Site icon BosstvKannada

ಹುಷಾರ್! ನಾಳೆ ಈ ಜಿಲ್ಲೆಗಳ ಜನರಿಗೆ ಹೆಚ್ಚು ಚಳಿ

ಬೆಂಗಳೂರು: ರಾಜ್ಯದಲ್ಲಿ ಗಾಳಿ ಕಲುಷಿತವಾಗುತ್ತಿರುವ ಸಮಸ್ಯೆ ಒಂದು ಕಡೆಯಾದರೆ, ಚಳಿಯ ಕಾಟ ಮತ್ತೊಂದು ಕಡೆ. ನಾಳೆ ಉತ್ತರ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಹೆಚ್ಚು ಚಳಿ ಇರುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲೇ ಹೆಚ್ಚು ಚಳಿ ಇರುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಾಳೆ ಹೆಚ್ಚಿನ ಪ್ರಮಾಣದಲ್ಲಿ ಶೀತಗಾಳಿ ಬೀಸಲಿದೆ ಎನ್ನಲಾಗುತ್ತಿದೆ. ಅಲ್ಲದೇ, ಇನ್ನುಳಿದ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಚಳಿ ಇರುವ ಸಾಧ್ಯತೆ ಇದೆ. ಇನ್ನುಳಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಅಥವಾ ಸಾಧಾರಣ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ಮಂಡ್ಯ ಮತ್ತು ಹಾಸನದಲ್ಲಿ ನಾಳೆ ಒಣ ಹಾಗೂ ಚಳಿಯ ಎರಡೂ ಅನುಭವವಾಗುವ ಸಾಧ್ಯತೆ ಇದೆ. ಬೆಳಗ್ಗೆ ತಂಪು ಹೆಚ್ಚಾಗಿರಲಿದ್ದು, ನಂತರ ಒಣ ಹವೆ ಇರಲಿದೆ. ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ಹೆಚ್ಚು ಚಳಿಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ನಾಳೆ ಒಣಹವೆ ಕಂಡುಬರಲಿದ್ದು, ಬೆಳಿಗ್ಗೆ ಹಾಗೂ ರಾತ್ರಿ ಸಮಯದಲ್ಲಿ ಮಾತ್ರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Exit mobile version