Subscribe to Updates
Get the latest creative news from FooBar about art, design and business.
Author: Mahanthesha
ಬೆಂಗಳೂರು, ಜ.10: ಇಡೀ ಸಿನಿ ದುನಿಯಾದಲ್ಲಿ ಸಖತ್ ಸೆನ್ಸೇಷನ್ ಸೃಷ್ಟಿಸಿರುವ ಟಾಕ್ಸಿಕ್ ಸಿನಿಮಾಗೆ ಸಂಕಷ್ಟವೊಂದು ಎದುರಾಗಿದೆ. ರಾಕಿಂಗ್ ಸ್ಟಾರ್ ಯಶ್‌ರ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ವಿರುದ್ಧ ದೂರು ದಾಖಲಾಗಿದೆ. ಹೌದು.. ಈ ಸಿನಿಮಾದ ಟೀಸರ್ ಬಿಡುಗಡೆ ನಂತರ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗಿದೆ. ಟೀಸರ್‌ನಲ್ಲಿ ಅಸಭ್ಯ ದೃಶ್ಯಗಳಿವೆ. ಅದು ಮಕ್ಕಳ ಮೇಲೆ ಪರಿಣಾಮ ಬೀರಬಹುದು, ಫ್ಯಾಮಿಲಿ ಜೊತೆ ಕುಳಿತು ನೋಡುವಂತೆ ಟೀಸರ್ ಇಲ್ಲ ಎಂಬಿತ್ಯಾದಿ ಮಾತುಗಳು ಸಾಕಷ್ಟು ಕೇಳಿಬಂದಿದ್ದು, ನಿರ್ದೇಶಕಿ ಗೀತು ಮೋಹನ್ ದಾಸ್ ಹಾಗೂ ನಟ ಯಶ್ ವಿರುದ್ಧ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.. ಈ ಸಂಬಂಧ ವಕೀಲ ಲೋಹಿತ್ ಕುಮಾರ್ ಅವರು ಕೇಂದ್ರ ಸೆನ್ಸಾರ್ ಮಂಡಳಿಗೆ ದೂರು ಕೂಡ ಸಲ್ಲಿಸಿದ್ದಾರೆ. ಈ ಕುರಿತು ಈಗಾಗ್ಲೇ ಹೇಳಿಕೆ ನೀಡಿರುವ ದೂರುದಾರರು, ಚಿತ್ರಮಂದಿರಗಳಲ್ಲಿ ಎ ಸರ್ಟಿಫಿಕೇಟ್ ಇದ್ದರೆ ಮಕ್ಕಳನ್ನು ಕರೆದುಕೊಂಡು ಫ್ಯಾಮಿಲಿ ಆಡಿಯನ್ಸ್ ನೋಡಲು ಸಾಧ್ಯವಿಲ್ಲ. ಯೂಟ್ಯೂಬ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಟೀಸರ್‌ಗಳಿಗೆ ಯಾವುದೇ ಮಾರ್ಗಸೂಚಿಗಳಿಲ್ಲದಿರುವುದು ಸಮಸ್ಯೆಯಾಗಿದೆ ಅಂತಾ ತಿಳಿಸಿದ್ದಾರೆ. ಸೆನ್ಸಾರ್ ಮಂಡಳಿ…
ಬೆಂಗಳೂರು, ಜ.10 : ಕಾಸರಗೋಡು ವಿಚಾರವಾಗಿ ಕರ್ನಾಟಕ ಹಾಗೂ ಕೇರಳ ನಡುವೆ ಮತ್ತೊಮ್ಮೆ ಭಾಷಾ ಸಮರ ಭುಗಿಲೆದ್ದಿದೆ. ಕಾಸರಗೋಡು ಜಿಲ್ಲೆಯ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಅನ್ನು ಕಡ್ಡಾಯವಾಗಿ, ಪ್ರಥಮ ಭಾಷೆಯಾಗಿ ಕಲಿಸಬೇಕೆಂಬ ಮಸೂದೆ ವಿರುದ್ಧ ಕರ್ನಾಟಕದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇನ್ನು, ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿದ್ದು, ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಕೇರಳದ ಕಮ್ಯುನಿಸ್ಟ್ ಸರ್ಕಾರ ಕನ್ನಡ ಶಾಲೆಗಳಲ್ಲಿ ಒತ್ತಾಯ ಪೂರ್ವಕವಾಗಿ ಮಲಯಾಳಂ ಭಾಷೆ ಹೇರಲು ಹೊರಟಿರೋದು ಖಂಡನೀಯವಾಗಿದ್ದು, ಶಾಲೆಗಳಲ್ಲಿ ಮಲಯಾಳಂ ಭಾಷೆ ಕಡ್ಡಾಯ ಮಸೂದೆಗೆ ವಿವಿಧ ಕನ್ನಡಪರ ಸಂಘಟನೆಗಳು ವಿರೋಧಿಸಿದ್ದು, ಬಿಜೆಪಿಯೂ ಸಹ ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕರ್ನಾಟಕದ ವಿಚಾರದಲ್ಲಿ ಪದೇಪದೆ ಮೂಗು ತೂರಿಸುವ ಕೆಲಸ ಮಾಡ್ತಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸಹ ಕೇರಳಕ್ಕೆ ಹಲವು ಬಾರಿ ಸಹಾಯ ಹಸ್ತ ಚಾಚಿದೆ. ಇತ್ತೀಚೆಗೆ ಕೋಗಿಲು ಲೇಔಟ್ ವಿಚಾರಕ್ಕೆ ವೇಣುಗೋಪಾಲ್ ಸರ್ಕಾರದ ಮೇಲೆ ಅಬ್ಬರಿಸಿದ್ರು, ಅವರ…
ಬೆಂಗಳೂರು, ಜ.09: ಲಾಂಗ್ ಗ್ಯಾಪ್.. ಹೈ ಎಕ್ಸ್ಪೆಕ್ಟೇಷನ್ಸ್.. ಕೊನೆಗೂ ರಾಕಿಂಗ್ ಸ್ಟಾರ್ ಯಶ್ ಟಾಕ್ಸಿಕ್ ಸ್ಟೈಲಲ್ಲಿ ಟೀಸರ್ ಮೂಲಕ ಫ್ಯಾನ್ಸ್ ಮುಂದೆ ಬಂದಾಯ್ತು. ಬರೋಬ್ಬರಿ 4 ವರ್ಷದಿಂದ ಯಶ್ಗಾಗಿ ಕಾಯ್ತಿದ್ದ ಅಭಿಮಾನಿಗಳು ಈ ಟೀಸರ್ ನೋಡಿದ್ಮೇಲೆ ಕನ್ಫ್ಯೂಸ್ ಆಗಿದ್ದಾರೆ. ಮೇಕಿಂಗ್ ನೋಡಿ ವ್ಹಾವ್ ಅನ್ಬೇಕಾ ಕಾರ್ ಸೀನ್ ನೋಡಿ ಸುಮ್ನಾಗಬೇಕಾ ಅನ್ನೋ ಗೊಂದಲದಲ್ಲಿದ್ದಾರೆ. ಸದ್ಯ ಆ ಕಾರ್ ಸೀನ್ ಬಗ್ಗೆ ಈಗ ಸಾಕಷ್ಟು ಕಾಮೆಂಟ್ ಮತ್ತು ಚರ್ಚೆಗಳು ಶುರು ಆಗಿದೆ. ಟಾಕ್ಸಿಕ್ ಸಿನಿಮಾ. ಸ್ಯಾಂಡಲ್‌ವುಡ್‌ನಲ್ಲಿ ಈ ಸಿನಿಮಾ ಟಾಕ್ ಶುರುವಾಗಿಯೇ ಮೂರು ನಾಲ್ಕು ವರ್ಷಗಳೇ ಕಳೆದಿರಬಹುದು. ಕೆಜಿಎಫ್ ಸಕ್ಸಸ್ ನಂತರ ಯಶ್ ಟಾಕ್ಸಿಕ್ ಸಿನಿಮಾದಲ್ಲಿ ಬ್ಯುಸಿಯಾಗಿದ್ರು. ಕಳೆದ ನಾಲ್ಕು ವರ್ಷಗಳಿಂದ ಯಶ್ ತೆರೆ ಮೇಲೆ ಬಂದಿಲ್ಲ ಅನ್ನೋದು ಕೂಡಾ ಸತ್ಯವೇ. ನಿನ್ನೆ ರಾಕಿಂಗ್ ಸ್ಟಾರ್ ಯಶ್ ಬರ್ತ್‌ಡೇ. ಇದೇ ಖುಷಿಯಲ್ಲಿ ಯಶ್ ಫ್ಯಾನ್ಸ್‌ಗೆ ಸರ್‌ಪ್ರೈಸ್ ಸಿಕ್ಕಿದೆ. ಅದುವೇ ಟಾಕ್ಸಿಕ್ ಸಿನಿಮಾದ ಟೀಸರ್. ಈ ಬಗ್ಗೆ ಹೇಳಲೇಬೇಕು. ಇದು ಸ್ಯಾಂಡಲ್‌ವುಡ್ ಮಟ್ಟಿಗೆ ಬೇರೆ…
