Subscribe to Updates
Get the latest creative news from FooBar about art, design and business.
Author: Mahanthesha
ಬೆಂಗಳೂರು, ಫೆ.12: ರಾಜ್ಯದಲ್ಲಿ ಸಿಎಂ ಬದಲಾವಣೆ ಕೋಲಾಹಲ ಮತ್ತೆ ತೀವ್ರಗೊಂಡಿದೆ. ಈ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಸೋನಿಯಾ ಗಾಂಧಿ ಅವರ ನಿವಾಸಕ್ಕೆ ತೆರಳಿದ್ದ ಡಿ.ಕೆ. ಶಿವಕುಮಾರ್ ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ. ಆದರೆ, ಈ ವೇಳೆ ಆಡಿರುವ ಮಾತುಗಳು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ದೆಹಲಿಯ ಜನ್ ಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ಪ್ರಿಯಾಂಕ ಗಾಂಧಿಯನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್ ಸುಮಾರು ಅರ್ಧ ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ. ನಂತರ ಸೋನಿಯಾ ಗಾಂಧಿ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ʼದೆಹಲಿಗೆ ಬಂದ ಮೇಲೆ ಎಲ್ಲಾ ವಿಚಾರ ಮಾತನಾಡಬೇಕು, ಅದನ್ನ ಮಾತನಾಡಿದ್ದೀನಿ. ಆದರೆ ಯಾರ್ಯಾರ ಹತ್ತಿರ ಏನೇನು ಮಾತನಾಡಿದೆ ಅಂತ ಬಹಿರಂಗವಾಗಿ ಹೇಳೋಕೆ ಆಗಲ್ಲ. ಒಳಗೆ ನಡೆದ ಚರ್ಚೆಯನ್ನು ಹೊರಗೆ ಹೇಳುವುದು ಸರಿಯಲ್ಲ ಎಂದಿದ್ದಾರೆ. ನಾನು ಇಲ್ಲಿಗೆ ಬಂದಿರೋದು ರಾಜಕಾರಣ ಮಾಡೋಕೆ,…
ಬೆಂಗಳೂರು, ಫೆ.10: ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ `ವೀರ ಕಂಬಳ’ ಚಿತ್ರ ಇದೇ ಫೆಬ್ರವರಿ 27ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಬಿಡುಗಡೆಯ ಕ್ಷಣಗಳು ಹತ್ತಿರವಾಗುತ್ತಿರುವ ಈ ಹೊತ್ತಿನಲ್ಲಿ ವೀರ ಕಂಬಳದ ಒಡಲಿನಲ್ಲಿರುವ ಒಂದೊಂದೇ ವೈಶಿಷ್ಟ್ಯಗಳನ್ನು ಚಿತ್ರತಂಡ ಜಾಹೀರು ಮಾಡುತ್ತಿದೆ. ವೀರ ಕಂಬಳ ರೂಪುಗೊಂಡಿದ್ದರ ಹಿಂದೆ ದಶಕಗಳಷ್ಟು ಸುದೀರ್ಘವಾದ ಕಥನವಿದೆ. ಸರಿಸುಮಾರು ಏಳುನೂರು ವರ್ಷಗಳಷ್ಟು ಐತಿಹ್ಯವಿರುವ ಕಂಬಳದ ಬಗ್ಗೆ ಇಂಚಿಂಚು ಮಾಹಿತಿಯನ್ನು ಕಲೆಹಾಕುವ ಮೂಲಕ ರಾಜೇಂದ್ರ ಸಿಂಗ್ ಬಾಬು ಅವರು ಈ ಸಿನಿಮಾವನ್ನು ರೂಪಿಸಿದ್ದಾರೆ. ಇದರಲ್ಲಿನ ಅತ್ಯಂತ ಮಹತ್ವದ ಪಾತ್ರವೊಂದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬಣ್ಣ ಹಚ್ಚಿರೋದು ವಿಶೇಷ. ವೀರೇಂದ್ರ ಹೆಗ್ಗಡೆ ಈ ಚಿತ್ರದಲ್ಲಿ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆಂಬ ವಿಚಾರ ವರ್ಷಗಳ ಹಿಂದೆಯೇ ಹೊರ ಬಂದಿತ್ತು. ಆದರೆ, ನಿರ್ದೇಶಕರಾಗಲಿ, ಚಿತ್ರತಂಡದವರಾಗಲಿ ಈ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಬಿಟ್ಟು ಕೊಡದೆ ಗೌಪ್ಯತೆ ಕಾಪಾಡಿಕೊಂಡಿದ್ದರು. ಆದರೀಗ ವೀರೇಂದ್ರ ಹೆಗ್ಗಡೆ ನಿರ್ವಹಿಸಿರೋ ಪಾತ್ರದ ಚಹರೆಗಳನ್ನು ನಿರ್ದೇಶಕರೇ ಪ್ರೇಕ್ಷಕರ ಮುಂದಿಟ್ಟಿದ್ದಾರೆ. ಜೊತೆಗೆ, ಪಾತ್ರಕ್ಕೆ ಅವರನ್ನೇ…
ಬೆಂಗಳೂರು, ಫೆ.10: ಕನ್ನಡಿಗರ ನೆಚ್ಚಿನ ಮನರಂಜನಾ ವಾಹಿನಿ ‘ಕಲರ್ಸ್ ಕನ್ನಡ’ ಸದಾ ನವನವೀನ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ಸೆಳೆಯುತ್ತಲೇ ಇರುತ್ತದೆ. ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12 ರ ಮುಕ್ತಾಯದ ನಂತರವೂ ಆ ಗುಂಗಿನಲ್ಲೇ ಇರುವ ಅಭಿಮಾನಿಗಳಿಗೆ ವಾಹಿನಿಯು ಭರ್ಜರಿ ಉಡುಗೊರೆಯೊಂದನ್ನು ನೀಡಲು ಮುಂದಾಗಿದೆ. ಫೆಬ್ರವರಿ 14ರಂದು “ಕಲರ್ಸ್ ದೊಡ್ಮನೆ ಹಬ್ಬ” ಎಂಬ ಅದ್ಧೂರಿ ಕಾರ್ಯಕ್ರಮ ಪ್ರಸಾರವಾಗಲಿದೆ. ಕಲರ್ಸ್ ಕನ್ನಡ ಮೂರು ಗಂಟೆಗಳ ಕಾಲ ವೀಕ್ಷಕರನ್ನು ರಂಜಿಸಲಿದೆ. ಕರುನಾಡಿನ ಮನೆ ಮಂದಿಯೆಲ್ಲ ಕುಳಿತು ನೋಡಬಹುದಾದ ಅತ್ಯುತ್ತಮ ಕಾರ್ಯಕ್ರಮ ಇದಾಗಲಿದೆ. ಅಂದಹಾಗೆ, ಈ “ಕಲರ್ಸ್ ದೊಡ್ಮನೆ ಹಬ್ಬ” ಇದೇ ಶನಿವಾರ ಸಂಜೆ 6:00 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಬಿಗ್ ಬಾಸ್ ಕನ್ನಡ ಸೀಸನ್ 12ರ ಎಲ್ಲಾ ಸ್ಪರ್ಧಿಗಳು ಹೊರಬಂದ ಮೇಲೆ ಇದೇ ಮೊದಲ ಬಾರಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮನೆಯೊಳಗಿನ ಗಂಭೀರ ವಾತಾವರಣದ ಬದಲು ಇಲ್ಲಿ ಕೇವಲ ನಗು, ಹರಟೆ ಮತ್ತು ಸಂಭ್ರಮಕ್ಕೆ ಮಾತ್ರ…
