Author: Mahanthesha

ಬೆಂಗಳೂರು, ಮಾ.23: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಸೋಮವಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಉಮೇಶ್ ಮೇಟಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹಾಗೂ ಮಾಜಿ ಸಚಿವ ಅಜಯಕುಮಾರ್ ಸರನಾಯಕ ಅವರ ಉಪಸ್ಥಿತಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಬೆಳಿಗ್ಗೆ ತಿಮ್ಮಾಪುರದಲ್ಲಿರುವ ತಮ್ಮ ತಂದೆ, ದಿವಂಗತ ಎಚ್.ವೈ. ಮೇಟಿ ಅವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ಕಿಲ್ಲಾ ರಾಘವೇಂದ್ರ ಸ್ವಾಮಿ ಮಠ ಹಾಗೂ ಪ್ರಸಿದ್ಧ ಕೊತ್ತಲೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಮುಗಿದ ಬಳಿಕ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಬಹಿರಂಗ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಮಾವೇಶದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮತ್ತು ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಘಟಾನುಘಟಿ ನಾಯಕರು ಭಾಗವಹಿಸುತ್ತಿದ್ದಾರೆ. ಈ…

Read More

ದಾವಣಗೆರೆ, ಮಾ.23 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ಈಗ ಹೈವೋಲ್ಟೇಜ್ ಪಡೆದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ಶಾಮನೂರು ಅವರು ಇಂದು ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಾವಣಗೆರೆಗೆ ಆಗಮಿಸಿ ಭರ್ಜರಿ ಶಕ್ತಿ ಪ್ರದರ್ಶನ ನಡೆಸಿದರು. ಏಪ್ರಿಲ್ 9ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಶಾಮನೂರು ಶಿವಶಂಕರಪ್ಪನವರ ಮೊಮ್ಮಗ ಸಮರ್ಥ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದರು. ಸಮರ್ಥ್‌ ತಂದೆ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ ಹಾಗೂ ತಾಯಿ‌ ಲೋಕಸಭಾ ಸದಸ್ಯೆ ಪ್ರಭಾ ಮಲ್ಲಿಕಾರ್ಜುನ ಕೂಡ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಾವು ಸಮರ್ಥ್ ಅವರನ್ನು ಅಭ್ಯರ್ಥಿಯಾಗಿ ಮಾಡಿದ್ದೇವೆ. ನಾನು ಕೂಡ ಇವತ್ತು ನಾಮಪತ್ರ ಸಲ್ಲಿಸುವಾಗ ಭಾಗಿಯಾಗಿದ್ದೆ. ಬ್ಲಾಕ್ ಕಮಿಟಿ ಅಧ್ಯಕ್ಷ ಅಯೂಬ್ ಕೂಡ ಇದ್ದರು. ನಮ್ಮದು ಎಲ್ಲರನ್ನೂ ಒಳಗೊಂಡಿರುವಂತಹ…

Read More

ಬೆಂಗಳೂರು, ಮಾ.21: ಬಾಲಿವುಡ್‌ ನಟ ರಣವೀರ್‌ ಸಿಂಗ್‌ ನಟನೆಯ ಬಹುನಿರೀಕ್ಷಿತ ಧುರಂಧರ್‌ 2 ಸಿನಿಮಾ ಕಲೆಕ್ಷನ್‌ ಕಿಂಗ್‌ ಆಗಿ ಅಬ್ಬರಿಸುತ್ತಿದೆ. ಧುರಂಧರ್‌ 2 ಸಿನಿಮಾ ರಿಲೀಸ್‌ ಆದ ಎರಡನೇ ದಿನದಲ್ಲಿ ಕೋಟಿ ಕೋಟಿ ಕಲೆಕ್ಷನ್‌ ಮಾಡಿದ್ದು, ದಾಖಲೆಗಳೆಲ್ಲಾ ಉಡೀಸ್‌ ಆಗಿವೆ. ಹೌದು. ಮಾರ್ಚ್‌ 19ರಂದು ವರ್ಲ್ಡ್‌ ವೈಡ್‌ ರಿಲೀಸ್‌ ಆಗಿರುವ ಧುರಂಧರ್‌ 2 ಸಿನಿಮಾ ವೀಕ್ಷಿಸಿದ ಪ್ರೇಕ್ಷಕರು ಹಾಗೂ ಸಿನಿ ಮಂದಿ ಭಾರಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಧುರಂಧರ್-2 ಚಿತ್ರವು, ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಭರ್ಜರಿ ದಾಖಲೆ ಮಾಡಿದೆ. ಭಾರತದಲ್ಲಿ ಮೊದಲ ದಿನವೇ 100 ಕೋಟಿಗೂ ಅಧಿಕ ಗಳಿಕೆ ಮಾಡಿರುವ ಸಿನಿಮಾ, ಎರಡನೇ ದಿನವಾದ ಶುಕ್ರವಾರ 80 ಕೋಟಿ ಅಧಿಕ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಇದ್ರ ಜೊತೆಗೆ ಅಡ್ವಾನ್ಸ್‌ ಬುಕಿಂಗ್‌ ಸೇರಿ ಹಲವು ಮೂಲಗಳಿಂದ 43 ಕೋಟಿ ಗಳಿಸಿದೆ ಎನ್ನಲಾಗ್ತಿದೆ. ಇದೆಲ್ಲವೂ ಸೇರಿ ಸಿನಿಮಾ ರಿಲೀಸ್‌ ಆದ 2 ದಿನದಲ್ಲಿ 226 ಕೋಟಿ ಗಳಿಸಿದೆ ಅಂತಾ ಹೇಳಲಾಗ್ತಿದೆ. 2000…

Read More

ಬೆಂಗಳೂರು, ಮಾ.21: ಐಪಿಎಲ್‌ 2026ರ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಹಂತದ ಪಂದ್ಯಗಳ ಟಿಕೆಟ್ ಖರೀದಿಗೆ ಸಂಬಂಧಿಸಿದಂತೆ ಮಹತ್ವದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸದ್ಯಕ್ಕೆ ಟಿಕೆಟ್ ಮಾರಾಟ ಇನ್ನೂ ಆರಂಭವಾಗಿಲ್ಲವಾದರೂ, ಅಭಿಮಾನಿಗಳು ಗೊಂದಲವಿಲ್ಲದೆ ಟಿಕೆಟ್ ಕಾಯ್ದಿರಿಸಲು ಅನುಕೂಲವಾಗುವಂತೆ ಫ್ರಾಂಚೈಸಿಯು ಬುಕ್ಕಿಂಗ್‌ ಪ್ರಕ್ರಿಯೆಯನ್ನು ವಿವರಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಎರಡು ಪಂದ್ಯಗಳು :ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗಳ ಕಾರಣದಿಂದಾಗಿ ಐಪಿಎಲ್‌ನ ಭಾಗಶಃ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಇದರಂತೆ, ಇದೇ ಮಾ.28 ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದೊಂದಿಗೆ ಆರ್‌ಸಿಬಿ ತನ್ನ ಸರಣಿಯನ್ನು ಆರಂಭಿಸಲಿದೆ. ಏ.5 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮತ್ತೊಂದು ಹೈ-ವೋಲ್ಟೇಜ್ ಪಂದ್ಯ ನಡೆಯಲಿದೆ. ಸದ್ಯಕ್ಕೆ ಬೆಂಗಳೂರಿನಲ್ಲಿ ಈ ಎರಡು ಪಂದ್ಯಗಳು ಮಾತ್ರ ಖಚಿತವಾಗಿವೆ. ಇನ್ನು, ಟಿಕೆಟ್ ದಂಧೆ ಮತ್ತು ವಂಚನೆಗಳನ್ನು ತಡೆಗಟ್ಟಲು ಆರ್‌ಸಿಬಿ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಅಭಿಮಾನಿಗಳು ಕೇವಲ ಅಧಿಕೃತ ಪ್ಲಾಟ್‌ಫಾರ್ಮ್‌ಗಳ…

