BR Gavai: 8ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಇಂದು ಭಾರತದ 52ನೇ ಮುಖ್ಯ ನ್ಯಾಯಮೂರ್ತಿ (CJI) ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೇ 13ರಂದು ನಿವೃತ್ತರಾಗಿದ್ದು, ಹುದ್ದೆಯಿಂದ ನಿರ್ಗಮಿಸಿದ ನಂತರ ಭೂಷಣ್ ರಾಮಕೃಷ್ಣ ಗವಾಯಿ ಅಧಿಕಾರ ವಹಿಸಿಕೊಂಡಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ಮಾಜಿ ಸಿಜೆಐ ಧನಂಜಯ ಯಶವಂತ ಚಂದ್ರಚೂಡ್ ಅವರ ನಂತರ ನ್ಯಾಯಮೂರ್ತಿ ಖನ್ನಾ ಕೇವಲ ಆರು ತಿಂಗಳ ಅವಧಿಗೆ ಈ ಹುದ್ದೆಯಲ್ಲಿ ಸೇವೆ ಸಲ್ಲಿಸಿದರು. ಸಿಜೆಐ ಹುದ್ದೆಗೆ ತಮ್ಮ ಉತ್ತರಾಧಿಕಾರಿ ಯಾಗಿ ಸಂಜೀವ್ ಖನ್ನಾ ಅವರು ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಹೆಸರನ್ನು ಶಿಫಾರಸು ಮಾಡಿದ್ದರು. ಅದರಂತೆ ಗವಾಯಿ ಅವರು ಇಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Also Read: ನಟಿ Namrata ಗೌಡಗೆ ಡೇಟಿಂಗ್ ಕಿರುಕುಳ : ಟಾರ್ಚರ್ ಕೊಟ್ಟ ಅಪರಿಚಿತ

2007ರಲ್ಲಿ ಅಧಿಕಾರ ವಹಿಸಿಕೊಂಡಿದ್ದ ಮಾಜಿ ಸಿಜೆಐ ಕೆಜಿ ಬಾಲಕೃಷ್ಣನ್ ನಂತರ ಭಾರತದ ಅತ್ಯುನ್ನತ ನ್ಯಾಯಾಂಗ ಹುದ್ದೆಯನ್ನು ಅಲಂಕರಿಸಿದ ಮೊದಲ ಬೌದ್ಧ ಸಿಜೆಐ ಮತ್ತು ದಲಿತ ಸಮುದಾಯದಿಂದ ಬಂದ ಎರಡನೇ ಸಿಜೆಐ ಆಗಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ.

Share.
Leave A Reply