ಬೆಂಗಳೂರು, ಫೆ.10: ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ದೆಹಲಿಗೆ ತೆರಳುವ ಮುನ್ನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿ, ಅಧಿಕಾರ ಹಂಚಿಕೆ ಕುರಿತು ನಾಯಕರ ಹೇಳಿಕೆ ಬಗ್ಗೆ ಮಾತನಾಡಿದ ಅವರು, ನನ್ನ ಪರ, ವಿರುದ್ಧ ಹೇಳಿಕೆಗಳನ್ನು ಶಾಸಕರು, ಮಂತ್ರಿಗಳು, ಯಾರೇ ನೀಡುತ್ತಿರಬಹುದು. ಈ ಹೇಳಿಕೆಗಳು ಪಕ್ಷಕ್ಕೆ ಹಾನಿ ಮಾಡುವ ಹೇಳಿಕೆಗಳೇ ಹೊರತು ಪಕ್ಷಕ್ಕೆ ಒಳ್ಳೆಯದನ್ನು ಮಾಡುವ ಹೇಳಿಕೆಗಳಲ್ಲ ಎಂದಿದ್ದಾರೆ. ಇಂದು ಸಂಜೆ 4 ಗಂಟೆಗೆ ಎಐಸಿಸಿಯಲ್ಲಿ ಸಭೆಯಿದೆ. ವಿವಿಧ ಚುನಾವಣೆಗಳು ಹಾಗೂ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಾಗುವುದು. ಚುನಾವಣಾ ದಿನಾಂಕಗಳು ಘೋಷಣೆಯಾಗುವ ಸಾಧ್ಯತೆಯಿದೆ. ಆದ ಕಾರಣಕ್ಕೆ ನನ್ನನ್ನು ಚರ್ಚೆ ನಡೆಸಲು ಕರೆದಿದ್ದಾರೆ. ನಾನು ಹೋಗುತ್ತಿದ್ದೇನೆ ಎಂದರು. ಪ್ರತಿದಿನ ಶುಭದಿನ :ಕೆಲವು ಕಾಂಗ್ರೆಸ್ ನಾಯಕರು ನೀವು ಶುಭಸುದ್ದಿ ತರುವಿರಿ ಎಂಬ ನಿರೀಕ್ಷೆಯಲ್ಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ…
ಬೆಂಗಳೂರು, ಫೆ.05: ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಕಾಂಗ್ರೆಸ್ ಸಂಸದರು ಹಲ್ಲೆಗೆ ಸಂಚು ರೂಪಿಸಿದ್ದರು ಅಂತಾ ಸ್ಪೀಕರ್ ಓ ಬಿರ್ಲಾ ಅವರು ಗಂಭೀರ ಆರೋಪ ಮಾಡಿದ್ದಾರೆ. ಬುಧವಾರ ಲೋಕಸಭೆ ಅಧಿವೇಶನದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಮೋದಿ ಮೇಲೆ ಹಲ್ಲೆ ನಡೆಸಲು ಕಾಂಗ್ರೆಸ್ ಸಂಸದರು ಊಹಿಸಲಾಗದ ಘಟನೆಯೊಂದನ್ನು ಮಾಡಲು ಯೋಜಿಸಿದ್ದರು. ಹಾಗಾಗಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಪ್ರಧಾನಿ ನೀಡಬೇಕಾಗಿದ್ದ ಉತ್ತರ ನೀಡುವುದನ್ನು ರದ್ದುಗೊಳಿಸಿದೆ ಅಂತಾ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ. ಸದನದಲ್ಲಿ ನಡೆದದ್ದೇನು? :ಬುಧವಾರ ಹಲವು ಬಾರಿ ಮುಂದೂಡಿಕೆಯ ನಂತರ ಸಂಜೆ 5 ಗಂಟೆಗೆ ಲೋಕಸಭೆ ಕಲಾಪ ಶುರುವಾಯಿತು. ಪ್ರಧಾನಿ ಮೋದಿ ಬಂದು ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಉತ್ತರಿಸಲಿದ್ದಾರೆ ಎಂದು ಅನೇಕ ಸಂಸದರು ಕಾಯುತ್ತಿದ್ದರು. ಇದೇ ಸಮಯದಲ್ಲಿ ವಿರೋಧ ಪಕ್ಷದ ಸಂಸದರ ಪ್ರತಿಭಟನೆ ಮುಂದುವರಿದಿತ್ತು. ಎಂಟು ಅಥವಾ ಒಂಬತ್ತು ಮಂದಿ ಮಹಿಳಾ ಸಂಸದರು ಪ್ರಧಾನಿ ಮೋದಿ ಅವರ ಸೀಟನ್ನು ಸುತ್ತುವರಿದರು. ‘ಡೂ ವಾಟ್ ಈಸ್ ರೈಟ್’ ಎಂಬ…
