Site icon BosstvKannada

ಬಾನು ಮುಷ್ತಾಕ್‌ರಿಂದ ಮೈಸೂರು ದಸರಾ ಚಾಲನೆಗೆ ಆಯ್ಕೆ : ರಾಜ್ಯದಲ್ಲಿ ಪರ ವಿರೋಧ ಚರ್ಚೆ

????? ???? ?????????

ನಾಡಹಬ್ಬ ಮೈಸೂರು ದಸರಾಗೆ ಕ್ಷಣಗಣನೆ ಆರಂಭವಾಗಿರೋ ಹೊತ್ತಲ್ಲೇ ದಸರಾ ಚಾಲನೆ ಕುರಿತು ವಿರೋಧ ಪಕ್ಷದ ನಾಯಕರು ಈ ಕುರಿತು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮೈಸೂರಿನ ದಸರಾ ಹಬ್ಬವನ್ನು ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ, ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವಲ್ಲಿ ಸಿದ್ದರಾಮಯ್ಯ ನವರು ಅಯ್ಕೆ ಮಾಡಿದ್ದು, ಕರ್ನಾಟಕ ಸರ್ಕಾರದ ನಿರ್ಧಾರವು ವಿವಾದವನ್ನು ಹುಟ್ಟುಹಾಕಿದೆ. ಧಾರ್ಮಿಕ ಕಾರ್ಯಕ್ರಮಕ್ಕೆ ಮುಸ್ಲಿಮರನ್ನು ಏಕೆ ಆಹ್ವಾನಿಸಲಾಗುತ್ತದೆ ಎಂದು ವಿರೋದ ಪಕ್ಷದ ನಾಯಕ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕಿಯ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಲು ಲೇಖಕಿ ನಿರಾಕರಿಸಿದ್ದಾರೆ, ಆದರೆ ಅವರನ್ನು ಆಹ್ವಾನಿಸಲಾಗಿದೆ ಮತ್ತು ಅವರು ಹೋಗುತ್ತಾರೆ ಎಂದು ಹೇಳಿದ್ದಾರೆ. ಈ ವರ್ಷ ಮೈಸೂರಿನಲ್ಲಿ ದಸರಾ ಹಬ್ಬವನ್ನು ಶ್ರೀಮತಿ ಬಾನು ಮುಷ್ತಾಕ್ ರವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದ್ದಾರೆ. ಕರ್ನಾಟಕದ ಹಾಸನದ ಬರಹಗಾರ್ತಿ ಬಾನು ಮುಷ್ತಾಕ್ ಈ ವರ್ಷ ವಿಶ್ವವಿಖ್ಯಾತ ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ.

ಇದೇ ವರ್ಷ ಸೆಪ್ಟೆಂಬರ್ 22 ರಂದು ಆರಂಭವಾಗಲಿದ್ದು, ವಿಜಯ ದಶಮಿಯನ್ನು 11 ನೇ ದಿನದಂದು, ಅಕ್ಟೋಬರ್ 2 ರಂದು ಆಚರಣೆ ಮಾಡಲಾಗದು ಎಂದು ಅವರು ಹೇಳಿದರು. ಬಾನು ಮುಷ್ತಾಕ್ ಅವರ ಸಾಹಿತ್ಯ ಕೃತಿ “ಹೃದಯ ದೀಪ ಬೂಕರ್” ಪ್ರಶಸ್ತಿಯನ್ನು ಪಡೆದುಕೊಂಡಿದ್ದು. ಕರ್ನಾಟಕದ ಮಹಿಳಾ ಬರಹಗಾರ್ತಿಯೊಬ್ಬರಿಗೆ ಈ ಗೌರವ ದೊರೆತಿರುವುದು ನಮಗೆ ಹೆಮ್ಮೆ ಮತ್ತು ಸಂತೋಷದ ವಿಷಯ. ಬಾನು ಮುಷ್ತಾಕ್ ರೈತ ಸಂಘಟನೆಗಳು, ಕನ್ನಡ ಚಳವಳಿಗಳು ಮತ್ತು ಪ್ರಗತಿಪರ ಚಳುವಳಿಗಳೊಂದಿಗೆ ಸಂಬಂಧ ಹೊಂದಿದ್ದರು. ದಸರಾ ಉದ್ಘಾಟಿಸಲು ಮಹಿಳೆಯೊಬ್ಬರನ್ನು ಆಹ್ವಾನ ಮಾಡಿರುವುದು ಗಮನಾರ್ಹವಾಗಿದೆ” ಎಂದು ಮುಖ್ಯಮಂತ್ರಿ ಹೇಳಿದರು.

Read Also : ಧರ್ಮಸ್ಥಳ ವಿರುದ್ಧ ಅಪಪ್ರಚಾರ : ಯೂಟ್ಯೂಬರ್‌ ಸಮೀರ್‌ ನಾಪತ್ತೆ, ಪೊಲೀಸರ ಹುಡುಕಾಟ

Exit mobile version