Advertisement

ಬೆಂಗಳೂರಿನ ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವ ಬರ್ಬರ ಹತ್ಯೆ ಹಿಂದೆ ಮಾಜಿ ಸಚಿವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಪಾತ್ರವಿದೆ ಅನ್ನೋ ಆರೋಪದ ಮೇಲೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜಮೀನಿನ ವಿಚಾರವಾಗಿ ರೌಡಿಶೀಟರ್ ಶಿವಪ್ರಕಾಶ್ ಹಾಗೂ ಭೈರತಿ ಬಸವರಾಜ್​ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. 

ಬೆಂಗಳೂರಿನ ಭಾರತಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಮಾಜಿ ಸಚಿವ ಭೈರತಿ ಬಸವರಾಜ್ ಎ5 ಆರೋಪಿ ಎಂದು ಉಲ್ಲೇಖಿಸಿಲಾಗಿದೆ. ಕಳೆದ ರಾತ್ರಿ ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವು ಕೊಲೆ ನಡೆದಿದೆ. ಕೊಲೆಗೆ ಭೈರತಿ ಬಸವರಾಜ್ ಕುಮ್ಮಕ್ಕು ನೀಡಿದ್ದಾರೆ ಎಂದು ರೌಡಿಶೀಟರ್ ಶಿವಕುಮಾರ್ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜ್ ಎ5 ಆರೋಪಿ ಎಂದು ಉಲ್ಲೇಖಿಸಿಲಾಗಿದೆ.

ಏನಿದು ಪ್ರಕರಣ?
ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆಯಾದ ಶಿವಕುಮಾರ್ ಹಾಗೂ ಭೈರತಿ ಬಸವರಾಜ್ ಬೆಂಬಲಿಗರ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ನಗರದ ಬೀದರಹಳ್ಳಿ ಹೋಬಳಿ, ಕಿತ್ತಗನೂರು ಸಿಂಗಾರೆಡ್ಡಿ ಎಂಬುವವರಿಗೆ ಸೇರಿದ ಸರ್ವೇ ನಂಬರ್ 212 ಜಿಪಿಎ ಮಾಡಿಸಿಕೊಂಡಿದ್ದ ಶಿವಕುಮಾರ್‌ಗೆ ಜಿಪಿಎ ರದ್ದುಪಡಿಸಬೇಕು ಹಾಗು ಪೊಸಿಷನ್ ಬಿಟ್ಟುಕೊಡಬೇಕು ಎಂದು ಕೆಲವರು ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಬೆದರಿಕೆ ಹಿನ್ನೆಲೆ ಶಿವಕುಮಾರ್ ಕಳೆದ ಫೆಬ್ರವರಿಯಲ್ಲಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರಂತೆ. ಭೈರತಿ ಬಸವರಾಜ್ ಹಾಗೂ ಗ್ಯಾಂಗ್‌ನಿಂದ ಜೀವಬೆದರಿಕೆ ಇದೆ ಎಂದು ಪೊಲೀಸರಿಗೆ ದೂರು ನೀಡಿ ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡಿದ್ದರು.

ಬೆದರಿಕೆ ಹಾಕಿದ್ದ ವಿಡಿಯೊ ಸಮೇತ ಭೈರತಿ ಬಸವರಾಜ್, ಜಗದೀಶ್ ಅಲಿಯಾಸ್ ಜಗ್ಗ ಹಾಗೂ ಕಿರಣ್ ಸಹಚರರ ವಿರುದ್ಧ ಶಿವಕುಮಾರ್ ದೂರು ನೀಡಿದ್ದರಂತೆ. ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಿಸಲಾಗಿತ್ತು. ದೂರು ಕೊಟ್ಟ ನಾಲ್ಕು ತಿಂಗಳಲ್ಲಿ ಶಿವಕುಮಾರ್ ಕೊಲೆಯಾಗಿದ್ದು, ಅದೇ ಗ್ಯಾಂಗ್ ನಿಂದ ಕೊಲೆಯಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

Share.
Leave A Reply