BosstvKannada

ಕಾಂಗ್ರೆಸ್‌ಗೆ ಬಿಗ್ ಶಾಕ್ : ಕೆ.ವೈ.ನಂಜೇಗೌಡ MLA​ ಸ್ಥಾನ ಅಸಿಂಧುಗೊಳಿಸಿದ ಹೈಕೋರ್ಟ್

2023ರ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಗದ್ದುಗೆ ಏರಿದ್ದ ಕಾಂಗ್ರೆಸ್‌ ಸರ್ಕಾರಕ್ಕೆ ಹೈಕೋರ್ಟ್ ಶಾಕ್‌ ನೀಡಿದೆ. ಹೌದು ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್​ ಮಹತ್ವದ ಆದೇಶ ಹೊರಡಿಸಿದೆ. ಅಲ್ಲದೇ, ಮಾಲೂರು ಕ್ಷೇತ್ರದ ಮತ ಮರು ಎಣಿಕೆ ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಂಜೇಗೌಡ , ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ವಿರುದ್ಧ 248 ಮತಗಳ ಅಂತರದಿಂದ ಗೆದ್ದಿದ್ದರು. ಆದ್ರೆ ಮತ ಎಣಿಕೆ ವೇಳೆ ಲೋಪವಾಗಿದೆ ಅಂತಾ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಆರೋಪಿಸಿ, ನಂಜೇಗೌಡರ MLA ಸ್ಥಾನ ಆಯ್ಕೆಯನ್ನ ಅಸಿಂಧುಗೊಳಿಸುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್‌ ಇಂದು ಆದೇಶ ಪ್ರಕಟಿಸಿದೆ.

ಇನ್ನು, ವಿಧಾನಸಭೆ ಚುನಾವಣೆ ಮತ ಎಣಿಕೆ ವೇಳೆ ಲೋಪವಾಗಿದ್ದು, 4 ವಾರಗಳಲ್ಲಿ ಮರು ಮತ ಎಣಿಕೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದೆ. ಜೊತೆಯಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿ ಮತ ಎಣಿಕೆಯ ವಿಡಿಯೋ ಸಲ್ಲಿಸದ ಕಾರಣ ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ ಕ್ರಮಕೈಗೊಳ್ಳುವಂತೆಯೂ ಹೈಕೋರ್ಟ್ ಸೂಚಿಸಿದೆ. ಇನ್ನು, ಆದೇಶ ಹೊರಬೀಳುತ್ತಿದ್ದಂತೆಯೇ ಇದಕ್ಕೆ ತಡೆ ನೀಡುವಂತೆ ನಂಜೇಗೌಡರ ಪರ ವಕೀಲೆ ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಹೈಕೋರ್ಟ್ ಪೀಠ 30 ದಿನಗಳವರೆಗೆ ತನ್ನದೇ ಆದೇಶಕ್ಕೆ ತಡೆ ನೀಡಿದೆ. ಜೊತೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ. ಈ ಕುರಿತಾಗಿ ಮಾತನಾಡಿದ ನಂಜೇಗೌಡ ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆಹೋಗುದಾಗಿ ಹೇಳಿದ್ದಾರೆ..

Read Also : ಹೊಸ ಪಕ್ಷಕ್ಕೆ ಯತ್ನಾಳ್‌ ನಾಂದಿ..? : ಪ್ರತಾಪ್ ಸಿಂಹ ಹೇಳೋದೇನು?

Exit mobile version