Author: Mahanthesha

ಬೆಂಗಳೂರು, ಜ.02 : ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮತ್ತು ಮಾಹಿತಿ ಆಯುಕ್ತರಾದ ಪತ್ರಕರ್ತರಿಗೆ ಸನ್ಮಾನಿಸಿ ಅಭಿನಂದನಾ ನುಡಿಗಳನ್ನು ಆಡಿದರು. ಇಲ್ಲಿ ಸನ್ಮಾನಿತರಾಗುತ್ತಿರುವ ಐದೂ ಮಂದಿ ಪತ್ರಕರ್ತರಿಗೆ ಮತ್ತು ಇವರನ್ನು ಸನ್ಮಾನಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಾನು ಮೊದಲಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಕೃತಜ್ಞತೆ ಸಲ್ಲಿಸಿದರು. ಇವರಲ್ಲಿ ಸಿದ್ದರಾಜು ಅವರು ಹಿರಿಯರಾಗಿ ನಮಗೆಲ್ಲಾ ಮಾದರಿ ಆಗಿದ್ದವರು. ಉಳಿದವರು ನನ್ನ ಸಮಕಾಲೀನರಾಗಿ ಮಾದರಿಗಳಾಗಿರುವವರು. ಹಿರಿಯ ಮತ್ತು ಮಾದರಿ ಪತ್ರಕರ್ತರನ್ನು ಸನ್ಮಾನಿಸುವುದು ಕೇವಲ ಒಂದು ಶಿಷ್ಟಾಚಾರವಲ್ಲ, ಅದು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ‘ಜಾಗೃತ ಕಣ್ಣು’ಗಳಿಗೆ ಸಲ್ಲಿಸುವ ಗೌರವವಾಗಿದೆ. ಇಲ್ಲಿ ಸನ್ಮಾನಿತರಾಗುತ್ತಿರುವ ಪತ್ರಕರ್ತ ಸ್ನೇಹಿತರು ದಶಕಗಳ ಕಾಲ ಸಮಾಜದ ಏರಿಳಿತಗಳನ್ನು ಹತ್ತಿರದಿಂದ ಕಂಡಿದ್ದಾರೆ. ಗೂಗಲ್, ಜಿ-ಮೇಲ್, ವಾಟ್ಸಾಪ್ ನಂತಹ ತಂತ್ರಜ್ಞಾನವಿಲ್ಲದ ಕಾಲದಿಂದ ಹಿಡಿದು ಅಪಾರ ತಂತ್ರಜ್ಞಾನದ ಹಾವಳಿಯ…

Read More

ಬೆಂಗಳೂರು, ಜ.02 : ಬೆಂಗಳೂರಿನ ಮತ್ತಿಕೆರೆ ಬಳಿ ಇರುವ ರಾಮಯ್ಯ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್ಮೆಂಟ್‌ನ 29ನೇ ವಾರ್ಷಿಕ ಘಟಿಕೋತ್ಸವು ಡಿಸೆಂಬರ್‌ 31ರಂದು ನೆರವೇರಿದೆ. 2023ರಿಂದ 2025ನೇ ಸಾಲಿನ ಪದವಿ ಬ್ಯಾಚ್‌ನ ಒಟ್ಟು 280 ವಿದ್ಯಾರ್ಥಿಗಳು, ಈ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದರು. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಿಟ್ಟಿ ಕೆಫೆಯ (mitti cafe) ಸಂಸ್ಥಾಪಕಿ ಮತ್ತು ಸಿಇಒ ಆದ ಅಲೀನಾ ಆಲಂ ಅವರು ಪಾಲ್ಗೊಂಡಿದ್ದರು. ಗೋಕುಲ ಎಜುಕೇಷನ್‌ ಫೌಂಡೇಶನ್‌ನ (GEF) ನಿರ್ದೇಶಕರು ಮತ್ತು ಕಾರ್ಯದರ್ಶಿಗಳಾದ ಎಂ. ಆರ್. ಆನಂದರಾವ್‌, ಮುಖ್ಯ ಕಾರ್ಯ ನಿವಾರ್ಹಕರು (ಎಂಜಿನಿಯರಿಂಗ್‌ ಮತ್ತು ಜನರಲ್‌ ಸೈನ್ಸಸ್‌ ಜಿಇಎಫ್) ಡಾ. ಪಾರ್ಶ್ವನಾಥ್‌ ಎಚ್.ವಿ., ಹಣಕಾಸು ಮುಖ್ಯಸ್ಥರಾದ ಜಿ. ರಾಮಚಂದ್ರ (ಇ ಅಂಡ್‌ ಜಿಎಸ್‌, ಜಿಇಎಫ್), ಆರ್‌ಎಂಐನ ಪ್ರೊಫೆಸರ್‌ ಮತ್ತು ಡೀನ್‌ ಡಾ.ಎ.ವಿ. ಅರುಣ್‌ಕುಮಾರ್‌ ಮತ್ತು ಆರ್‌ಐಎಂನ ರಿಜಿಸ್ಟ್ರಾರ್‌ ಡಾ. ಸವಿತಾ ರಾಣಿ ರಾಮಚಂದ್ರನ್‌ ಅವರು ವೇದಿಕೆ ಮೇಲೆ ಉಪಸ್ಥಿತರಿದ್ದರು. ಔಪಚಾರಿಕ ಮೆರವಣಿಗೆಯೊಂದಿಗೆ ಘಟಿಕೋತ್ಸವವು ಶುರುವಾಗಿ, ಪ್ರಾರ್ಥನೆ ಮತ್ತು ರಾಮಯ್ಯ ಗೀತೆಯೊಂದಿಗೆ ಮುಂದುವರಿಯಿತು. ಪದವಿ…

Read More

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನಟ, ನಿರ್ಮಾಪಕ, ನಿರ್ದೇಶಕ ಮತ್ತು ವಿತರಕರಾಗಿ ಗುರುತಿಸಿಕೊಂಡಿರುವ ಕಮಲ್‌ ರಾಜ್‌ (ಕಲೀಂ ಪಾಷ) ಇದೀಗ ಸದಭಿರುಚಿಯ ಬರಹಗಾರರಾಗಿಯೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇಲ್ಲಿಯವರೆಗೆ ತಮ್ಮ ಸಿನಿಮಾಗಳಿಗೆ ಕಥೆ, ಚಿತ್ರಕಥೆ, ಸಾಹಿತ್ಯ ಮತ್ತು ಸಂಭಾಷಣೆಗಳನ್ನು ಬರೆದು ಸೈ ಎನಿಸಿಕೊಂಡಿದ್ದ ಕಮಲ್‌ ರಾಜ್‌, ಇದೀಗ ತಾವು ರಚಿಸಿರುವ ಐದು ಕೃತಿಗಳನ್ನು ಬಿಡುಗಡೆ ಮಾಡಿದ್ದಾರೆ. ʼದೇವರ ಯುನಿವರ್ಸಲ್‌ ಬಿಸಿನೆಸ್‌ ಸ್ಕೂಲ್‌ʼ, ʼಮಾರ್ಕೆಟಿಂಗ್‌ ಐಕಾನ್ಸ್‌ ಆಫ್‌ ಇಂಡಿಯಾ ಎಸ್‌ಆರ್‌ಕೆ ಅಂಡ್‌ ಮೋದಿʼ, ʼಟು ಮೈ ಕಿಡ್ಸ್‌ ಇಮಾದ್‌ ಅಂಡ್‌ ಆಲಿಯಾʼ, ʼಟಿಪ್ಪು ಸುಲ್ತಾನ್‌ʼ ಮತ್ತು ʼ1000 ಶಾಯರಿಯಾನ್‌ ಜಸ್ಬಾತ್‌ ದಿಲ್‌ ಸೇʼ ಎಂಬ ಹೆಸರಿನ ಐದು ಕೃತಿಗಳು ಇತ್ತೀಚೆಗೆ ಬಿಡುಗಡೆಯಾಗಿ ಹೊರಬಂದಿದ್ದು, ಯುವನಟ ವಿರಾಟ್‌, ಪ್ರಕಾಶಕ ಮತ್ತು ನಿರ್ಮಾಪಕ ವಿ. ಲಕ್ಷ್ಮೀಕಾಂತ್‌, ನಟರಾದ ರಕ್ಷಕ್‌, ಹುಚ್ಚ ವೆಂಕಟ್‌ ಸೇರಿದಂತೆ ಚಿತ್ರರಂಗ ಮತ್ತು ವಿವಿಧ ಕ್ಷೇತ್ರಗಳ ಹಲವು ಗಣ್ಯರು ಹಾಜರಿದ್ದು ಕೃತಿಗಳನ್ನು ಲೋಕಾರ್ಪಣೆಗೊಳಿಸಿದರು. ನೈಸರ್ಗಿಕ ವ್ಯವಹಾರ, ಮಾರುಕಟ್ಟೆ ತಂತ್ರಗಳು, ತಂದೆ ಮತ್ತು ಮಕ್ಕಳ…

