Author: Bosstv News Desk

ಮಂಗಳೂರು: ಪುತ್ತೂರು (Puttur) ಬಿಜೆಪಿ (BJP) ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ಪ್ರೀತಿಸಿ, ಮಗು ಕೊಟ್ಟು ಪರಾರಿಯಾಗಿರುವ ಘಟನೆ ನಡೆದು ಹಲವು ದಿನಗಳು ಕಳೆದರೂ ಯುವತಿಗೆ ಮಾತ್ರ ನ್ಯಾಯ ಸಿಕ್ಕಿಲ್ಲ. ಸಂತ್ರಸ್ತೆ ಮಗುವಿಗೆ ಜನ್ಮ ನೀಡಿ ತಿಂಗಳುಗಳೇ ಕಳೆದರೂ ಸಮಸ್ಯೆ ಬಗೆಹರಿದಿಲ್ಲ. ನ್ಯಾಯಾಲಯದ ನಿರ್ದೇಶನದಂತೆ ಡಿಎನ್ಎ ಟೆಸ್ಟ್ ಮಾಡಿ, ಕೃಷ್ಣ ಜೆ.ರಾವ್ ಮಗುವಿನ ತಂದೆ ಎಂಬುದು ಸಾಬೀತಾದರೂ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಬಿಜೆಪಿಯ ಪ್ರಮುಖ ನಾಯಕರು, ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ ಅನೇಕರು ಸಂಧಾನಕ್ಕೆ ಯತ್ನಿಸಿದ್ದರೂ ವಿಫಲವಾಗಿದೆ. ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ.ರಾವ್, ಶಾಲಾ ದಿನಗಳಿಂದ ಪರಿಚಿತವಾಗಿದ್ದ ಹಿಂದೂ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ನಂತರ ವಂಚಿಸಿದ್ದಾನೆಂಬುವುದು ಬೆಳಕಿಗೆ ಬಂದಿತ್ತು. ಗರ್ಭವತಿಯಾಗಿದ್ದ ಯುವತಿಯನ್ನು ಮದುವೆಯಾಗುವಂತೆ ಸಂಧಾನ ಮಾಡಿಸಲಾಗಿತ್ತು. ಆರಂಭದಲ್ಲಿ ಮದುವೆಯಾಗಲು ನಿರಾಕರಿಸಿದ್ದ ಆತ ಕೊನೆಗೆ ಒತ್ತಾಯದ ಮೇರೆಗೆ ಒಪ್ಪಿದ್ದ. ಆತನಿಗೆ 21 ವರ್ಷ ವಯಸ್ಸು ಪೂರ್ಣವಾಗದ ಕಾರಣ, ಆದ…

