Author: Bosstv News Desk

ಬೀಜಿಂಗ್: ಭಾರತ ಮತ್ತು ಪಾಕಿಸ್ತಾನ (India-Pakistan) ಮಧ್ಯೆ ನಡೆಯುತ್ತಿದ್ದ ಯುದ್ಧ ನಿಲ್ಲಿಸಿದ್ದು ನಾನೇ ಅಂತಾ ಇತ್ತೀಚೆಗಷ್ಟೇ ಟ್ರಂಪ್ (Donald Trump) ಬಾಯಿ ಬಾಯಿ ಬಡಿದುಕೊಂಡಿದ್ದರೂ ಇದಕ್ಕೆ ಭಾರತ ತಿರುಗೇಟು ಕೊಟ್ಟಿತ್ತು. ಈಗ ಚೀನಾ ಮಧ್ಯೆ ಪ್ರವೇಶಿಸಿದ್ದು, ಯುದ್ಧ ನಿಲ್ಲಿಸಿದ್ದು ನಾನು ಅಂತಾ ಹೇಳಿದೆ. ಚೀನಾದ (China) ವಿದೇಶಾಂಗ ಸಚಿವ ವಾಂಗ್ ಯಿ, ಮೇ ತಿಂಗಳಲ್ಲಿ ಭಾರತ-ಪಾಕಿಸ್ತಾನ ಉದ್ವಿಗ್ನತೆ ಶಮನಕ್ಕೆ ಚೀನಾ ಮಧ್ಯಸ್ಥಿಕೆ ವಹಿಸಿತ್ತು ದಿದ್ದಾರೆ. ಟ್ರಂಪ್ ಯುದ್ಧದ ನಿಲ್ಲಿಸಿದ್ದರ ಬಗ್ಗೆ ಹೇಳಿಕೆ ನೀಡಿದ ನಂತರ ಭಾರತ ಮೂರನೇ ವ್ಯಕ್ತಿಯ ಹಸ್ತಕ್ಷೇಪವನ್ನು ದೃಢವಾಗಿ ತಿರಸ್ಕರಿಸಿತ್ತು. ನೇರ ದ್ವಿಪಕ್ಷೀಯ ಸಂವಹನದ ಮೂಲಕ ಕದನ ವಿರಾಮವನ್ನು ಸಾಧಿಸಲಾಗಿದೆ ಎಂದು ಭಾರತ ಸ್ಪಷ್ಟಪಡಿಸಿದರೂ, ಈಗ ಎರಡೂ ರಾಷ್ಟ್ರಗಳು ತಮ್ಮ ಉದ್ಧಟತನದ ಹೇಳಿಕೆ ನೀಡುತ್ತಿವೆ. ಇತ್ತೀಚೆಗೆ ಸ್ಥಳೀಯ ಯುದ್ಧಗಳು ಮತ್ತು ಗಡಿಯಾಚೆಗಿನ ಘರ್ಷಣೆಗಳು ಹೆಚ್ಚಾಗಿ ಭುಗಿಲೆದ್ದಿವೆ. ಭೌಗೋಳಿಕ ರಾಜಕೀಯ ಪ್ರಕ್ಷುಬ್ಧತೆ ಹರಡುತ್ತಲೇ ಇತ್ತು. ಶಾಶ್ವತವಾದ ಶಾಂತಿಯನ್ನು ನಿರ್ಮಿಸಲು, ನಾವು ವಸ್ತುನಿಷ್ಠ ಮತ್ತು ನ್ಯಾಯಯುತ ನಿಲುವನ್ನು ತೆಗೆದುಕೊಂಡಿದ್ದೇವೆ. ಸಮಸ್ಯೆಗಳನ್ನು ಪರಿಹರಿಸುವತ್ತ…