ಬೆಂಗಳೂರು, ಫೆ.05: ಬಿಎಂಆರ್‌ಸಿಎಲ್ ಪುನಃ ʼನಮ್ಮ ಮೆಟ್ರೋʼ ಪ್ರಯಾಣಿಕರಿಗೆ ದರ ಏರಿಕೆಯ ಬರೆ ಎಳೆದಿದೆ. ಇದೇ ಫೆ.09 ರಿಂದ ಜಾರಿಗೆ ಬರುವಂತೆ ಮೆಟ್ರೋ ಟಿಕೆಟ್ ದರವನ್ನು ಶೇ. 5ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಅಧಿಕೃತವಾಗಿ ಘೋಷಿಸಿದೆ. ಈ ದರ ಏರಿಕೆಯು ದಿನನಿತ್ಯ ಮೆಟ್ರೋ ಅವಲಂಬಿಸಿರುವ ಲಕ್ಷಾಂತರ ಪ್ರಯಾಣಿಕರ ಜೇಬಿಗೆ ನೇರ ಹೊಡೆತ ನೀಡಲಿದೆ. ಮೆಟ್ರೋ ರೈಲ್ವೇ ಕಾಯ್ದೆ 2002ರ ಅಡಿಯಲ್ಲಿ ರಚಿಸಲಾದ ಫೇರ್ ಫಿಕ್ಸೇಷನ್ ಕಮಿಟಿ(ಎಫ್‌ಎಫ್‌ಸಿ) ಶಿಫಾರಸ್ಸಿನಂತೆ ಈ ದರ ಪರಿಷ್ಕರಣೆ ಮಾಡಲಾಗಿದೆ. ಮೆಟ್ರೋ ಸಂಚಾರದ ನಿರ್ವಹಣೆ, ವಿದ್ಯುತ್ ವೆಚ್ಚ, ಸಿಬ್ಬಂದಿ ವೇತನ, ತಾಂತ್ರಿಕ ನಿರ್ವಹಣೆ ಸೇರಿದಂತೆ ಕಾರ್ಯಾಚರಣಾ ವೆಚ್ಚಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅವನ್ನು ಸರಿದೂಗಿಸಲು ದರ ಏರಿಕೆ ಅನಿವಾರ್ಯ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಕಳೆದ 7.5 ವರ್ಷಗಳ ಬಳಿಕ ಮೊದಲ ಬಾರಿಗೆ ಮೆಟ್ರೋ ಟಿಕೆಟ್ ದರ ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಏಕಾಏಕಿ ಭಾರೀ ದರ ಏರಿಕೆ ತಪ್ಪಿಸುವ ಉದ್ದೇಶದಿಂದ ಪ್ರತಿವರ್ಷ ‘ಸ್ವಯಂಚಾಲಿತ ದರ ಪರಿಷ್ಕರಣೆ ವ್ಯವಸ್ಥೆ’ ಜಾರಿಗೆ…
ಬೆಂಗಳೂರು, ಫೆ.02: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ದುನಿಯಾ ವಿಜಯ್ ಅಭಿನಯದ ‘ಲ್ಯಾಂಡ್‌ಲಾರ್ಡ್’ ಚಿತ್ರಕ್ಕೆ ಕರ್ನಾಟಕ ಸರ್ಕಾರವು ತೆರಿಗೆ ವಿನಾಯಿತಿ ನೀಡಲು ಮುಂದಾಗಿದೆ. ಸಾಮಾಜಿಕ ಅಸಮಾನತೆ ಹಾಗೂ ಸಮಾಜದಲ್ಲಿನ ವರ್ಗಭೇದದ ವಾಸ್ತವ ಚಿತ್ರಣವನ್ನು ಒಳಗೊಂಡಿರುವ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. ಜನವರಿ 23ರಂದು ರಾಜ್ಯಾದ್ಯಂತ ಬಿಡುಗಡೆಯಾದ ‘ಲ್ಯಾಂಡ್ ಲಾರ್ಡ್’ ಸಿನಿಮಾ ತನ್ನ ಗಂಭೀರ ವಿಷಯವಸ್ತು, ನೈಜತೆಯ ಕಥನ ಹಾಗೂ ದುನಿಯಾ ವಿಜಯ್ ಅವರ ಅಭಿನಯದ ಮೂಲಕ ಪ್ರೇಕ್ಷಕರು ಹಾಗೂ ವಿಮರ್ಶಕರ ಮೆಚ್ಚುಗೆ ಗಳಿಸಿತ್ತು. ಸಮಾಜದಲ್ಲಿ ಇನ್ನೂ ಜೀವಂತವಾಗಿರುವ ಅಸಮಾನತೆ, ಜಾತಿ ಶೋಷಣೆ ಮತ್ತು