Site icon BosstvKannada

ಬಳ್ಳಾರಿ ಗಲಾಟೆ: ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳು ನಾಪತ್ತೆ

ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಭಾರೀ ಹೈಡ್ರಾಮಾನ ನಡೆದಿತ್ತು. ಆ ವೇಳೆ ಗುಂಡು ಹಾರಿ ಓರ್ವ ವ್ಯಕ್ತಿ ಕೂಡ ಸಾವನ್ನಪ್ಪಿದ್ದ. ಈಗ ಫೈರಿಂಗ್ ಪ್ರಕರಣದ ಬೆನ್ನಲ್ಲೇ ಸತೀಶ್ ರೆಡ್ಡಿ (Satish Reddy) ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ.

ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಜನಾರ್ದನ ರೆಡ್ಡಿ ಹಾಗೂ ಸತೀಶ್ ರೆಡ್ಡಿಗೆ ಸಂಬಂಧಿಸಿದ ಗನ್‌ಮ್ಯಾನ್‌ಗಳಿಂದ ಪೊಲೀಸರು 5 ಗನ್‌ ಗಳನ್ನು ವಶಕ್ಕೆ ಪಡೆದಿದ್ದಾರೆ. ಗನ್‌ಗಳನ್ನ ವಶಕ್ಕೆ ಪಡೆದ ಬೆನ್ನಲ್ಲೇ ಸತೀಶ್ ರೆಡ್ಡಿ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ. ಸತೀಶ್ ರೆಡ್ಡಿಯ ನಾಲ್ವರು ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದು, ಅವರ ಸುಳಿವು ಮಾತ್ರ ಸಿಗುತ್ತಿಲ್ಲ.

ಕಾಂಗ್ರೆಸ್ ಹಾಗೂ ಬಿಜೆಪಿಯವರ ಗುದ್ದಾಟದಲ್ಲಿ ಓರ್ವ ಕೈ ಕಾರ್ಯಕರ್ತ ಬಲಿಯಾಗಿದ್ದಾರೆ. ಈಗಾಗಲೇ ಸಾವನ್ನಪ್ಪಿದ ವ್ಯಕ್ತಿಗೆ ತಗುಲಿದ ಗುಂಡು ಪೊಲೀಸರದ್ದಲ್ಲ, ಖಾಸಗಿ ವ್ಯಕ್ತಿಗಳದ್ದು ಎಂದು ಎಸ್ಪಿ ಹೇಳಿದ್ದಾರೆ. ಗಲಾಟೆಯ ವಿಡಿಯೋಗಳು ಕೂಡ ಈಗ ವೈರಲ್ ಆಗಿದ್ದು, ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ಫೈರಿಂಗ್ ಮಾಡಿರುವುದು ಕಂಡು ಬಂದಿದೆ.

Exit mobile version