ಬಿ.ಎಸ್ ಯಡಿಯೂರಪ್ಪ (BS Yediyurappa) ಮೊಮ್ಮಗ, ಬಿ.ವೈ ರಾಘವೇಂದ್ರ ಪುತ್ರ ಸುಭಾಷ್ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.. ಶನಿವಾರ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಉಪರಾಪ್ಟ್ರಪತಿ ಜಗದೀಪ್ ಧನ್‌ಕರ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜೆ.ಪಿ ನಡ್ಡಾ,ಗೃಹ ಸಚಿವ ಡಾ. ಜಿ ಪರಮೇಶ್ವರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಸುಭಾಷ್ ಹಾಗೂ ಶ್ರಾವಣಾ ಆರತಕ್ಷತೆ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಈ ಸಂಭ್ರಮದಲ್ಲಿ ಜಮೀರ್ ಅಹ್ಮದ್, ಬೈರತಿ ಸುರೇಶ್, ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಗಣ್ಯಾತಿ ಗಣ್ಯರು ಭಾಗಿಯಾಗಿದ್ದರು. ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿವೈ ರಾಘವೇಂದ್ರ ಶಾಲು ಹೊದಿಸಿ ಗೌರವಿಸಿದರು.

ಇನ್ನು ಈ ಅದ್ಧೂರಿ ಆರತಕ್ಷತೆ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವರೂ ಆಗಿರುವ ಜೆ.ಪಿ ನಡ್ಡಾ, ಉಪರಾಷ್ಟ್ರಪತಿ ಜಗದೀಪ್ ಧನಕರ್, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಆಂಧ್ರ ಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಪಾಲ್ಗೊಂಡು, ನವ ವಧು-ವರರಿಗೆ ಶುಭ ಹಾರೈಸಿದರು.
ಮಾರ್ಚ್ 24ರಂದು ಕಲಬುರಗಿಯಲ್ಲಿ ಬಿಎಸ್‌ವೈ ಪುತ್ರನ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿತ್ತು. ಬಿವೈ ರಾಘವೇಂದ್ರ ಪುತ್ರ ಸುಭಾಷ್ ಕಲಬುರಗಿಯ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ಲಿಂಗರಾಜಪ್ಪ ಅಪ್ಪ-ದೀಪಾಲಿ ದಂಪತಿಯ ಪುತ್ರಿ ಶ್ರಾವಣಾ ಅವರನ್ನು ವರಿಸಿದ್ದಾರೆ. ಇಂದು ಮುಂಜಾನೆಯ ಮೂಹೂರ್ತದಲ್ಲಿ ಶಾಸ್ತ್ರೋತ್ತವಾಗಿ ಸುಭಾಷ್ ಹಾಗೂ ಶ್ರಾವಣಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.