Read More

ತಿರುವಲ್ಲೂರು: ವಿಮಾ ಹಣ ಪಡೆಯುವುದಕ್ಕಾಗಿ ಮಕ್ಕಳೇ ತಂದೆಗೆ ಹಾವು(Snake) ಕಚ್ಚಿಸಿರುವ ಘಟನೆಯೊಂದು ನಡೆದಿದೆ. ಈ ಘಟನೆ ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ನಡೆದಿದೆ. 3 ಕೋಟಿ ರೂ. ಮೌಲ್ಯದ ವಿಮಾ ಹಣ ಪಡೆಯಲು ಹಾವು ಕಚ್ಚಿಸಿ ಸರ್ಕಾರಿ ನೌಕರನ ಕೊಲೆಗೆ ಮಕ್ಕಳೇ ಸಂಚು ರೂಪಿಸಿರುವ ವಿಷಯ ಈಗ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ವ್ಯಕ್ತಿಯ ಇಬ್ಬರು ಪುತ್ರರು ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮೃತರನ್ನು ಗಣೇಶ್ (56) ಸರ್ಕಾರಿ ಸಂಸ್ಥೆಯಲ್ಲಿ ಪ್ರಯೋಗಾಲಯ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಅವರು ಗಣೇಶ್ ನಿದ್ದೆ ಮಾಡುತ್ತಿದ್ದಾಗ ಕುತ್ತಿಗೆಗೆ ಹಾವು ಕಚ್ಚಿ ಸಾವನ್ನಪ್ಪಿದ್ದರು. ಆರಂಭದಲ್ಲಿ ಈ ಸಾವನ್ನು ಆಕಸ್ಮಿಕ ಎಂದು ಪರಿಗಣಿಸಲಾಗಿತ್ತು. ಆದರೆ ವಿಮಾ ಕಂಪನಿಗಳು ಪ್ರಕರಣ ದಾಖಲಿಸಿದ ನಂತರ ಅನುಮಾನ ಆರಂಭವಾಗಿತ್ತು. ಗಣೇಶ್ ಸುಮಾರು 3 ಕೋಟಿ ರೂಪಾಯಿಗಳ ಒಟ್ಟು ವಿಮಾ ರಕ್ಷಣೆಯೊಂದಿಗೆ 11 ವಿಮಾ ಪಾಲಿಸಿಗಳನ್ನು ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ತನಿಖೆಯಲ್ಲಿ ದಾಖಲೆ, ತಾಂತ್ರಿಕ ಪುರಾವೆಗಳನ್ನು ಪರಿಶೀಲಿಸಿದಾಗ ಕೊಲೆಯಾಗಿರುವುದು ತಿಳಿದು…

Read More

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಜನದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಹಲವೆಡೆ ಸಂಚಾರ ಹಾಗೂ ಪಾರ್ಕಿಂಗ್ ನಿರ್ಬಂಧ ಹೇರಲಾಗಿದೆ. ಹೊಸ ವರ್ಷಾಚರಣೆಗೆ ಈಗಾಗಲೇ ಗೃಹ ಇಲಾಖೆ ಗೈಡ್ ಲೈನ್ಸ್ ಕೊಟ್ಟಿದೆ. ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ವಿವಿಧ ಮುಖ್ಯ ರಸ್ತೆಗಳಲ್ಲಿ ವಿಶೇಷ ಟ್ರಾಫಿಕ್ ನಿಯಂತ್ರಣ ಮತ್ತು ನಿರ್ಬಂಧಗಳನ್ನು ನಗರ ಪೊಲೀಸ್ ಇಲಾಖೆ ಜಾರಿಗೊಳಿಸಿದೆ. ಡಿ. 31 ರ ಸಂಜೆಯಿಂದ ಜನವರಿ 1ರ ಬೆಳಗಿನವರೆಗೂ ಸಂಚಾರ ಸುರಕ್ಷತೆಗಾಗಿ ಕೆಲವು ರಸ್ತೆಗಳಲ್ಲಿ ವಾಹನ ನಿಷೇಧ ಹೇರಲಾಗಿದ್ದು, ಪಾರ್ಕಿಂಗ್ ನಿಷೇಧ ಹೇರಲಾಗಿದೆ. ಡಿಸೆಂಬರ್ 31ರ ರಾತ್ರಿ 8 ಗಂಟೆಯಿಂದ ಜನವರಿ 1ರ ಮಧ್ಯರಾತ್ರಿ 02 ಗಂಟೆಯವರೆಗೆ ಈ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ.ಎಂ.ಜಿ ರಸ್ತೆ: ಅನಿಲ್ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್ ಬಳಿಯ ರೆಸಿಡೆನ್ಸಿ ರಸ್ತೆ ಜಂಕ್ಷನ್ ವರೆಗೆಬ್ರಿಗೇಡ್ ರಸ್ತೆ: ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಓಪೇರಾ ಜಂಕ್ಷನ್ ವರೆಗೆಚರ್ಚ್ ಸ್ಟ್ರೀಟ್: ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್ ವರೆಗೆರೆಸಿಡೆನ್ಸಿ ರಸ್ತೆ: ಆಶೀರ್ವಾದಮ್ ಜಂಕ್ಷನ್‌ನಿಂದ ಮೆಯೋ ಹಾಲ್ ಜಂಕ್ಷನ್…

