Subscribe to Updates
Get the latest creative news from FooBar about art, design and business.
Author: Mahanthesha
ಬೆಂಗಳೂರು, ಜ.18: ಭಾರತದ ಗ್ರಾಮೀಣ ಭಾಗದಲ್ಲಿ ಶೇ.80% ರಷ್ಟು ಮಹಿಳೆಯರು ಜೀವನೋಪಾಯಕ್ಕಾಗಿ ಕೃಷಿಯನ್ನೆ ಅವಲಂಬಿಸಿದ್ದು, ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಸುತ್ತೂರು(ಮೈಸೂರು) ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ “ಕೃಷಿಯಲ್ಲಿ ಮಹಿಳೆ: ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ” ಕುರಿತು ಕೃಷಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ದೇಶದಲ್ಲಿ ಮಹಿಳೆಯರು ಕೃಷಿಯ ಎಲ್ಲಾ ಹಂತಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ತನ್ನ ಹೆಸರಿಗೆ ಒಂದಿಂಚೂ ಭೂಮಿ ಇಲ್ಲದಿದ್ದರೂ ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದಾರೆ. ಕೇವಲ ಕೃಷಿ ಕ್ಷೇತ್ರ ಅಷ್ಟೇ ಅಲ್ಲ, ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ತನ್ನ ಛಾಪನ್ನು ಮೂಡಿಸುತ್ತಿದ್ದಾರೆ ಎಂದರು. ಸರ್ಕಾರಕ್ಕೆ ಮಠ ಮಾನ್ಯಗಳ ಕಾರ್ಯವೇ ಸ್ಫೂರ್ತಿ :ಅಕ್ಷರ ಹಾಗೂ ಅನ್ನ ದಾಸೋಹದ ಮೂಲಕ ಬಡಜನರಿಗೆ ನೆರವಾಗುತ್ತಿರುವ ಮಠ ಮಾನ್ಯಗಳ ಸೇವಾ ಕಾರ್ಯ…
ಬೆಂಗಳೂರು, ಜ.17: ಭಾರತದ ಸಾಲ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಮತ್ತು ಅಂತರ್ಗತ ಬೆಳವಣಿಗೆ, ಜವಾಬ್ದಾರಿಯುತ ಸಾಲ ನೀಡುವಿಕೆ ಹಾಗೂ ನೀತಿ-ಆಧಾರಿತ ನಾವೀನ್ಯತೆಗಳ ಮೂಲಕ ‘ವಿಕಸಿತ ಭಾರತ’ದ ದೃಷ್ಟಿಕೋನವನ್ನು ಮುನ್ನಡೆಸುವಲ್ಲಿ ಹಣಕಾಸು ಸಂಸ್ಥೆಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಅಖಿಲ ಭಾರತ ವೃತ್ತಿಪರರ ಕಾಂಗ್ರೆಸ್ ಅಧ್ಯಕ್ಷರಾದ ಪ್ರವೀಣ್ ಚಕ್ರವರ್ತಿ ಹೇಳಿದರು. ಕೊಯಮತ್ತೂರಿನ ಹೋಟೆಲ್ ಲೀ ಮೆರಿಡಿಯನ್‌ನಲ್ಲಿ BankNbfc.com ಆಯೋಜಿಸಿದ್ದ ಪ್ರತಿಷ್ಠಿತ ‘ಫಿನ್‌ಎಕ್ಸ್ ಬ್ಯಾಂಕಿಂಗ್ ಕಾನ್ಕ್ಲೇವ್ 2026’ ರಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಅವರು, ಭಾರತದ ವಿಕಸನಗೊಳ್ಳುತ್ತಿರುವ ಸಾಲದ ಮೂಲಸೌಕರ್ಯದ ಕುರಿತು ಮಾತನಾಡಿದರು. ಬ್ಯಾಂಕಿಂಗ್, ವಸತಿ ಹಣಕಾಸು, ಹಸಿರು ಇಂಧನ, ವಿಮೆ, ಹಣಕಾಸು ಸಾಕ್ಷರತೆ ಮತ್ತು ಡಿಜಿಟಲ್ ಒಳಗೊಳ್ಳುವಿಕೆಯನ್ನು ಒಳಗೊಂಡ ಭಾರತದ ಮುಂದಿನ ಹಂತದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಪ್ರಮುಖ ಮಾತುಕತೆಗಳೊಂದಿಗೆ ಕಾನ್ಕ್ಲೇವ್ ಪ್ರಾರಂಭವಾಯಿತು. ಆರ್. ನಟರಾಜನ್, ಎಂ.ವಿ. ಮಣಿಕಂಠನ್, ರಾಮ್ ಗೋಪಾಲ್, ಮಣಿಮಾರನ್ ಜಿ.ವಿ, ಸುಕುಮಾರ್ ಬಾಲಕೃಷ್ಣನ್ ಮತ್ತು ಸತೀಶ್ ನಾಯರ್ ಸೇರಿದಂತೆ ಇತರೆ ವಿಷಯ ತಜ್ಞರು 2030ರ ವರೆಗಿನ ಭಾರತದ ಆರ್ಥಿಕ ಮಹತ್ವಾಕಾಂಕ್ಷೆಗಳಿಗೆ ಸಾಲದ…
ಬೆಂಗಳೂರು, ಜ.17: ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಸಹಕಾರಿ ಧುರೀಣ, ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವ, ಶತಾಯುಷಿ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ (103) ಅವರು ಶುಕ್ರವಾರ ರಾತ್ರಿ 10.50ರ ಸುಮಾರಿನಲ್ಲಿ ಲಿಂಗೈಕ್ಯರಾಗಿದ್ದಾರೆ. ಕಳೆದ 10-12 ದಿನಗಳಿಂದ ವಯೋಸಹಜವಾದ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಭಾಲ್ಕಿಯ ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು, ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಕಳೆದ ಒಂದು ವಾರದಿಂದ ನಾಡಿನ ವಿವಿಧ ಮಠಗಳ ಪೀಠಾಧಿಪತಿಗಳು, ಹರಚರ ಗುರುಮೂರ್ತಿಗಳು, ಸಚಿವರು, ಶಾಸಕರು, ಸಮಾಜದ ಗಣ್ಯರು, ವಿವಿಧ ಪಕ್ಷಗಳ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಲ್ಕಿಗೆ ಆಗಮಿಸಿ ಭೀಮಣ್ಣ ಖಂಡ್ರೆ ಅವರನ್ನು ನೋಡಿ, ಆರೋಗ್ಯ ವಿಚಾರಿಸಿದ್ದರು. ಹಲವರು ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ಭೀಮಣ್ಣ ಖಂಡ್ರೆ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದರು.103 ವರ್ಷಗಳ ಸಾರ್ಥಕ ಹಾಗೂ ತುಂಬು ಜೀವನ ನಡೆಸಿದ್ದ ಭೀಮಣ್ಣ ಖಂಡ್ರೆ…
ಬೆಂಗಳೂರು, ಜ.15: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಸ್ವಾಮೀಜಿ ಬ್ರಹ್ಮೈಕ್ಯರಾಗಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿಯ ಕಾಗಿನೆಲೆ ಗುರುಪೀಠದ ಸಿದ್ಧರಾಮಾನಂದ ಪುರಿ ಸ್ವಾಮೀಜಿ ನಿಧನರಾಗಿದ್ದಾರೆ. ಬೆಳಗಿನ ಜಾವ ಸಿದ್ಧರಾಮಾನಂದ ಪುರಿ ಸ್ವಾಮೀಜಿ ಅವರು ಹೃದಯಾಘಾತಕ್ಕೆ ಇಹಲೋಕ ತ್ಯಜಿಸಿದ್ದು, ಲಕ್ಷಾಂತರ ಭಕ್ತರಿಗೆ ಬರಸಿಡಿಲೇ ಬಡಿದಂತಾಗಿದೆ. ಇನ್ನು, ರಾಜ್ಯದಲ್ಲಿ ಅಪಾರ ಭಕ್ತ ಸಮೂಹ ಹೊಂದಿರುವ ಶ್ರೀಗಳಲ್ಲಿ ಇವರು ಕೂಡ ಒಬ್ಬರಾಗಿದ್ದರು. ಸಿದ್ಧರಾಮಾನಂದ ಪುರಿ ಸ್ವಾಮೀಜಿಯವರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಲಮರಹಳ್ಳಿ ಮೂಲದವರಾಗಿದ್ದರು. ಕಾಗಿನೆಲೆ ಕನಕ ಗುರುಪೀಠದ ಮಹಾಸಂಸ್ಥಾನದ ಕಲಬುರಗಿ ವಿಭಾಗದ ಶಾಖಾಮಠದ ಸ್ವಾಮೀಜಿಯಾಗಿದ್ದು, ನಾಲ್ಕೂ ಪೀಠಗಳಲ್ಲಿ ಸಿದ್ಧರಾಮಾನಂದಪುರಿ ಶ್ರೀಗಳು ಅತ್ಯಂತ ಕಿರಿಯ ಸ್ವಾಮೀಜಿಯಾಗಿದ್ರು. ಆದ್ರೀಗ ಅತಿ ಕಿರಿ ವಯಸ್ಸಿಗೆ ಸ್ವಾಮೀಜಿಗಳು ಬ್ರಹ್ಮೈಕ್ಯ ಆಗಿರೋದು ಭಕ್ತರು ದುಃಖತಪ್ತರಾಗಿದ್ದಾರೆ. ಸಿದ್ಧರಾಮಾನಂದಪುರಿ ಸ್ವಾಮೀಜಿಗಳ ಬದುಕು ಎಲ್ಲರಿಗೂ ಮಾದರಿ. ಯಾಕಂದ್ರೆ, 18ನೇ ವರ್ಷದಲ್ಲಿಯೇ ಮನೆ ತೊರೆದಿದ್ದ ಶ್ರೀಗಳು, ಮುರುಘಾಮಠಕ್ಕೆ ಹೋಗಿ ಭಕ್ತಿಮಾರ್ಗ ಆಧ್ಯಾತ್ಮದ ಮೊರೆ ಹೋಗಿದ್ದರು. 1992ರಲ್ಲಿ ರಾಜ್ಯದಲ್ಲಿ ಕಾಗಿನೆಲೆ ಪೀಠಗಳ ಸ್ಥಾಪನೆ ಮಾಡಲಾಯ್ತು. ಇವರು ಶಿವಾನಂದ…