ಬೆಂಗಳೂರು, ಜ.09: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಪುನರ್ ಸ್ಥಾಪಿಸಬೇಕೆಂದು ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯಲು ರಾಜ್ಯಸರ್ಕಾರ ನಿರ್ಧರಿಸಿದೆ. ಬೆಂಗಳೂರು ನಗರದಲ್ಲಿರುವ ಅಶೋಕ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಶಾಸಕರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶೀಘ್ರದಲ್ಲೇ ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಾಗುವುದು. ಡಾ. ಮನಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ಬಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಿಂದ ಮಹಾತ್ಮ ಗಾಂಧಿಯ ಹೆಸರು ತೆಗೆದು ಹಾಕುವುದು ಬಿಜೆಪಿಯ ಹುನ್ನಾರವಾಗಿದೆ ಎಂದು ಆರೋಪಿಸಿದರು. ಗ್ರಾಮೀಣ ಪ್ರದೇಶಗಳ ದಲಿತರು, ಮಹಿಳೆಯರು ಹಾಗೂ ರೈತರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ, ಇದೀಗ ಕೇಂದ್ರ ಸರ್ಕಾರ ಉದ್ಯೋಗದ ಹಕ್ಕನ್ನೇ ಕಸಿದುಕೊಳ್ಳುವ ಕಾರ್ಯದಲ್ಲಿ ತೊಡಗಿದೆ. ಇದರಿಂದ ಉದ್ಯೋಗದ ಹಕ್ಕು ಅರ್ಥಹೀನವಾಗಿದೆ ಎಂದರು. ಉದ್ಯೋಗದ ಹಕ್ಕು ಕಿತ್ತುಕೊಳ್ಳುವ ಕೇಂದ್ರ ಸರ್ಕಾರದ ಕ್ರಮದಿಂದಾಗಿ 28 ಕೋಟಿ ದಲಿತರಿಗೆ ಅನ್ಯಾಯವಾಗಿದೆ.…
ಬೆಂಗಳೂರು, ಜ.08: ಕರ್ನಾಟಕ ಗೃಹ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ವಿಧೇಯಕ, 2026 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರೊಂದಿಗೆ ಕಾರ್ಮಿಕ ಇಲಾಖೆಯು ಮತ್ತೊಂದು ಮಹತ್ವದ ಕ್ರಮ ಜಾರಿಗೆ ಸರ್ಕಾರ ಮುಂದಾಗಿದೆ. ಮಹಿಳಾ ಸಬಲೀಕರಣದ ಮತ್ತೊಂದು ಉಪಕ್ರಮ :ಐತಿಹಾಸಿಕ ಋತುಚಕ್ರ ರಜೆಯನ್ನು ಜಾರಿ ಮಾಡಿದ ಬೆನ್ನಲ್ಲೆ ಮತ್ತೊಂದು ಮಹತ್ವದ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಗೃಹ ಕಾರ್ಮಿಕರು ಹೆಚ್ಚಿನವರು ಮಹಿಳೆಯರೇ ಆಗಿದ್ದು, ಅವರ ಕಲ್ಯಾಣ ಮತ್ತು ಭದ್ರತೆಯ ದೃಷ್ಟಿಯಿಂದ ಈ ವಿಧೇಯಕ ಮಹತ್ವದ ಪಾತ್ರ ವಹಿಸಲಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಶ್ರಮ :ಋತುಚಕ್ರ ರಜೆಯನ್ನು ಜಾರಿ ಮಾಡಿದ್ದ ಸಚಿವ ಸಂತೋಷ್ ಲಾಡ್ (Santosh Lad) ಅವರು, ಗೃಹ ಕಾರ್ಮಿಕರ ಕಲ್ಯಾಣ ವಿಧೇಯಕಕ್ಕೆ ಅನುಮೋದನೆ ದೊರಕಿಸಿಕೊಡುವಲ್ಲಿಯೂ ಮಹತ್ವದ ಪಾತ್ರ ವಹಿಸಿದ್ದಾರೆ. ಉದ್ದೇಶಿತ ಮಸೂದೆಯು ರಾಜ್ಯದಲ್ಲಿ ಅಧಿಸೂಚಿತವಾಗಿರುವ ಎಲ್ಲಾ ನಗರ ಪಾಲಿಕೆಗಳಿಗೆ ಅನ್ವಯವಾಗಲಿದೆ. ಮಸೂದೆಯ ಕರಡನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಮಸೂದೆಯ ಬಗ್ಗೆ ಮನೆಕೆಲಸದವರ…
ಬೆಂಗಳೂರು, ಜ.08: ಕಳೆದ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಹಣಕಾಸು ಇಲಾಖೆಯವರು ಅನುಮತಿ ನೀಡಿದ ತಕ್ಷಣವೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎರಡು ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸದನದಲ್ಲಿ ಉತ್ತರ ಕೊಟ್ಟಿದ್ದಾರೆ ಎಂದರು. ಅನರ್ಹ ರೇಷನ್ ಕಾರ್ಡ್ ರದ್ದಾಗಿರುವ ಕಾರಣ ಕೆಲವರಿಗೆ ಹಣ ಸಂದಾಯವಾಗಿಲ್ಲ. ಆಹಾರ ಇಲಾಖೆಯಿಂದ ಹೊಸ ಡೇಟಾ ಬಂದ ತಕ್ಷಣ ಅವರಿಗೂ ದುಡ್ಡು ರಿಲೀಸ್ ಆಗಲಿದೆ. ರೇಷನ್ ಕಾರ್ಡ್ ಆಧರಿಸಿ ನಾವು ಗೃಹಲಕ್ಷ್ಮಿ ಫಲಾನುಭವಿಗಳಿಗೆ ದುಡ್ಡು ಹಾಕುತ್ತಿದ್ದೇವೆ. ಕೆಲ ರೇಷನ್ ಕಾರ್ಡ್ ರದ್ದಾದಾಗ ದುಡ್ಡು ಹೋಲ್ಡ್ ಆಗಿರಬಹುದು. ಆದರೆ ಅವರು ತೆರಿಗೆ ಪಾವತಿದಾರರಲ್ಲದಿದ್ದಲ್ಲಿ ಹಣ ಸಿಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಗೃಹಲಕ್ಷ್ಮೀ…