Read More

ತಿರುವನಂತಪುರ: ಭಾರತೀಯ ಮಹಿಳಾ ತಂಡದ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ಅವರು ಭಾರತೀಯ ಮಹಿಳಾ ತಂಡದ ಲೆಜೆಂಡ್ ಮಿಥಾಲಿ ರಾಜ್ ಅವರ ದಾಖಲೆ ಸರಿಗಟ್ಟಿದ್ದಾರೆ. ಶ್ರೀಲಂಕಾ ಮಹಿಳಾ ತಂಡದ ವಿರುದ್ಧ ನಡೆದ 5ನೇ ಟಿ20 ಪಂದ್ಯದಲ್ಲಿ ಹರ್ಮನ್ ಪ್ರೀತ್ ಅವರ ಅದ್ಭುತ ಹಾಗೂ ಅರ್ಧಶತಕದ ನೆರವಿನಿಂದಾಗಿ ಭಾರತ ತಂಡ ಗೆಲುವಿನ ನಗೆ ಬೀರಿತು. ಈ ಮೂಲಕ ಭಾರತ ತಂಡವು ಸರಣಿಯನ್ನು ಸರಣಿಯನ್ನು ಕ್ಲೀನ್‌ ಸ್ವೀಪ್‌ ಮಾಡಿತು..ಕೊನೆಯ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ನಾಯಕಿ ಹರ್ಮನ್‌ಪ್ರೀತ್ ಕೌರ್(Harmanpreet Kaur) ಮಾಜಿ ಆಟಗಾರ್ತಿ ಮಿಥಾಲಿ ರಾಜ್‌(Mithali Raj) ಅವರ ದಾಖಲೆ ಸರಿಗಟ್ಟಿದ್ದಾರೆ. ಭಾರತ ಪರ ಟಿ20 ಕ್ರಿಕೆಟ್‌ನಲ್ಲಿ ಅತ್ಯಧಿಕ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಮಿಥಾಲಿ ರಾಜ್‌ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಇಬ್ಬರೂ ಆಟಗಾರ್ತಿಯರು 12 ಸಲ ಪ್ರಶಸ್ತಿ ಪಡೆದಿದ್ದಾರೆ. ಕೌರ್ 43 ಎಸೆತಗಳಲ್ಲಿ ಒಂಬತ್ತು ಬೌಂಡರಿ ಮತ್ತು ಒಂದು ಸಿಕ್ಸರ್‌ನೊಂದಿಗೆ 68 ರನ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಅತಿ ಹೆಚ್ಚು ಪಂದ್ಯ…

Read More

ತಿರುವನಂತಪುರಂ: ಶ್ರೀಲಂಕಾ(INDW vs SLW) ವಿರುದ್ಧ ನಡೆದ 5ನೇ ಟಿ20 ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡದ ಆಟಗಾರ್ತಿ ದೀಪ್ತಿ ಶರ್ಮಾ(Deepti Sharma) ಐತಿಹಾಸಿಕ ದಾಖಲೆ ಬರೆದಿದ್ದಾರೆ. ದೀಪ್ತಿ ಶರ್ಮಾ ಅವರು ಒಂದು ವಿಕೆಟ್‌ ಪಡೆಯುವ ಮೂಲಕ ಮಹಿಳಾ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಬರೆದಿದ್ದಾರೆ. ದೀಪ್ತಿ ಶರ್ಮಾ ತಮ್ಮ ಚೊಚ್ಚಲ ಟಿ20 ಪಂದ್ಯವನ್ನು 2016ರಲ್ಲಿ ಆಡಿದ್ದಾರೆ. ಅಲ್ಲಿಂದ ಇಲ್ಲಿಯವರೆಗೆ ಅವರು 133 ಟಿ20 ಪಂದ್ಯ ಆಡಿದ್ದಾರೆ. ಈ ಪಂದ್ಯಗಳಲ್ಲಿ ಇಲ್ಲಿಯವರೆಗೆ ಒಟ್ಟು 152 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಅವರು ಆಸ್ಟ್ರೇಲಿಯಾದ ವೇಗಿ ಮೇಘನ್ ಶುಟ್ ಅವರ ದಾಖಲೆ ಹಿಂದಿಕ್ಕಿದ್ದಾರೆ. ಶುಟ್ 151 ವಿಕೆಟ್ ಪಡೆದಿದ್ದಾರೆ. ಅವರ ನಂತರ ಮೂರನೇ ಸ್ಥಾನದಲ್ಲಿ ನಿದಾ ದಾರ್ 144 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ. ಅಷ್ಟೇ ಅಲ್ಲ, ಪುರುಷ ಅಥವಾ ಮಹಿಳಾ ಆಟಗಾರ್ತಿಯರ ಪೈಕಿ ಟಿ20ಐ ಸ್ವರೂಪದಲ್ಲಿ 100 ಕ್ಕೂ ಹೆಚ್ಚು ರನ್ ಗಳಿಸಿದ ಮತ್ತು…