ಬೆಂಗಳೂರು : ನಾನು ರಾಜ್ಯ ರಾಜಕೀಯದಿಂದ ದೂರ ಸರಿಯೋದಿಲ್ಲ. ಆದರೆ, ಯಾವ ಸಮಯದಲ್ಲಿ ಬರಬೇಕು ಅಂತ ಮುಂದೆ ತೀರ್ಮಾನ ಮಾಡ್ತೀನಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಜೆ.ಪಿ ನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ರಾಜಕಾರಣದಲ್ಲಿ ಇದ್ದೇನೆ. ನಾನು ಎಲ್ಲಿರಬೇಕು, ಯಾವ ಸ್ಥಾನದಲ್ಲಿರಬೇಕು ಎಂಬುದನ್ನು ತೀರ್ಮಾನ ಮಾಡೋದು ನನ್ನ ಕೈಯಲ್ಲಿಲ್ಲ. ರಾಜ್ಯದ ಜನತೆಯೇ ಅದನ್ನು ನಿರ್ಧರಿಸುತ್ತಾರೆ ಎಂದಿದ್ದಾರೆ. ರಾಜ್ಯದಲ್ಲಿ ಜೆಡಿಎಸ್–ಬಿಜೆಪಿ ಮೈತ್ರಿಯ ಬಗ್ಗೆ ಮಾತನಾಡಿದ ಅವರು, ನಾವು ಮೈತ್ರಿಯ ಒಪ್ಪಂದ ಮಾಡಿಕೊಂಡಿದ್ದೇವೆ. ಈ ಮೈತ್ರಿಯಲ್ಲಿ ಯಾವುದೇ ಗೊಂದಲಕ್ಕೂ ಅವಕಾಶ ಕೊಡಬಾರದು. ನಮ್ಮ ಉದ್ದೇಶ ಒಂದೇ, ರಾಜ್ಯದಲ್ಲಿ ಒಳ್ಳೆಯ ಸರ್ಕಾರವನ್ನು ತರುವುದು ಮತ್ತು ಜನರನ್ನು ನೆಮ್ಮದಿಯಿಂದ ಬದುಕಿಸುವುದು. ವೈಯಕ್ತಿಕ ಆಸೆಗಿಂತ ಜನಹಿತವೇ ಮೊದಲ ಆದ್ಯತೆ ಎಂದರು. ರಾಜ್ಯದಲ್ಲಿ ಆಡಳಿತ ಹೇಗೆ ನಡೆಯುತ್ತಿದೆ ಎಂಬುದನ್ನು ನಾನು ನಿರಂತರವಾಗಿ ಗಮನಿಸುತ್ತಿದ್ದೇನೆ. ಜನರಿಗೆ ಅನುಕೂಲವಾಗುವ, ಪ್ರಾಮಾಣಿಕ ಆಡಳಿತ ನೀಡುವ ಸರ್ಕಾರ ಬರಬೇಕು. ನಾನು ಯಾವ ಸ್ಥಾನದಲ್ಲಿ ಇರಬೇಕು ಎಂಬುದನ್ನು ರಾಜ್ಯದ…
ಬೆಂಗಳೂರು, ಜ.14: ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಸಾಂಪ್ರದಾಯಿಕವಾಗಿ ಅದ್ದೂರಿಯಿಂದ ಆಚರಿಸಲು ಸಜ್ಜಾಗಿದೆ. ಸಾಮಾನ್ಯವಾಗಿ ಸಂಕ್ರಾಂತಿ ಹಬ್ಬದ ದಿನದಂದು ಎಳ್ಳು ಬೆಲ್ಲ, ನೆಲಗಡಲೆ, ಹುರಿಗಡಲೆ, ಸಕ್ಕರೆ ಅಚ್ಚು, ಕೊಬ್ಬರಿ, ಬೆರೆಸಿದ ವಿಶೇಷ ಸಿಹಿಯನ್ನು ದೇವರಿಗೆ ನೈವೇದ್ಯ ಮಾಡಿ ನಂತರ ತಮ್ಮ ಆತ್ಮೀಯರೊಂದಿಗೆ ಹಂಚಿ ಸಂಭ್ರಮ ಪಡುತ್ತಾರೆ. ಹೀಗಾಗಿ ಸ್ಟಾರ್ ಸುವರ್ಣ ವಾಹಿನಿಯು “ಸುವರ್ಣ ಸಂಕ್ರಾಂತಿ ಸಂಭ್ರಮ” ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಸ್ಟಾರ್ ಸುವರ್ಣ ಪರಿವಾರದ ಎಲ್ಲಾ ತಾರೆಗಳು ಭಾಗಿಯಾಗಲಿದ್ದಾರೆ. ಈ ಬಾರಿಯ ಸುಗ್ಗಿಯನ್ನು ಸಂಭ್ರಮಿಸಲು ಸುವರ್ಣ ತಾರೆಯರು