ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ದೇಶೀಯ ಕ್ರೀಡೆಯಲ್ಲಿ ಭಾಗವಹಿಸುತ್ತಿದ್ದು, ಅಭಿಮಾನಿಗಳಿಗೆ ಖುಷಿ ತಂದಿತ್ತು. ಆದರೆ, ಈಗ ಫ್ಯಾನ್ಸ್ ಗೆ ಶಾಕ್ ಎದುರಾಗಿದೆ.

ದೆಹಲಿ (Delhi) ಮತ್ತು ಆಂಧ್ರಪ್ರದೇಶ (Andhra Pradesh) ಮಧ್ಯೆ ವಿಜಯ್ ಹಜಾರೆ (Vijay Hazare) ಟೂರ್ನಿಯ ಪಂದ್ಯ ಚಿನ್ನಸ್ವಾಮಿಯಲ್ಲಿ ನಡೆಯುತ್ತಿದೆ. ಆದರೆ ಪ್ರೇಕ್ಷಕರಿಗೆ ಮಾತ್ರ ಅವಕಾಶ ಇಲ್ಲ ಎನ್ನಲಾಗಿದೆ. ಡಿ.24ಕ್ಕೆ ದೆಹಲಿ ಮತ್ತು ಆಂಧ್ರಪ್ರದೇಶದ ಮಧ್ಯೆ ಮೊದಲ ಪಂದ್ಯ ನಿಗದಿಯಾಗಿದೆ. ವಿರಾಟ್‌ ಕೊಹ್ಲಿ (Virat Kohli) ದೆಹಲಿ ಪರ ಕಣಕ್ಕೆ ಇಳಿಯಲಿದ್ದಾರೆ.

ಭದ್ರತೆ, ಸುರಕ್ಷತೆ ವಿಚಾರವಾಗಿ ಪ್ರೇಕ್ಷಕರಿಗೆ ಸ್ಟೇಡಿಯಂ ಒಳಗೂ ಹೊರಗೂ ನಿರ್ಬಂಧ ವಿಧಿಸುವ ಸಾಧ್ಯತೆಯಿದೆ. ಪ್ರೇಕ್ಷಕರಿಲ್ಲದೆ ಪಂದ್ಯ ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಮುಖ್ಯಸ್ಥ ವೆಂಕಟೇಶ್‌ ಪ್ರಸಾದ್‌ ಈಗಾಗಲೇ ಗೃಹ ಸಚಿವ ಪರಮೇಶ್ವರ್‌ ಅವರಲ್ಲಿ ಮನವಿ ಮಾಡಿದ್ದಾರೆ. ಸರ್ಕಾರ ಇಲ್ಲಿಯವರೆಗೆ ಅನುಮತಿ ನೀಡಿಲ್ಲ. ಸದ್ಯದಲ್ಲೇ ಅಂತಿಮ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ.

ಜುಲೈನಲ್ಲಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ ನಂತರ ಚಿನ್ನಸ್ವಾಮಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಗಳನ್ನು ಸ್ಥಗಿತಗೊಳಿಸಲಾಗಿತ್ತು.

Share.
Leave A Reply