Read More

ಬೆಂಗಳೂರು: ರಾಜ್ಯದಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಹೊಸ ವರ್ಷಾಚರಣೆ (New Year 2026) ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಹೀಗಾಗಿ ಎಲ್ಲೆಡೆ ಭದ್ರತೆ ಮತ್ತು ಸುರಕ್ಷತಾ ಕ್ರಮ ಕೈಗೊಳ್ಳಲಾಗುತ್ತಿದೆ. ಕರ್ನಾಟಕದ (Karnataka) ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ (Bengaluru) ಫ್ಲೈಓವರ್ಗಳನ್ನು ಬಂದ್ ಮಾಡಲಾಗುತ್ತಿದೆ. ಹೊಸ ವರ್ಷಾಚರಣೆ ವೇಳೆ ಏನಿರಲ್ಲ?ಚಿಕ್ಕಬಳ್ಳಾಪುರದ ಸ್ಕಂದಗಿರಿ, ಆವಲಬೆಟ್ಟ, ಕೈವಾರದ ಬೆಟ್ಟ ಚಾರಣಕ್ಕೆ ಡಿ. 31 ರ ಸಂಜೆ 6ರಿಂದ ಜ. 1ರ ಬೆಳಗ್ಗೆ 7 ಗಂಟೆಯವರೆಗೂ ನಿರ್ಬಂಧ ಹೇರಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಶ್ರೀರಾಮದೇವರ ಬೆಟ್ಟ, ಸಂಗಮ, ಮೇಕೆದಾಟು ಮತ್ತು ಚುಂಚಿ ಫಾಲ್ಸ್‌ಗಳಿಗೆ ಡಿ. 31ರ ಸಂಜೆ 6ರಿಂದ ಜ. 1ರ ಬೆಳಗ್ಗೆ 6ರವರೆಗೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಪ್ರವಾಸಿತಾಣ ನಂದಿಗಿರಿಧಾಮಕ್ಕೆ ಡಿ. 31ರ ಮಧ್ಯಾಹ್ನ 2 ಗಂಟೆಯಿಂದ ಜನವರಿ 1ರ ಬೆಳಗ್ಗೆ 10ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮುಳ್ಳಯ್ಯನಗಿರಿ,…

Read More

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಹಿಂದೂಗಳ ಮೇಲಿನ ದೌರ್ಜನ್ಯ, ಹಿಂಸಾಚಾರ ಮುಂದುವರೆದಿದ್ದು, ಈಗ ಮತ್ತೋರ್ವ ಹಿಂದು ಯುವಕ(Hindu Man) ನನ್ನು ಅಲ್ಲಿನ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಬಜೇಂದ್ರ ಬಿಸ್ವಾಸ್‌ ಎಂಬ ಯುವಕನನ್ನು ಹತ್ಯೆ ಮಾಡಲಾಗಿದೆ. ಇದೇ ತಿಂಗಳಲ್ಲಿ ಬಾಂಗ್ಲಾದಲ್ಲಿ ನಡೆದ ಮೂರನೇ ಹಿಂದು ಹತ್ಯೆ ಇದಾಗಿದೆ. ಭಾಲುಕಾ ಉಪಜಿಲ್ಲಾದಲ್ಲಿ ಗಾರ್ಮೆಂಟ್ ಕಾರ್ಖಾನೆಯಲ್ಲಿ ಕರ್ತವ್ಯದಲ್ಲಿದ್ದಾಗ ಬಿಸ್ವಾಸ್ (40) ಎಂಬ ಯುವಕನನ್ನು ಹತ್ಯೆ ಮಾಡಿದ್ದಾರೆ. ಉಪಜಿಲ್ಲಾದ ಮೆಹ್ರಾಬರಿ ಪ್ರದೇಶದಲ್ಲಿರುವ ಸುಲ್ತಾನ ಸ್ವೆಟರ್ಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಬಿಸ್ವಾಸ್ ಬಾಂಗ್ಲಾದೇಶದ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಅರೆಸೈನಿಕ ಸಹಾಯಕ ಪಡೆಯಾದ ಅನ್ಸರ್ ಬಹಿನಿಯ ಸದಸ್ಯರಾಗಿದ್ದರು. ಕೊಲೆ ಮಾಡಿದ ಅನ್ಸಾರ್ ಸದಸ್ಯ ನೋಮನ್ ಮಿಯಾನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ನೋಮನ್ ತನ್ನ ಬಂದೂಕಿನಿಂದ ಗುಂಡು ಹಾರಿಸಿದ್ದು, ಬಿಸ್ವಾಸ್ ಎಡ ತೊಡೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಿ ಬಿಸ್ವಾನ್ ಸಾವನ್ನಪ್ಪಿದ್ದಾರೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಹಿಂದೂಗಳ ಮೂರನೇ ಹತ್ಯೆ ಇದಾಗಿದೆ.…