ಆಗಮಿಸಿರೋದು ‘ಆಸೆ’ ಧಾರಾವಾಹಿಯ ಮನೆಗೆ. ಹಳ್ಳಿಯ ಸೊಗಡಿನೊಂದಿಗೆ ಸಂಕ್ರಾಂತಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಿದ್ದು, ನೀ ಇರಲು ಜೊತೆಯಲ್ಲಿ, ಶಾರದೆ, ಜೈ ಲಲಿತಾ, ಸ್ನೇಹದ ಕಡಲಲ್ಲಿ ಸೀರಿಯಲ್ ಕಲಾವಿದರ ಮಧ್ಯೆ ಪೈಪೋಟಿಯ ಜಟಾಪಟಿಯೇ ನಡೆಯಲಿದೆ. ಹಾಡು-ಹರಟೆ, ಮೋಜು ಮಸ್ತಿಯೊಂದಿಗೆ ಸಿಕ್ಕಾಪಟ್ಟೆ ಮನೋರಂಜನೆ ನೀಡಿದ್ದಾರೆ. ಪ್ಯಾಕು ಪ್ಯಾಕು ಖ್ಯಾತಿಯ ಹಿತೇಶ್ ಕಾಪಿನಡ್ಕ…
ಬೆಂಗಳೂರು, ಜ.12: ಬೆಂಗಳೂರಿನಲ್ಲಿ ಬದುಕುತ್ತಿರುವ ಬಹುಜನರ ಜೀವನಾಡಿಯಾಗಿರುವ ʼನಮ್ಮ ಮೆಟ್ರೋʼ ಪ್ರಯಾಣಿಕರ ಪಾಲಿಗೆ ಮತ್ತಷ್ಟು ದುಬಾರಿಯಾಗಲಿದೆ. ಒಂದೆಡೆ ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಅನೇಕ ಜನ ಮೆಟ್ರೋ ಪ್ರಯಾಣವೇ ಬೆಸ್ಟ್ ಎನ್ನುವ ಅಭಿಪ್ರಾಯ ಹೊಂದಿದ್ದಾರೆ. ಮತ್ತೊಂದೆಡೆ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆಯೂ ಕೂಡ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕಳೆದ ವರ್ಷವಷ್ಟೇ ಏರಿಕೆಯ ಶಾಕ್ ಕೊಟ್ಟಿದ್ದ ಬಿಎಂಆರ್ಸಿಎಲ್ ಇದೀಗ ಹೊಸ ವರ್ಷಕ್ಕೆ ಮತ್ತೆ ಟಿಕೆಟ್ ದರ ಹೆಚ್ಚಿಸಿ ಶಾಕ್ ಕೊಡಲು ಚಿಂತನೆ ನಡೆಸಿದೆ ಎನ್ನಲಾಗ್ತಿದೆ. ಕಳೆದ ವರ್ಷ ಫೆಬ್ರವರಿ 2025ರಲ್ಲಿ ಮೆಟ್ರೋ ದರವನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಲಾಗಿತ್ತು. ಇದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೂ ಸಹ ಕಾರಣವಾಗಿತ್ತು. ಆದರೆ, ದರ ನಿಗದಿ ಸಮಿತಿಯು ಮೆಟ್ರೋ ರೈಲುಗಳ ನಿರ್ವಹಣಾ ವೆಚ್ಚವನ್ನು ಸರಿದೂಗಿಸಲು ಪ್ರತಿ ವರ್ಷ ಗರಿಷ್ಠ ಶೇಕಡಾ 5ರಷ್ಟು ಸ್ವಯಂಚಾಲಿತ ದರ ಪರಿಷ್ಕರಣೆ ಮಾಡಲು ಶಿಫಾರಸು ಮಾಡಿದೆ. ಈ ಶಿಫಾರಸುಗಳು ಬಿಎಂಆರ್‌ಸಿಎಲ್‌ಗೆ ಕಾನೂನಾತ್ಮಕವಾಗಿ ಬದ್ಧವಾಗಿರುವುದರಿಂದ, ಪ್ರತಿ ವರ್ಷ ಫೆಬ್ರವರಿಯಲ್ಲಿ ದರ ಏರಿಕೆ ಅನಿವಾರ್ಯವಾಗಲಿದೆ.…