Read More

ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಅದ್ಭುತ ಫಾರ್ಮ್ ನಲ್ಲಿದ್ದು, ತನ್ನ ದಾಖಲೆ ಮುರಿಯುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸ್ಮೃತಿ ಮಂಧಾನ (Smriti Mandhana) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಲ್ಲಿ ಒಂದೇ ವರ್ಷ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಸ್ಮೃತಿ ಮಂಧಾನ ಮರು ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ 2024 ರಲ್ಲಿ ಸ್ಮೃತಿ ಟಾಪ್ ಸ್ಕೋರರ್ ಆಗಿ ಹೊಹೊಮ್ಮಿದ್ದರು. ಈಗ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ. 2024 ರಲ್ಲಿ ಟೆಸ್ಟ್, ಟಿ20 ಮತ್ತು ಏಕದಿನ ಪಂದ್ಯಗಳಲ್ಲಿ ಒಟ್ಟು 35 ಇನಿಂಗ್ಸ್ ಆಡಿದ್ದ ಸ್ಮೃತಿ ಮಂಧಾನ ಒಟ್ಟು 1,659 ರನ್ ಗಳಿಸಿದ್ದ ಸಾಧನೆ ಮಾಡಿದ್ದರು. ಆ ಮೂಲಕ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಂದೇ ವರ್ಷ 1600+ ರನ್ ಕಲೆಹಾಕಿದ ವಿಶ್ವದ ಮೊದಲ ಆಟಗಾರ್ತಿ ಎಂಬ ದಾಖಲೆ ಬರೆದಿದ್ದರು. ಈಗ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ. ಈ ವರ್ಷ ಇಲ್ಲಿಯವರೆಗೆ 32 ಅಂತಾರಾಷ್ಟ್ರೀಯ ಇನಿಂಗ್ಸ್ ಆಡಿರುವ…

Read More

ದೇಶದ ರಾಜಧಾನಿ ವಿಷಪೂರಿತವಾಗಿದೆ. ಅಲ್ಲಿ ಬದುಕುವುದು ಅಕ್ಷರಶಃ ಸಾವಿಗೆ ದಾರಿ ಮಾಡಿಕೊಟ್ಟಂತಾಗುತ್ತಿದೆ. ವಿಷಗಾಳಿ, ಮೈಕೊರೆಯುವ ಚಳಿಯಿಂದ ಅಲ್ಲಿನ ಜನರ ಬದುಕು ತತ್ತರಿಸಿ ಹೋಗುತ್ತಿದೆ. ದಿನ ಕಳೆದಂತೆ ವಾತಾವರಣ ಹದಗೆಡುತ್ತಿದೆ. ಹೀಗಾಗಿ ಅಲ್ಲಿನ ಶಾಲಾ-ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ. ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ ಮಟ್ಟಕ್ಕೆ ಕುಸಿಯುತ್ತಿದೆ. ದೆಹಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ಕಂಡುಬಂದ ದಟ್ಟ ಮಂಜಿನ ಹೊದಿಕೆ ಜನಜೀವನವನ್ನು ಸಂಪೂರ್ಣವಾಗಿ ಸ್ತಬ್ದಗೊಳಿಸಿದೆ. ಕಣ್ಣೆದುರಿಗಿನ ರಸ್ತೆಯೇ ಕಾಣದಷ್ಟು ದಟ್ಟವಾಗಿ ಹರಡಿರುವ ಮಂಜು, ಅತ್ತ ಉಸಿರುಗಟ್ಟಿಸುವ ವಾಯು ಮಾಲಿನ್ಯ ಅಲ್ಲಿನ ಜನರನ್ನು ಹೈರಾಣಾಗಿಸಿದೆ. ನೋಯ್ಡಾದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿಮಾನಗಳ ಹಾರಾಟದಲ್ಲಿ ಏರುಪೇರಾಗಿದೆ, ರೈಲುಗಳು ತಡವಾಗಿ ಸಂಚರಿಸುತ್ತಿವೆ. ವಿಷಗಾಳಿ ಸೇವನೆಯಿಂದ ಅಲ್ಲಿನ ಜನ ದಿನದಿಂದ ದಿನಕ್ಕೆ ಅನಾರೋಗ್ಯ ಹೊಂದುತ್ತಿದ್ದಾರೆ. ಹೀಗಾಗಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಹಲವೆಡೆ ವಿಸಿಬಿಲಿಟಿ ‘ಶೂನ್ಯ’ಕ್ಕೆ ಇಳಿದಿದೆ.