ಬೆಂಗಳೂರು, ಜ.08: ಹಿಂದಿನ ವರ್ಷದ ಕ್ರಾಂತಿಗಳೆಲ್ಲಾ ಡಮ್ಮಿಯಾಯ್ತು. ಸಿಎಂ ಸಿದ್ದರಾಮಯ್ಯ ಅರಸು ದಾಖಲೆಯನ್ನ ಬ್ರೇಕ್ ಮಾಡಿದ್ದೂ ಆಯ್ತು. ಆದರೆ, ಮುಖ್ಯಮಂತ್ರಿ ಸ್ಥಾನದಲ್ಲಿ ಮಾತ್ರ ಯಾವುದೇ ಬದಲಾವಣೆಯಾಗಿಲ್ಲ. ಆದ್ರೀಗ ಡಿಕೆಶಿಗೆ ಎಲ್ಲಾ ಕಾಲ ಕೂಡಿ ಬಂದಿದೆ. ಇನ್ನೇನು ಸಿಎಂ ಆಗೇ ಬಿಡ್ತಾರೆ ಅಂತಾ ಕನಸು ಕಾಣುತ್ತಿದ್ದ ಅಭಿಮಾನಿಗಳಿಗೆ ಮತ್ತೆ ನಿರಾಸೆ ಮೂಡಿಸಿದೆ. ವರಿಷ್ಠರು ಈ ಬಾರಿ ಕೊಟ್ಟ ಮಾಸ್ಟರ್‌ಸ್ಟ್ರೋಕ್‌ಗೆ ಡಿಕೆ ಶಿವಕುಮಾರ್ ಒಂದು ವರ್ಷದ ತನಕ ಕೆಮ್ಮಂಗಿಲ್ಲ ಅಂತ ಹೇಳಲಾಗ್ತಿದೆ. ಹೌದು, ಕುರ್ಚಿ ಕದನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರ ಪ್ರತಾಪವೂ ಜೋರಾಗಿಯೇ ನಡೆದಿತ್ತು. ಐದು ವರ್ಷ ನಾನೇ ಸಿಎಂ ಅಂತ ಘರ್ಜಿಸುವ ಸಿದ್ದರಾಮಯ್ಯ, ಹೌದು ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಅಂತ ದನಿಗೂಡಿಸುವ ಸಿದ್ದು ಬಣ. ಇತ್ತ ವರಿಷ್ಠರ ಸಮ್ಮುಖದಲ್ಲಿ ಒಪ್ಪಂದ ಆಗಿದೆ ಅಂತ ಸದಾ ನೆನಪಿಸುವ ಡಿಕೆ ಶಿವಕುಮಾರ್, ಡಿಕೆಶಿ ಸಿಎಂ ಆಗುವ ಕಾಲ ಸನಿಹದಲ್ಲಿದೆ ಅಂತ ಕಥೆ ಕಟ್ಟುವ ಡಿಕೆಶಿ ಬಣ. ಹೀಗೆ ಇವರಿಬ್ಬರ ಹಾವು ಏಣಿ…
ಬೆಂಗಳೂರು, ಜ.08: ಸಾಮಾಜಿಕ ಜಾಲತಾಣಗಳ ಬಗ್ಗೆ ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಸೂಕ್ತವಾಗಿ ಅರಿವು ಮೂಡಿಸಬೇಕು. ಆಗಷ್ಟೇ ಮಕ್ಕಳಿಗೆ ಆನ್‌ಲೈನ್ ಸುರಕ್ಷತೆ ಸೂಕ್ತವಾಗಿ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಚೈಲ್ಡ್ ಫಂಡ್ ಇಂಡಿಯಾ ಇವರ ಸಹಯೋಗದಲ್ಲಿ ಮಕ್ಕಳ ಆನ್‌ಲೈನ್ ಸುರಕ್ಷತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು, ಇಂದಿನ ಮಕ್ಕಳು ನಮ್ಮ ದೇಶದ ಭವಿಷ್ಯ. ಆದರೆ, ಇಂದು ಮಕ್ಕಳ ಬೆಳವಣಿಗೆಗೆ ಮೊಬೈಲ್ ಅಡ್ಡಪರಿಣಾಮ ಬೀರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ನಮ್ಮ ಕಾಲದಲ್ಲಿ ಮೊಬೈಲ್ ಗೀಳು ಇರಲಿಲ್ಲ. ನಾವು ಕೇಳಿ, ನೋಡಿ ಕಲಿಯುತ್ತಿದ್ದೇವು. ಆದರೆ, ಇಂದಿನ ಮಕ್ಕಳಿಗೆ ಎಲ್ಲವೂ ರೆಡಿಮೇಡ್ ಸಿಗುತ್ತಿವೆ. ಇಂದಿನ ಮಕ್ಕಳು ಹುಟ್ಟಿನಿಂದಲೇ ಮೊಬೈಲ್ ನೋಡುತ್ತಾ ಬೆಳೆಯುತ್ತಾರೆ. ಅವರಿಗೆ ಎಲ್ಲವೂ ಕುಂತಲ್ಲೇ, ನಿಂತಲ್ಲೇ ಸಿಗುತ್ತವೆ. ಇದು ಮಕ್ಕಳ ಬೆಳವಣಿಗೆಗೆ…