ಶೋಷಿತ ವರ್ಗಗಳ ನೋವನ್ನು ಚಿತ್ರವು ಸ್ಪಷ್ಟವಾಗಿ ತೆರೆದಿಟ್ಟಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆ ಸರ್ಕಾರ ಕೂಡ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವ ಮೂಲಕ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮೌಲ್ಯಯುತ…
ಬೆಂಗಳೂರು, ಫೆ.01: ರೈತರು, ಕೃಷಿ ವಿದ್ಯಾರ್ಥಿಗಳು, ತಂತ್ರಜ್ಞರು ಇಲ್ ಕೇಳಿ.. ಫೆಬ್ರವರಿ 6ರಿಂದ 8ರವರೆಗೆ 3 ದಿನಗಳ ಕಾಲ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2026 ನಡೆಯಲಿದೆ. ಕೃಷಿ ಇಲಾಖೆಯ ನೇತೃತ್ವದಲ್ಲಿ ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಈ ಮೇಳ ನಡೆಯಲಿದ್ದು, ಈ ಬಾರಿಯ ವಾಣಿಜ್ಯ ಮೇಳದ ಪ್ರಮುಖ ಧ್ಯೇಯ ಉತ್ಪಾದೋನ್ನತರ ಕೃಷಿ – ರೈತರ ಸಬಲೀಕರಣ. ಅಂದ್ರೆ, ರಾಜ್ಯದ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯು ಈ ಮೇಳವನ್ನು ಆಯೋಜಿಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೃಷ ಸಚಿವ ಚಲುವರಾಯಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಬಾರಿಯ ವಾಣಿಜ್ಯ ಮೇಳದಲ್ಲಿ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಗಣ್ಯರು ಭಾಗವಹಿಸಲಿದ್ದಾರೆ. ಕೇಂದ್ರ ಕೃಷಿ ಸಚಿವರು, ವಿವಿಧ ರಾಜ್ಯ ಸರ್ಕಾರಗಳ ಕೃಷಿ ಸಚಿವರು, ಅಂತಾರಾಷ್ಟ್ರೀಯ ಕೃಷಿ ಸಂಸ್ಥೆಗಳ ಪ್ರತಿನಿಧಿಗಳು, ಉದ್ಯಮಿಗಳು ಮತ್ತು ತಜ್ಞರು ಅವರ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ಕೃಷಿ ಬೆಳೆಗಳ ಸಂಸ್ಕರಣೆ, ಮೌಲ್ಯವರ್ಧನೆ, ಕೃಷಿ ಪರಿಸರ ವಿಜ್ಞಾನ, ಬ್ರ್ಯಾಂಡಿಂಗ್ ಇನ್ನಿತರ ವಿಷಯಗಳ…
ಬೆಂಗಳೂರು, ಫೆ.01: ಸತತ ಒಂಬತ್ತು ಬಾರಿ ಬಜೆಟ್ ಮಂಡನೆ ಮಾಡಿದ ಮೊಟ್ಟಮೊದಲ ಭಾರತೀಯ ವ್ಯಕ್ತಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್. 9 ಬಜೆಟ್.. 