Read More

ಬೆಂಗಳೂರು : ಅತಿಯಾದ್ರೆ ಅಮೃತವೂ ವಿಷವಂತೆ. ಹೀಗಿರೋವಾಗ ವಿಷಾನೇ ಅತಿಯಾದ್ರೆ? ಆ ಪರಿಸ್ಥಿತಿ ಇನ್ನು ಅಸಹನೀಯ ಅನ್ನಿಸುತ್ತೆ. ಫಾಸ್ಟ್‌ಫುಡ್‌ ವಿಚಾರವೂ ಹಾಗೆ. ಮೊದಲೇ ಆರೋಗ್ಯಕ್ಕೆ ಒಳ್ಳೆಯದಲ್ಲ. ಅದ್ರಲ್ಲೂ ಪ್ರತೀ ದಿನ ಅದನ್ನೇ ತಿಂದು ಬದುಕಿದ್ರೆ, ಬದುಕು ಕಟ್ಟಿಕೊಳ್ಳೋ ಮುಂಚೆಯೇ ಚಟ್ಟ ಕಟ್ಟುವ ಪರಿಸ್ಥಿತಿ ಬರೋದ್ರಲ್ಲಿ ಡೌಟೇ ಇಲ್ಲ. ಇದಕ್ಕೆ ಉದಾಹರಣೆ ಎಂಬಂತೆ, 17 ವರ್ಷದ ಯುವತಿ ಫಾಸ್ಟ್‌ಫುಡ್‌ ತಿನ್ನುವ ಚಟಕ್ಕೆ ಬಿದ್ದು ತನ್ನ ಜೀವ ಕಳೆದುಕೊಂಡಿದ್ದಾಳೆ. ಉತ್ತರ ಪ್ರದೇಶದ ಅಮ್ರೋಹಾ ನಗರದ 11 ನೇ ತರಗತಿಯ ವಿದ್ಯಾರ್ಥಿನಿ ಅತಿಯಾದ ಫಾಸ್ಟ್ ಫುಡ್ ಸೇವನೆಯಿಂದ ತೀವ್ರ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಅಹಾನಾ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ದೀರ್ಘಕಾಲದ ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ ಅಹಾನಾಳ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿತ್ತು ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ. ವೈದ್ಯಕೀಯ ತಂಡದ ಪ್ರಕಾರ, ಆಕೆಯ ಕರುಳುಗಳು ಒಟ್ಟಿಗೆ ಅಂಟಿಕೊಂಡಿದ್ದವು. ಜೀರ್ಣಾಂಗ ವ್ಯವಸ್ಥೆಯು ಸಂಪೂರ್ಣವಾಗಿ ಹಾನಿಗೊಳಗಾಗಿತ್ತು. ಇದರಿಂದಾಗಿ ಆಕೆಗೆ ಶಸ್ತ್ರಚಿಕಿತ್ಸೆ…

Read More

ಬೆಂಗಳೂರು, ಡಿ.25: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್​​ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 5 ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆಯಲ್ಲಿ ಹಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಸ್ಲೀಪರ್ ಕೋಚ್ ಬಸ್​ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು. ಈ ಸಂದರ್ಭದಲ್ಲಿ ಹಿರಿಯೂರಿನ ಜವನಗೊಂಡನಹಳ್ಳಿಯ ಗೊರ್ಲತ್ತು ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಕಂಟೇನರ್‌ ಒಂದು ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿಕೊಂಡು ಸ್ಲೀಪರ್‌ ಕೋಚ್‌ ಬಸ್‌ಗೆ ಡಿಕ್ಕಿ ಹೊಡೆದಿದೆ. ತಕ್ಷಣ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್‌ ಧಗಧಗನೇ ಹೊತ್ತಿ ಉರಿದಿದೆ. ಬಸ್‌ನಲ್ಲಿದ್ದ 5 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಇದೇ ವೇಳೆ ಲಾರಿ ಚಾಲಕ ಕೂಡ ಸಜೀವ ದಹನವಾಗಿದ್ದಾನೆ. ಬಸ್​ನಲ್ಲಿ ಡ್ರೈವರ್‌ ಮತ್ತು ಕ್ಲೀನರ್‌ ಸೇರಿ 32 ಮಂದಿ ಪ್ರಯಾಣಿಕರು ಇದ್ದರು ಎಂದು ಪೂರ್ವ ವಲಯ ಐಜಿಪಿ ರವಿಕಾಂತೇಗೌಡ ಮಾಹಿತಿ…

