Site icon BosstvKannada

Bengaluru Stampede case :ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತಕ್ಕೆ ಕೊಹ್ಲಿ, ಆರ್‌ಸಿಬಿ ಭಾವುಕ ಪೋಸ್ಟ್‌!

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ(Bengaluru Stampede case) 11 ಮಂದಿ ಸಾವನ್ನಪ್ಪಿದ ದುರಂತಕ್ಕೆ ಸಂಭವಿಸಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೇ ಮೊದಲ ಬಾರಿಗೆ ತನ್ನ ಪ್ರತಿಕ್ರಿಯೆ ನೀಡಿದೆ.

ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ್ದ ಆರ್ ಸಿಬಿ ತಂಡ 18 ವರ್ಷಗಳ ಬಳಿಕ ತನ್ನ ಚೊಚ್ಚಲ ಐಪಿಎಲ್ ಪ್ರಶಸ್ತಿ ಎತ್ತಿ ಹಿಡಿದಿದ್ದು, ಇದೇ ಖುಷಿಯನ್ನು ಬೆಂಗಳೂರಿನಲ್ಲಿ ತನ್ನ ಅಭಿಮಾನಿಗಳೊಂದಿಗೆ ಹಂಚಿಕೊಳ್ಳಲು ಮುಂದಾಗಿತ್ತು.

ಆಟಗಾರರ ಬಿಸಿ ಶೆಡ್ಯೂಲ್ ನಡುವೆಯೂ ಆರ್ ಸಿಬಿ ತಂಡ ಆಟಗಾರರನ್ನು ಬೆಂಗಳೂರಿಗೆ ಕರೆತಂದು ಅಭಿಮಾನಿಗಳ ಜೊತೆ ಸಂಭ್ರಮಾಚರಣೆ ಮಾಡಲು ನಿರ್ಧರಿಸಿತ್ತು. ಇದಕ್ಕಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಕೂಡ ಆಯೋಜನೆ ಮಾಡಲಾಗಿತ್ತು. ಆದರೆ ಇದೇ ಚಿನ್ನಸ್ವಾಮಿ ಕ್ರೀಡಾಂಗಣ ಇದೀಗ ಸೂತಕ ಮನೆಯಂತಾಗಿದೆ.

ಇನ್ನು 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರತಿಕ್ರಿಯೆ ನೀಡಿದ್ದು, ಈ ಕುರಿತು ಎಕ್ಸ್ ಖಾತೆಯನ್ನು ಪೋಸ್ಟ್ ಶೇರ್‌ ಮಾಡಿಕೊಂಡಿದೆ..

ಇನ್ನು ಇದೇ ವಿಚಾರವಾಗಿ ವಿರಾಟ್ ಕೊಹ್ಲಿ ಕೂಡ ಪೋಸ್ಟ್ ಮಾಡಿದ್ದು, “ಮಾತೇ ಬರುತ್ತಿಲ್ಲ.. ಹೃದಯ ಒಡೆದಿದೆ’ ಎಂದು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Exit mobile version