Read More

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಒಣ ಹವೆ (Weather Forecast) ವಾತಾವರಣವಿದ್ದು, ಇಂದು ದಕ್ಷಿಣ ಒಳನಾಡಿನ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಳಿಯ ಅನುಭವ ಹೆಚ್ಚಾಗುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿಯಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಇಂದು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಲೆನಾಡಿನ ಶಿವಮೊಗ್ಗ…

Read More

ಬೆಂಗಳೂರು: ಹೊಸ ವರ್ಷಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಬೆಂಗಳೂರಿನಲ್ಲಿ (Bengaluru) ಬಸ್ ಸೇವೆ ಹಾಗೂ ಮೆಟ್ರೋ ಸೇವೆ ವಿಸ್ತರಿಸಲಾಗುತ್ತಿದೆ. ಹೊಸ ವರ್ಷವನ್ನು (New Year 2026) ಅದ್ಧೂರಿಯಾಗಿ ಸ್ವಾಗತಿಸಲು ಭರ್ಜರಿ ತಯಾರಿ ನಡೆದಿದೆ. ಸುರಕ್ಷ ಸಂಚಾರಕ್ಕಾಗಿ ಮೆಟ್ರೋ (Namma Mtero), ಬಿಎಂಟಿಸಿ (BMTC) ತನ್ನ ಸೇವೆ ಸಮಯ ಮತ್ತು ಮಾರ್ಗಗಳನ್ನು ವಿಸ್ತರಿಸಲಾಗಿದೆ. ಹೊಸ ವರ್ಷದ ಹಿನ್ನೆಲೆಯಲ್ಲಿ ರಾತ್ರಿ ಹಾಗೂ ಜನವರಿ 1ರಂದು ಮೆಟ್ರೋ ವಿಶೇಷ ವೇಳಾಪಟ್ಟಿ ಜಾರಿಯಾಗಿರಲಿದೆ. ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳಲ್ಲಿ ಸೇವಾ ಸಮಯ ತಡರಾತ್ರಿವರೆಗೆ ವಿಸ್ತರಣೆ ಮಾಡಲಾಗಿದೆ. ಎಲ್ಲಿವರೆಗೆ ಸಮಯ ವಿಸ್ತರಣೆ? ಎಲ್ಲೆಲ್ಲಿಗೆ?ನೇರಳೆ ಮಾರ್ಗ:ಬೈಯಪ್ಪನಹಳ್ಳಿ-ಕೆಂಗೇರಿ ಮಾರ್ಗ: 1:45ರ ವರೆಗೆಕೆಂಗೇರಿ- ಬೈಯಪ್ಪನಹಳ್ಳಿ ಮಾರ್ಗ: ರಾತ್ರಿ 2ರ ವರೆಗೆಹಸಿರು ಮಾರ್ಗ:ಮೆಜೆಸ್ಟಿಕ್ – ಮಾದಾವರ: ರಾತ್ರಿ 2ರ ವರೆಗೆಮಾದಾವರ – ಮೆಜೆಸ್ಟಿಕ್: ರಾತ್ರಿ 2ರ ವರೆಗೆಹಳದಿ ಮಾರ್ಗ:ಆರ್‌ವಿ ರಸ್ತೆ – ಬೊಮ್ಮಸಂದ್ರ ಮಾರ್ಗ: ರಾತ್ರಿ 3:10ರ ವರೆಗೆಬೊಮ್ಮಸಂದ್ರ – ಆರ್‌ವಿ ರಸ್ತೆ: 1:30ರ ವರೆಗೆಮೆಜೆಸ್ಟಿಕ್ ಕೇಂದ್ರದಲ್ಲಿ ಎಲ್ಲಾ ಮಾರ್ಗಗಳ ಕೊನೆಯ ರೈಲು…