Read More

ಬೆಂಗಳೂರು, ಡಿ.20: ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಲೋಹಿಯಾ ಪ್ರಶಸ್ತಿಗೆ ಭಾಜನರಾಗಿದ್ದು, ಗಣ್ಯರು ಅಭಿನಂದಿಸಿದ್ದಾರೆ. ಬೆಂಗಳೂರು ನಾಗರಿಕರ ವೇದಿಕೆ ಮತ್ತು ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾಗಿ 3ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಶಿವಾನಂದ ತಗಡೂರು ಅವರಿಗೆ ಹಮ್ಮಿಕೊಂಡಿದ್ದ ನಾಗರಿಕ ಸನ್ಮಾನ ಮತ್ತು ಲೋಹಿಯಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರನ್ನು ಅಭಿನಂದಿಸಿ, ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಸ್ತುತ ಸಮಾಜದಲ್ಲಿ ನಿಸ್ವಾರ್ಥ ಸೇವಾ ಮನೋಭಾವನೆಯಿಂದ ಕೆಲಸ ಮಾಡುವವರ ಸಂಖ್ಯೆ ವಿರಳವಾಗಿದೆ. ಅಂಥವರ ನಡುವೆ ಶಿವಾನಂದ ತಗಡೂರು ಅವರು ವಿಭಿನ್ನವಾಗಿ ಗಮನ ಸೆಳೆಯುವ ಕೆಲಸ ಮಾಡುತ್ತಿರುವುದು ಅಭಿನಂದನೀಯ ಎಂದು ಗಣ್ಯರು ಶ್ಲಾಘಿಸಿದರು. ರೈತ ಕುಟುಂಬದಿಂದ ಬಂದ ತಗಡೂರು ಅವರು ರೈತ ಮತ್ತು ಜನಪರ ಚಳವಳಿಯಲ್ಲಿ ಗುರುತಿಸಿಕೊಳ್ಳುತ್ತಲೇ ಪತ್ರಕರ್ತರಾಗಿ ರೂಪುಗೊಂಡಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುಕ್ಕಾಣಿ ಹಿಡಿದು, ಆ ಮೂಲಕ ಪತ್ರಕರ್ತರ ಸಮುದಾಯಕ್ಕೆ ನೀಡುತ್ತಿರುವ…

Read More

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗಾಗಿ ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಈ ಹರಾಜಿನಲ್ಲಿ ಬರೋಬ್ಬರಿ 369 ಆಟಗಾರರ ಹೆಸರು ಕಾಣಿಸಿಕೊಂಡಿದೆ. ಇವರಲ್ಲಿ ಎರಡನೇ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಫ್ರಾಂಚೈಸಿ ಸ್ಟಾರ್ ಆಲ್​ರೌಂಡರ್​ನನ್ನು ಖರೀದಿಸಿದೆ. ಆರ್‌ಸಿಬಿ ಫ್ರಾಂಚೈಸಿಯು ಭಾರತದ ಸ್ಟಾರ್ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿ ರೂಪಾಯಿ ನೀಡಿ ಖರೀದಿಸಿ, ಈ ಮೂಲಕ ಕಡಿಮೆ ಮೊತ್ತಕ್ಕೆ ಒಳ್ಳೆಯ ಆಲ್ರೌಂಡರ್ ಖರೀದಿಸುವಲ್ಲಿ ಆರ್‌ಸಿಬಿ ಯಶಸ್ವಿಯಾಗದೆ. ಕಳೆದ ಆವೃತ್ತಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬರೋಬ್ಬರಿ 23.75 ಕೋಟಿ ರೂಪಾಯಿ ನೀಡಿ ವೆಂಕಟೇಶ್ ಅಯ್ಯರ್ ಅವರನ್ನು ಖರೀದಿಸಿತ್ತು. ಇದೀಗ ಮತ್ತೊಮ್ಮೆ ವೆಂಕಟೇಶ್ ಅಯ್ಯರ್ ಖರೀದಿಸಲು ಆರ್‌ಸಿಬಿ ಹಾಗೂ ಕೆಕೆಆರ್ ನಡುವೆ ಪೈಪೋಟಿ ಏರ್ಪಟ್ಟಿತ್ತಾದರೂ, ಅಂತಿಮವಾಗಿ 7 ಕೋಟಿ ರೂಪಾಯಿಗೆ ವೆಂಕಟೇಶ್ ಅಯ್ಯರ್‌ ಆರ್‌ಸಿಬಿ ಪಾಲಾಗಿದ್ದಾರೆ. ಇನ್ನು, 30 ಲಕ್ಷ ರೂಪಾಯಿ ಮೂಲಬೆಲೆ ಹೊಂದಿದ್ದ ಮಂಗೇಶ್ ಯಾದವ್‌ರನ್ನು ಖರೀದಿಸಲು ಆರ್‌ಸಿಬಿ ಹಾಗೂ…