ಬೆಂಗಳೂರು, ಜ 05 : ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮುರಿಯಲಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ಅರಸು ರವರು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿ. ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 8ಕ್ಕೂ ಹೆಚ್ಚು ಬಾರಿ ಗೆಲುವು ಸಾಧಿಸಿದ್ದೇನೆ ಎಂದರು. ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ :ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು ನನಗೂ ಹೋಲಿಕೆ ಸರಿಯಲ್ಲ. ಅರಸು…
ಬೆಂಗಳೂರು, ಜ.04: ನಟನಾಗಿ ಹೆಸರಾಗಿದ್ದ ಡಾರ್ಲಿಂಗ್ ಕೃಷ್ಣ ಲವ್ ಮಾಕ್ಟೇಲ್ ಎಂಬ ಸಿನಿಮಾ ನಿರ್ದೇಶನ ಮಾಡುವ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗೆಲುವು ಕಂಡಿದ್ದರು. ಅದಾದ ನಂತರ ಬಂದಿದ್ದ ಎರಡನೇ ಆವೃತ್ತಿಯೂ ಗೆದ್ದಿತ್ತು. ಆ ಗೆಲುವಿನ ಪ್ರಭೆಯಲ್ಲಿ ಲವ್ ಮಾಕ್ಟೇಲ್ 3 ಚಿತ್ರಕ್ಕೆ ಚಾಲನೆ ನೀಡಿದ್ದ ಡಾರ್ಲಿಂಗ್ ಕೃಷ್ಣ, ಇತ್ತೀಚೆಗಷ್ಟೇ ಮೋಷನ್ ಪೋಸ್ಟರ್ ಲಾಂಚ್ ಮಾಡಿದ್ದರು. ಈ ಮೂಲಕ ಮೂರನೇ ಆವೃತ್ತಿ ನವಿರಾದ ಕುತೂಹಲವೊಂದಕ್ಕೆ ಚಾಲನೆ ನೀಡಿತ್ತು. ಇದೀಗ ಹೊಸ ವರ್ಷದ ಉಡುಗೊರೆ ಎಂಬಂತೆ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಡಾಲಿಂಗ್ ಕೃಷ್ಣ ಘೋಷಿಸಿದ್ದಾರೆ. ಇದರೊಂದಿಗೆ ಲವ್ ಮಾಕ್ಟೇಲ್ 3 ಪ್ರೇಕ್ಷಕರ ಮುಂದೆ ಬರಲು ಇದೇ ಏಪ್ರಿಲ್ 10ರಂದು ಮುಹೂರ್ತ ನಿಗದಿಯಾದಂತಾಗಿದೆ. 2020ರಲ್ಲಿ ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶನ ಮಾಡಿದ್ದ ಲವ್ ಮಾಕ್ಟೇಲ್ ಚಿತ್ರ ತೆರೆ ಕಂಡಿತ್ತು. ನವಿರು ಪ್ರೇಮದೊಂದಿಗೆ ಹೊಸೆದುಕೊಂಡಿದ್ದ ಸೂಕ್ಷ್ಮ ಕಥನದ ಮೂಲಕ ಗೆದ್ದ ನಂತರ, ಲವ್ ಮಾಕ್ಟೇಲ್ 2 ಚಿತ್ರವನ್ನು ಕೃಷ್ಣ ರೂಪಿಸಿದ್ದರು. ಇದೀಗ ತೆರೆಗಾಣಲು ಸಜ್ಜಾಗಿರುವ ಲವ್…