Read More

ಚಂದನವನದಲ್ಲಿ ಸ್ಟಾರ್ ವಾರ್ ತಣ್ಣಾಗಾಗುತ್ತಿದ್ದಂತೆ ಈಗ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ನಟ ಕಿಚ್ಚ ಸುದೀಪ್ (Kichcha Sudeep) ಅಭಿಮಾನಿಗಳ ಜೊತೆ ಚಿತ್ರ ನೋಡಲು ನಿರ್ಧರಿಸಿದ್ದಾರೆ. ಡಿಸೆಂಬರ್ 31ರಂದು ಬೆಂಗಳೂರು ಹಾಗೂ ಮೈಸೂರಿನಲ್ಲಿ ಸುದೀಪ್ ಅಭಿಮಾನಿಗಳೊಂದಿಗೆ ‘ಮಾರ್ಕ್’ ವೀಕ್ಷಿಸಲಿದ್ದಾರೆ. ಡಿಸೆಂಬರ್ 25ರಂದು ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಿತ್ತು. ಡಿ. 31ರಂದು ಅವರು ಪತ್ನಿ ಪ್ರಿಯಾ, ನಿರ್ದೇಶಕ ವಿಜಯ್ ಕಾರ್ತಿಕೇಯ, ಗಾಯಕ ವಿಜಯ್ ಪ್ರಕಾಶ್ ಹಾಗೂ ಅಭಿಮಾನಿಗಳ ಜೊತೆ ನರ್ತಕಿ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಲಿದ್ದಾರೆ. ಡಿ. 31ರಂದು ಬೆಂಗಳೂರಿನ ಗಾಂಧಿ ನಗರದಲ್ಲಿರುವ ಸಂತೋಷ್ ಚಿತ್ರಮಂದಿರದಲ್ಲಿ ಬೆಳಿಗ್ಗೆ 10.30ರ ಶೋನ ಸುದೀಪ್ ವೀಕ್ಷಿಸಲಿದ್ದಾರೆ. ಅಲ್ಲಿಂದ ಮೈಸೂರಿಗೆ ತೆರಳಿ ಸಂಜೆ 4.30ಕ್ಕೆ ಮೈಸೂರಿನ ಸಂಗಮ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಲಿದ್ದಾರೆ. ಸದ್ಯ ಸೂಪರ್ ಹಿಟ್ ಆಗಿ ಮುನ್ನುಗ್ಗುತ್ತಿರುವ ಮಾರ್ಕ್ ಗೆ ಅಭಿಮಾನಿಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಗೆದ್ದ ಖುಷಿಯಲ್ಲಿ ಸುದೀಪ್ ಅಭಿಮಾನಿಗಳೊಂದಿಗೆ ಚಿತ್ರ ವೀಕ್ಷಿಸುತ್ತಿದ್ದಾರೆ.