Read More

ಬೆಂಗಳೂರು, ಮಾ.20: ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಏರಿಳಿತದ ನಡುವೆ, ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಇಂದು (ಶುಕ್ರವಾರ) ಪ್ರೀಮಿಯಂ ದರ್ಜೆಯ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 2 ರೂಪಾಯಿಗೂ ಅಧಿಕ ಏರಿಕೆ ಮಾಡಿವೆ. ಆದರೆ, ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಪ್ರೀಮಿಯಂ ಇಂಧನಗಳ ಹೊಸ ದರ :ಈ ಬೆಲೆ ಏರಿಕೆಯು ಪ್ರೀಮಿಯಂ ಗುಣಮಟ್ಟದ ಇಂಧನಗಳಾದ BPCLನ ʻಸ್ಪೀಡ್ʼ (Speed), HPCLನ ʻಪವರ್ʼ (Power) ಮತ್ತು IOCLನ ʻXP95ʼ ವೇರಿಯಂಟ್‌ಗಳಿಗೆ ಅನ್ವಯವಾಗಲಿದೆ. ಪರಿಷ್ಕೃತ ದರಗಳ ಪ್ರಕಾರ, ಈ ಇಂಧನಗಳ ಬೆಲೆ ಪ್ರತಿ ಲೀಟರ್‌ಗೆ 2.09 ರೂ. ನಿಂದ 2.35 ರೂ. ವರೆಗೆ ಏರಿಕೆಯಾಗಿದೆ. ಆದರೆ, ಸಾಮಾನ್ಯ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಸಾಮಾನ್ಯ ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಬೀಳದಂತೆ ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು HPCL ತಿಳಿಸಿದೆ. ಬೆಲೆ ಏರಿಕೆಗೆ ಕಾರಣವೇನು? :ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಅನಿಶ್ಚಿತತೆ…

Read More

ಬೆಂಗಳೂರು, ಮಾ.20: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದಾಗಿ ಭಾರತೀಯ ರೂಪಾಯಿ ಮೌಲ್ಯ ಡಾಲರ್‌ ಎದುರು ಸಾರ್ವಕಾಲಿಕ ಕುಸಿತ ಕಂಡಿದ್ದು, ಡಾಲರ್ ಎದುರು 93.16ಕ್ಕೆ ರೂಪಾಯಿ ಮೌಲ್ಯ ಕುಸಿದಿದೆ. ಕಚ್ಚಾ ತೈಲದ ಬೆಲೆ ಏರಿಕೆ ಬೆನ್ನಲೆ ರೂಪಾಯಿ ಮೌಲ್ಯ ಕುಸಿತ ಆಗಿರೋದ್ರಿಂದ ಇದು ಐತಿಹಾಸಿಕ ಕುಸಿತ ಎಂದು ಹೇಳಲಾಗುತ್ತಿದೆ. ಕಚ್ಚಾ ತೈಲದ ಬೆಲೆ ಈಗಾಗಲೇ ಪ್ರತಿ ಬ್ಯಾರೆಲ್‌ಗೆ 110 ಡಾಲರ್ ದಾಟಿದ್ದು, ಯುದ್ಧ ಹೀಗೆಯೇ ಮುಂದುವರಿದರೆ 180-200 ಡಾಲರ್ ತಲುಪುವ ಸಾಧ್ಯತೆ ಇದೆ ಎಂದು ಸೌದಿ ಅರೇಬಿಯಾ ಮತ್ತು ಇರಾನ್‌ನಂತಹ ದೇಶಗಳು ಎಚ್ಚರಿಕೆ ನೀಡಿವೆ. ಮತ್ತೊಂದೆಡೆ, ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡು 93ರ ಗಡಿ ದಾಟಿರುವುದು ದೇಶದ ಆರ್ಥಿಕತೆಯಲ್ಲಿ ಸಂಚಲನ ಮೂಡಿಸಿದೆ. ರೂಪಾಯಿ ಮೌಲ್ಯ ಕುಸಿದಾಗ ಆಮದು ಮಾಡಿಕೊಳ್ಳುವ ವಸ್ತುಗಳ ಬೆಲೆ ಏರಿಕೆಯಾಗುವುದು ಸಹಜ ಪ್ರಕ್ರಿಯೆಯಾಗಿದೆ. ಪ್ರಮುಖ ದೇಶಗಳ ನಡುವಿನ ಭೌಗೋಳಿಕ ರಾಜಕೀಯ ಸಂಘರ್ಷಗಳು ಹೂಡಿಕೆದಾರರಲ್ಲಿ ಆತಂಕ ಮೂಡಿಸಿವೆ. ಇದರಿಂದಾಗಿ ಸುರಕ್ಷಿತ ಹೂಡಿಕೆಯಾಗಿರುವ ಅಮೆರಿಕನ್ ಡಾಲರ್ ಮೇಲೆ ಎಲ್ಲರೂ…

