
ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗಧಿಯಾಗಿದೆ. ಬಿಹಾರ ರಾಜ್ಯದ 243 ವಿಧಾನಸಭೆ ಚುನಾವಣೆಗೆ 2 ಹಂತಗಳಲ್ಲಿ ಮತದಾನ ನಡೆಯಲಿದೆ.. ನವೆಂಬರ್ 6ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ನವೆಂಬರ್ 11ರಂದು ಎರಡನೇ ಹಂತರ ವೋಟಿಂಗ್ ನಡೆಯಲಿದೆ. ನವೆಂಬರ್ 14ರಂದು 243 ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ ಅಂತಾ ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ಕುಮಾರ್ ಮಾಹಿತಿ ನೀಡಿದ್ದಾರೆ. ಇನ್ನು, ಬಿಹಾರದಲ್ಲಿ ಒಟ್ಟು 7.43 ಕೋಟಿ ಮತದಾರರು ಇದ್ದಾರೆ. ಈ ಪೈಕಿ 3.92 ಕೋಟಿ ಪುರುಷ ಮತದಾರರಿದ್ರೆ, 3.50 ಕೋಟಿ ಮಹಿಳೆಯರು ತಮ್ಮ ಹಕ್ಕು ಚಲಾವಣೆ ಮಾಡಲಿದ್ದಾರೆ. ಈಗಾಗಲೇ ಬಿಹಾರದಲ್ಲಿ ಜೆಡಿಯು ಹಾಗೂ ಬಿಜೆಪಿ ಮೈತ್ರಿಕೂಟ ಅಧಿಕಾರದಲ್ಲಿದೆ. ಜೆಡಿಯು ನಾಯಕ ನಿತೀಶ್ಕುಮಾರ್ ಸಿಎಂ ಆಗಿದ್ದು ಈ ಎಲೆಕ್ಷನ್ನಲ್ಲೂ ಮೈತ್ರಿ ಮುಂದುವರಿದಿದೆ. ಎನ್ಡಿಎ ಕೂಟ ಗೆಲ್ಲಿಸಲು ಪ್ರಧಾನಿ ಮೋದಿ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಮತ್ತೊಂದೆಡೆ, ಆರ್ಜೆಡಿ ಕಾಂಗ್ರೆಸ್ ಮೈತ್ರಿಕೂಟ ಕೂಡ ಅಧಿಕಾರಕ್ಕೇರಲು ಭರ್ಜರಿ ಪ್ಲ್ಯಾನ್ ಮಾಡಿದೆ. ಕಾಂಗ್ರೆಸ್ ಬೆಂಬಲದೊಂದಿಗೆ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿದ್ದಾರೆ. ಆದ್ರೆ ಅಂತಿಮವಾಗಿ ಯಾರು ಗೆಲ್ತಾರೆ ಅನ್ನೋದು ನವೆಂಬರ್ 14ರಂದು ಗೊತ್ತಾಗಲಿದೆ.
Read Also : ಊಟಕ್ಕಿಂತ ಮುಂಚೆ ಇದನ್ನ ತಿಂದ್ರೆ 99% ಕಾಯಿಲೆಗಳು ದೂರ
