ಶುಭಾಂಶು ಶುಕ್ಲಾ ಅಂತರಿಕ್ಷಾಯಾನ ಆರಂಭವಾಗಿದೆ. ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾನಿಗಳು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ ಹಾರಿದ್ದಾರೆ. ನಾಲ್ವರನ್ನ ಹೊತ್ತ ಫಾಲ್ಕನ್ ರಾಕೆಟ್ ಅಂತಾರಾಷ್ಟ್ರೀಯ ಸ್ಪೇಸ್ ಸ್ಟೇಶನ್‌ನತ್ತ ಪ್ರಯಾಣ ಬೆಳೆಸಿದ್ದು, ಅಂತಾರಾಷ್ಟ್ರೀಯ ಬಾಹ್ಯಾಕಾ ನಿಲ್ದಾಣ (ಐಎಸ್‌ಎಸ್) ತಲುಪಲಿದ್ದಾರೆ. ನಾಳೆ ಸಂಜೆ ಸ್ಪೇಸ್ ಸ್ಟೇಶನ್‌ನಲ್ಲೇ 14 ದಿನ ತಂಗಲಿದ್ದಾರೆ..
ಇವತ್ತು ಮಧ್ಯಾಹ್ನ 12.01 ಗಂಟೆಗೆ ಇಕ್ಸಿಯೋಂ ನೌಕೆ (Axiom Mission 4)ಯನ್ನು ಹೊತ್ತು Falcon-9 rocket ನಭಕ್ಕೆ ಯಶಸ್ವಿಯಾಗಿ ಚಿಮ್ಮಿದೆ. ನೌಕೆಯಲ್ಲಿ ಅಮೆರಿಕಾ, ಭಾರತ, ಪೋಲೆಂಡ್, ಹಂಗೇರಿ ದೇಶದ ನಾಲ್ವರು ಗಗನಯಾತ್ರಿಗಳು ಇದ್ದಾರೆ. ಭಾರತದ ಶುಭಾಂಶು ಶುಕ್ಲಾ, ಅಮೆರಿಕಾದ ಪೆಗ್ಗಿ ವಿಟ್ಲನ್, ಪೋಲೆಂಡ್ನ ನವೋಖ್ ಉಝ್ ನಾಸ್ತಿ, ಹಂಗೇರಿಯ ಟಿಬರ್ ಬಾಹ್ಯಾಕಾಶ ಕೇಂದ್ರಕ್ಕೆ ಪ್ರಯಾಣ ಮಾಡಿದ್ದಾರೆ.
ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಶುಭಾಂಶು ಶುಕ್ಲಾ!
ಈ ನಾಲ್ವರು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) 60 ವೈಜ್ಞಾನಿಕ ಪ್ರಯೋಗ ನಡೆಸಲಿದ್ದಾರೆ. ಇನ್ನು ಪ್ರಮುಖವಾಗಿ ಬಾಹ್ಯಾಕಾಶದ ಗುರುತ್ವಾಕರ್ಷಣೆ, ಲೈಫ್, ಬಯೋಲಾಜಿಕಲ್, ಭೂಮಿ ವೀಕ್ಷಣೆ, ಮೆಟಿರಿಯಲ್ ಸೈನ್ಸ್ ಬಗ್ಗೆ ಅಧ್ಯಯನ ಹಾಗೂ ಸಂಶೋಧನೆ ಕೈಗೊಳ್ಳಲಿದ್ದಾರೆ. ಇನ್ನು ರಾಕೇಶ್ ಶರ್ಮಾ ಬಾಹ್ಯಾಕಾಶವನ್ನು ತಲುಪಿದ ಮೊಟ್ಟ ಮೊದಲ ಭಾರತೀಯ ಎಂಬ ಹೆಗ್ಗಳಿಕೆಯನ್ನು ಮುಡಿಗೇರಿಸಿಕೊಂಡಿದ್ದಾರೆ. ಇದೀಗ ಶುಭಾಂಶು ಶುಕ್ಲಾ ಅವರು 1984ರ ನಂತರ ಬಾಹ್ಯಾಕಾಶವನ್ನು ತಲುಪಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

