ದೇಶದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಅವರಿಂದು ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಸೇರಿದಂತೆ ನೂರಾರು ಗಣ್ಯರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಜೆ.ಪಿ ನಡ್ಡಾ ,ಹೆಚ್ ಡಿ ಕುಮಾರಸ್ವಾಮಿ, ನಿತಿನ್ ಗಡ್ಕರಿ, ಶೋಭಾ ಕರಂದ್ಲಾಜೆ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಜಾರ್ಖಂಡ್ ರಾಜ್ಯಪಾಲ ಸಂತೋಷ್ ಗಂಗ್ವಾರ್ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
Read Also : ರಾಜ್ಯದಲ್ಲಿ ಮತ್ತೆ ಜಾತಿಗಣತಿ ಶುರು.. ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?