchanagiri) ಭೇಟಿ ನೀಡುತ್ತಿದ್ದಾರೆ. ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala) ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಿ, ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. ನಂತರ ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲಿದ್ದಾರೆ. ಅಂದು ಶ್ರೀಕ್ಷೇತ್ರ ಆದಿಚುಂಚನಗಿರಿ ಹಾಗೂ ಧಾರ್ಮಿಕ ವಿಚಾರವಾಗಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಮಠದಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ.

Read More

ಪ್ರಸಕ್ತ ವರ್ಷದ ವಿಜಯ್ ಹಜಾರೆ ಟ್ರೋಫಿ ಪಂದ್ಯಗಳು ಹಲವಾರು ದಾಖಲೆಗಳಿಗೆ ಸಾಕ್ಷಿಯಾಗುತ್ತಿವೆ. ಟೂರ್ನಿಯ ನಾಲ್ಕನೇ ಸುತ್ತಿನ ಪಂದ್ಯದಲ್ಲಿ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಒಂದೇ ದಿನ 5 ಶತಕಗಳು ದಾಖಲಾಗಿವೆ. ಸನೋಸರಾ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬರೋಡಾ ಹಾಗೂ ಹೈದರಾಬಾದ್ ತಂಡಗಳ ಮಧ್ಯೆ ಫೈಟ್ ನಡೆದಿತ್ತು. ಈ ಪಂದ್ಯದಲ್ಲಿ ಉಭಯ ತಂಡಗಳ ಒಟ್ಟು ಐವರು ಬ್ಯಾಟ್ಸ್‌ಮನ್‌ಗಳು ಶತಕ ಬಾರಿಸಿ ದಾಖಲೆ ನಿರ್ಮಿಸಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ಬರೋಡಾ ತಂಡದ ಮೂವರು ಬ್ಯಾಟ್ಸ್‌ಮನ್‌ಗಳು ಶತಕ ಸಿಡಿಸಿದರು. ಪರಿಣಾಮ ತಂಡದ ಮೊತ್ತ ಬರೋಬ್ಬರಿ 417 ರನ್ ಆಗಿತ್ತು. ಕಠಿಣ ಗುರಿ ಬೆನ್ನಟ್ಟಿದ ಹೈದರಾಬಾದ್ ತಂಡದ ಇಬ್ಬರು ಬ್ಯಾಟ್ಸ್‌ಮನ್‌ಗಳು ಶತಕ ಗಳಿಸಿದರು. ಒಂದೇ ಪಂದ್ಯದಲ್ಲಿ ಒಟ್ಟು ಐದು ಶತಕಗಳು ದಾಖಲಾಗಿದ್ದು, ಲಿಸ್ಟ್ ಎ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲಾಗಿದೆ. ಬರೋಡಾ ಪರ ಅತ್ಯಧಿಕ ರನ್ಗಳ ಇನ್ನಿಂಗ್ಸ್ ಆಡಿದ ಆರಂಭಿಕ ಆಟಗಾರ ನಿತ್ಯಾ ಪಾಂಡ್ಯ 100 ಎಸೆತಗಳಲ್ಲಿ 12 ಬೌಂಡರಿ ಮತ್ತು 1 ಸಿಕ್ಸರ್ ಸೇರಿದಂತೆ 122…

Read More

ಬೆಂಗಳೂರು: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದೆರಡು ದಿನಗಳಿಂದಲೂ ದಕ್ಷಿಣ ಒಳನಾಡಿನ ಕೆಲವೆಡೆ ಲಘು ಮಳೆಯಾಗುವ (Weather Forecast) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿತ್ತು. ಅಲ್ಲಲ್ಲಿ ಮಳೆ ಕೂಡ ಗಿತ್ತು. ಇಂದು ಕೂಡ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮೂನ್ಸೂಚನೆ ಸಿಕ್ಕಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉಳಿದಂತೆ ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿಯಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು…

Read More