Subscribe to Updates
Get the latest creative news from FooBar about art, design and business.
Author: chandrakant
ಕನ್ನಡದ ಬಹು ನೀರಿಕ್ಷಿತ ಸಿನಿಮಾ ಟಾಕ್ಸಿಕ್ ಇನ್ನೇನು ಚಿತ್ರೀಕರಣದ ಕೊನೆಯ ಹಂತದಲ್ಲಿದೆ. KGF ಯಶಸ್ಸಿನ ಬಳಿಕ ಯಶ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. KGF 2 ಬಹುದೊಡ್ಡ ಯಶಸ್ಸಿನ ನಂತರ ಯಶ್ ಯಾವ ಸಿನಿಮಾ ಮಾಡ್ತಾರೆ ಎಂಬ ಕುತೂಹಲ ಇತ್ತು. ಯಾವಾಗ ಯಶ್ ಟಾಕ್ಸಿಕ್ ಸಿನಿಮಾದಲ್ಲಿ ನಟಿಸಲಿದ್ದಾರೆ ಅನ್ನೋ ಸುದ್ದಿ ಹೊರಬಿತ್ತೋ ನಿರೀಕ್ಷೆ ದುಪ್ಟಟ್ಟಾಯಿತು.. ಅದೇ ಯಶ್ ಈಗ ಪ್ಯಾನ್ ಇಂಡಿಯಾದಿಂದ ಪ್ಯಾನ್ ವರ್ಡ್ ಹೀರೋ ಆಗಲು ಹೊರಟಿದ್ದಾರೆ. ಯಶ್ ಅಭಿನಯದ ಟಾಕ್ಸಿಕ್ ಸಿನಿಮಾವನ್ನ ಪ್ಯಾನ್ ವರ್ಡ್ ಸಿನಿಮಾ ಮಾಡುವ ನಿಟ್ಟಿನಲ್ಲಿ ಯಶ್ ಹಾಗೂ ಸಿನಿಮಾ ತಂಡ ಶ್ರಮಿಸುತ್ತಿದ್ದು. ಈಗ ಚಿತ್ರದ ಬಿಡುಗಡೆಗಾಗಿ ಹಾಲಿವುಡ್ ಚಲನಚಿತ್ರ ವಿತರಣಾ ಸಂಸ್ಥೆ ಜೊತೆ ಕೊಲಾಬರೇಷನ್ ಮಾಡಲು ಮಾತುಕತೆ ನಡೆಸಲಾಗುತ್ತಿದೆ ಎನ್ನಲಾಗಿದೆ.. ರಾಕಿಂಗ್ ಸ್ಟಾರ್ ಯಶ್ ಅವರ ಟಾಕ್ಸಿಕ್ ಚಿತ್ರದ ಮುಂಬೈ ಶೂಟಿಂಗ್ ಮುಗಿದ ನಂತರ, ಯಶ್ ಲಂಡನ್‌ಗೆ ಹಾರಿದ್ದಾರೆ. ಈ ಸಿನಿಮಾಗೆ ಹಾಲಿವುಡ್ ಆ್ಯಕ್ಷನ್ ನಿರ್ದೇಶಕ ಜೆಜೆ ಪೆರ್ರಿ ಫೈಟ್ ಸೀನ್ ಚಿತ್ರಿಸುತ್ತಿದ್ದು,…
ಜಾತಿ ಗಣತಿ ಮಾಡುವ ವಿಚಾರವಾಗಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹೈವೋಲ್ಟೇಜ್ ಕ್ಯಾಬಿನೆಟ್ ಸಭೆ ನಡೀತು. ಕ್ಯಾಬಿನೆಟ್ ಸಭೆ ಆರಂಭವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ಮಾಡುವ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಕೆಲವು ಸಚಿವರು ಸಮಾಧಾನಪಡಿಸಿದರು.. ಹೌದು.. ಜಾತಿ ಗಣತಿಯ ಉದ್ದೇಶವನ್ನು ಅರಿತುಕೊಳ್ಳದೇ ಅಪಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ, ವಿರೋಧವನ್ನೂ ಮಾಡುತ್ತಿರುವ ಕೆಲವು ಸಚಿವರ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಬೇಸರ ಹೊರಹಾಕಿದರು. ಇದು ಕೇವಲ ಸಮುದಾಯಗಳಲ್ಲಿನ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿದ್ದು, ಯಾವುದೇ ಜಾತಿಗಳನ್ನು ಒಡೆಯುವ ಸಮೀಕ್ಷೆಯಲ್ಲ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಅದರಲ್ಲೂ ಕೆಲವು ಲಿಂಗಾಯತ ಸಮುದಾಯದ ಪ್ರಭಾವಿ ಸಚಿವರೇ ಜಾತಿ ಗಣತಿಯನ್ನು ವಿರೋಧಿಸುತ್ತಿರುವುದು ಸಿಎಂ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗ್ತಿದೆ.. Also read : ಬೊಜ್ಜು ಕರಗಿಸಲು ಇಲ್ಲಿದೆ ಬೆಸ್ಟ್ ಪ್ಲ್ಯಾನ್ : ಗ್ರೀನ್ ಟೀ ಕುಡಿಯುವ ಮುಂಚೆ ಇದನ್ನು ಪಾಲಿಸಿ
ರಾಜ್ಯದಲ್ಲಿ ಅನೇಕ ಮಂದಿ ತಿನ್ನಲು ಒಂದು ಹೊತ್ತಿನ ಊಟ ಇಲ್ಲದೇ ಪರದಾಡುತ್ತಿರುತ್ತಾರೆ. ಆದರೆ ರಾಮನಗರ ಹೊರವಲಯದ ಹೆಲ್ತ್ ಸಿಟಿಯಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮಾದರಿ ಮೆಟ್ರಿಕ್ ನಂತರದ ಪುರುಷರ ಹಾಸ್ಟೆಲ್‌ನಲ್ಲಿ 15 ಕ್ವಿಂಟಲ್ ಗೋಧಿ ಮಣ್ಣುಪಾಲಾಗಿದೆ. ಹಾಸ್ಟೆಲ್ ವಾರ್ಡನ್‌ನ ನಿರ್ಲಕ್ಷ್ಯದಿಂದ ಬಡ ಮಕ್ಕಳ ಹಸಿವು ನೀಗಿಸಬೇಕಿದ್ದ ಆಹಾರವನ್ನ ಹೂಳಲಾಗಿದೆ. ಸರ್ಕಾರಿ ಹಾಸ್ಟೆಲ್ ವಾರ್ಡನ್ ಯೋಗೀಶ್ ನಿರ್ಲಕ್ಷ್ಯ ಹಾಗೂ ಅಸಡ್ಡೆಯಿಂದಾಗಿ ಬಡ ವಿದ್ಯಾರ್ಥಿಗಳ ಹೊಟ್ಟೆ ಸೇರಬೇಕಾದ ಗೋಧಿ ಮಣ್ಣು ಪಾಲಾಗಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ವಸತಿ ನಿಲಯದಲ್ಲಿ ಬೇರೆ ಬೇರೆ ಜಿಲ್ಲೆಗಳ 125 ವಿದ್ಯಾರ್ಥಿಗಳು ಇದ್ದು, ಅವರ ಹಸಿವು ನೀಗಿಸಲು ರಾಜ್ಯ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಡಿ 30 ಕ್ವಿಂಟಾಲ್ ಗೋಧಿ ನೀಡಲಾಗಿತ್ತು. ಈ ಗೋಧಿಯನ್ನು ಸರಿಯಾಗಿ ಬಳಕೆ ಮಾಡದ ಹಾಸ್ಟೆಲ್ ವಾರ್ಡನ್ ಯೋಗೀಶ್, ಹುಳು ಹಿಡಿದಿದೆ ಎಂದು ತಾಲೂಕು ಬಿಸಿಎಂ ಅಧಿಕಾರಿಗಳಿಗೆ ಹೇಳಿದ್ದರು. ನಂತರ ತಾಲೂಕು ಬಿಸಿಎಂ ಅಧಿಕಾರಿಗಳು 15 ಕ್ವಿಂಟಾಲ್ ಗೋಧಿಯನ್ನ ಸ್ವಚ್ಛಗೊಳಿಸಿ…
ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಆರೋಪ ಮಾಡಿದ್ದ ರಾಹುಲ್ ಗಾಂಧಿ ಈಗ ಇನ್ನೊಂದು ಹೆಜ್ಜೆ ಮುಂದಿಟ್ಟಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ, ಸಾಕ್ಷಿ ಸಮೇತ ಮತಗಳ್ಳತನ ಆರೋಪದ ಕುರಿತು ದಾಖಲೆಗಳನ್ನು ಬಹಿರಂಗಪಡಿಸಿದ್ದಾರೆ. ಇದೇ ವೇಳೆ ಕರ್ನಾಟಕದ ಮತಗಳ್ಳತನದ ಬಗ್ಗೆಯೂ ಮಾತನಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಆಳಂದದಲ್ಲಿ ಒಟ್ಟು 6,018 ಮತಗಳನ್ನು ಕಳ್ಳತನ ಮಾಡಲಾಗಿದೆ ಎಂದು ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮತದಾರರ ಪಟ್ಟಿಯಿಂದ ಕೈಬಿಡಲಾದ ಮತದಾರರಾದ ಸೂರ್ಯಕಾಂತ್‌ನನ್ನ ವೇದಿಕೆ ಮೇಲೆ ಪರಿಚಯಿಸಿ ರಾಹುಲ್ ಗಾಂಧಿ ಅವರ ಕಡೆಯಿಂದಲೇ ಮಾತಾಡಿಸುವ ಮೂಲಕ ಹೊಸ ರೀತಿಯಲ್ಲಿ ದಾಖಲೆ ಬಿಡುಗಡೆ ಮಾಡಿದ್ದಾರೆ. ಈ ಕುರಿತಾಗಿ ವೇದಿಕೆಯಲ್ಲಿ ಮಾತನಾಡಿದ ಆಳಂದದ ವ್ಯಕ್ತಿ, ನನ್ನ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾದ ಸಂಗತಿ ನನಗೆ ತಡವಾಗಿ ಗೊತ್ತಾಯಿತು. ಈ ಕುರಿತು ದೂರು ದಾಖಲಿಸಿದ ಬಳಿಕವೂ, ಯಾವುದೇ ಕ್ರಮ ಕೈಗೊಳ್ಳಲಿಲ್ಲ ಅಂತಾ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಅರಣ್ಯದಲ್ಲಿ ರಾಶಿ ರಾಶಿ ದನಗಳ ಅಸ್ಥಿಪಂಜರ ಸಿಕ್ಕಿದ್ದರ ಬಗ್ಗೆ ಕೆಲ ದಿನಗಳ ಹಿಂದೆ ವಿಡಿಯೋ ವೈರಲ್ ಆಗಿತ್ತು. ಈ ಕುರಿತಾಗಿ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಗೋವಿನ ಕಳ್ಳ ಸಾಗಾಣಿಕೆ ಮತ್ತು ಮಾಂಸ ಮಾರಾಟಕ್ಕೆ ಸಂಬಂಧಪಟ್ಟಂತೆ ಕಾಡಿನಲ್ಲಿ ದೊರೆತ ದನಗಳ ಅಸ್ಥಿಪಂಜರದ ಪ್ರಕರಣವನ್ನು ಬಯಲಿಗೆಳೆಯುವಲ್ಲಿ ಉತ್ತರ ಕನ್ನಡ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಹಲವು ಊರುಗಳಲ್ಲಿ ಕದ್ದ ಗೋವುಗಳನ್ನು ಭಟ್ಕಳಕ್ಕೆ ತಂದು ಮಾಂಸಕ್ಕಾಗಿ ಕಡಿದ ನಂತರ ಉಳಿದ ಮೂಳೆಗಳನ್ನು ಅರಣ್ಯದಲ್ಲಿ ಎಸೆದು ಪರಾರಿಯಾಗುತಿದ್ದರು ಎಂಬುದು ಇದೀಗ ಗೊತ್ತಾಗಿದೆ. ಈ ಸಂಬಂಧ ಇಬ್ಬರನ್ನು ಆರೋಪಿಗಳನ್ನ ಬಂಧಿಸಿರುವ ಪೊಲೀಸರು, ಇತರ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಭಟ್ಕಳದ ಮಗ್ದೂಂ ಕಾಲೂನಿ ಬಳಿಯ ಬೆಳ್ನೆ ಗ್ರಾಮದ ಸರ್ವೆ ನಂಬರ್ 74 ರ ಭಾಗದಲ್ಲಿ ಸಿಕ್ಕ ರಾಶಿ ರಾಶಿ ಮೂಳೆಗಳು ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿತ್ತು. ಹಿಂದೂಪರ ಹೋರಾಟಗಾರರು ಸ್ಥಳಕ್ಕೆ ತೆರಳಿ ವಿಡಿಯೋ ಚಿತ್ರೀಕರಿಸಿ ಘಟನೆಯನ್ನು ಖಂಡಿಸಿದ್ದರು. ಆದರೆ, ಈ ವಿಡಿಯೋಗಳು…
ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಪ್ರತಿಷ್ಠಿತ ರೋಲ್ಸ್-ರಾಯ್ಸ್ ಕಂಪನಿ ಸ್ಥಾಪಿಸಿರುವ ಅತ್ಯಾಧುನಿಕ ಜಾಗತಿಕ ಸಾಮರ್ಥ್ಯ ಮತ್ತು ನಾವೀನ್ಯತಾ ಕೇಂದ್ರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದ ಉದ್ಯಮ ವಲಯದ ಕಾರ್ಯ ಪರಿಸರವನ್ನು ಸೃಷ್ಟಿಸುವಲ್ಲಿ ರೋಲ್ಸ್ ರಾಯ್ಸ್ ಕಂಪನಿಯು ಮೊದಲಿನಿಂದಲೂ ಜೊತೆಯಾಗಿದೆ. ನೂತನ ಜಿಸಿಸಿ ಕೇಂದ್ರವು ಕಂಪನಿಯ ಪಾಲಿಗೆ ಅತ್ಯಂತ ದೊಡ್ಡ ಮತ್ತು ಅತ್ಯಾಧುನಿಕ ಕೇಂದ್ರವಾಗಿದೆ. ಇಂತಹ ಉಪಕ್ರಮಗಳಿಂದಾಗಿ ಬೆಂಗಳೂರು ನಗರವು ವೈಮಾಂತರಿಕ್ಷ ವಲಯದ ಹೂಡಿಕೆಯಲ್ಲಿ ಜಗತ್ತಿನ ಮೊದಲ 3 ನಗರಗಳಲ್ಲಿ ಒಂದಾಗಿ ಬೆಳೆದಿದೆ ಎಂದು ಹೇಳಿದರು. ರೋಲ್ಸ್ ರಾಯ್ಸ್ ಕಂಪನಿಯು ಭಾರತದಲ್ಲಿ 2 ಸಾವಿರಕ್ಕೂ ಹೆಚ್ಚು ಇಂಜಿನಿಯರ್‌ಗಳನ್ನು ಹೊಂದಿದೆ. ಈ ಪೈಕಿ ಹೆಚ್ಚಿನವರು ಕರ್ನಾಟಕದಿಂದ ಕೆಲಸ ಮಾಡುತ್ತಿದ್ದಾರೆ. ಈ ಕಂಪನಿಯ ಜೊತೆಗೆ ಏಕಸ್, ಕಾಲಿನ್ಸ್ ಏರೋಸ್ಪೇಸ್, ವಿಪ್ರೋ, ಮಹೀಂದ್ರ, ಬೋಯಿಂಗ್, ಏರ್‌ಬಸ್ ಮತ್ತು ಪಿಕ್ಸೆಲ್ ಕಂಪನಿಗಳೂ ರಾಜ್ಯದಲ್ಲಿ ನೆಲೆಯೂರಿವೆ. ಇವು ಕ್ರಮವಾಗಿ ಪವರ್ ಸಿಸ್ಟಂ ಮತ್ತು ಪ್ರೊಪಲ್ಶನ್, ಸ್ಟ್ರಕ್ಚರಲ್ ಮತ್ತು…
ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಇಂದು ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಗುತ್ತಿದೆ. ಕಲಬುರಗಿ ಡಿಎಆರ್ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನದ ಬಗ್ಗೆ ಮಾತನಾಡಿದರು. ಹೈದರಾಬಾದ್ ನಿಜಾಮನ ದಬ್ಬಾಳಿಕೆ, ಹಾಗೂ ರಜಾಕಾರರ ಅಟ್ಟಹಾಸದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸರ್ದಾರ್ ಪಟೇಲರ ಸೈನಿಕ ನೀತಿಯನ್ನ ಹಾಡಿ ಹೊಗಳಿದರು. ಇದರ ಜೊತೆಗೆ ಕೆಕೆಆರ್ಡಿಬಿಗೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿದ್ದು, ಕಲಬುರಗಿ ಮತ್ತು ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು. ಸಿಎಂ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದಲ್ಲಿ 350 ಕೆಪಿಎಸ್ ಶಾಲೆ ನಿರ್ಮಾಣ,7 ಜಿಲ್ಲೆಗಳಲ್ಲಿ 204 ಕೋಟಿ ರೂ ವೆಚ್ಚದಲ್ಲಿ ವಸತಿ ನಿಲಯಗಳು, ಜಿಲ್ಲೆಯಲ್ಲಿ 2,515 ಅಂಗನವಾಡಿ ಕಟ್ಟಡ ನಿರ್ಮಾಣ, ಕಲಬುರಗಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಆಸ್ಪತ್ರೆ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕಾಗಿ 220 ಕೋಟಿ ರೂ. ನೀಡುವುದರ ಜೊತೆಗೆ ಕ್ಯಾನ್ಸರ್ ಆಸ್ಪತ್ರೆ…
ದೇಶದಲ್ಲಿ ಅಕ್ರಮ ಹಣ ವರ್ಗಾವಣೆ ಆಗುತ್ತಿರುವ ಹಿನ್ನೆಲೆಯಲ್ಲಿ ಫುಲ್ ಆ್ಯಕ್ಟಿವ್ ಆಗಿರುವ ಇಡಿ, ಭಾರತೀಯ ಕ್ರಿಕೆಟಿಗರಿಗೆ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರರಾದ ರಾಬಿನ್ ಉತ್ತಪ್ಪ ಹಾಗೂ ಯುವರಾಜ್ ಸಿಂಗ್ ಅವರಿಗೂ ಸಮನ್ಸ್ ಜಾರಿ ಮಾಡಿದೆ. 1 ಎಕ್ಸ್ ಬೆಟ್ ಹೆಸರಿನ ಬೆಟ್ಟಿಂಗ್ ಆ್ಯಪ್ ಮೂಲಕ ಅಕ್ರಮವಾಗಿ ಹವಾಲಾ ದಂಧೆ ಮಾಡುತ್ತಿರುವ ಶಂಕೆ ಇದ್ದ ಕಾರಣ ಈ ಇಬ್ಬರು ಭಾರತೀಯ ಆಟಗಾರನ್ನ ವಿಚಾರಣೆಗೆ ಬರುವಂತೆ ಇಡಿ ಸೂಚಿಸಿದೆ. ಈ ಹಿಂದೆಯೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಮಾಜಿ ಕ್ರಿಕೆಟ್ ಆಟಗಾರರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರನ್ನು ವಿಚಾರಣೆ ನಡೆಸಿದ್ದ ಇ.ಡಿ ಇದೀಗ ಇನ್ನಿಬ್ಬರಿಗೆ ಸಮನ್ಸ್ ಜಾರಿ ಮಾಡಿದೆ. ಕನ್ನಡಿಗ ರಾಬಿನ್ ಉತ್ತಪ್ಪ ಅವರಿಗೆ ಸೆಪ್ಟೆಂಬರ್ 22ರಂದು ವಿಚಾರಣೆ ಹಾಜರಾಗುವಂತೆ ಇಡಿ ಸೂಚಿಸಿದ್ದು, ಯುವರಾಜ್ ಸಿಂಗ್‌ಗೆ 23ರಂದು ವಿಚಾರಣೆಗೆ ಬರುವಂತೆ ಹೇಳಿದೆ. ಅಕ್ರಮ ಆನ್‌ಲೈನ್…
2023ರ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಗದ್ದುಗೆ ಏರಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಶಾಕ್ ನೀಡಿದೆ. ಹೌದು ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಅಲ್ಲದೇ, ಮಾಲೂರು ಕ್ಷೇತ್ರದ ಮತ ಮರು ಎಣಿಕೆ ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡ , ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ವಿರುದ್ಧ 248 ಮತಗಳ ಅಂತರದಿಂದ ಗೆದ್ದಿದ್ದರು. ಆದ್ರೆ ಮತ ಎಣಿಕೆ ವೇಳೆ ಲೋಪವಾಗಿದೆ ಅಂತಾ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಆರೋಪಿಸಿ, ನಂಜೇಗೌಡರ MLA ಸ್ಥಾನ ಆಯ್ಕೆಯನ್ನ ಅಸಿಂಧುಗೊಳಿಸುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಇಂದು ಆದೇಶ ಪ್ರಕಟಿಸಿದೆ. ಇನ್ನು, ವಿಧಾನಸಭೆ ಚುನಾವಣೆ ಮತ ಎಣಿಕೆ ವೇಳೆ ಲೋಪವಾಗಿದ್ದು, 4 ವಾರಗಳಲ್ಲಿ ಮರು ಮತ ಎಣಿಕೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದೆ. ಜೊತೆಯಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿ ಮತ ಎಣಿಕೆಯ ವಿಡಿಯೋ…
ಕೊತ್ತಲವಾಡಿ ಸಿನಿಮಾ ಆಗಸ್ಟ್ 1 ರಂದು ಅದ್ಧೂರಿಯಾಗಿ ರಿಲೀಸ್ ಆಗಿತ್ತು. ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪಾ ಅರುಣ್‌ಕುಮಾರ್ ನಿರ್ಮಾಣದ ಸಿನಿಮಾ ಎಂಬ ಕಾರಣಕ್ಕೆ ಜನರಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿತ್ತು. ಆದರೆ ಈ ಚಿತ್ರದ ಬಗ್ಗೆ ಜನರಿಂದ ಮಿಶ್ರ ಪ್ರತಿಕ್ರಿಯೆ ಬಂದಿದ್ದು, ಈಗ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದೆ. ಆದರೆ, ಕೆಲವು ಸಹ ಕಲಾವಿದರಿಗೆ ಒಟಿಟಿಯಲ್ಲಿ ಸಿನಿಮಾ ಬಂದರು ಇನ್ನೂ ಪೇಮೆಂಟ್ ಆಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು ಅದಕ್ಕೆ ಕುಮ್ಮಕ್ಕು ಎಂಬಂತೆ ಚಿತ್ರದ ಸಹ ಕಲಾವಿದ ಮಹೇಶ್ ಗುರು ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿದ್ದಾರೆ. ಯಶ್ ತಾಯಿಗೆ ಈ ವಿಚಾರ ತಲುಪುವವರೆಗೂ ಶೇರ್ ಮಾಡಿ ಎಂದು ಮಹೇಶ್ ಗುರು ಹೇಳಿದ್ದಾರೆ. ಕೊತ್ತಲವಾಡಿ ಸಿನಿಮಾ ತಂಡದಿಂದ ಪೇಮೆಂಟ್ ಆಗದ ಕುರಿತಾಗಿ ಮಾತನಾಡಿರುವ ಮಹೇಶ್ ಗುರು, ನಾನು ರಂಗಭೂಮಿ ಕಲಾವಿದ. ಸಿನಿಮಾ, ಧಾರಾವಾಹಿಗಳಲ್ಲೂ ನಟಿಸಿದ್ದೇನೆ. ಆಗಸ್ಟ್ 1ರಂದು ಕೊತ್ತಲವಾಡಿ ಸಿನಿಮಾ ರಿಲೀಸ್ ಆಯಿತು. ಯಶ್ ತಾಯಿ ಪುಷ್ಪ ಅವರು ಇದನ್ನು ನಿರ್ಮಾಣ ಮಾಡಿದ್ದರು.…