Read More

ಬೆಂಗಳೂರು, ಡಿ.16 : ಅಬುಧಾಬಿಯಲ್ಲಿ ನಡೆಯುತ್ತಿರುವ 19ನೇ ಆವೃತ್ತಿಯ ಐಪಿಎಲ್ ಮಿನಿ ಹರಾಜಿನಲ್ಲಿ ಡ್ಯಾಡ್ಸ್‌ ಆರ್ಮಿ ಎಂದು ಟೀಕೆಗೆ ಗುರಿಯಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ಜೊಡೆತ್ತುಗಳಿಗೆ ಗಾಳ ಹಾಕಿದೆ. ಹೌದು, ಸಿಎಸ್‌ಕೆ ಈ ಬಾರಿ ಯಂಗ್‌ ಪ್ಲೇಯರ್ಸ್ ಪ್ರಶಾಂತ್ ವೀರ್ ಮತ್ತು ಕಾರ್ತಿಕ್ ಶರ್ಮಾ ಮೇಲೆ ಬರೋಬ್ಬರಿ 28.40 ಕೋಟಿ ರೂ. ಇನ್ವೇಸ್ಟ್ ಮಾಡಿ ಕ್ರಿಕೇಟ್‌ ಪ್ರೇಮಿಗಳನ್ನು ಬೆರಗುಗೊಳಿಸಿದೆ. 30 ಲಕ್ಷ ರೂಪಾಯಿ ಮೂಲ ಬೆಲೆಯೊಂದಿಗೆ ಆಕ್ಷನ್‌ಗೆ ಬಂದಿದ್ದ ಪ್ರಶಾಂತ್ ವೀರ್ ಅವರನ್ನು ಖರೀದಿಸಲು ಲಕ್ನೋ, ಮುಂಬೈ, ಹೈದರಾಬಾದ್ ಫ್ರಾಂಚೈಸಿಗಳು ಬಾರಿ ಪೈಪೋಟಿ ನಡೆಸಿದವು. ಆದರೆ, 5 ಬಾರಿ ಐಪಿಎಲ್‌ ಟ್ರೋಫಿಯನ್ನು ಗೆದ್ದು ಬೀಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ಜೋಡೆತ್ತುಗಳನ್ನು ಖರೀದಿಸುವಲ್ಲಿ ಸಕ್ಸಸ್‌ ಆಗಿದೆ. ಉತ್ತರ ಪ್ರದೇಶ ಪರ ಫಸ್ಟ್‌ ಗ್ರೇಡ್ ಕ್ರಿಕೆಟ್ ಆಡುವ 20 ವರ್ಷದ‌ ತರುಣ ಪ್ರಶಾಂತ್ ವೀರ್ ಬೌಲಿಂಗ್ ಜೊತೆ ಬ್ಯಾಟಿಂಗ್‌ನಲ್ಲೂ ಕಮಾಲ್ ಮಾಡುವ ಸಾಮರ್ಥ್ಯ ಹೊಂದಿರುವ ಅವರನ್ನು ಭರ್ಜರಿ 14.20 ಕೋಟಿ ರೂಪಾಯಿಗೆ ಖರೀದಿಸಿ ರವೀಂದ್ರ…

