ಕಲಬುರಗಿ: ಬಿಜೆಪಿ ಮುಖಂಡನ ಮನೆಯಲ್ಲಿ ಕಾರ್ಯಕರ್ತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಜಿಲ್ಲೆಯ (Kalaburagi) ಜಿಲ್ಲೆಯ ನಂದಿಕೂರ್ ಗ್ರಾಮದಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಬಿಜೆಪಿ (BJP) ಕಾರ್ಯಕರ್ತೆ ಜ್ಯೋತಿ ಪಾಟೀಲ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಹಲವಾರು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಸದ್ಯ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಲ್ಲಿನಾಥ್ ಬಿರಾದಾರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆ ನಂತರ ಕುಟುಂಬಸ್ಥರು ಮನೆ ಖಾಲಿ ಮಾಡಿಕೊಂಡು ತೆರಳಿದ್ದಾರೆ. ಮನೆಗೆ ಬೀಗ ಹಾಕಲಾಗಿದೆ. ಮಾಹಿತಿಯಂತೆ, ಜ್ಯೋತಿ ಪಾಟೀಲ್ ಶುಕ್ರವಾರ ತಡರಾತ್ರಿ ಮನೆ ಮುಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ ಎನ್ನಲಾಗಿದೆ. ಮಲ್ಲಿನಾಥ್ ಮನೆಯಲ್ಲಿ ಇಲ್ಲದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಜ್ಯೋತಿ ಪಾಟೀಲ್ ಕಲಬುರಗಿಯ ಬ್ರಹ್ಮಪುರ ಬಡಾವಣೆಯ ನಿವಾಸಿಯಾಗಿದ್ದಾರೆ. ಸದ್ಯ ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

