Author: Mahanthesha

ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಅವರ ವಿರುದ್ಧ ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ ನ್ಯಾಯಾಧೀಶ ಸಂತೋಷ್‌ ಹೆಗ್ಡೆ ಅವರು ಖಾಸಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ವೇಳೆ ಹಿಂದೂ ಕಾರ್ಯಕರ್ತ ಪುನೀತ್​​ ಕೆರೆಹಳ್ಳಿಗೆ ಸನ್ಮಾನ ಮಾಡಿದ್ದರು. ಕಾರ್ಯಕ್ರಮದಲ್ಲಿ ಸಂತೋಷ್ ಹೆಗ್ಡೆ ಅವರು, ಪುನೀತ್ ಕೆರೆಹಳ್ಳಿಗೆ ಶಾಲು ಪೇಟ ಹೊದಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ್ದರು. ಇದರ ಫೋಟೋಗಳನ್ನು ಪುನೀತ್ ಕೆರೆಹಳ್ಳಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದನ್ನು ಕಂಡ ನೆಟ್ಟಿಗರು ಸಂತೋಷ್ ಹೆಗ್ಡೆ ಅವರನ್ನು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಗೆ ಸನ್ಮಾನ ಮಾಡಿದ್ದೀರಿ. ಆತನ ಹಿನ್ನೆಲೆ ಏನು ಅಂತಾ ಗೊತ್ತಿರಲಿಲ್ವಾ ಎಂದು ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ಸಂತೋಷ್​ ಹೆಗ್ಡೆ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಅರ್ಥಪೂರ್ಣ ಕಾರ್ಯಕ್ರಮ ಎಂದು ತಿಳಿದು ನಾನು ಹೋಗಿದ್ದೆ, ಅಲ್ಲಿ ಯಾರಿಗೆ ಪ್ರಶಸ್ತಿ ಕೊಡುತ್ತಿದ್ದೇನೆ…

Read More

ದೆಹಲಿ, ನ.29 : ಪವರ್‌ ಶೇರಿಂಗ್‌ ಫೈಟ್‌ ಮಧ್ಯೆಯೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್‌ ದೆಹಲಿಯಲ್ಲಿ ಗೇಮ್‌ಪ್ಲ್ಯಾನ್‌ ಮಾಡಿದ್ದಾರೆ. ದೆಹಲಿಯಲ್ಲಿ ಬೀಡುಬಿಟ್ಟಿರುವ ಡಿ.ಕೆ.ಸುರೇಶ್‌, ಹೈಕಮಾಂಡ್‌ ಭೇಟಿಗೆ ಕಸರತ್ತು ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬೆನ್ನಲ್ಲೇ ದೆಹಲಿಯಲ್ಲಿ ಡಿ.ಕೆ.ಸುರೇಶ್‌ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಸಂಚನಲ ಸೃಷ್ಟಿಸಿದ್ದಾರೆ. ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಕೆಶಿಯವರು, ಪಕ್ಷಕ್ಕಾಗಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ತ್ಯಾಗದ ಕುರಿತು ಮಾತುಗಳನ್ನಾಡಿದ್ದರು. ಇದನ್ನು ಸಮರ್ಥಿಸಿಕೊಂಡಿರುವ ಡಿ.ಕೆ.ಸುರೇಶ್‌, ಡಿ.ಕೆ ಶಿವಕುಮಾರ್‌ ಅನೇಕ ಸಂದರ್ಭದಲ್ಲಿ ಗಾಂಧಿ ಕುಟುಂಬದ ತ್ಯಾಗ ಬಲಿದಾನದ ಕುರಿತು ಪ್ರಸ್ತಾಪಿಸುತ್ತಲೇ ಬಂದಿದ್ದಾರೆ. ಸೋನಿಯಾ ಗಾಂಧಿ ತೆಗೆದುಕೊಂಡ ಅನೇಕ ನಿರ್ಧಾರಗಳನ್ನು ಪಕ್ಷದ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ತಿಳಿಸುವ ಕಾರ್ಯ ಮಾಡುತ್ತಲೇ ಇರುತ್ತಾರೆ ಇದರಲ್ಲಿ ಹೊಸದೆನಿಲ್ಲ ಎಂದಿದ್ದಾರೆ. ಅಲ್ಲದೇ, ಸಿಎಂ ಹಾಗೂ ಡಿಸಿಎಂ ರಾಜ್ಯದ ಜನತೆಗೆ ಒಗ್ಗಟ್ಟಾಗಿ ಆಡಳಿತ ನಡೆಸುವ ಕುರಿತು ಮಾತು ಕೊಟ್ಟಿದ್ದಾರೆ. ಕೊಟ್ಟ ಮಾತಿನಂತೆ ನಡೆದುಕೊಳ್ಳುವುದು ಅವರ…

