ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ (Bigg Boss Kannada) 11 ಸೀಸನ್‌ಗಳನ್ನ ಯಶಸ್ವಿಯಾಗಿ ಪೂರೈಸಿದೆ. ಇದೀಗ ಸೀಸನ್ 12ಕ್ಕೆ ಕೆಲವೇ ತಿಂಗಳು ಬಾಕಿ ಇರೋವಾಗಲೇ ಬಿಗ್‌ಬಾಸ್ ತಂಡದ ಕಡೆಯಿಂದ ಹಾಗೂ ಕಿಚ್ಚ ಸುದೀಪ್ ಅವರಿಂದ ಬಿಗ್ ಅಪ್‌ಡೇಟ್ ಸಿಕ್ಕಿದೆ.
ಕಿಚ್ಚ ಸುದೀಪ್ ಅವರೇ 12ನೇ ಸೀಸನ್‌ಗೂ ನಿರೂಪಣೆ ಮಾಡುವುದಾಗಿ ಸ್ಪಷ್ಟನೆ ಸಿಕ್ಕಿದೆ. ಬಿಗ್‌ಬಾಸ್ ಸಂಯೋಜಕರು ಹಾಗೂ ಕಲರ್ಸ್ ತಂಡ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಈ ನಿರ್ಧಾರವನ್ನು ಪ್ರಕಟಿಸಿದೆ. ಮತ್ತೆ 12ನೇ ಸೀಸನ್ ನಡೆಸಿಕೊಡುವ ಬಗ್ಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಬಿಗ್‌ಬಾಸ್ ನಿರೂಪಣೆಯನ್ನ ಕಿಚ್ಚ ಸುದೀಪ್ ಇಲ್ಲದೇ ಊಹೆ ಮಾಡಿಕೊಳ್ಳುವುದಕ್ಕೂ ಆಗುವುದಿಲ್ಲ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿದ್ದವು.
11ನೇ ಸೀಸನ್ ಸಂದರ್ಭದಲ್ಲಿ ನಿರೂಪಕ ಕಿಚ್ಚ ಸುದೀಪ್ ವಿದಾಯ ಹೇಳಿದ್ದರು. ಟ್ವೀಟ್ ಮೂಲಕ ಬಿಗ್‌ಬಾಸ್ ಸೀಸನ್ ೧೧ರ ಸೀಸನ್ ನನ್ನ ಕೊನೆ ನಿರೂಪಣೆ ಎಂದು ಇದಾದ ಬಳಿಕ ಸಾಕಷ್ಟು ಚರ್ಚೆಗಳು ಶುರುವಾಗಿದ್ವು, ಈ ಬಗ್ಗೆ ಕಿಚ್ಚ ಸುದೀಪ್ ಕೂಡಾ ಕಾದು ನೋಡಿ ಅನ್ನೋ ಅಭಿಪ್ರಾಯವನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ರು. ಆದ್ರೀಗ ಈ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದ್ದು, ಕಿಚ್ಚ ಸುದೀಪ್ ಅವರೇ ಈ ಬಾರಿಯ ಬಿಗ್‌ಬಾಸ್ ಶೋವನ್ನ ಮುಂದುವರೆಸಲಿದ್ದಾರೆ.