Read More

ಚಿಕ್ಕಮಗಳೂರು: ಬಾರ್ ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ ಶುರುವಾಗಿದ್ದು, ಯುವಕನಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಹೊರವಲಯದ ಅಕ್ಷಯ್ ಬಾರ್ನಲ್ಲಿ ಈ ಘಟನೆ ನಡೆದಿದೆ. ಸಿಗರೇಟ್ ವಿಚಾರವಾಗಿ 2 ಗುಂಪುಗಳ ಮಧ್ಯೆ ಗಲಾಟೆ ಶುರುವಾಗಿದ್ದು, ವ್ಯಕ್ತಿಗೆ ಚಾಕು ಇರಿದಿದ್ದಾರೆ. ಮುಗ್ತಿಹಳ್ಳಿಯ ಅನಿಲ್ ಕುಮಾರ್ಗೆ ಎಂಬುವವರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ಆರೋಪಿ ಯುವಕ ಲಿಖಿತ್ನ್ನು ಪೊಲೀಸರು ವಶ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಅನಿಲ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾರ್ನಲ್ಲಿ 2 ಗುಂಪುಗಳ ಗಲಾಟೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೀಗ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾ-ಉಕ್ರೇನ್ ನಡುವಿನ ಯುದ್ಧ ಸದ್ಯದಲ್ಲೇ ಕೊನೆಗೊಳ್ಳಲಿದೆ ಎಂದಿದ್ದಾರೆ. ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆಗೆ ಫ್ಲೋರಿಡಾದ ಮಾರ್-ಎ-ಲಾಗೊ ನಿವಾಸದಲ್ಲಿ ನಡೆದ ಚರ್ಚೆ ನಂತರ ಈ ಮಾತು ಹೇಳಿದ್ದಾರೆ. ಯುದ್ಧ ನಿಲ್ಲಿಸಿ ಶಾಂತಿ ನೆಲೆಸುವಂತೆ ಮಾತುಕತೆಗಳು ನಡೆಯುತ್ತಿವೆ. ಝೆಲೆನ್ಸ್ಕಿ ಜೊತೆ ಸಭೆ ನಡೆಸುವ ಮೊದಲು ಟ್ರಂಪ್‌ ಪುಟಿನ್‌ಗೆ ದೂರವಾಣಿ ಕರೆ ಮಾಡಿ ಯುದ್ಧ ಕೊನೆಗೊಳಿಸುವ ಸಂಬಂಧ ಮಾತನಾಡಿದ್ದರು. ಫೆಬ್ರವರಿ 2022 ರಿಂದ ಹತ್ತಾರು ಸಾವಿರ ಜನರನ್ನು ಬಲಿತೆಗೆದುಕೊಂಡಿರುವ ಯುದ್ಧವನ್ನು ಕೊನೆಗೊಳಿಸಲು ಸಾಧ್ಯವೇ ಎಂಬುದು ವಾರಗಳಲ್ಲಿ ಸ್ಪಷ್ಟವಾಗುತ್ತದೆ. ಎರಡೂ ದೇಶಗಳಿಗೆ ನಾನು ತುಂಬಾ ಹತ್ತಿರ. ಯುದ್ಧವನ್ನು ಕೊನೆಗೊಳಿಸುವ ಕರಡು ಒಪ್ಪಂದ ಬಹುತೇಕ ಶೇ.95 ಪೂರ್ಣಗೊಂಡಿದೆ. ಎರಡೂ ಕಡೆಯವರು ಆ ಯುದ್ಧವನ್ನು ಕೊನೆಗೊಳಿಸುವಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದಾರೆ. ಯುದ್ಧ ಮುಗಿಸುವ ಸಂಬಂಧ ಟ್ರಂಪ್‌ ಉಕ್ರೇನ್‌ ಸಂಸತ್ತನ್ನು ಉದ್ದೇಶಿಸಿ ಮಾತನಾಡಲು ಮುಂದಾಗಿದ್ದಾರೆ. ವ್ಲಾಡಿಮಿರ್‌ ಪುಟಿನ್‌ ಅವರು ಉಕ್ರೇನ್‌ ಬಗ್ಗೆ ತುಂಬಾ ಉದಾರ ಮನೋಭಾವನೆ ಹೊಂದಿದ್ದಾರೆ” ಎಂದು ಟ್ರಂಪ್‌ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.…