Read More

ಬೆ, ನ.29 : ತೀವ್ರ ಗೊಂದಲ ಸೃಷ್ಟಿಸಿರುವ ಸಿಎಂ ಬದಲಾವಣೆ ಬಡಿದಾಟದ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಡುವೆ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಹೈಕಮಾಂಡ್‌ ಸೂಚನೆಯಂತೆ ಕಾವೇರಿ ನಿವಾಸದಲ್ಲಿ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ನಡೆಸಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಅವರು ಕೆಲಹೊತ್ತು ಚರ್ಚೆ ನಡೆಸಿದ್ದಾರೆ. ಇನ್ನು, ಉಂಟಾಗಿರುವ ಪವರ್‌ ಶೇರಿಂಗ್ ಜಟಾಪಟಿಗೆ ಬ್ರೇಕ್‌ ಹಾಕಲು ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದ್ದು, ಭಾನುವಾರ ನಡೆಯಲಿರುವ ಕಾಂಗ್ರೆಸ್‌ ಸಂಸದೀಯ ಸಭೆಗೂ ಮುನ್ನ ಮಾತುಕತೆ ನಡೆಸಿ ಒಮ್ಮತದ ನಿರ್ಧಾರಕ್ಕೆ ಬರುವಂತೆ ಉಭಯ ನಾಯಕರಿಗೆ ಸೂಚಿಸಿತ್ತು. ಹೀಗಾಗಿ, ಇಬ್ಬರು ಸೇರಿ ಉಪಾಹಾರ ಸಭೆ ಏರ್ಪಡಿಸಿ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ಕುರಿತು ಸ್ವತಃ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಜೊತೆ ಬೆಳಗ್ಗಿನ ಉಪಹಾರ ಸೇವಿಸುತ್ತಾ, ಕೆಲಹೊತ್ತು ಮಾತುಕತೆ ನಡೆಸಿದೆ” ಅಂತಾ ಬರೆದುಕೊಂಡಿದ್ದಾರೆ. ಜೊತೆಗೆ ಇಬ್ಬರು ಒಟ್ಟಿಗೆ ಕೂತು ಬ್ರೇಕ್‌ಫಾಸ್ಟ್‌ ಮಾಡುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ.…

Read More

ಬೆ, ನ.28 : ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಡೆ ಭಾರಿ ಕುತೂಹಲ ಕೆರಳಿಸಿದೆ. ಹೈಕಮಾಂಡ್‌ ಕರೆಯುವ ಮೊದಲೇ ಡಿಕೆಶಿ ದೆಹಲಿ ಪ್ರಯಾಣಕ್ಕೆ ಸಜ್ಜಾಗಿದ್ದರು. ಸಿಎಂ ಸ್ಥಾನಕ್ಕಾಗಿ ಶಕ್ತಿ ಮೀರಿ ಹೋರಾಡುತ್ತಿರುವ ಡಿಕೆಶಿ ಸಂಜೆಯ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿದ್ದರು. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಲು ಎರಡೆರಡು ಬಾರಿ ಟಿಕೆಟ್‌ ಬುಕ್‌ ಮಾಡಿದ್ದರು. ಆದರೆ ಎರಡೂ ಬಾರಿ ಬುಕ್‌ ಮಾಡಿದ್ದ ಟಿಕೆಟ್‌ನ್ನು ಡಿಕೆಶಿ ಕ್ಯಾನ್ಸಲ್‌ ಮಾಡಿಸಿದ್ದಾರೆ. ಇನ್ನು ದೆಹಲಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರುಗಳಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಸೇರಿದಂತೆ ವಿವಿಧ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಸಿಎಂ ಹುದ್ದೆ ಕುರಿತಾಗಿ ಚರ್ಚಿಸಲು ಡಿಕೆಶಿ ಪ್ಲ್ಯಾನ್‌ ಮಾಡಿದ್ದರು ಅಂತಾ ಹೇಳಲಾಗ್ತಿದೆ. ಇನ್ನು ನವೆಂಬರ್‌ 29ರಂದು ದೆಹಲಿಯಲ್ಲಿ ಕಾಂಗ್ರೆಸ್‌ ಸಂಸದೀಯ ಸಭೆ ನಡೆಯಲಿದ್ದು, ಈ ವೇಳೆ ಸಿಎಂ ಹುದ್ದೆ ಕುರಿತಾಗಿ ಪ್ರಸ್ತಾಪಿಸಲು ಪೂರ್ವ ತಯಾರಿ ಮಾಡಿಕೊಂಡಿದ್ದರು. ಈಗಾಗಲೇ…

Read More