ಬಳ್ಳಾರಿ: ನಗರದಲ್ಲಿರುವ ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ವಿಚಾರವಾಗಿ ದೊಡ್ಡ ಗಲಾಟೆ ನಡೆದಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಸದ್ಯ ಈ ಘಟನೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ದೊಡ್ಡ ವಾಗ್ವಾದಕ್ಕೆ ಕಾರಣವಾಗಿದೆ. ಈ ಮಧ್ಯೆ ಸಾವನ್ನಪ್ಪಿರುವ ರಾಜಶೇಖರ್ ಯಾರ ಗುಂಡೇಟಿಗೆ ಬಲಿಯಾಗಿದ್ದಾನೆ ಎಂಬ ತನಿಖೆ ಶುರುವಾಗಿದೆ.

ನನ್ನ ಕೊಲೆಗೆ ನಡೆದ ಸಂಚು ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದರೆ, ಅಕ್ರಮ ಗಣಿಗಾರಿಕೆ ವಿಷಯ ಡೈವರ್ಟ್ ಮಾಡಲು ಇಂತಹ ನೀಜ ಕೃತ್ಯಕ್ಕೆ ಜನಾರ್ದನ ರೆಡ್ಡಿ ಇಳಿದಿದ್ದಾನೆ ಎಂದು ಏಕವಚನದಲ್ಲೇ ಭರತ್ ರೆಡ್ಡಿ ಕಿಡಿಕಾರಿದ್ದಾರೆ. ಬ್ಯಾನರ್ ವಿಚಾರವಾಗಿ ಗಲಾಟೆ ವಿಕೋಪಕ್ಕೆ ಹೋಗುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಶಾಸಕ ಭರತ್ ರೆಡ್ಡಿ ಆಪ್ತನ ಬಾಡಿಗಾರ್ಡ್ಗಳು ಕೂಡ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣ ಸಂಬಂಧ ಖಾಸಗಿ ಗನ್ಮ್ಯಾನ್ಗಳ 3 ಗನ್ ಸೀಜ್ ಮಾಡಲಾಗಿದೆ. ಅವುಗಳನ್ನು ಪರಿಶೀಲನೆಗಾಗಿ FSLಗೆ ಕಳುಹಿಸಲಾಗಿದೆ. ಜನಾರ್ದನರೆಡ್ಡಿಗೆ ನೀಡಿದ್ದ ಗನ್ಮ್ಯಾನ್ಗಳ ಗನ್ ಸಹ ಪರಿಶೀಲನೆ ನಡೆಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಎಫ್ ಐಆರ್ ದಾಖಲಾಗಿದೆ.

Share.
Leave A Reply