Read More

ಬೆಂಗಳೂರು: ಸಿಲಿಕಾನ್ ಸಿಟಿಯ ಯಲಹಂಕ ಹತ್ತಿರದ ಕೋಗಿಲು ಬಡಾವಣೆ ತ್ಯಾಜ್ಯ ವಿಲೇವಾರಿ ಜಾಗದ ಅಕ್ರಮ ಒತ್ತುವರಿ ತೆರವು ಪ್ರಕರಣ ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಈ ವಿಷದಲ್ಲಿ ಮೂಗು ತೂರಿಸಿದ್ದಾರೆ. ಕೆ.ಸಿ. ವೇಣುಗೋಪಾಲ್ ಕೂಡ ಈ ವಿಷಯವಾಗಿ ಮಾತನಾಡಿದ್ದು, ಬಿಜೆಪಿ ಆಕ್ರೋಶ ವ್ಯಕ್ತಪಡಿಸುತ್ತಿದೆ. ರಾಜ್ಯದ ಕಾಂಗ್ರೆಸ್‌ ಸರ್ಕಾರ ಕನ್ನಡಿಗರ ಸ್ವಾಭಿಮಾನವನ್ನು ಕೇರಳಕ್ಕೆ ಅಡವಿಟ್ಟಿದೆ ಎಂದು ಗಂಭೀರ ಆರೋಪ ಮಾಡಿದೆ. ಈ ಕುರಿತು ಎಕ್ಸ್ ನಲ್ಲಿ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. “ಕನ್ನಡದ ಸ್ವಾಭಿಮಾನವನ್ನು ಕೇರಳದ ಮುಂದೆ ಅಡವಿಟ್ಟಿರುವ ಭಂಡ ಹಾಗೂ ಭ್ರಷ್ಟರು!!” ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಕೋಗಿಲು ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕೇರಳ ನಾಯಕರ ಮಧ್ಯಪ್ರವೇಶಕ್ಕೆ ಬಿಜೆಪಿ ತೀವ್ರ ಕಿಡಿಕಾರುತ್ತಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರದ ಮೇಲೆ ಕನ್ನಡಿಗರ ಆತ್ಮಗೌರವ ಮಣ್ಣುಪಾಲು ಮಾಡಿದ ಆರೋಪ ಹೊರಿಸಿದೆ. ಈ ವಿಷಯದಲ್ಲಿ ಸಿಎಂ ಹಾಗೂ ಡಿಸಿಎಂ ನಡೆಯನ್ನು ಖಂಡಿಸಿದೆ. ಪಿಣರಾಯಿ ವಿಜಯನ್‌, ಕರ್ನಾಟಕ ಸರ್ಕಾರ…