9 ಬಣ್ಣದ ಸೀರೆಗಳು.. ಪ್ರತೀ ಬಾರಿಯ ಬಜೆಟ್‌ನಲ್ಲೂ ಒಂದೊಂದು ವಿಶೇಷ ಸೀರೆಯ ಮೂಲಕ ನಿರ್ಮಲಾ ಸೀತಾರಾಮನ್ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈ ಸೀರೆಗಳ ವೈಶಿಷ್ಟ್ಯತೆ ಏನು ಅನ್ನೋದ್ರ ಡೀಟೇಲ್ಸ್ ಇಲ್ಲಿದೆ. ಈ ಬಾರಿಯ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಕಂದು ಬಣ್ಣದ ಅಂಚು, ಗೋಲ್ಡನ್ ಚೆಕ್ಸ್ ಹೊಂದಿರುವ ಕೆನ್ನೇರಳೆ ಬಣ್ಣದ ಕಟ್ಟಮ್ ಕಾಂಜೀವರಮ್ ಸೀರೆ ಉಟ್ಟಿದ್ದಾರೆ. ಭಾರತದ ಸಾಂಪ್ರದಾಯಿಕ ಕೈಮಗ್ಗ ನೇಕಾರಿಕೆಯನ್ನು ಪ್ರೋತ್ಸಾಹಿಸಲು ಈ ಸೀರೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ಬಾರಿ ನಿರ್ಮಲಾ ಸೀತಾರಾಮನ್ ಧರಿಸಿರುವ ಕೆನ್ನೇರಳೆ ಬಣ್ಣವು ಶಕ್ತಿ ಮತ್ತು ಆತ್ಮವಿಶ್ವಾಸ ಪ್ರತಿನಿಧಿಸುತ್ತದೆ. ಇದು ಭಾರತದ ಆರ್ಥಿಕತೆಯ ಬಲವಾದ ಬೆಳವಣಿಗೆ ಬಿಂಬಿಸುವ ಉದ್ದೇಶ ಹೊಂದಿದೆ ಎನ್ನಲಾಗುತ್ತಿದೆ. 2025-26ರ ಯೂನಿಯನ್ ಬಜೆಟ್ ಅಧಿವೇಶನದಲ್ಲಿ ಮೋದಿ 3.0 ಸರ್ಕಾರದ ಮೊದಲ ಪೂರ್ಣ ಬಜೆಟ್ ಮಂಡನೆ ಮಾಡಿದ ನಿರ್ಮಲಾ ಸೀತಾರಾಮನ್…
ಬೆಂಗಳೂರು, ಜ.30: ಕನ್ನಡ ಕಿರುತೆರೆಯ ಇತಿಹಾಸದಲ್ಲಿ ನಗೆಯ ಹಬ್ಬವನ್ನು ಸೃಷ್ಟಿಸಿದ್ದ ಕಲರ್ಸ್ ಕನ್ನಡದ ‘ಗಿಚ್ಚಿ ಗಿಲಿಗಿಲಿ’ ಈಗ ಮೂರು ಯಶಸ್ವಿ ಸೀಸನ್‌ಗಳ ನಂತರ ಮಕ್ಕಳ ಸೈನ್ಯದೊಂದಿಗೆ ವಿಶೇಷ ಆವೃತ್ತಿಯೊಂದಿಗೆ ನಿಮ್ಮ ಮನೆಮನ ಬೆಳಗಲು ಸಿದ್ಧವಾಗಿದೆ. ಮಕ್ಕಳಿಂದ ಹಿರಿಯರವರೆಗೂ ಒಂದೀಡಿ ಕುಟುಂಬ ಕೂತು ನೋಡುವಂಥ ಶೋವನ್ನು ಕರುನಾಡಿನ ಮುಂದೆ ತರ್ತಿದೆ ಕಲರ್ಸ್ ಕನ್ನಡ. ‘ಗಿಚ್ಚಿ ಗಿಲಿಗಿಲಿ – ಜೂನಿಯರ್ಸ್’ ಇದೇ ಶನಿವಾರದಿಂದ ಆರಂಭವಾಗಲಿದ್ದು, ಈಗಾಗಲೇ ಪ್ರೋಮೋಗಳ ಮೂಲಕವೇ ವೀಕ್ಷಕರ ಗಮನ ಸೆಳೆದಿದೆ. 5 ರಿಂದ 10 ವರ್ಷದೊಳಗಿನ ಪ್ರತಿಭೆಗಳು ಹಿರಿಯ ಹಾಸ್ಯ ಕಲಾವಿದರ ಜೊತೆಗೂಡಿ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಈ ಬಾರಿಯ ವಿಶೇಷತೆಯೆಂದರೆ ಮಕ್ಕಳ ಮುಗ್ಧತೆ ಮತ್ತು ಹಿರಿಯ ಕಲಾವಿದರ ಅನುಭವದ ಸಮ್ಮಿಲನ. ಈ ಪುಟ್ಟ ಮಕ್ಕಳು ಇಲ್ಲಿ ಕೇವಲ ಸ್ಪರ್ಧಿಗಳಲ್ಲ, ಇವರು ವೃತ್ತಿಪರ ನಟರಲ್ಲದಿದ್ದರೂ ಸಹಜವಾದ ಹಾಸ್ಯ ಪ್ರಜ್ಞೆಯೊಂದಿಗೆ ಸ್ಕಿಟ್‌ಗಳಲ್ಲಿ ಮಿಂಚಲಿದ್ದಾರೆ. ಅನುಭವಿ ಹಾಸ್ಯ ಕಲಾವಿದರು ಇವರಿಗೆ ಮೆಂಟರ್ಸ್ ಆಗಿ ಸಾಥ್ ನೀಡಲಿದ್ದಾರೆ. ಮಕ್ಕಳ ದೃಷ್ಟಿಕೋನದಲ್ಲಿ ಪ್ರಪಂಚ ಹೇಗಿರುತ್ತದೆ ಎಂಬ ಕಥೆಗಳು ಹಾಗೂ…