Site icon BosstvKannada

GST ನೋಟಿಸ್‌ ಬಂದವರಿಗೆ ಬಿಗ್‌ ರಿಲೀಫ್ : ಸಿಎಂ ನೇತೃತ್ವದಲ್ಲಿ ಸಭೆ, ವರ್ತಕರಿಗೆ ಗುಡ್‌ನ್ಯೂಸ್..!

ಸಣ್ಣ ವಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ‌ಸಭೆ ನಡೆಸಲಾಯಿತು. ಜಿಎಸ್‌ಟಿ ನೋಟಿಸ್ ಪಡೆದ ವರ್ತಕರಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

40 ಲಕ್ಷ ರೂ. ವ್ಯವಹಾರ ನಡೆಸಿದ್ದಕ್ಕೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ವರ್ತಕರಿಗೆ ನೋಟಿಸ್ ಜಾರಿ ಮಾಡಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಸಿದ್ದರಾಮಯ್ಯ ಇಂದು ತೆರಿಗೆ ಇಲಾಖೆಯ ಅಧಿಕಾರಿಗಳು, ವರ್ತಕ ಸಂಘದ ಪ್ರತಿನಿಧಿಗಳ ಜೊತೆ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿ, ನೋಟಿಸ್‌ ನೀಡಿದ ವರ್ತಕರಿಂದ ಬಾಕಿ ತೆರಿಗೆಯನ್ನು ವಸೂಲಿ ಮಾಡುವುದಿಲ್ಲ. ಆದರೆ ವರ್ತಕರು ನೋಂದಣಿ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

Exit mobile version