ಆರ್‌ಎಸ್‌ಎಸ್ ಮುಖಂಡ ಬಿ.ಎಲ್.ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ… ಸೌಜನ್ಯ ಕೇಸ್‌ನ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದಾರೆ.. ಅವಹೇಳನ ಮಾಡಿದ ಆರೋಪದಡಿಯಲ್ಲಿ ತಿಮರೋಡಿ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.. ಆದ್ರೆ, ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ..
ಇನ್ನು, ಇದಕ್ಕೂ ಮೊದಲು ಬೆಳಗ್ಗೆ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮುಂದೆ ದೊಡ್ಡ ಹೈಡ್ರಾಮಾವೇ ನಡೀತು.. ಮಹೇಶ್ ಶೆಟ್ಟಿ ತಿಮರೋಡಿಯನ್ನು ಕರೆದೊಯ್ಯಲು ಪೊಲೀಸರ ದಂಡೇ ಆಗಮಿಸಿತ್ತು.. ಮತ್ತೊಂದೆಡೆ, ತಿಮರೋಡಿ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ರು.. ಹೀಗಾಗಿ, ಬಿಗಿ ಬಂದೋಬಸ್ತ್‌ನಲ್ಲಿ ಪೊಲೀಸರು ತಿಮರೋಡಿಯನ್ನು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಈ ವೇಳೆ, ಮತ್ತೊಬ್ಬ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಕೂಡ ತಿಮರೋಡಿ ಜೊತೆಗೆ ಕಾರಿನಲ್ಲಿ ತೆರಳಿದ್ದಾರೆ. ಇನ್ನು, ಉಡುಪಿ ಜಿಲ್ಲೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ಮಾಡಲಾಗಿದ್ದು, ಸತತ ವಿಚಾರಣೆ ಬಳಿಕ ತಿಮರೋಡಿಯನ್ನು ಬಂಧಿಸಲಾಗಿದೆ.
ಮತ್ತೊಂದೆಡೆ, ಸೌಜನ್ಯಪರ ಹೋರಾಟಗಾರ ಹಾಗೂ ಯುಟ್ಯೂಬರ್ ಸಮೀರ್ ಎಂ.ಡಿ.ಯನ್ನು ಯಾವುದೇ ಕ್ಷಣದಲ್ಲೂ ಬಂಧಿಸುವ ಸಾಧ್ಯತೆ ಇದೆ. ಈಗಾಗ್ಲೇ ಬೆಂಗಳೂರಿನ ಬನ್ನೇರುಘಟ್ಟದ ನಿವಾಸದ ಬಳಿ ಪೊಲೀಸರು ಬೀಡು ಬಿಟ್ಟಿದ್ದು, ವಿಚಾರಣೆಗೆ ಕರೆದೊಯ್ಯಲು ಕಾಯುತ್ತಿದ್ದಾರೆ. ಇದರ ಮಧ್ಯೆ ಸಮೀರ್ ತನ್ನ ನಿವಾಸದಿಂದ ನಾಪತ್ತೆಯಾಗಿದ್ದು, ಮಂಗಳೂರಿನ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ.. ವಿಚಾರಣೆ ನಡೆಸಿದ ಜಿಲ್ಲಾ ಕೋರ್ಟ್, ಸಮೀರ್‌ಗೆ ಜಾಮೀನು ನೀಡಿದೆ. ಇದ್ರಿಂದ ಸದ್ಯಕ್ಕೆ ಸಮೀರ್ ಬಂಧನದಿಂದ ಪಾರಾಗಿದ್ದಾನೆ..
Read Also : ಧರ್ಮಸ್ಥಳ ವಿರುದ್ಧ ಅಪಪ್ರಚಾರ : ಯೂಟ್ಯೂಬರ್ ಸಮೀರ್ ನಾಪತ್ತೆ, ಪೊಲೀಸರ ಹುಡುಕಾಟ