Read More

ಮೆಕ್ಸಿಕೋ ಸಿಟಿ: ರೈಲು ಹಳ್ಳಿ ತಪ್ಪಿದ ಪರಿಣಾಮ 13 ಜನ ಸಾವನ್ನಪ್ಪಿ, 98 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ದಕ್ಷಿಣ ಮೆಕ್ಸಿಕೋದ (South Mexico) ಓಕ್ಸಾಕದಲ್ಲಿ (Oaxaca) ಇಂಟರ್ ಓಷಿಯಾನಿಕ್ ಹತ್ತಿರ ಈ ಘಟನೆ ನಡೆದಿದೆ. ಘಟನೆಯಲ್ಲಿ 13 ಜನ ಸಾವನ್ನಪ್ಪಿ, 98 ಜನ ಗಾಯಗೊಂಡಿದ್ದಾರೆ. ರೈಲಿನಲ್ಲಿ ಒಟ್ಟು 250 ಜನ ಪ್ರಯಾಣಿಕರಿದ್ದರು. ರೈಲು, ಲೀನಾ ಕ್ರೂಜ್ ಬಂದರುನಿಂದ ಕೋಟ್ಜಾಕೋಲ್ಕೋಸ್‌ಕ್ಕೆ ತೆರಳುತ್ತಿತ್ತು. ನಿಜಾಂಡಾ ಪಟ್ಟಣದ ಹತ್ತಿರ ತೆರಳುತ್ತಿದ್ದಾಗ ರೈಲು ಹಳಿ ತಪ್ಪಿದೆ. ಪರಿಣಾಮ 13 ಜನರು ಸಾವನ್ನಪ್ಪಿದ್ದು, 98 ಜನರು ಗಾಯಗೊಂಡಿದ್ದಾರೆ. 36 ಜನರಿಗೆ ಚಿಕಿತ್ಸೆ ನೀಡಲಾಗಿದೆ. ಈ ಪೈಕಿ 193 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಮೆಕ್ಸಿಕೋ ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಎಕ್ಸ್‌ನಲ್ಲಿ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರಿಗೆ ಅಗತ್ಯ ಸಹಾಯ ಮಾಡಲು ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದಿದ್ದಾರೆ. ಇಂಟರ್ ಓಷಿಯಾನಿಕ್ ರೈಲು 2023ರಲ್ಲಿ ಉದ್ಘಾಟನೆಯಾಗಿತ್ತು. ಇಂಟರ್ ಓಷಿಯಾನಿಕ್ ಕಾರಿಡಾರ್ ಯೋಜನೆಯ ಭಾಗವಾಗಿದೆ.

Read More

ಬೆಂಗಳೂರು: ಇತ್ತೀಚೆಗೆ ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಹೆಚ್ಚಾಗುತ್ತಿದೆ. ಪಾನ್ ಶಾಪ್ ವೊಂದರ ಮೇಲೆ ಪುಂಡರು ದಾಳಿ ಮಾಡಿ ಹಲ್ಲೆ ಮಾಡಿ ವಸ್ತುಗಳನ್ನು ಹಾಳು ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ (Bengaluru) ಕತ್ರಿಗುಪ್ಪೆಯಲ್ಲಿ (Kathriguppe) ಈ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಪುಡಿ ರೌಡಿಗಳು ಪಾನ್ ಶಾಪ್ (Pan Shop) ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಬಷಿರ್ ಎಂಬುವರ ಮನೆಗೆ ನುಗ್ಗಿ 10ಕ್ಕೂ ಹೆಚ್ಚು ಪುಡಿ ರೌಡಿಗಳು ಹಲ್ಲೆ ನಡೆಸಿ ದಾಂಧಲೆ ಮಾಡಿದ್ದಾರೆ. ಪಾನ್ ಶಾಪ್‌ನಲ್ಲಿದ್ದ ಬಾಟಲ್‌ಗಳನ್ನ ಒಡೆದು ಹಾಕಿ ಪರಾರಿಯಾಗಿದ್ದಾರೆ. ಲಾಂಗು, ಮಚ್ಚು ಹಿಡಿದು ದಾಳಿ ಮಾಡಿದ್ದನ್ನು ಕಂಡು ಆ ಆರಿಯಾದಲ್ಲಿನ ಜನ ಬೆಚ್ಚಿ ಬಿದ್ದಿದ್ದಾರೆ. ಈ ಕುರಿತು ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More