Read More

ಐಸಿಸಿ ಏಕದಿನ ವಿಶ್ವಕಪ್ ಗೆದ್ದ ನಂತರ ಭಾರತೀಯ ಮಹಿಳಾ ತಂಡ ಉತ್ತಮ ಪ್ರದರ್ಶನ ಮುಂದುವರೆಸಿದೆ. 2025 ರ ಕೊನೆಯ ಟಿ20 ಸರಣಿಯಲ್ಲಿ ಶ್ರೀಲಾಂಕ ವಿರುದ್ಧ ಭಾರೀ ಪ್ರದರ್ಶನ ತೋರುತ್ತಿದೆ. ಶ್ರೀಲಂಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡ 4-0 ಮುನ್ನಡೆಯಲ್ಲಿದೆ. ಅಂತಿಮ ಪಂದ್ಯವನ್ನೂ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿ ಈಗ ತಂಡ ಇದೆ. 4ನೇ ಟಿ20 ಪಂದ್ಯದಲ್ಲೂ ಹರ್ಮನ್ ಪಡೆ, ಶ್ರೀಲಂಕಾವನ್ನು 30 ರನ್‌ಗಳಿಂದ ಸೋಲಿಸಿದೆ. ಈ ಪಂದ್ಯದಲ್ಲಿ ಶಫಾಲಿ ವರ್ಮಾ ದೊಡ್ಡ ದಾಖಲೆ ನಿರ್ಮಿಸುವ ಅವಕಾಶ ಹೊಂದಿದ್ದಾರೆ. ಮೊದಲ ಪಂದ್ಯವನ್ನು ಹೊರತುಪಡಿಸಿ, ನಂತರದ ಎಲ್ಲಾ ಮೂರು ಪಂದ್ಯಗಳಲ್ಲಿ ಶಫಾಲಿ ವರ್ಮಾ ಅಬ್ಬರಿಸಿದ್ದಾರೆ. ಮೊದಲ ಪಂದ್ಯದಲ್ಲಿ ಶಫಾಲಿ 9 ರನ್‌ಗಳಿಗೆ ಔಟಾಗಿದ್ದರು. ಆದರ ಎರಡನೇ, ಮೂರನೇ ಮತ್ತು ನಾಲ್ಕನೇ ಪಂದ್ಯಗಳಲ್ಲಿ ಸತತ ಅರ್ಧಶತಕಗಳನ್ನು ಬಾರಿಸುವುದರ ಮೂಲಕ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಈಗ ಶಫಾಲಿ ಅಂತಿಮ ಪಂದ್ಯದಲ್ಲಿಯೂ ಇದೇ ರೀತಿ ಅಬ್ಬರಿಸಿದರೆ, 2025 ರಲ್ಲಿ ಅಂತರರಾಷ್ಟ್ರೀಯ ಟಿ20…

Read More

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆಯಾಗಿದ್ದು, ಪ್ರಿಯರು ಸಂತಸ ಪಡುವಂತಾಗಿದೆ. ಇಂದು ಸ್ವರ್ಣಕೊಳ್ಳುವವರಿಗೆ ಕೊಂಚ ಭಾರ ಇಳಿಕೆಯಾಗಿದ್ದು, ಇದೇ ರೀತಿ ಪ್ರತಿ ದಿನ ಇಳಿಕೆಯಾಗುತ್ತ ಸಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. 22 ಕ್ಯಾರಟ್‌ನ 1 ಗ್ರಾಂ (Gold Price Today on 30th December 2025) ಚಿನ್ನದ ಬೆಲೆಯಲ್ಲಿ 280 ರೂ. ಇಳಿಕೆ ಕಂಡು ಬಂದಿದ್ದು, ಬೆಲೆ 12,485 ರೂ. ಗೆ ಇಳಿದಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 305 ರೂ. ಇಳಿಕೆ ಕಂಡಿದೆ. ಹೀಗಾಗಿ ದರ 13,620 ರೂ. ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,03,920 ರೂ. ಆದರೆ, 10 ಗ್ರಾಂ ಚಿನ್ನಕ್ಕೆ ನೀವು 99,880 ರೂ. ಆದರೆ 10 ಗ್ರಾಂಗೆ 1,24,850 ರೂ. ಇದೆ. 100 ಗ್ರಾಂಗೆ ನೀವು 12,48,500 ರೂ. ಆಗಿದೆ. 24 ಗ್ರಾಂ 8 ಗ್ರಾಂ ಚಿನ್ನಕ್ಕೆ 1,08,960 ರೂ. ಇದ್ದರೆ, 10 ಗ್ರಾಂಗೆ 1,36,200 ರೂ. ಆಗಿದೆ.…

Read More