ಬೆಳಗಾವಿಯಲ್ಲಿ ನಡೆದ ಗ್ಯಾಂಗ್‌ರೇಪ್ ಪ್ರಕರಣ((Belagavi Minor Gang Rape Case)ಕ್ಕೆ ಸಂಬಂಧಿಸಿದಂತೆ ಇಂದು ಗೃಹಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ ಐದು ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಘಟನೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿಯಲ್ಲಿ ಗ್ಯಾಂಗ್ ರೇಪ್ ಪ್ರಕರಣ ಬಹಳ ಹಿಂದೆ ನಡೆದಿದೆ. ಡಿಸೆಂಬರ್, ಜನವರಿಯಲ್ಲಿ ನಡೆದಿರುವ ಘಟನೆಯ ಬಗ್ಗೆ ಯಾರು ದೂರು ಕೊಟ್ಟಿರಲಿಲ್ಲ ಎಂದು ತಿಳಿಸಿದರು.
ಈಗ ಈ ಬಗ್ಗೆ ದೂರು ಕೊಟ್ಟಿ ದ್ದಾರೆ. ಈ ದೂರು ಆಧರಿಸಿ ಸದ್ಯ ಐದು ಜನರ ಬಂಧನ ಆಗಿದೆ. ಈ ವಿಚಾರದಲ್ಲಿ ಕಠಿಣ ಕ್ರಮಕ್ಕೆ ಬೆಳಗಾವಿ ಕಮಿಷನರ್‌ಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಎಪಿಎಂಸಿ ಠಾಣೆಯಲ್ಲಿ 6 ಮಂದಿ ವಿರುದ್ಧ ಶನಿವಾರ FIR ದಾಖಲಾಗಿತ್ತು. ಆರಂಭದಲ್ಲಿ ಒಬ್ಬನು ಬಾಲಕಿಯನ್ನು ಪರಿಚಯಿಸಿಕೊಂಡು, ಸ್ನೇಹ ಬೆಳೆಸಿದ್ದ. ಬಳಿಕ ಆತ ಮತ್ತು ಸ್ನೇಹಿತರು 2024ರ ಡಿಸೆಂಬರ್‌ನಲ್ಲಿ ಪುಸಲಾಯಿಸಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದರು.
ಅತ್ಯಾಚಾರದ ದೃಶ್ಯವನ್ನು ಆರೋಪಿಗಳು ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಅದನ್ನೇ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿ, 2025ರ ಜನವರಿಯಲ್ಲಿ ಮತ್ತೆ ಮೂವರು ಅತ್ಯಾಚಾರ ಮಾಡಿದ್ದಾರೆ. ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರ ಮಾಡಲಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಯತ್ನಿಸಲಾಗುವುದು ಎಂದು ಬೆಳಗಾವಿ ನಗರ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ಬೊರಸೆ ಹೇಳಿದರು.