Read More

ಬೆಂಗಳೂರು ಮಾ.19 : ರಾಜ್ಯದ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಹಾಗೂ ಹಿರಿಯ ನಾಯಕ ವೀರಣ್ಣ ಚರಂತಿಮಠಗೆ ಟಿಕೆಟ್ ನೀಡಲಾಗಿದೆ. ಇನ್ನು ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಅಚ್ಚರಿಯ ಆಯ್ಕೆಯಾಗಿ ಶ್ರೀನಿವಾಸ್‌ ಟಿ. ದಾಸ ಕರಿಯಪ್ಪ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಬಲ ಹಿಡಿತ ಹೊಂದಿರುವ ಚರಂತಿಮಠ ಅವರ ಹೆಸರನ್ನು ಅಂತಿಮಗೊಳಿಸುವ ಮೂಲಕ ಬಿಜೆಪಿ ಹಳೆ ಮುಖಕ್ಕೆ ಮನ್ನಣೆ ನೀಡಿದೆ. ಇತ್ತ ದಾವಣಗೆರೆ ಕ್ಷೇತ್ರದಲ್ಲಿ ಪ್ರಬಲ ಪೈಪೋಟಿ ನೀಡುವ ಉದ್ದೇಶದಿಂದ ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕಿದೆ. ಈ ಎರಡು ಕ್ಷೇತ್ರಗಳ ಉಪಚುನಾವಣೆಯು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಮತ್ತು ಪ್ರತಿಪಕ್ಷ ಬಿಜೆಪಿ ಎರಡಕ್ಕೂ ಪ್ರತಿಷ್ಠೆಯ ಕಣವಾಗಿದೆ. ಅಭ್ಯರ್ಥಿಗಳ ಘೋಷಣೆಯಾದ ಬೆನ್ನಲ್ಲೇ ಎರಡೂ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕಾರ್ಯ ಚುರುಕುಗೊಂಡಿದ್ದು, ವರಿಷ್ಠರು ಮತ್ತು ಕಾರ್ಯಕರ್ತರು ಗೆಲುವಿಗಾಗಿ ರಣತಂತ್ರ ರೂಪಿಸಲು ಸಜ್ಜಾಗಿದ್ದಾರೆ. ʼಕೈʼಯಿಂದ ಮೇಟಿ ಫ್ಯಾಮಿಲಿಗೆ…