ಬೆಂಗಳೂರು, ಜ.12: ಕಳೆದ ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಜೂನ್ 30 ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸುವ ಸಂಬಂಧ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಿತು. ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದರು. ಫೆಬ್ರವರಿ 20 ರೊಳಗಾಗಿ ವಾರ್ಡವಾರು ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಲು ಸುಪ್ರೀಂ ಕೋರ್ಟ್ ಸೂಚಿಸಿದೆ. ಮಾರ್ಚ್ 16ರ ವೇಳೆಗೆ ಮತದಾರರ ಪರಿಶೀಲನೆ ಅಂತ್ಯವಾಗಲಿದೆ. ಬಳಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಹೀಗಾಗಿ ಮೇ ಕೊನೆ ವಾರದವರೆಗೂ ಅವಕಾಶ ನೀಡಬೇಕು ಎಂದು ಚುನಾವಣಾ ಆಯೋಗ ಮನವಿ ಮಾಡಿದೆ. ಅಂತಿಮವಾಗಿ ಸುಪ್ರೀಂಕೋರ್ಟ್ ಜೂನ್ 30 ರೊಳಗೆ ಜಿಬಿಎ ಚುನಾವಣೆ ನಡೆಸಲು ನಿರ್ದೇಶನ ನೀಡಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಗೆ ಚುನಾವಣೆ ನಡೆಸಲು ಮತ್ತೆ ಯಾವುದೇ ಕಾಲಾವಕಾಶ ವಿಸ್ತರಣೆ ನೀಡಲ್ಲ ಎಂದು ಸುಪ್ರೀಂಕೋರ್ಟ್…
ಬೆಂಗಳೂರು: ಆರೋಗ್ಯವಾಗಿ ಬದುಕುವವರು ಇಂದಿನ ದಿನಗಳಲ್ಲಿ ಅದೃಷ್ಟವಂತರು ಎಂದು ಭಾವಿಸಿದ್ದೇವೆ. ಈ ನಿಟ್ಟಿನಲ್ಲಿ ಸಮಾಜಮುಖಿಯಾಗಿ ಕೈಗೊಂಡ ಸ್ಯಾರಿ ನಡಿಗೆ ನಿಜಕ್ಕೂ ಶ್ಲಾಘನೀಯ ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಇಲಾಖೆಯ ಅಧ್ಯಕ್ಷರಾದ ಎಸ್.ಇ ಸುಧೀಂದ್ರ ಅವರು ಹೇಳಿದರು. ನಗರದ ಕೊಹಿನೂರ್ ಗ್ರೌಂಡ್‌ನಲ್ಲಿ ಮಧುರಾ ಮಹಿಳಾ ಕ್ಲಬ್, ಸುದಯ ಫೌಂಡೇಶನ್ ಮತ್ತು ಗರುಡ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಲಾದ ಸ್ಯಾರಿ ವಾಕಥಾನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಡಯಾಲಿಸಿಸ್ ಗೆ ಒಳಗಾಗಿರುವ ರೋಗಿಗಳಿಗೆ ಧನಸಹಾಯ ಮಾಡುವ ನಿಟ್ಟಿನಲ್ಲಿ ನಡೆಸಲಾದ ಸ್ಯಾರಿ ವಾಕಥಾನ್ ಕಾರ್ಯಕ್ರಮವು ಸಮಾಜಕ್ಕೆ ನಿದರ್ಶನವಾಗಲಿದೆ ಎಂದರು. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಎಂಎಲ್‌ಎ ಉದಯ್ ಗರುಡಾಚಾರ್ ಮಾತನಾಡಿ, ಪೌರಕಾರ್ಮಿಕರು ಈ ನಡಿಗೆಯಲ್ಲಿ ಪಾಲ್ಗೊಂಡಿರುವುದು ನಿಜಕ್ಕೂ ವಿಶೇಷವಾದ ಘಳಿಗೆ ಎಂದು ಎಲ್ಲರಿಗೂ ಶುಭ ಕೋರಿದರು. ಬಸವನಗುಡಿ ವಿಧಾನಸಭಾ ಕ್ಷೇತ್ರದ ಎಂಎಲ್‌ಎ ಎಲ್.ಎ ರವಿಸುಬ್ರಮಣ್ಯ ಮಾತನಾಡಿ, ಮನೆಯಲ್ಲಿ ಮಹಿಳೆಯೊಬ್ಬರು ಆರೋಗ್ಯವಾಗಿದ್ದರೆ ಕುಟುಂಬವೇ ಆರೋಗ್ಯವಿದ್ದಂತೆ. ಈ ಹಿನ್ನೆಲೆಯಲ್ಲಿ ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸೀರೆಯನ್ನು ಉಟ್ಟು…
ಬೆಂಗಳೂರು, ಜ.10 : ಬಿಗ್‌ಬಾಸ್ ಸೀಸನ್ 12ರ ಇಬ್ಬರು ಪ್ರಮುಖ ಸ್ಪರ್ಧಿಗಳು ಅಂದ್ರೆ ಅದು ಗಿಲ್ಲಿ ನಟ ಮತ್ತು ಅಶ್ವಿನಿಗೌಡ.. ಇವರಿಬ್ಬರೂ ಇಲ್ಲಾ ಅಂದಿದ್ರೆ ಬಿಗ್‌ಬಾಸ್ ಈ ಸೀಸನ್‌ಗೆ ಮಜಾನೇ ಇರ್ತಿರಲಿಲ್ಲ. ಇಷ್ಟು ದಿನ ಗಿಲ್ಲಿ ಗಿಲ್ಲಿ ಅಂತಾ ಸೋಷಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ಮೆರೆಸುತ್ತಿದ್ದಾರೆ. ಗಿಲ್ಲಿನೇ ಗೆಲ್ಲೋದು ಅಂತಾ ಎಲ್ಲಾ ಕಡೆಯೂ ಫ್ಯಾನ್ಸ್ ಹೋದಲ್ಲಿ ಬಂದಲ್ಲಿ ಹೇಳಿಕೊಂಡು ತಿರುಗಾಡ್ತಿದ್ದಾರೆ. ಆದ್ರೀಗ ಟ್ರೆಂಡ್ ಬದಲಾದಂತೆ ಕಾಣುತ್ತಿದೆ. ಬಿಗ್‌ಬಾಸ್ ಕೊನೆಯಲ್ಲಿ ಗಿಲ್ಲಿ ನಟನನ್ನು ಹಿಂದಿಕ್ಕಿ ಅಶ್ವಿನಿಗೌಡ ಮುಂದೆ ಬಂದಿದ್ದು, ಗೇಮ್ ಚೇಂಜರ್ ಆಗಿ ಬದಲಾಗಿದ್ದಾರೆ. ಹೌದು.. ಫಿನಾಲೆ ಹತ್ರ ಬರ್ತಿದ್ದಂತೆ ಅಶ್ವಿನಿ ಗೇಮ್ ಚೇಂಜರ್ ಆದ್ರಾ ಅನ್ನೋ ಚರ್ಚೆ ಜೋರಾಗಿದೆ.. ಯಾಕಂದ್ರೆ, ಬಿಗ್‌ಬಾಸ್‌ನಲ್ಲಿ ಒಂದು ನಿರ್ಧಾರ, ಒಂದು ಟಾಸ್ಕ್, ಇಡೀ ಗೇಮ್‌ನೇ ಚೇಂಜ್ ಮಾಡ್ಬುಹುದು ಅನ್ನೋದಕ್ಕೆ ಹಲವು ಉದಾಹರಣೆಗಳಿವೆ. ಈ ಸೀಸನ್‌ನಲ್ಲಿ ಅಶ್ವಿನಿ ಅವರು ನೆಗೆಟಿವ್ ಆಗಿ ಕಾಣಿಸಿಕೊಂಡರು. ಅವರಿಲ್ಲದೇ ಬಿಗ್‌ಬಾಸ್ ಇಲ್ಲ ಅಂತಾ ಹೇಳೋ ವೀಕ್ಷಕರು ತುಂಬಾ ಜನ ಇದ್ದಾರೆ. ಹಾಗಂತ ಗಿಲ್ಲಿ…