Boycott Turkey: ಪಾಕಿಸ್ತಾನದ ಬೆನ್ನಿಗೆ ನಿಂತ ಟರ್ಕಿಗೆ ಭಾರತೀಯರು ದೇಶಾದ್ಯಾಂತ ಸರಿಯಾದ ಬುದ್ಧಿ ಕಲಿಸುತ್ತಿದ್ದಾರೆ. ಟರ್ಕಿ ದೇಶದ ವಿರುದ್ಧ ಭಾರತದಿಂದ ಬಾಯ್ಕಾಟ್ ಅಭಿಯಾನ ಜೋರಾಗಿದ್ದು, ಪಾಕ್ ಪ್ರೇಮಿ ದೇಶಕ್ಕೆ ಅದರ ಬಿಸಿ ತಟ್ಟಿದೆ. ಪಾಕಿಸ್ತಾನದ ಬೆನ್ನಿಗೆ ನಿಂತ ಟರ್ಕಿ ವಿರುದ್ಧ ಭಾರತದಿಂದ ಬಾಯ್ಕಾಟ್ ಅಭಿಯಾನ ಜೋರಾಗಿದೆ. ಸೇಬು, ಚೆರ‍್ರಿ, ಆಲಿವ್ ಆಯಿಲ್, ಮಾರ್ಬಲ್ಸ್, ಎಲೆಕ್ಟ್ರಾನಿಕ್ ವಸ್ತುಗಳು, ಫ್ಯಾಷನ್ ಉತ್ಪನ್ನಗಳು ಬ್ಯಾನ್ ಮಾಡಲು ನಿರ್ಧರಿಸಲಾಗಿದೆ.

ಪಾಪಿ ಪಾಕ್ ಬೆನ್ನಿಗೆ ನಿಂತ ಟರ್ಕಿ ವಿರುದ್ಧ ಪುಣೆಯ ಹೋಲ್‌ಸೆಲ್, ರೀಟೇಲ್ ವ್ಯಾಪಾರಸ್ಥರು ಸೇಬು ಹಣ್ಣು ಆಮದು ಮಾಡಿಕೊಳ್ಳುವುದನ್ನು ಬಹಿಷ್ಕರಿಸಿದ್ದರು. ಇದೀಗ ಉದಯಪುರದ ಮಾರ್ಬಲ್ ಅಸೋಸಿಯೇಷನ್ ಕೂಡ ಟರ್ಕಿ ಮಾರ್ಬಲ್‌ಗಳ ಆಮದು ಬ್ಯಾನ್ ಮಾಡಲು ನಿರ್ಧರಿಸಿದೆ. ಭಾರತದಲ್ಲಿ ಮೂರು ತಿಂಗಳಿಗೆ ಸುಮಾರು 1,200 ರಿಂದ 1,500 ಕೋಟಿ ರೂಪಾಯಿ ಮೌಲ್ಯದ ಟರ್ಕಿ ಸೇಬನ್ನು ಖರೀದಿ ಮಾಡಲಾಗುತ್ತಿತ್ತು. ಇದೀಗ ಬ್ಯಾನ್‌ನಿಂದ ಟರ್ಕಿಗೆ ಶಾಕ್ ಎದುರಾಗಿದೆ.

ಇತ್ತ ಟರ್ಕಿಯ ಮಾರ್ಬಲ್‌ಗಳನ್ನು ಬ್ಯಾನ್ ಮಾಡಿರುವ ಭಾರತದ ವ್ಯಾಪಾರಿಗಳು ಟರ್ಕಿಯ ಹಲವು ಉತ್ಪನ್ನ ಮತ್ತು ಪ್ರವಾಸವನ್ನು ಬಹಿಷ್ಕರಿಸಿದ್ದಾರೆ. ಪಾಕಿಸ್ತಾನವನ್ನು ಬೆಂಬಲಿಸಿದ್ದಕ್ಕೆ ಟರ್ಕಿ ಆರ್ಥಿಕ ಹೊಡೆತದ ಭೀತಿ ಎದುರಿಸುವಂತಾಗಿದೆ. ಟರ್ಕಿಗೆ 2024ರಲ್ಲಿ 3.3 ಲಕ್ಷ ಭಾರತೀಯ ಪ್ರವಾಸಿಗರು ಭೇಟಿ ಕೊಟ್ಟಿದ್ದರು. ಸಾವಿರಾರು ಭಾರತೀಯರು ಈಗಾಗಲೇ ತಮ್ಮ ಟರ್ಕಿ ಪ್ರವಾಸವನ್ನು ರದ್ದು ಮಾಡುತ್ತಿದ್ದಾರೆ. ಟರ್ಕಿ, ಅಜರ್‌ಬೈಜಾನ್ ದೇಶಕ್ಕೆ ಹೋಗುವ ಭಾರತೀಯರ ಸಂಖ್ಯೆಯಲ್ಲಿ ಕುಸಿತವಾಗಿದೆ. ಪ್ರವಾಸಿಗರ ಈ ಬಾಯ್ಕಾಟ್‌ನಿಂದ ಟರ್ಕಿ, ಅಜರ್‌ಬೈಜಾನ್ ಸುಮಾರು 3 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗುತ್ತಿದೆ.

Also Read: BR Gavai : ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್.​ಗವಾಯಿ ಪ್ರಮಾಣ ವಚನ ಸ್ವೀಕಾರ

ಒಂದು ವೇಳೆ ಭಾರತೀಯರು ಟರ್ಕಿ, ಅಜರ್‌ಬೈಜಾನ್‌ ಪ್ರವಾಸೋದ್ಯಮಕ್ಕೆ ಹೊಡೆತ ನೀಡಲು ನಿರ್ಧರಿಸಿದರೆ ಎರಡೂ ದೇಶಗಳು ವಾರ್ಷಿಕ ಅಂದಾಜು 4500 ಕೋಟಿ ರು. ನಷ್ಟ ಅನುಭವಿಸಲಿದೆ ಎಂದು ಅಂದಾಜಿಸಲಾಗಿದೆ. ಇನ್ನೊಂದೆಡೆ ಭಾರತ, ಟರ್ಕಿ ಮತ್ತು ಅಜರ್‌ಬೈಜಾನ್ ನಡುವೆ ವಾರ್ಷಿಕ 67000 ಕೋಟಿ ರು. ವಹಿವಾಟು ನಡೆಯುತ್ತಿದ್ದು, ಸರ್ಕಾರ ಇದರಲ್ಲೂ ಹೊಡೆತ ನೀಡಲು ಮುಂದಾದರೆ, ಪಾಕಿಸ್ತಾನವನ್ನು ಬೆಂಬಲಿಸಿದ್ದಕ್ಕಾಗಿ ಎರಡು ದೇಶಗಳು ಪರಿತಪಿಸಬೇಕಾಗಿ ಬರಲಿದೆ ಎಂದು ಅಂದಾಜಿಸಲಾಗಿದೆ.

Share.
Leave A Reply