Read More

ಬೆಂಗಳೂರು, ಮಾ.18: ಸರ್ಕಾರದ ವತಿಯಿಂದ ಆಯೋಜಿಸುವ ಉತ್ಸವಗಳಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡುವುದು ಹಾಗೂ ಅಬ್ಬರದ ಡಿಜೆ ಸಿಸ್ಟಂ ಬಳಕೆಗೆ ಕಡಿವಾಣ ಹಾಕುವ ಕುರಿತು ಕಾರ್ಮಿಕ ಸಚಿವ ಸಂತೋಷ್‌ ಎಸ್‌. ಲಾಡ್‌ ಅವರು ವಿಧಾನಸಭೆಯ ಕಲಾಪದಲ್ಲಿ ಮಾತನಾಡಿದರು. ಸರ್ಕಾರ ಆಯೋಜಿಸುವ ಉತ್ಸವಗಳಲ್ಲಿ ಲಕ್ಷಾಂತರ ಹಣ ವೆಚ್ಚ ಮಾಡಿ ಹೊರಗಿನಿಂದ ಕಲಾವಿದರನ್ನು ಕರೆಸುವ ಬದಲು ನಮ್ಮ ರಾಜ್ಯದ ಸ್ಥಳೀಯ ಕಲಾವಿದರನ್ನು ಆಹ್ವಾನಿಸಿದರೆ ಆ ಉತ್ಸವಗಳು ಅರ್ಥಪೂರ್ಣವಾಗಿರುತ್ತವೆ ಹಾಗೆಯೇ ಸರ್ಕಾರದ ಹಣ ಅನಗತ್ಯವಾಗಿ ಖರ್ಚಾಗುವುದು ತಪ್ಪುತ್ತದೆ ಅಂತ ಹೇಳಿದರು. ಡೊಳ್ಳು ಕುಣಿತ, ಕಂಸಾಳೆ, ಜಗ್ಗಲಿಗೆ, ಕರಡಿ ಮಜಲು, ಹಗಲು ವೇಷ, ಯಕ್ಷಗಾನ, ಹುಲಿ ಕುಣಿತದಂತಹ ನಮ್ಮ ಕನ್ನಡ ಮಣ್ಣಿನ ಕಲೆ ಪ್ರದರ್ಶಿಸುವ ಕಲಾವಿದರಿಗೆ ಅವಕಾಶ ಕೊಟ್ಟರೆ, ನಮ್ಮ ಪರಂಪರೆಯ ಪ್ರದರ್ಶನವೂ ಯುವ ಪೀಳಿಗೆಗೆ ತಲುಪುತ್ತದೆ. ಕಲಾವಿದರಿಗೂ ಅವಕಾಶ ಹಾಗೂ ಗೌರವ ಸಂಭಾವನೆಯೂ ದೊರೆಯುತ್ತದೆ ಎಂದು ಸಲಹೆ ನೀಡಿದರು. ನಾಡಿನ ಭವ್ಯ ಪರಂಪರೆ ಹಾಗೂ ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಉತ್ಸವಗಳನ್ನು ಏರ್ಪಡಿಸುವುದು ತುಂಬಾ ಅವಶ್ಯಕ. ಆದರೆ…

Read More

ಬೆಂಗಳೂರು, ಮಾ.18 : ರಾಜ್ಯಸಭೆಯಿಂದ ನಿವೃತ್ತರಾಗುತ್ತಿರುವ ಸದಸ್ಯರಿಗೆ ಶುಭಕೋರುವ ಸಂದರ್ಭದಲ್ಲಿ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ವಿರುದ್ಧ ಹಾಸ್ಯದ ಧಾಟಿಯಲ್ಲಿ ವ್ಯಂಗ್ಯವಾಡುವ ಮೂಲಕ ಸದನದಲ್ಲಿ ನಗುವಿನ ಅಲೆ ಎಬ್ಬಿಸಿದರು. ರಾಜ್ಯಸಭೆಯಲ್ಲಿ ಬುಧವಾರ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭ ಹಾಸ್ಯಮಯ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ತಮ್ಮ ವಿದಾಯ ಭಾಷಣದಲ್ಲಿ ದೇವೇಗೌಡರೊಂದಿಗಿನ ಹಳೆಯ ಒಡನಾಟವನ್ನು ಸ್ಮರಿಸಿದ ಮಲ್ಲಿಕಾರ್ಜುನ ಖರ್ಗೆ, ನನಗೆ 54 ವರ್ಷಗಳಿಂದ ಗೌಡರ ಪರಿಚಯ ಇದೆ. ಅವರ ಜೊತೆ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ. ಆದರೆ ಆಮೇಲೆ ಏನಾಯಿತೋ ಗೊತ್ತಿಲ್ಲ… ಅವರು ಪ್ರೀತಿ ಮಾಡಿದ್ದು ನಮ್ಮನ್ನು (ಕಾಂಗ್ರೆಸ್), ಆದರೆ ಮದುವೆಯಾಗಿದ್ದು ಮಾತ್ರ ಮೋದಿ ಸಾಹೇಬರ ಜೊತೆ ಎಂದು ಹಾಸ್ಯಭರೀತವಾಗಿಯೇ ಮಾರ್ಮಿಕವಾಗಿ ಟೀಕಿಸಿದ್ದಾರೆ. ಖರ್ಗೆ ಅವರ ಈ ಮಾತಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ಸಂಸದರು ಮುಗುಳ್ನಗೆ ಬೀರಿದ್ದಾರೆ. ಸಾರ್ವಜನಿಕ ಸೇವೆಯ ಬದ್ಧತೆಯ ಬಗ್ಗೆ ಮಾತನಾಡಿದ ಖರ್ಗೆ, ರಾಜಕಾರಣದಲ್ಲಿ ಇರುವವರು ಎಂದಿಗೂ ದಣಿಯುವುದಿಲ್ಲ ಅಥವಾ ನಿವೃತ್ತರಾಗುವುದಿಲ್ಲ ಎಂದರು.…