Read More

ಬೆಂಗಳೂರು, ಡಿ.16 : ಅಬುದಾಬಿಯಲ್ಲಿ ಬಹುನಿರೀಕ್ಷಿತ ಐಪಿಎಲ್‌ 2026ರ ಹರಾಜು ಪ್ರಕ್ರಿಯೆ ನಡೆದಿದ್ದು. ಈ ಹರಾಜಿನಲ್ಲಿ ಎಲ್ಲರ ಗಮನ ಸೆಳೆದಿದ್ದು ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಕ್ಯಾಮರೂನ್‌ ಗ್ರೀನ್‌. ಹೌದು, ಇವರು ಈ ಬಾರಿಯ ಹರಾಜಿನಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಬಿಡ್ ಆಗಬಹುದು ಎಂದು ಅಂದಾಜಿಸಲಾಗಿತ್ತು. ಎಲ್ಲರ ಊಹೆಯಂತೆಯೇ ಇವರು ಈ ಬಾರಿಯ ಹರಾಜಿನಲ್ಲಿ ದಾಖಲೆಯ ಮೊತ್ತಕ್ಕೆ ಸೋಲ್ಡ್‌ ಔಟ್‌ ಆಗಿದ್ದಾರೆ. ಹರಾಜು ವೇಳೆ ಇವರನ್ನು ಖರೀದಿಸಲು ಭಾರೀ ಪೈಪೋಟಿ ಕಂಡು ಬಂದಿದ್ದು, ಕೊನೆಗೆ ಇವರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳುವಲ್ಲಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸಫಲವಾಗಿದೆ.ಸಿಎಸ್‌ಕೆ ಮತ್ತು ಕೆಕೆಆರ್ ನಡುವೆ ತೀವ್ರ ಹಣಾಹಣಿ ನಡೆದು ಕೊನೆಗೆ ಬರೋಬ್ಬರಿ 25.20 ಕೋಟಿ ರೂಪಾಯಿಗಳಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ಆಲ್‌ರೌಂಡರ್ ಕ್ಯಾಮರೋನ್ ಗ್ರೀನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಗ್ರೀನ್ ಈ ಹಿಂದೆ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದರು. 2023ರಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಎಂಟ್ರಿ…

Read More

ಬೆಂಗಳೂರು, ಡಿ.15 : ವೋಟ್‌ ಚೋರಿ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಎಚ್ಚರಿಕೆ ನೀಡಿದರು. ರಾಜ್ಯಸಭೆಯಲ್ಲಿ ಸೋಮವಾರ ಈ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿಗಳು, ಪ್ರತಿಪಕ್ಷಗಳು ನಿರಂತರವಾಗಿ ಸುಳ್ಳಿನ ಕಥೆಗಳನ್ನು ಪ್ರಚಾರ ಮಾಡುತ್ತಾ ಮತದಾರರ ಮನಸ್ಸಿನಲ್ಲಿ ಅನುಮಾನಗಳನ್ನು ಹುಟ್ಟು ಹಾಕಿದರೆ ಅದರಿಂದ ಪ್ರತಿಪಕ್ಷಗಳಿಗೆ ಒಳ್ಳೆಯದಾಗುವುದಿಲ್ಲ ಎಂದು ಹೇಳಿದರು. ಪ್ರತಿಪಕ್ಷಗಳು ಪ್ರಧಾನಿಯವರ ಬಗ್ಗೆ ಹಾದಿಬೀದಿಗಳಲ್ಲಿ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಕೆಟ್ಟದಾಗಿ ಟೀಕೆ ಮಾಡುತ್ತಿರುವ ಬಗ್ಗೆ ಮಾಜಿ ಪ್ರಧಾನಿಗಳು ಹರಿಹಾಯ್ದರು. ನಮ್ಮದು ಬಹಳ ದೊಡ್ಡ ರಾಷ್ಟ್ರ. ಕಾಂಗ್ರೆಸ್ ಪಕ್ಷವು ಮೂರು ರಾಜ್ಯಗಳಲ್ಲಿ ಅಧಿಕಾರದಲ್ಲಿ ಇರಬಹುದು, ನನ್ನ ಪ್ರತಿಪಕ್ಷ ಸ್ನೇಹಿತರೇ ದಯವಿಟ್ಟು ನೆನಪಿಡಿ ʼವೋಟ್ ಚೋರಿʼ ಎಂಬ ಪದಗಳನ್ನು ಬಳಸುವುದರಿಂದ ನೀವು ಮುಂಬರುವ ದಿನಗಳಲ್ಲಿ ತೊಂದರೆ ಅನುಭವಿಸುತ್ತೀರಿ. ನೀವು ಯುದ್ಧದಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ದೇವೇಗೌಡರು…

Read More