ಬೆಂಗ್ಳುರಲ್ಲಿ ಮೂರು ದಿನಗಳ ಕಾಲ ಕಾವೇರಿ ನೀರು ಬರೋದಿಲ್ಲ. ಕಾವೇರಿ ನೀರು ಸರಬರಾಜು ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ 3 ದಿನ ಕಾವೇರಿ ನೀರು ಪೂರೈಕೆ ಸ್ಟಾಪ್ ಆಗಲಿದೆ. ಸೆಪ್ಟೆಂಬರ್ 15, 16 ಮತ್ತು 17 ರಂದು ಒಟ್ಟು 5 ಹಂತಗಳಲ್ಲಿ ಸುಮಾರು 60 ಗಂಟೆಗಳ ಕಾಲ ನೀರು ಸರಬರಾಜು ಸ್ಥಗಿತವಾಗಲಿದೆ.
ಈ ಬಗ್ಗೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಮಾಹಿತಿ ನೀಡಿದ್ದು, ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಬಂದ್ ಮಾಡಲಾಗ್ತಿದೆ. ಈ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದಿದ್ದಾರೆ.
ಆದ್ರಿಂದ ಸೆಪ್ಟೆಂಬರ್ 15ರ ಬೆಳಗ್ಗೆ 1ರಿಂದ ಸೆಪ್ಟೆಂಬರ್ 17ರ ಮಧ್ಯಾಹ್ನ 1ರವರೆಗೆ ಒಟ್ಟು 60 ಗಂಟೆಗಳ ಕಾಲ ಕಾವೇರಿ ನೀರು ಸಿಗೋದಿಲ್ಲ. ಹೀಗಾಗಿ ಸಾರ್ವಜನಿಕರು ಮುಂಚಿತವಾಗಿ ಮೂರು ದಿನಗಳ ಕಾಲ ನೀರು ಸಂಗ್ರಹಿಸಿಟ್ಟುಕೊಳ್ಳಲು ಜಲ ಮಂಡಳಿ ಮನವಿ ಮಾಡಿದೆ.
Read Also : ಸಿನಿಪ್ರಿಯರಿಗೆ ಸಿಎಂ ಸಿದ್ದರಾಮಯ್ಯ ಶುಭ ಸುದ್ದಿ.. ನೀವು ಮಿಸ್ ಮಾಡ್ದೇ ಥಿಯೇಟರ್‌ಗೆ ಹೋಗೋದು ಗ್ಯಾರಂಟಿ..!