Read More

ಬೆಂಗಳೂರು, ಮಾ.17: ಎಲ್ಲರ ಬದುಕಿಗೆ ಹತ್ತಿರವಾದ ಕಥಾನಕವನ್ನು ನವಿರು ಪ್ರೇಮದ ಪರಿಧಿಯಲ್ಲಿ ಕಟ್ಟಿಕೊಟ್ಟಿರುವ ‘ಲವ್ ಸೀಸನ್ಸ್’ ಚಿತ್ರ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ. ರಂಗಭೂಮಿ ಹಿನ್ನೆಲೆಯ ಕೃತ್ವಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ʼಲವ್ ಸೀಸನ್ಸ್’ ಇದೀಗ ಪೋಸ್ಟ್ ಪ್ರೊಡಕ್ಷನ್ ಕೆಲಸ ಕಾರ್ಯಗಳತ್ತ ಹೊರಳಿಕೊಂಡಿದೆ. ಸಾಮಾನ್ಯವಾಗಿ ಕೆಲ ಸಿನಿಮಾಗಳನ್ನು ನೆಲಮೂಲದ ಕಥೆಯ ಮೂಲಕ ವಿಶೇಷವಾಗಿ ಗುರುತಿಸಲಾಗುತ್ತೆ. ಆದರೆ, ʼಲವ್ ಸೀಸನ್ಸ್’ ನಮ್ಮ ಕಣ್ಣಿಗೆ ಕಂಡೂ ಕಾಣದಂತಿರುವ ಗಲ್ಲಿ ಗಲ್ಲಿಯ ಕಥೆಯೆಂಬುದು ನಿರ್ದೇಶಕರ ಮಾತು. ರಂಗಭೂಮಿ ಮತ್ತು ಸಿನಿಮಾ ಜಗತ್ತಿನಲ್ಲಿ ಕಳೆದ ಹತ್ತು ವರ್ಷದಿಂದೀಚೆಗೆ ಕಾರ್ಯ ನಿರ್ವಹಿಸುತ್ತಿರುವವರು ಕೃತ್ವಿಕ್. ಅವರು ಲವ್ ಸೀಸನ್ಸ್ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ವಿಶೇಷವೆಂದರೆ, ರಂಗಭೂಮಿ ಹಿನ್ನೆಲೆಯ ಹೊಸಬರಿಂದಲೇ ಈ ಚಿತ್ರ ಕಳೆಗಟ್ಟಿಕೊಂಡಿದೆ. ಮಂಡ್ಯ ರಮೇಶ್ ಸಾರಥ್ಯದ ನಟನಾ ಸಂಸ್ಥೆಯಲ್ಲಿ ಪಳಗಿಕೊಂಡಿರುವ ಮುಕುಂದ ರಾಮಸ್ವಾಮಿ ನಾಯಕನಾಗಿ ನಟಿಸಿದ್ದಾರೆ. ದಿಯಾ ಕೀರ್ತಿ, ಚಂದನ ಗೌಡ ಮತ್ತು ಶ್ವೇತಾ ಕೊಗ್ಲೂರ್ ನಾಯಕಿಯರಾಗಿ ಜೊತೆಯಾಗಿದ್ದಾರೆ. ಗಟ್ಟಿ ಕಥೆ ಮತ್ತು ಈಗಿನ ಕಾಲಕ್ಕೆ ಅಗತ್ಯವಾಗಿರುವ ಸಂದೇಶ ಹೊಂದಿರುವ…

Read More